Thursday, November 12, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, November 12, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyಉದ್ಯೋಗರಾಜಕೀಯರಾಜ್ಯರಾಷ್ಟ್ರಶಿಕ್ಷಣ

ಕೆಪಿಎಸ್‌ಸಿ ಪ್ರೊಬೇಷನರ್‌ ಪರೀಕ್ಷೆಗೆ ಸರ್ಪಗಾವಲು

by admin November 12, 2026
written by admin November 12, 2026 0 comments 2 minutes read
0FacebookTwitterPinterestEmail
3

ಬೆಂಗಳೂರು:ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ನಡೆಸುವ ಗೆಜೆಟೆಡ್‌ ಪ್ರೊಬೇಷನರ್‌ ಹುದ್ದೆಗಳ ಪೂರ್ವಭಾವಿ ಪರೀಕ್ಷೆ ಯಾವುದೇ ಕಾರಣಕ್ಕೂ ಮುಂದೂಡುವುದಿಲ್ಲ, ನಿಗದಿಯಂತೆ ಭಾನುವಾರ (ನ.15) ನಡೆಯಲಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.

ಗೆಜೆಟೆಡ್ ಪ್ರೊಬೇಷನರ್ಸ್ 319 ಹುದ್ದೆಗಳ ಭರ್ತಿಗೆ ಕೆಪಿಎಸ್‌ಸಿ ನಡೆಸುತ್ತಿರುವ ಪೂರ್ವಭಾವಿ ಪರೀಕ್ಷೆ ಸಿದ್ಧತೆ ಕುರಿತು ಎಲ್ಲಾ ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಪರಿಶೀಲಿಸಿದರು.

ಅತ್ಯಂತ ಪಾರದರ್ಶಕ

ಎಲ್ಲ ಪರೀಕ್ಷಾ ಸಿಬ್ಬಂದಿಗೆ ಜಿಲ್ಲಾಧಿಕಾರಿಗಳು ತರಬೇತಿ ನಡೆಸಿ, ವರದಿ ಕೊಡುವಂತೆ ಸೂಚಿಸಿ, ಪರೀಕ್ಷೆ ಅತ್ಯಂತ ಪಾರದರ್ಶಕವಾಗಿರಬೇಕು, ಯಾವುದೇ ಅಕ್ರಮಗಳಿಗೆ ಅವಕಾಶವಾಗದಂತೆ ನಡೆಸಬೇಕು.

ಪರೀಕ್ಷಾ ಪ್ರಕ್ರಿಯೆಯಲ್ಲಿ ಹಲವಾರು ಸುಧಾರಣೆ ತರಲಾಗಿದೆ, ಈ ಬಗ್ಗೆ ಕೆಪಿಎಸ್‌ಸಿ ಹೊರಡಿಸಿರುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾಧಿಕಾರಿಗಳಿಗೆ ತಿಳಿಸಿದರು.

ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾ ಮೂಲಕ ನಿರಂತರ ನಿಗಾ ವಹಿಸಬೇಕು, ಪೊಲೀಸ್ ನೇಮಕಾತಿ ಪರೀಕ್ಷೆ ಮಾದರಿಯಲ್ಲಿ ಸೂಕ್ತ ಭದ್ರತೆ ವ್ಯವಸ್ಥೆ ಕೈಗೊಳ್ಳಬೇಕು, ಪರೀಕ್ಷಾ ಕೇಂದ್ರದ ಆವರಣದಲ್ಲಿ ಯಾವುದೇ ಅನಧಿಕೃತ ವ್ಯಕ್ತಿಯ ಪ್ರವೇಶಕ್ಕೆ ಅವಕಾಶ ಇರಬಾರದು, ಪ್ರವೇಶಕ್ಕೆ ಅನುಮತಿ ಇರುವ ವ್ಯಕ್ತಿಯೂ ಭದ್ರತಾ ತಪಾಸಣೆಗೆ ಒಳಪಡಬೇಕು, ಮಾರ್ಗಸೂಚಿ ಅನ್ವಯ ಅನುಮತಿಸಿದ ವಸ್ತುಗಳನ್ನು ಮಾತ್ರ ತರಬಹುದಾಗಿದೆ.

