Thursday, October 1, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, October 1, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಜನವರಿಯಲ್ಲಿ ಪಂಚಾಯತ್‌ ಚುನಾವಣೆಗೆ ತೀರ್ಮಾನ

by KM Shivaraju September 30, 2026
written by KM Shivaraju September 30, 2026 0 comments 1 minutes read
0FacebookTwitterPinterestEmail
7

ಬೆಂಗಳೂರು:ಜಿಲ್ಲಾ, ತಾಲ್ಲೂಕು ಹಾಗೂ ಗ್ರಾಮ ಪಂಚಾಯತ್‌ಗಳಿಗೆ ಬರುವ ಜನವರಿಯಲ್ಲಿ ಚುನಾವಣೆ ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

ನವೆಂಬರ್‌ ಕೊನೆಗೆ ಇಲ್ಲವೇ ಡಿಸೆಂಬರ್‌ನಲ್ಲಿ ಚುನಾವಣೆ ನಡೆಸುವ ಸಂಬಂಧ ರಾಜ್ಯ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಲಿದೆ.

ನ್ಯಾಯಾಲಯದ ಆದೇಶ

ನ್ಯಾಯಾಲಯದ ಆದೇಶಕ್ಕೆ ತಲೆಬಾಗಿ ರಾಜ್ಯ ಸರ್ಕಾರ 4 ವರ್ಷಗಳ ನಂತರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ಮುಂದಾಗಿದೆ.

ತಳಹಂತದಲ್ಲಿ ಜನರಿಗೆ ಅಧಿಕಾರ ನೀಡುವ ಈ ಚುನಾಚವಣೆಯನ್ನು ಅತ್ಯಂತ ಗಂಭೀರವಾಗಿ ತೆಗೆದುಕೊಂಡಿರುವ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ವಾರ್ಡ್‌ ಪುನರ್‌ ವಿಂಗಡಣೆ ಮತ್ತು ಕ್ಷೇತ್ರಗಳ ಮೀಸಲಾತಿ ಸಂಬಂಧ ಪಕ್ಷದ ವೇದಿಕೆಯಲ್ಲೇ ಹಲವು ಸುತ್ತಿನ ಸಭೆ ನಡೆಸಿದ್ದಾರೆ.

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)‌ ಪೂರ್ಣಗೊಳ್ಳುತ್ತಿದ್ದಂತೆ  ಚುನಾವಣೆಗೆ ಸಿದ್ಧವಾಗುವಂತೆ ಚುನಾವಣಾ ಆಯೋಗಕ್ಕೆ ರಾಜ್ಯ ಸರ್ಕಾರ ತಿಳಿಸಿದೆ.

ಶಾಸಕಾಂಗ ಸಭೆಯಲ್ಲಿ ಸೂಚನೆ

ರೈತರ ಸಮಸ್ಯೆ ಕುರಿತು ಚರ್ಚಿಸುವ ಉದ್ದೇಶದಿಂದ ಕರೆಯಲಾಗಿದ್ದ ವಿಧಾನಮಂಡಲದ ಅಧಿವೇಶನ ವೇಳೆ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲೂ ಜಿಲ್ಲಾ, ತಾಲ್ಲೂಕು ಹಾಗೂ ಗ್ರಾಮ ಪಂಚಾಯತ್‌ಗಳಿಗೆ ಶೀಘ್ರ ಚುನಾವಣೆ ನಡೆಸಲಾಗುವುದು ಎಂದಿದ್ದರು.

ಚುನಾವಣೆಗೆ ಸಿದ್ಧರಾಗಿ ಎಂದು ಪಕ್ಷದ ಶಾಸಕರಿಗೆ ಮುಖ್ಯಮಂತ್ರಿ ಸಭೆಯಲ್ಲಿ ತಿಳಿಸಿದ್ದಲ್ಲದೆ, ಮುಂಬರುವ ವಿಧಾನಸಭಾ ಚುನಾವಣೆಗೆ ಇದು ದಿಕ್ಸೂಚಿಯಾಗಲಿದ್ದು, ಶಾಸಕರು ಕ್ಷೇತ್ರದಲ್ಲೇ ಉಳಿದು ಅಧಿಸೂಚನೆ ಹೊರಡುವುದಕ್ಕೂ ಮುನ್ನ ಮೀಸಲಾತಿ ಮತ್ತು ಕ್ಷೇತ್ರ ವಿಂಗಡನೆ ಕುರಿತು ಜಿಲ್ಲಾಡಳಿತದೊಂದಿಗೆ ಚರ್ಚಿಸಿ ನಿರ್ಧಾರಗಳನ್ನು ಕೈಗೊಳ್ಳಿ ಎಂದಿದ್ದರು.  

ರಾಜ್ಯ ಚುನಾವಣಾ ಆಯೋಗಕ್ಕೆ ಜಿಲ್ಲಾಡಳಿತಗಳಿಂದ ಕ್ಷೇತ್ರಗಳ ಮೀಸಲಾತಿ ಹಾಗೂ ಪುನರ್‌ ವಿಂಗಡಣೆ ಮಾಹಿತಿ ಬರುತ್ತಿದ್ದಂತೆ ರಾಜ್ಯ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಲಿದೆ.

