Sunday, November 1, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, November 1, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಮೈತ್ರಿ ಹೋರಾಟಕ್ಕೆ ದೇವೇಗೌಡ-ಬಿಎಸ್‌ವೈ ಸಮ್ಮತಿ

by KM Shivaraju October 31, 2026
written by KM Shivaraju October 31, 2026 0 comments 1 minutes read
0FacebookTwitterPinterestEmail
7

ಬೆಂಗಳೂರು:ಬಿಜೆಪಿ ಹಾಗೂ ಜೆಡಿಎಸ್‌ ರಾಜ್ಯಾಧ್ಯಕ್ಷರುಗಳಾದ ಬಿ.ವೈ.ವಿಜಯೇಂದ್ರ ಮತ್ತು ಎಚ್.ಡಿ.ಕುಮಾರಸ್ವಾಮಿ ನಾಯಕತ್ವದಲ್ಲಿ ಮುಂಬರುವ ಚುನಾವಣೆಗಳನ್ನು ಎನ್‌ಡಿಎ ಮೈತ್ರಿಕೂಟ ಎದುರಿಸಿದರೆ ರಾಜ್ಯದಲ್ಲಿ ಕಾಂಗ್ರೆಸ್‌ ದುರಾಡಳಿತಕ್ಕೆ ಕೊನೆ ಹಾಡಬಹುದು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರಿಗೆ ತಿಳಿಸಿದ್ದಾರೆ.

ದೇವೇಗೌಡ ಅವರನ್ನು ಶುಕ್ರವಾರ ಸಂಜೆ ಭೇಟಿ ಮಾಡಿದ ಯಡಿಯೂರಪ್ಪ, ಪ್ರಸಕ್ತ ರಾಜಕಾರಣಕ್ಕೆ ಸಂಬಂಧಿಸಿದಂತೆ ಸುದೀರ್ಘ ಚರ್ಚೆ ನಡೆಸಿ, ಕರ್ನಾಟಕದಲ್ಲಿ ಕಾಂಗ್ರೆಸ್‌ ಪಕ್ಷವನ್ನು ಬುಡಸಮೇತ ಕಿತ್ತುಹಾಕಲು ಬಿ.ವೈ.ವಿಜಯೇಂದ್ರ ಮತ್ತೊಂದು ಅವಧಿಗೆ ರಾಜ್ಯಾಧ್ಯಕ್ಷರಾಗಿ ಮುಂದುವರೆಯುವುದು ಅನಿವಾರ್ಯ ಎಂದಿದ್ದಾರೆ.

ವಿಜಯೇಂದ್ರ ಮತ್ತೊಂದು ಅವಧಿಗೆ

ನವೆಂಬರ್‌ 11ಕ್ಕೆ ವಿಜಯೇಂದ್ರ ಅವರ ರಾಜ್ಯಾಧ್ಯಕ್ಷ ಅವಧಿ ಪೂರ್ಣಗೊಳ್ಳಲಿದ್ದು, ಮತ್ತೊಂದು ಅವಧಿಗೆ ಮುಂದುವರೆಯಲು ನಮ್ಮ ಪಕ್ಷಲ್ಲೇ ಭಿನ್ನಾಭಿಪ್ರಾಯಗಳಿವೆ.

ಪಕ್ಷದ ಹಿತದೃಷ್ಟಿಯಿಂದ ವಿಜಯೇಂದ್ರ ಅವರನ್ನೇ ಮತ್ತೊಂದು ಅವಧಿಗೆ ಮುಂದುವರೆಸುವಂತೆ ನಾನು ಈಗಾಗಲೇ ವರಿಷ್ಠರಿಗೆ ಸಲಹೆ ಮಾಡಿದ್ದೇನೆ, ನೀವೂ ಸಹಾ ನನ್ನ ಧ್ವನಿಗೆ ಬೆಂಬಲ ವ್ಯಕ್ತಪಡಿಸಿ, ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್‌ ಷಾ ಅವರಿಗೆ ಸಲಹೆ ಮಾಡಿ ಎಂದಿದ್ದಾರೆ.

