Tuesday, September 29, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Tuesday, September 29, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ವರಿಷ್ಠರ ಜೊತೆ ಡಿಕೆಶಿ ಸಂಪುಟ ಪುನರ್ ರಚನೆ ಚರ್ಚೆ

by KM Shivaraju September 28, 2026
written by KM Shivaraju September 28, 2026 0 comments 1 minutes read
0FacebookTwitterPinterestEmail
5

ನವದೆಹಲಿ:ಜಿಲ್ಲಾ, ತಾಲ್ಲೂಕು ಹಾಗೂ ಪಂಚಾಯತ್ ಚುನಾವಣೆ ನಡೆಸುವ ಸಂಬಂಧ ಎಐಸಿಸಿ ವರಿಷ್ಠರೊಂದಿಗೆ ಚರ್ಚಿಸಲು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎರಡು ದಿನಗಳ ದೆಹಲಿ ಪ್ರವಾಸ ಕೈಗೊಂಡಿದ್ದಾರೆ.

ದೆಹಲಿಯ ಇಂದಿರಾ ಭವನದಲ್ಲಿ ಜರುಗಲಿರುವ ಸಿಡಬ್ಲೂಸಿ ಸಭೆಯಲ್ಲಿ ಪಾಲ್ಗೊಳ್ಳಲು ಇಂದು ದೆಹಲಿಗೆ ತೆರಳಿರುವ ಮುಖ್ಯಮಂತ್ರಿ, ಮಂಗಳವಾರ ಮಧ್ಯಾನ್ಹ ಸ್ಥಳೀಯ ಸಂಸ್ಥೆಗಳ ಚುನಾವಣೆ ಮತ್ತು ಸಂಪುಟ ಪುನರ್ ರಚನೆ ಕುರಿತು ಪಕ್ಷದ ವರಿಷ್ಠರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ.

ಮುಖ್ಯಮಂತ್ರಿಗೆ ಭೇಟಿ ಅವಕಾಶ

ಕರ್ನಾಟಕ ರಾಜಕೀಯ ವಿಚಾರ ಕುರಿತು ಚರ್ಚಿಸಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೆಪ್ಟೆಂಬರ್ 29ರ ಮಧ್ಯಾನ್ಹ 3 ಗಂಟೆಗೆ ಬರುವಂತೆ ಮುಖ್ಯಮಂತ್ರಿ ಅವರಿಗೆ ಸಮಯಾವಕಾಶ ನೀಡಿದ್ದಾರೆ.

ಖರ್ಗೆ ಕರೆದಿರುವ ಸಭೆಯಲ್ಲಿ ಮುಖ್ಯಮಂತ್ರಿ ಅಲ್ಲದೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್, ಎಐಸಿಸಿ ರಾಜಕೀಯ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಭಾಗವಹಿಸಲಿದ್ದಾರೆ.

ನ್ಯಾಯಾಲಯದ ಆದೇಶದಂತೆ 3 ಹಂತದ ಪಂಚಾಯತ್ ಚುನಾವಣೆಗಳನ್ನು ಒಂದೇ ಬಾರಿಗೆ ನಡೆಸಲು ಮುಖ್ಯಮಂತ್ರಿ ಸಿದ್ಧತೆ ಮಾಡಿಕೊಂಡಿದ್ದಾರೆ.

ಚುನಾವಣಾ ಸಿದ್ಧತೆ

ಚುನಾವಣಾ ಸಿದ್ಧತೆ ಮತ್ತು ಪಕ್ಷಕ್ಕೆ ಇರುವ ಉತ್ತಮ ಅವಕಾಶ ಬಳಸಿಕೊಳ್ಳಲು ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮುಂದಾಗಿರುವುದಾಗಿ ವರಿಷ್ಠರ ಗಮನಕ್ಕೆ ತರಲಿದ್ದಾರೆ.

