Saturday, November 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, November 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyಉದ್ಯೋಗರಾಜಕೀಯರಾಜ್ಯರಾಷ್ಟ್ರ

ಸಂಪುಟಕ್ಕೆ ಬಹುಕೋಟಿ ಹಗರಣ ಆರೋಪಿ ನಾಗೇಂದ್ರ

by KM Shivaraju November 7, 2026
written by KM Shivaraju November 7, 2026 0 comments 1 minutes read
0FacebookTwitterPinterestEmail
3

ಬೆಂಗಳೂರು:ಮಹರ್ಷಿ ವಾಲ್ಮೀಕಿ ನಿಗಮದ ಬಹುಕೋಟಿ ರೂ. ಹಗರಣದ ಪ್ರಮುಖ ಆರೋಪಿ ಬಿ.ನಾಗೇಂದ್ರ ಅವರನ್ನು ಮತ್ತೆ ಮಂತ್ರಿಮಂಡಲಕ್ಕೆ ಸೇರಿಸಿಕೊಳ್ಳಲು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಮುಂದಾಗಿದ್ದಾರೆ.

ಬೆಳಗಾವಿಯಲ್ಲಿ ನಡೆಯಲಿರುವ ವಿಧಾನಮಂಡಲದ ಚಳಿಗಾಲದ ಅಧಿವೇಶನಕ್ಕೂ ಮುನ್ನ ಸಂಪುಟ ವಿಸ್ತರಿಸಿ ಖಾಲಿ ಇರುವ ಎರಡು ಸ್ಥಾನಗಳನ್ನು ಭರ್ತಿ ಮಾಡಲಿದ್ದಾರೆ.

ಲಕ್ಷ್ಮೀ ಹೆಬ್ಬಾಳ್ಕರ್‌ ಸೇರ್ಪಡೆ

ನಾಗೇಂದ್ರ ಜೊತೆಗೆ ಬೆಳಗಾವಿ ಜಿಲ್ಲೆಯ ಲಕ್ಷ್ಮೀ ಹೆಬ್ಬಾಳ್ಕರ್‌ ಅವರನ್ನು ಮಂತ್ರಿಮಂಡಲಕ್ಕೆ ಸೇರ್ಪಡೆ ಮಾಡಿಕೊಂಡು ಮಹಿಳಾ ಕೋಟಾ ತುಂಬಲು ನಿರ್ಧರಿಸಿದ್ದಾರೆ.

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್)‌ ವಿರುದ್ಧ ಮುಂದಿನ ಹೋರಾಟ ಕುರಿತು ಚರ್ಚೆ ನಡೆಸಲು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಶುಕ್ರವಾರ ರಾತ್ರಿ ದೆಹಲಿಯಲ್ಲಿ ಪಕ್ಷದ ನಾಯಕಿ ಸೋನಿಯಾ ಗಾಂಧಿ ನಿವಾಸದಲ್ಲಿ ಕರೆದಿದ್ದ ಚಹಾ ಕೂಟದಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ, ಪಕ್ಷದ ಅಧಿನಾಯಕನ ಜೊತೆ ನಡೆಸಿದ ಮಾತುಕತೆ ವೇಳೆ ಕರ್ನಾಟಕದಲ್ಲಿ ಸ್ಟಿಂಗ್‌ ಆಪರೇಷನ್‌ ಸೇರಿದಂತೆ ಕೆಲವು ರಾಜಕೀಯ ವಿದ್ಯಮಾನಗಳನ್ನು ಗಮನಕ್ಕೆ ತಂದಿದ್ದಾರೆ.

ಅಲ್ಲದೆ, ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆ ಗಮನದಲ್ಲಿ ಇಟ್ಟುಕೊಂಡು ಮಂತ್ರಿಮಂಡಲದಲ್ಲಿ ಖಾಲಿ ಇರುವ ಎರಡು ಸ್ಥಾನ ಭರ್ತಿ ಮಾಡುವುದಾಗಿ ತಿಳಿಸಿದ್ದಾರೆ.

ರಾಹುಲ್‌ ಗಾಂಧಿ ಒಪ್ಪಿಗೆ

ಮುಖ್ಯಮಂತ್ರಿ ಮಾತಿಗೆ ಒಪ್ಪಿಗೆ ಸೂಚಿಸಿದ ರಾಹುಲ್‌ ಗಾಂಧಿ, ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲ ಜೊತೆ ಮಾತುಕತೆ ನಡೆಸಿ ಮುಂದುವರೆಯಲು ಹೇಳಿದ್ದಾರೆ.