ಕುಮಾರಸ್ವಾಮಿ ಮತ್ತು ವಿಜಯೇಂದ್ರ ನಡುವೆ ಸಣ್ಣ-ಪುಟ್ಟ ಭಿನ್ನಾಭಿಪ್ರಾಯಗಳಿವೆ, ಇದನ್ನೇ ಮುಂದಿಟ್ಟುಕೊಂಡು ವಿಜಯೇಂದ್ರ ಬದಲಾವಣೆಗೆ ಕೆಲವರು ಒತ್ತಡ ತರುತ್ತಿದ್ದಾರೆ.

ಕುಮಾರಸ್ವಾಮಿ ಮೈತ್ರಿಕೂಟ ನಾಯಕತ್ವ

ಎರಡೂ ಪಕ್ಷಗಳ ರಾಜ್ಯಾಧ್ಯಕ್ಷರನ್ನು ಕರೆದು ಸಲಹೆ ನೀಡಿ, ನಾನು ವಿಜಯೇಂದ್ರ ಅವರಿಗೆ ತಿಳಿಹೇಳುತ್ತೇನೆ, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕುಮಾರಸ್ವಾಮಿಯೇ ಎನ್‌ಡಿಎ ಮೈತ್ರಿಕೂಟದ ನಾಯಕತ್ವ ವಹಿಸಿಕೊಳ್ಳಲಿ, ಈ ಇಬ್ಬರೂ ನಾಯಕರು ಒಟ್ಟಿಗೆ ಶ್ರಮಿಸಿದರೆ ನಾವು ಜಯಗಳಿಸಬಹುದಾಗಿದೆ.

ನಿಮ್ಮ ಜೊತೆಗಿನ ಮಾತುಕತೆ ವೇಳೆ ಕುಮಾರಸ್ವಾಮಿ ಅವರಿಗೂ ಬರುವಂತೆ ಕೋರಿದ್ದೆ, ಆದರೆ, ಪುಣೆಯಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕಿದ್ದರಿಂದ ಬರಲು ಸಾಧ್ಯವಾಗಲಿಲ್ಲ, ಆದರೆ ನಮ್ಮಗಳ ತೀರ್ಮಾನಕ್ಕೆ ಬದ್ಧರಾಗಿರುವುದಾಗಿ ಹೇಳಿದ್ದಾರೆ.

ಒಟ್ಟಾಗಿ ಮುಂದುವರಿಯಬೇಕು

ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಹಲವಾರು ವಿದ್ಯಮಾನಗಳು ನಡೆಯುತ್ತಿದ್ದು ಯಾವುದೇ ಕ್ಷಣ ಏನು ಬೇಕಾದರೂ ಆಗಬಹುದು, ಹೀಗಾಗಿ ನಾವಿಬ್ಬರು ಒಟ್ಟಾಗಿ ಮುಂದುವರಿಯಬೇಕು ಎಂದು ಯಡಿಯೂರಪ್ಪ ತಿಳಿಸಿದ್ದಾರೆ.

ಮೈತ್ರಿಕೂಟದಲ್ಲಿ ಗೊಂದಲಗಳು ಎದುರಾದರೆ ಕಾಂಗ್ರೆಸ್‌ ಇದನ್ನೇ ರಾಜಕೀಯ ಲಾಭವಾಗಿ ಬಳಸಿಕೊಳ್ಳಬಹುದು, ಆದ್ದರಿಂದ ವಿಧಾನ ಪರಿಷತ್‌ ಚುನಾವಣೆಯಲ್ಲಿ ತೋರಿದ ಒಗ್ಗಟ್ಟನ್ನೇ ಮುಂದುವರೆಸಲು ಉಭಯ ನಾಯಕರು ತೀರ್ಮಾನಿಸಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
assembly election and all election in futurebjp-jdsboth party leaders decidedh d devegowda and b s yadiyurappa discussedjoint fight in the election
0 FacebookTwitterPinterestEmail
KM Shivaraju

