Wednesday, September 2, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Wednesday, September 2, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

by KM Shivaraju September 1, 2026
written by KM Shivaraju September 1, 2026 0 comments 2 minutes read
0FacebookTwitterPinterestEmail
8

ಲಿಂಗಸುಗೂರು (ರಾಯಚೂರು ಜಿಲ್ಲೆ):ಭಷ್ಟಾಚಾರ ಕೂಪದಲ್ಲಿ ಮುಳುಗಿರುವ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯುವವರೆಗೂ ವಿಶ್ರಮಿಸುವುದಿಲ್ಲ ಎಂದು ಬಿಜೆಪಿ ಶಪಥ ಮಾಡಿದೆ.

ರೈತ ವಿರೋಧ, ಜನ ವಿರೋಧಿ, ಪ್ರಗತಿ ವಿರೋಧಿ, ಮಹಿಳಾ ವಿರೋಧಿ ಆಗಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳನ್ನು ಜನತೆಗೆ ತಿಳಿಸುವ ಉದ್ದೇಶದಿಂದ ರಾಯಚೂರು ಜಿಲ್ಲೆ ಲಿಂಗಸುಗೂರಿನಲ್ಲಿ ಇಂದು 175 ಕಿಲೋ ಮೀಟರ್ ಪಾದಯಾತ್ರೆಗೆ ಚಾಲನೆ ನೀಡಲಾಯಿತು.

ಮೊಳಗಿದ ಕಹಳೆ

ಪಕ್ಷದ ಹಿರಿಯ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಎಲ್ಲಾ ಪ್ರಮುಖ ನಾಯಕರು ಒಗ್ಗಟ್ಟಿನಿಂದ ಸರ್ಕಾರದ ವಿರುದ್ಧ ಕಹಳೆ ಮೊಳಗಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿಗಳಾದ ಜಗದೀಶ್ ಶೆಟ್ಟರ್, ಬಸವರಾಜ ಬೊಮ್ಮಾಯಿ, ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಸೇರಿದಂತೆ ಹಲವು ನಾಯಕರು ಮಾತನಾಡಿ, ಕಾಂಗ್ರೆಸ್ ಸರ್ಕಾರದ ದುರಾಡಳಿತ ಹಾಗೂ ಜನ ವಿರೋಧಿ ನೀತಿಯನ್ನು ಎಳೆ ಎಳೆಯಾಗಿ ಬಿಡಿಸಿಟ್ಟರು.

ನಂತರ ಯಡಿಯೂರಪ್ಪ ಪಾದಯಾತ್ರೆಗೆ ಚಾಲನೆ ನೀಡುತ್ತಿದ್ದಂತೆ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಸಾವಿರಾರು ಕಾರ್ಯಕರ್ತರು ಪಾದಯಾತ್ರೆ ಆರಂಭಿಸಿದರು.

ಜನ ವಿರೋಧಿ ನೀತಿ

ಈ ಪಾದಯಾತ್ರೆ ಸೆಪ್ಟೆಂಬರ್ 10ಕ್ಕೆ ಬಳ್ಳಾರಿಯಲ್ಲಿ ಸಮಾರೋಪಗೊಳ್ಳಲಿದೆ, ಇದಕ್ಕೂ ಮುನ್ನ 7 ತಾಲ್ಲೂಕುಗಳಲ್ಲಿ ಪ್ರತಿನಿತ್ಯ 15ರಿಂದ 20 ಕಿಲೋ ಮೀಟರ್ ನಡೆದು, ಸರ್ಕಾರದ ಜನ ವಿರೋಧಿ ನೀತಿಗಳನ್ನು ಜನರಿಗೆ ತಿಳಿಸಲಿದ್ದಾರೆ.

ಈ ಸಂದರ್ಭದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ನಾಯಕರು, ಅಧಿಕಾರದ ಮದದಲ್ಲಿ ಮೆರೆಯುತ್ತಿರುವ ಕಾಂಗ್ರೆಸ್ ಸರ್ಕಾರವನ್ನು ಕೆಳಗಿಳಿಸುವವರೆಗೂ ನಮ್ಮ ಹೋರಾಟ ಮುಂದುವರೆಯಲಿದೆ.

ಇದು ಚುನಾವಣಾ ಪ್ರಚಾರ ಸಭೆಯಲ್ಲ, ಭ್ರಷ್ಟ ಕಾಂಗ್ರೆಸ್ ಸರ್ಕಾರ ತೊಲಗಿಸುವ ಸಂಕಲ್ಪದೊಂದಿಗೆ ಹೋರಾಟ ಆರಂಭಿಸಿದ್ದೇವೆ.