ಶಿವಕುಮಾರ್‌ ಮುಖ್ಯಮಂತ್ರಿಯಾಗಿ ಸರ್ಕಾರ ರಚನೆ ವೇಳೆ ಹಗರಣದ ಆರೋಪ ಹೊತ್ತಿದ್ದರೂ ನಾಗೇಂದ್ರ ಅವರನ್ನು ಸಂಪುಟಕ್ಕೆ ಸೇರಿಸಿಕೊಂಡಿದ್ದರು.

ನಂತರ ನಡೆದ ವಿಧಾನಮಂಡಲದ ಅಧಿವೇಶನದಲ್ಲಿ ಪ್ರತಿಪಕ್ಷ ಬಿಜೆಪಿ, ಸದನದ ಒಳಗೆ ಮತ್ತು ಹೊರಗೆ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿದ ಬೆನ್ನಲ್ಲೇ ಸಂಪುಟದಿಂದ ಅವರನ್ನು ಕೈಬಿಡಲಾಗಿತ್ತು.

ಕಾಂಗ್ರೆಸ್‌ ಸೋಲು ಹಿನ್ನೆಲೆ

ವಿಧಾನ ಪರಿಷತ್ತಿನ ತಾಲಾ ಎರಡು ಶಿಕ್ಷಕರ ಮತ್ತು ಪದವೀಧರರ ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ ಹೀನಾಯ ಸೋಲು ಕಂಡಿತ್ತು, ಅದರಲ್ಲೂ ಉತ್ತರ ಕರ್ನಾಟಕ ಭಾಗದಲ್ಲಿ ಬಿಜೆಪಿ ಅಭ್ಯರ್ಥಿಗಳು ಭಾರೀ ಅಂತರದ ಜಯ ಗಳಿಸಿದ್ದರು.

ಕಾಂಗ್ರೆಸ್‌ ಅಭ್ಯರ್ಥಿಗಳ ಸೋಲಿಗೆ ಎಸ್‌ಟಿ ಮತ್ತು ಇತರ ಹಿಂದುಳಿದ ವರ್ಗಗಳು ಪಕ್ಷದಿಂದ ದೂರವಾಗುತ್ತಿವೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ವಾಲ್ಮೀಕಿ ಸಮುದಾಯದ ಮುಖಂಡ ನಾಗೇಂದ್ರ ಅವರನ್ನು ಮಂತ್ರಿಮಂಡಲಕ್ಕೆ ಸೇರ್ಪಡೆ ಮಾಡಿಕೊಳ್ಳಲು ಮುಖ್ಯಮಂತ್ರಿ ನಿರ್ಧರಿಸಿದರು ಎಂದು ಉನ್ನತ ಮೂಲಗಳು ತಿಳಿಸಿವೆ.

ಪಂಚಮಸಾಲಿ ಸಮುದಾಯಕ್ಕೆ ಸೇರಿದ ಲಕ್ಷ್ಮೀ ಹೆಬ್ಬಾಳ್ಕರ್‌ ಅವರಿಗೆ ಮಂತ್ರಿಮಂಡಲದಲ್ಲಿ ಅವಕಾಶ ಮಾಡಿಕೊಡುವ ಮೂಲಕ ಸಮುದಾಯವನ್ನು ಪಕ್ಷದತ್ತ ಸೆಳೆಯಲು ಈ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ.

ಸಿದ್ದರಾಮಯ್ಯ ಒತ್ತಾಯ

ಇತ್ತೀಚೆಗೆ ರಾಹುಲ್‌ ಗಾಂಧಿ ಭೇಟಿ ಮಾಡಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಹಾವೇರಿಯ ನೀಲಪ್ಪ ಶಿವಣ್ಣನವರ್‌ ಹಾಗೂ ಬಳ್ಳಾರಿಯಿಂದ ಅನ್ನಪೂರ್ಣ ತುಕಾರಾಂ ಅವರನ್ನು ಮಂತ್ರಿ ಮಾಡುವಂತೆ ಒತ್ತಾಯಿಸಿದ್ದರು.

ಆದರೆ, ಸಿದ್ದರಾಮಯ್ಯ ಸೂಚಿಸಿದ್ದ ಎರಡೂ ಹೆಸರುಗಳನ್ನು ಬದಿಗಿಟ್ಟು ನಾಗೇಂದ್ರ ಮತ್ತು ಹೆಬ್ಬಾಳ್ಕರ್‌ ಅವರನ್ನು ಸೇರ್ಪಡೆ ಮಾಡಿಕೊಳ್ಳಲು ಶಿವಕುಮಾರ್‌ ನಿರ್ಧರಿಸಿದ್ದಾರೆ.