previous post
ನಿಯಮ ಮೀರಿ ಪಟಾಕಿ ಸಿಡಿಸಿದರೆ ಕಠಿಣ ಕ್ರಮ

You may also like

ನಿಯಮ ಮೀರಿ ಪಟಾಕಿ ಸಿಡಿಸಿದರೆ ಕಠಿಣ ಕ್ರಮ

October 30, 2026

ನವೆಂಬರ್‌ನಿಂದ ಹಾಲು-ಬಸ್‌ ಪ್ರಯಾಣ ದರ ಹೆಚ್ಚಳ

October 29, 2026

ಪರಿಷತ್‌ ಫಲಿತಾಂಶ 2028ರ ಚುನಾವಣೆ ಜನಾದೇಶ ಅಲ್ಲ

October 28, 2026

ಎಸ್‌ಐಆರ್‌ ನಂತರ 99.32 ಲಕ್ಷ ಮತದಾರರ ಹೆಸರು ಕಡಿತ

October 27, 2026

ಕಬ್ಬು ಬೆಳೆಗಾರರಿಗೆ ಸ್ಪಂದಿಸಿ ಬೇಡಿಕೆಗಳ ಈಡೇರಿಸಿ

October 26, 2026

ಸ್ಟಿಂಗ್ ಆರೋಪಿಗಳು ಸಚಿವ ಕುಮಾರಸ್ವಾಮಿ ಬಂಟರು

October 24, 2026

ಸ್ಟಿಂಗ್‌ ಕಾರಣಕರ್ತರ ವಿರುದ್ಧ ಕ್ರಮಕ್ಕೆ ಡಿಕೆಶಿಗೆ ತಾಕೀತು

October 23, 2026

ಸಚಿವರ ತಡೆದ ಅಧಿಕಾರಿಗಳ ಮೇಲೆ ಕ್ರಮಕ್ಕೆ ಆದೇಶ

October 22, 2026

ಬರದಿಂದ ಭವಿಷ್ಯದಲ್ಲಿ ಅನ್ನ, ನೀರಿಗೂ ಹಾಹಾಕಾರ

October 19, 2026

ಸ್ಟಿಂಗ್‌ ಕಿಂಗ್‌ಪಿನ್‌ ಬಂಧಿಸದಿದ್ದರೆ ತೀವ್ರ ಹೋರಾಟ

October 17, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (602)
  • ಅಂಕಣ (109)
  • ಉದ್ಯೋಗ (359)
  • ದಿನ ಭವಿಷ್ಯ (110)
  • ರಾಜಕೀಯ (2,094)
  • ರಾಜ್ಯ (2,410)
  • ರಾಷ್ಟ್ರ (2,374)
  • ವಿಶ್ಲೇಷಣೆ (202)
  • ಶಿಕ್ಷಣ (415)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮೈತ್ರಿ ಹೋರಾಟಕ್ಕೆ ದೇವೇಗೌಡ-ಬಿಎಸ್‌ವೈ ಸಮ್ಮತಿ

    October 31, 2026
  • ನಿಯಮ ಮೀರಿ ಪಟಾಕಿ ಸಿಡಿಸಿದರೆ ಕಠಿಣ ಕ್ರಮ

    October 30, 2026
  • ನವೆಂಬರ್‌ನಿಂದ ಹಾಲು-ಬಸ್‌ ಪ್ರಯಾಣ ದರ ಹೆಚ್ಚಳ

    October 29, 2026

KMS Special

  • ಮೈತ್ರಿ ಹೋರಾಟಕ್ಕೆ ದೇವೇಗೌಡ-ಬಿಎಸ್‌ವೈ ಸಮ್ಮತಿ

    October 31, 2026
  • ನಿಯಮ ಮೀರಿ ಪಟಾಕಿ ಸಿಡಿಸಿದರೆ ಕಠಿಣ ಕ್ರಮ

    October 30, 2026
  • ನವೆಂಬರ್‌ನಿಂದ ಹಾಲು-ಬಸ್‌ ಪ್ರಯಾಣ ದರ ಹೆಚ್ಚಳ

    October 29, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ನಿಯಮ ಮೀರಿ ಪಟಾಕಿ ಸಿಡಿಸಿದರೆ ಕಠಿಣ ಕ್ರಮ

October 30, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