ರಾಹುಲ್ ಕಾಲು ಹಿಡಿಯುವ ಸ್ಥಿತಿ

ಕರ್ನಾಟಕದ ಮುಖ್ಯಮಂತ್ರಿ ಅವರಿಗೆ ಸ್ವಾತಂತ್ರ್ಯವೇ ಇಲ್ಲ, ಇವರು ಏನೇ ನಿರ್ಧಾರ ಕೈಗೊಳ್ಳಲು ದೆಹಲಿಗೆ ಹೋಗಿ ರಾಹುಲ್ ಗಾಂಧಿ ಕಾಲು ಹಿಡಿಯುವ ಸ್ಥಿತಿ ಇದೆ.

ನಮಗೆ ಕಾಲು ಹಿಡಿಯುವ ಮುಖ್ಯಮಂತ್ರಿ ಬೇಕೆ ಎಂದು ಪ್ರಶ್ನಿಸಿದ ಯಡಿಯೂರಪ್ಪ, ಇದು ರಾಜ್ಯಕ್ಕೆ ಮತ್ತು ಮುಖ್ಯಮಂತ್ರಿ ಹುದ್ದೆಗೆ ಶೋಭೆ ತರುವುದಿಲ್ಲ.

ಹೋರಾಟದ ಮೊದಲ ಹೆಜ್ಜೆ ಇದು, ಭ್ರಷ್ಟ ಸರ್ಕಾರದ ಲೂಟಿ ವಿರುದ್ಧ ಜನರಿಗೆ ಮನವರಿಕೆ ಮಾಡಿಕೊಡಲು ಈ ಯಾತ್ರೆ ನಡೆಸುತ್ತಿದ್ದೇವೆಯೇ ಹೊರತು ಇನ್ನಾವುದೇ ಉದ್ದೇಶ ಇಲ್ಲ ಎಂದು ಸ್ಪಷ್ಟಪಡಿಸಿದರು.

ಹೋರಾಟ ಬೆಂಬಲಿಸಲು ಮನವಿ

ವಿವಿಧ ವಿಷಯಗಳ ಹೋರಾಟದ ದಿನಗಳು ಮುಂದೆ ಇವೆ, ಇದಕ್ಕಾಗಿ ನಾವೆಲ್ಲ ಸಿದ್ಧರಾಗೋಣ, ಕರ್ನಾಟಕದ ಜನತೆ ಪರವಾಗಿ ಹೆಜ್ಜೆ ಮೇಲೆ ಹೆಜ್ಜೆ ಇಟ್ಟು ಕೆಲಸ ಮಾಡುತ್ತೇವೆ, ನಮ್ಮ ಹೋರಾಟವನ್ನು ಬೆಂಬಲಿಸಿ ಎಂದು ಮನವಿ ಮಾಡಿದರು.

ಬಿಜೆಪಿಯ ತೀವ್ರ ಹೋರಾಟದ ಪರಿಣಾಮ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ ನೀಡಬೇಕಾಯಿತು, ಹೋರಾಟ ನಡೆಸಿದ ಪಕ್ಷದ ನಾಯಕರು, ಕಾರ್ಯಕರ್ತರು ಅಭಿನಂದನಾರ್ಹರು.

ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಶಿವಕುಮಾರ್ ಗುಂಪು, ಸಿದ್ದರಾಮಯ್ಯ ಗುಂಪು, ಹೈಕಮಾಂಡ್ ಗುಂಪುಗಳಿವೆ, ದೇಣಿಗೆ ಕೊಟ್ಟವರು ಮುಖ್ಯಮಂತ್ರಿ ಹಾಗೂ ಸಚಿವರಾಗಿದ್ದಾರೆ.

ಜನರ ಹಣ ಪಿಕ್ ಪಾಕೆಟ್

ಸಿದ್ದರಾಮಯ್ಯ ಸರ್ಕಾರದಲ್ಲಿ ಜನರಿಂದ ಹಣದ ದರೋಡೆ ನಡೆಯುತ್ತಿತ್ತು, ಈಗ ಶಿವಕುಮಾರ್ ಆಡಳಿತದಲ್ಲಿ ತೆರಿಗೆ ಹೆಚ್ಚಳ ಮೂಲಕ ಜನರ ಜೇಬಿನಿಂದ ಹಣ ಪಿಕ್ ಪಾಕೆಟ್ ಮಾಡಲಾಗುತ್ತಿದೆ.

ರಾಜ್ಯದ 175 ತಾಲ್ಲೂಕುಗಳಲ್ಲಿ ಬರಗಾಲ ಇದ್ದರೂ 101 ತಾಲ್ಲೂಕುಗಳನ್ನು ಮಾತ್ರ ಬರಪೀಡಿತ ಎಂಬುದಾಗಿ ಘೋಷಿಸಲಾಗಿದೆ, ಪರಿಹಾರ ಕಾರ್ಯಗಳಿಗೆ ರಾಜ್ಯ ಸರ್ಕಾರದ ಬಳಿ ಹಣ ಇಲ್ಲ, ಇದು ಪಾಪರ್ ಸರ್ಕಾರ.