ಸಂಪುಟದಲ್ಲಿ ಮಹಿಳಾ ಪ್ರಾತಿನಿಧ್ಯ ಜೊತೆಗೆ ಕೆಲವು ಸಮುದಾಯದವರಿಗೆ ಮಂತ್ರಿಮಂಡಲದಲ್ಲಿ ಅವಕಾಶ ಕಲ್ಪಿಸುವ ಸಂಬಂಧ ರಾಜ್ಯ ನಾಯಕರ ಸಮ್ಮುಖದಲ್ಲೇ ಚರ್ಚಿಸಿ ಅನುಮತಿ ಪಡೆಯಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಪಕ್ಷದ ಕೆಲವು ಹಿರಿಯ ಶಾಸಕರು ಸಿದ್ದರಾಮಯ್ಯ ಆಡಳಿತದಲ್ಲಿ ನಿಗಮ ಮತ್ತು ಮಂಡಳಿಗೆ ನೇಮಕ ಆಗಿರುವುದನ್ನು ಮುಂದುವರೆಸುವ ಹಾಗೂ ಉಳಿದ ನಿಗಮ-ಮಂಡಳಿಗಳಿಗೆ ಪಕ್ಷದ ಕಾರ್ಯಕರ್ತರಿಗೆ ಅವಕಾಶ ಮಾಡಿಕೊಡುವ ಸಂಬಂಧ ಸಭೆಯಲ್ಲಿ ಮುಖ್ಯಮಂತ್ರಿ ಪ್ರಸ್ತಾಪಿಸಲಿದ್ದಾರೆ.

ಕೆಲವರ ಬಹಿರಂಗ ಹೇಳಿಕೆ ಪ್ರಸ್ತಾಪ

ನಗರದಲ್ಲಿದ್ದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಮುಖ್ಯಮಂತ್ರಿ ಈಗಾಗಲೇ ಭೇಟಿ ಮಾಡಿ ಒಂದು ಸುತ್ತಿನ ಮಾತುಕತೆ ನಡೆಸಿದ್ದು, ಕೆಲವು ಹಿರಿಯ ಸದಸ್ಯರು ಬಹಿರಂಗವಾಗಿ ಸರ್ಕಾರದ ಕಾರ್ಯವೈಖರಿ ಪ್ರಶ್ನಿಸುತ್ತಿರುವ ವಿಷಯವನ್ನೂ ಅಧ್ಯಕ್ಷರ ಗಮನಕ್ಕೆ ತಂದಿದ್ದಾರೆ.

ಈ ನಡುವೆ ಪ್ರದೇಶ ಕಾಂಗ್ರೆಸ್ ಹಾಗೂ ಸರ್ಕಾರದ ನಡುವೆ ಮುಸುಕಿನ ಗುದ್ದಾಟ ನಡೆದಿದೆ, ರಾಜ್ಯಾಧ್ಯಕ್ಷ ಹರಿಪ್ರಸಾದ್, ಕೆಲವು ವಿಷಯಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅವರಿಗೆ ಪತ್ರ ಬರೆಯುತ್ತಿರುವ ಕುರಿತೂ ಸಭೆಯಲ್ಲಿ ಚರ್ಚೆಗೆ ಬರಲಿದೆ.

ಶಿವಕುಮಾರ್ ಅನೌಪಚಾರಿಕವಾಗಿ ಎಐಸಿಸಿ ಅಧ್ಯಕ್ಷರ ಮುಂದಿಟ್ಟಿರುವ ವಿಷಯ ಕುರಿತು ಚರ್ಚೆ ನಡೆಸಲು ಖರ್ಗೆ ಈ ಸಭೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
aicc presidentb k hariprasadcabinet reshuffleChief Ministerd k shivakumarkarnatakaKPCC Presidentmallikarjuna khargenewdelhi
0 FacebookTwitterPinterestEmail
KM Shivaraju

previous post
ಪರಿಷತ್ ಚುನಾವಣೆ: ಬಿಜೆಪಿ-ಜೆಡಿಎಸ್ ಮೈತ್ರಿ ಹೋರಾಟ

You may also like

ಪರಿಷತ್ ಚುನಾವಣೆ: ಬಿಜೆಪಿ-ಜೆಡಿಎಸ್ ಮೈತ್ರಿ ಹೋರಾಟ

September 26, 2026

ಸಚಿವ ಜಾರಕಿಹೊಳಿ-ಕುಮಾರಸ್ವಾಮಿ ರಹಸ್ಯ ಚರ್ಚೆ ?