ಅಧಿಕಾರ ಹಿಡಿಯುವ ಕಾರ್ಯತಂತ್ರ

ಕೆಳಸ್ಥರದ ಚುನಾವಣೆಯಲ್ಲಿ ಅಧಿಕಾರ ಹಿಡಿದು ವಿಧಾನಸಭಾ ಚುನಾವಣೆಗೆ ಪೀಠಿಕೆ ಸಿದ್ಧಪಡಿಸುವುದು ಮುಖ್ಯಮಂತ್ರಿ ಅವರ ಕಾರ್ಯತಂತ್ರವಾಗಿದೆ.

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಹಿಡಿತ ಸಾಧಿಸುವ ಉದ್ದೇಶದಿಂದ ಪಕ್ಷದ ಶಾಸಕರು ತಮ್ಮ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಕುಡಿಯುವ ನೀರು ಮತ್ತು ರಸ್ತೆ ಸೇರಿದಂತೆ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಗ್ರಾಮೀಣ ಅಭಿವೃದ್ಧಿ ಇಲಾಖೆಯಿಂದಲೇ ತಲಾ 50 ಲಕ್ಷ ರೂ. ಬಿಡುಗಡೆ ಮಾಡಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
cm d k shivakumardistrict - talluka and grama panchayatpanchyat electionstate election commissionstate govt.
0 FacebookTwitterPinterestEmail
KM Shivaraju

previous post
ನೈಸ್‌ ಯೋಜನೆ: ಡಿಕೆಶಿ ಕುಟುಂಬ 3 ಲಕ್ಷ ಕೋಟಿ ಲೂಟಿ

You may also like

ನೈಸ್‌ ಯೋಜನೆ: ಡಿಕೆಶಿ ಕುಟುಂಬ 3 ಲಕ್ಷ ಕೋಟಿ ಲೂಟಿ

September 29, 2026

ವರಿಷ್ಠರ ಜೊತೆ ಡಿಕೆಶಿ ಸಂಪುಟ ಪುನರ್ ರಚನೆ ಚರ್ಚೆ

September 28, 2026

ಪರಿಷತ್ ಚುನಾವಣೆ: ಬಿಜೆಪಿ-ಜೆಡಿಎಸ್ ಮೈತ್ರಿ ಹೋರಾಟ

September 26, 2026

ಸಚಿವ ಜಾರಕಿಹೊಳಿ-ಕುಮಾರಸ್ವಾಮಿ ರಹಸ್ಯ ಚರ್ಚೆ ?

September 25, 2026

ರಾಜಕೀಯ ಸಂದಿಗ್ಧತೆಯಲ್ಲಿ ಸಚಿವ ಜಾರಕಿಹೊಳಿ

September 24, 2026

ಆಡಳಿತ ಶಾಸಕರ ರಾಜೀನಾಮೆಗೆ ಡಿಕೆಶಿ ಸಮರ್ಥನೆ

September 23, 2026

ಅಸಮಾಧಾನ ಶಾಸಕರ ಓಲೈಕೆಗೆ ತಲಾ 100 ಕೋಟಿ ರೂ.

September 22, 2026

ಪಶುವೈದ್ಯಾಧಿಕಾರಿ ನೇಮಕ ಅಕ್ರಮ: ಹೈಕೋರ್ಟ್ ತನಿಖೆ

September 21, 2026

ಡಿಕೆಶಿ ಸ್ವಂತ ಹಣದಲ್ಲೇ ಕೃಷಿ ಸಾಲ ಮನ್ನಾ ಸಾಧ್ಯ

September 19, 2026

3,705 ಕೋಟಿ ರೂ. ನೀಡಿ: ಕೇಂದ್ರಕ್ಕೆ ಕರ್ನಾಟಕ ಒತ್ತಾಯ

September 18, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (580)
  • ಅಂಕಣ (109)
  • ಉದ್ಯೋಗ (353)
  • ದಿನ ಭವಿಷ್ಯ (110)
  • ರಾಜಕೀಯ (2,073)
  • ರಾಜ್ಯ (2,388)
  • ರಾಷ್ಟ್ರ (2,352)
  • ವಿಶ್ಲೇಷಣೆ (202)
  • ಶಿಕ್ಷಣ (411)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಜನವರಿಯಲ್ಲಿ ಪಂಚಾಯತ್‌ ಚುನಾವಣೆಗೆ ತೀರ್ಮಾನ

    September 30, 2026
  • ನೈಸ್‌ ಯೋಜನೆ: ಡಿಕೆಶಿ ಕುಟುಂಬ 3 ಲಕ್ಷ ಕೋಟಿ ಲೂಟಿ

    September 29, 2026
  • ವರಿಷ್ಠರ ಜೊತೆ ಡಿಕೆಶಿ ಸಂಪುಟ ಪುನರ್ ರಚನೆ ಚರ್ಚೆ

    September 28, 2026

KMS Special

  • ಜನವರಿಯಲ್ಲಿ ಪಂಚಾಯತ್‌ ಚುನಾವಣೆಗೆ ತೀರ್ಮಾನ

    September 30, 2026
  • ನೈಸ್‌ ಯೋಜನೆ: ಡಿಕೆಶಿ ಕುಟುಂಬ 3 ಲಕ್ಷ ಕೋಟಿ ಲೂಟಿ

    September 29, 2026
  • ವರಿಷ್ಠರ ಜೊತೆ ಡಿಕೆಶಿ ಸಂಪುಟ ಪುನರ್ ರಚನೆ ಚರ್ಚೆ

    September 28, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ನೈಸ್‌ ಯೋಜನೆ: ಡಿಕೆಶಿ ಕುಟುಂಬ 3 ಲಕ್ಷ...

September 29, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