ಅಧಿಕಾರಿಗಳೇ ಹೊಣೆಗಾರರು

ಯಾವುದೇ ಕಾರಣಕ್ಕೂ ಅಭ್ಯರ್ಥಿಗಳು ಮೊಬೈಲ್‌ನೊಂದಿಗೆ ಪರೀಕ್ಷಾ ಕೇಂದ್ರ ಪ್ರವೇಶಿಸುವಂತಿಲ್ಲ, ಹಾಗೊಂದು ವೇಳೆ ಪ್ರವೇಶಿಸಿದರೆ, ಹಿರಿಯ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಸಿದರು.  

ಪರೀಕ್ಷಾ ಕೇಂದ್ರದ ಸೂಕ್ಷ್ಮತೆ ಗುರುತಿಸಿ, ಅದಕ್ಕೆ ತಕ್ಕಂತೆ ಸಿಬ್ಬಂದಿ ನಿಯೋಜನೆ ಮಾಡಬೇಕು, ಹೆಚ್ಚುವರಿ ಭದ್ರತಾ ಉಪಕರಣಗಳನ್ನು ಬಾಡಿಗೆ ಆಧಾರದಲ್ಲಿ ಪಡೆದು, ಹೆಚ್ಚುವರಿ ಪೊಲೀಸ್ ಸಿಬ್ಬಂದಿ ಅಗತ್ಯವಿದ್ದಲ್ಲಿ ಇತರ ಕಡೆಗಳಿಂದ ನಿಯೋಜಿಸಲು ಸೂಚನೆ ನೀಡಿದರು.

ಇದೇ ಮೊದಲ ಬಾರಿಗೆ ಪ್ರತಿ ಪರೀಕ್ಷಾ ಕೊಠಡಿಯಲ್ಲಿ ಇಬ್ಬರು ಮೇಲ್ವಿಚಾರಕರ ನಿಯೋಜನೆ ಮಾಡಲಾಗುತ್ತಿದೆ, ಅವರಲ್ಲಿ ಒಬ್ಬರು ಕಡ್ಡಾಯವಾಗಿ ಸರ್ಕಾರಿ ಕಾಲೇಜು ಸಿಬ್ಬಂದಿ ಆಗಿರಬೇಕು, ಖಾಸಗಿ ಅನುದಾನಿತ ಕಾಲೇಜುಗಳಲ್ಲಿನ ಕೇಂದ್ರದಲ್ಲಿ ಪರೀಕ್ಷಾ ಅವ್ಯವಹಾರಕ್ಕೆ ಅವಕಾಶ ನೀಡುವುದು ಕಂಡು ಬಂದರೆ, ಅಂತಹ ಖಾಸಗಿ ಕಾಲೇಜುಗಳ ಪರವಾನಗಿ ರದ್ದುಪಡಿಸಲಾಗುವುದು, ಪರೀಕ್ಷಾ ಅಕ್ರಮಗಳಲ್ಲಿ ತೊಡಗುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದರು.

ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ

ಪರೀಕ್ಷೆ ಕುರಿತು ಸುಳ್ಳು ಸುದ್ದಿ ಹರಡಲು ಅವಕಾಶ ನೀಡಬಾರದು, ಸಾಮಾಜಿಕ ಜಾಲತಾಣಗಳ ಮೇಲೆ ಪೊಲೀಸ್ ಇಲಾಖೆ ನಿಗಾ ವಹಿಸಬೇಕು, ಪರೀಕ್ಷೆ ಕುರಿತು ಯಾವುದೇ ವದಂತಿ ಹಬ್ಬಿದರೆ ಕೂಡಲೇ ಅಧಿಕಾರಿಗಳ ಗಮನಕ್ಕೆ ತರಬೇಕು, ಈ ಕುರಿತು ಸಂಬಂಧಪಟ್ಟ ಅಧಿಕಾರಿ ಸ್ಪಷ್ಟೀಕರಣ ನೀಡುವರು.