September 25, 2026

ರಾಜಕೀಯ ಸಂದಿಗ್ಧತೆಯಲ್ಲಿ ಸಚಿವ ಜಾರಕಿಹೊಳಿ

September 24, 2026

ಆಡಳಿತ ಶಾಸಕರ ರಾಜೀನಾಮೆಗೆ ಡಿಕೆಶಿ ಸಮರ್ಥನೆ

September 23, 2026

ಅಸಮಾಧಾನ ಶಾಸಕರ ಓಲೈಕೆಗೆ ತಲಾ 100 ಕೋಟಿ ರೂ.

September 22, 2026

ಪಶುವೈದ್ಯಾಧಿಕಾರಿ ನೇಮಕ ಅಕ್ರಮ: ಹೈಕೋರ್ಟ್ ತನಿಖೆ

September 21, 2026

ಡಿಕೆಶಿ ಸ್ವಂತ ಹಣದಲ್ಲೇ ಕೃಷಿ ಸಾಲ ಮನ್ನಾ ಸಾಧ್ಯ

September 19, 2026

3,705 ಕೋಟಿ ರೂ. ನೀಡಿ: ಕೇಂದ್ರಕ್ಕೆ ಕರ್ನಾಟಕ ಒತ್ತಾಯ

September 18, 2026

ಕರಾವಳಿ ಸಂಪುಟ ಸಭೆ: ಜನರ ಮನೆ ಬಾಗಿಲಿಗೆ ಸರ್ಕಾರ

September 17, 2026

ಡ್ಯಾಂಗಳ ನೀರು ಕುಡಿಯಲು, ಕೆರೆ ತುಂಬಲು ಮಾತ್ರ

September 16, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (578)
  • ಅಂಕಣ (109)
  • ಉದ್ಯೋಗ (353)
  • ದಿನ ಭವಿಷ್ಯ (110)
  • ರಾಜಕೀಯ (2,071)
  • ರಾಜ್ಯ (2,386)
  • ರಾಷ್ಟ್ರ (2,350)
  • ವಿಶ್ಲೇಷಣೆ (202)
  • ಶಿಕ್ಷಣ (411)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ವರಿಷ್ಠರ ಜೊತೆ ಡಿಕೆಶಿ ಸಂಪುಟ ಪುನರ್ ರಚನೆ ಚರ್ಚೆ

    September 28, 2026
  • ಪರಿಷತ್ ಚುನಾವಣೆ: ಬಿಜೆಪಿ-ಜೆಡಿಎಸ್ ಮೈತ್ರಿ ಹೋರಾಟ

    September 26, 2026
  • ಸಚಿವ ಜಾರಕಿಹೊಳಿ-ಕುಮಾರಸ್ವಾಮಿ ರಹಸ್ಯ ಚರ್ಚೆ ?

    September 25, 2026

KMS Special

  • ವರಿಷ್ಠರ ಜೊತೆ ಡಿಕೆಶಿ ಸಂಪುಟ ಪುನರ್ ರಚನೆ ಚರ್ಚೆ

    September 28, 2026
  • ಪರಿಷತ್ ಚುನಾವಣೆ: ಬಿಜೆಪಿ-ಜೆಡಿಎಸ್ ಮೈತ್ರಿ ಹೋರಾಟ

    September 26, 2026
  • ಸಚಿವ ಜಾರಕಿಹೊಳಿ-ಕುಮಾರಸ್ವಾಮಿ ರಹಸ್ಯ ಚರ್ಚೆ ?

    September 25, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಪರಿಷತ್ ಚುನಾವಣೆ: ಬಿಜೆಪಿ-ಜೆಡಿಎಸ್ ಮೈತ್ರಿ ಹೋರಾಟ

September 26, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