ರಾಜ್ಯದ ಅಭಿವೃದ್ಧಿ ವಿಷಯವಿರಲಿ, ಈ ಸರ್ಕಾರ ಶೌಚಾಲಯಗಳನ್ನೂ ಕಟ್ಟಿಸಿಕೊಟ್ಟಿಲ್ಲ, ಕೇಂದ್ರದಿಂದ ಬಂದ ಹಣವನ್ನೂ ಲೂಟಿ ಮಾಡಿ ನುಂಗಿದೆ.

ದಲಿತರ ಹಣ ಅನ್ಯ ಉದ್ದೇಶಕ್ಕೆ

ವಾಲ್ಮೀಕಿ ನಿಗಮದ ಹಣ ವಾಪಸ್ ಖಜಾನೆಗೆ ಬರಬೇಕಿದೆ, 53 ಸಾವಿರ ಕೋಟಿ ರೂ.ಗಳಿಗೂ ಹೆಚ್ಚು ಮೊತ್ತದ ದಲಿತರ ಹಣ ಅನ್ಯ ಉದ್ದೇಶಕ್ಕೆ ಬಳಕೆ ಆಗಿದೆ.

ಅರಮನೆಯಲ್ಲಿ ಕುಳಿತು ಆಡಳಿತ ಮಾಡುವವರ ಸರ್ಕಾರ ಇದು, ಜನರನ್ನು ಬೀದಿಯಲ್ಲಿ ನಿಲ್ಲಿಸುವ ಕೆಲಸ ಮಾಡಿದೆ, ಭ್ರಷ್ಟಾಚಾರ ಮಿತಿಮೀರಿದೆ, ಕಾನೂನು- ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ, ಬರಗಾಲ ತೀವ್ರತೆಯಿಂದ ರೈತರು ಗುಳೆ ಹೋಗುತ್ತಿದ್ದು, ರಾಜ್ಯದ ಆಡಳಿತ ಸ್ಪಂದಿಸುತ್ತಿಲ್ಲ.

ರಾಜ್ಯ ಸರ್ಕಾರದ ಆಡಳಿತ ಕುರಿ ಕಾಯಲು ತೋಳ ನೇಮಿಸಿದಂತಿದೆ, ಬೇಲಿಯೇ ಎದ್ದು ಹೊಲ ಮೇಯುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಗುಡುಗಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
175 kmbjp allegationbjp padayatrelingasugururayachururemove this govt.state congres govt. courrpt
0 FacebookTwitterPinterestEmail
KM Shivaraju

previous post
‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

You may also like

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ ನಿರ್ಧಾರ

August 26, 2026

ಸರ್ಕಾರದ ವೈಫಲ್ಯ: ಸೆ.1ರಿಂದ ಬಿಜೆಪಿ ಪಾದಯಾತ್ರೆ

August 25, 2026

ಮುಖ್ಯಮಂತ್ರಿ ಶಿವಕುಮಾರ್‌ಗೆ ಸಚಿವ ನಾಗೇಂದ್ರ ಕಂಟಕ !

August 24, 2026

ಮಳೆ ಕೊರತೆ ನೀಗಿಸಲು ಮೋಡ ಬಿತ್ತನೆಗೆ ನಿರ್ಧಾರ

August 22, 2026

’ಬಿ’ ಯಿಂದ ’ಎ’ ಖಾತಾ ಕಾಯ್ದೆ ರಾಜ್ಯಾದ್ಯಂತ ವಿಸ್ತರಣೆ

August 21, 2026

ಕರ್ನಾಟಕಕ್ಕೆ ನ್ಯಾಯಯುತ ಅನುದಾನ ನೀಡಿ: ಡಿಕೆಶಿ

August 20, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (554)
  • ಅಂಕಣ (109)
  • ಉದ್ಯೋಗ (345)
  • ದಿನ ಭವಿಷ್ಯ (110)
  • ರಾಜಕೀಯ (2,047)
  • ರಾಜ್ಯ (2,362)
  • ರಾಷ್ಟ್ರ (2,327)
  • ವಿಶ್ಲೇಷಣೆ (202)
  • ಶಿಕ್ಷಣ (407)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

    September 1, 2026
  • ‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

    August 31, 2026
  • ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

    August 29, 2026

KMS Special

  • ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

    September 1, 2026
  • ‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

    August 31, 2026
  • ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

    August 29, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ...

August 31, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