ಕೆಲವು ದಿನಗಳ ಹಿಂದಷ್ಟೇ ಮುಖ್ಯಮಂತ್ರಿ ಅವರು, ಮಂತ್ರಿಮಂಡಲಕ್ಕೆ ಸದ್ಯದಲ್ಲೇ ಮಹಿಳಾ ಪ್ರತಿನಿಧಿ ಸೇರ್ಪಡೆ ಆಗಲಿದ್ದಾರೆ ಎಂದಿದ್ದನ್ನು ಸ್ಮರಿಸಬಹುದು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
cm d k shivakumarlakshmi hebbalkar to fill ladies seat in cabinetnagendra to cabinet againRahul Gandhivalmiki corporation scam
0 FacebookTwitterPinterestEmail
KM Shivaraju

previous post
ಹೆಚ್ಚು ಎಥೆನಾಲ್ ಮಿಶ್ರಣದಿಂದ ವಾಹನಗಳಿಗೆ ಧಕ್ಕೆ

You may also like

ಹೆಚ್ಚು ಎಥೆನಾಲ್ ಮಿಶ್ರಣದಿಂದ ವಾಹನಗಳಿಗೆ ಧಕ್ಕೆ

November 6, 2026

ಬಸ್‌ ಪ್ರಯಾಣ ದರ ಶೇ.23ರಿಂದ ಶೇ.37ರಷ್ಟು ಹೆಚ್ಚಳ

November 4, 2026

ನೋಟಿಸ್‌ ನೀಡಿ ಬಂಧಿಸಲಿ, ನನ್ನ ತಾಕತ್ತು ತೋರಿಸುವೆ

November 3, 2026

ಪ್ರಜ್ವಲ್‌ ಪೆನ್‌ಡ್ರೈವ್‌ ಹಗರಣದಲ್ಲಿ ಡಿ.ಕೆ.ಶಿ. ಷಡ್ಯಂತ್ರ

November 2, 2026

ಮೈತ್ರಿ ಹೋರಾಟಕ್ಕೆ ದೇವೇಗೌಡ-ಬಿಎಸ್‌ವೈ ಸಮ್ಮತಿ

October 31, 2026

ನಿಯಮ ಮೀರಿ ಪಟಾಕಿ ಸಿಡಿಸಿದರೆ ಕಠಿಣ ಕ್ರಮ

October 30, 2026

ನವೆಂಬರ್‌ನಿಂದ ಹಾಲು-ಬಸ್‌ ಪ್ರಯಾಣ ದರ ಹೆಚ್ಚಳ

October 29, 2026

ಪರಿಷತ್‌ ಫಲಿತಾಂಶ 2028ರ ಚುನಾವಣೆ ಜನಾದೇಶ ಅಲ್ಲ

October 28, 2026

ಎಸ್‌ಐಆರ್‌ ನಂತರ 99.32 ಲಕ್ಷ ಮತದಾರರ ಹೆಸರು ಕಡಿತ

October 27, 2026

ಕಬ್ಬು ಬೆಳೆಗಾರರಿಗೆ ಸ್ಪಂದಿಸಿ ಬೇಡಿಕೆಗಳ ಈಡೇರಿಸಿ

October 26, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (607)
  • ಅಂಕಣ (109)
  • ಉದ್ಯೋಗ (362)
  • ದಿನ ಭವಿಷ್ಯ (110)
  • ರಾಜಕೀಯ (2,099)
  • ರಾಜ್ಯ (2,415)
  • ರಾಷ್ಟ್ರ (2,379)
  • ವಿಶ್ಲೇಷಣೆ (202)
  • ಶಿಕ್ಷಣ (416)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸಂಪುಟಕ್ಕೆ ಬಹುಕೋಟಿ ಹಗರಣ ಆರೋಪಿ ನಾಗೇಂದ್ರ

    November 7, 2026
  • ಹೆಚ್ಚು ಎಥೆನಾಲ್ ಮಿಶ್ರಣದಿಂದ ವಾಹನಗಳಿಗೆ ಧಕ್ಕೆ

    November 6, 2026
  • ಬಸ್‌ ಪ್ರಯಾಣ ದರ ಶೇ.23ರಿಂದ ಶೇ.37ರಷ್ಟು ಹೆಚ್ಚಳ

    November 4, 2026

KMS Special

  • ಸಂಪುಟಕ್ಕೆ ಬಹುಕೋಟಿ ಹಗರಣ ಆರೋಪಿ ನಾಗೇಂದ್ರ

    November 7, 2026
  • ಹೆಚ್ಚು ಎಥೆನಾಲ್ ಮಿಶ್ರಣದಿಂದ ವಾಹನಗಳಿಗೆ ಧಕ್ಕೆ

    November 6, 2026
  • ಬಸ್‌ ಪ್ರಯಾಣ ದರ ಶೇ.23ರಿಂದ ಶೇ.37ರಷ್ಟು ಹೆಚ್ಚಳ

    November 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಹೆಚ್ಚು ಎಥೆನಾಲ್ ಮಿಶ್ರಣದಿಂದ ವಾಹನಗಳಿಗೆ ಧಕ್ಕೆ

November 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