ಅಭ್ಯರ್ಥಿಗಳು ಹಾಗೂ ಮಾಧ್ಯಮದವರು ತಮಗೆ ಬಂದ ಮಾಹಿತಿಯನ್ನು ಅಧಿಕೃತ ಮೂಲಗಳಿಂದ ಖಾತರಿಪಡಿಸಿಕೊಳ್ಳುವುದು ಅತಿ ಅಗತ್ಯವಾಗಿದೆ, ಪರೀಕ್ಷಾರ್ಥಿಗಳು ಯಾವುದೇ ವದಂತಿಗಳಿಗೆ ಕಿವಿಗೊಡದೆ ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯುವಂತೆ ಮುಖ್ಯಮಂತ್ರಿ ಸಲಹೆ ಮಾಡಿದರು.

ಸಭೆಯಲ್ಲಿ ಪರೀಕ್ಷೆ ಪೂರ್ವಸಿದ್ಧತೆ ಕುರಿತು ಮಾಹಿತಿ ನೀಡಿದ ಕೆಪಿಎಸ್‌ಸಿ ಪರೀಕ್ಷಾ ನಿಯಂತ್ರಕ ಹೆಚ್.‌ಪ್ರಸನ್ನ, ಪರೀಕ್ಷಾ ಅಕ್ರಮ ತಡೆಗೆ ಮೊದಲ ಬಾರಿಗೆ ಜಾರಿಗೆ ತರುತ್ತಿರುವ ಸುಧಾರಣಾ ಕ್ರಮಗಳನ್ನು ವಿವರಿಸಿದರು.

ಪರೀಕ್ಷೆ ಸುಧಾರಣಾ ಕ್ರಮಗಳು

ಐದು ಆಯ್ಕೆಗಳ ಒಎಂಆರ್‌ ಪದ್ಧತಿ: ಉತ್ತರ ಗೊತ್ತಿಲ್ಲದಿದ್ದರೆ 5ನೇ ಆಯ್ಕೆಯನ್ನು ಕಡ್ಡಾಯವಾಗಿ ಗುರುತು ಮಾಡಬೇಕು, ಯಾವುದೇ ಪ್ರಶ್ನೆಗೆ ಉತ್ತರ ಖಾಲಿ ಬಿಡುವಂತಿಲ್ಲ.

ತ್ರಿಪ್ರತಿಗಳ ಒಎಂಆರ್ ಹಾಳೆ: ಮೂರು ಪ್ರತಿಗಳಲ್ಲಿ ಒಂದು ಅಭ್ಯರ್ಥಿಗೆ, ಒಂದು ಕೆಪಿಎಸ್‌ಸಿ ಮೌಲ್ಯಮಾಪನಕ್ಕೆ ಮತ್ತು ಮೂರನೆ ಪ್ರತಿಯನ್ನು ಜಿಲ್ಲಾಧಿಕಾರಿ ಅಥವಾ ಕೆಪಿಎಸ್‌ಸಿ ಸ್ಟ್ರಾಂಗ್ ರೂಮ್‌ನಲ್ಲಿ ಸುರಕ್ಷಿತವಾಗಿಡುವ ಮೂಲಕ ಸಂಪೂರ್ಣ ಪಾರದರ್ಶಕತೆ ಕಾಯ್ದುಕೊಳ್ಳಲಾಗುವುದು.

ಸಿಸಿಟಿವಿ ಮತ್ತು ಜಾಮರ್ ಅಳವಡಿಕೆ: ಎಲ್ಲಾ ಪರೀಕ್ಷಾ ಕೊಠಡಿಗಳಲ್ಲಿ ಸಿಸಿಟಿವಿ ಕ್ಯಾಮೆರಾ ಮತ್ತು ಮೊಬೈಲ್ ಜಾಮರ್‌ಗಳನ್ನು ಅಳವಡಿಸಲಾಗುತ್ತಿದ್ದು, ಜಾಮರ್‌ಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಪೊಲೀಸ್‌ ವರಿಷ್ಠಾಧಿಕಾರಿಗಳೇ ದೃಢೀಕರಿಸಲು ಸೂಚಿಸಲಾಗಿದೆ.

ಇಬ್ಬರು ಮೇಲ್ವಿಚಾರಕರ ನೇಮಕ

ಪರೀಕ್ಷಾರ್ಥಿಗಳ ಗುರುತಿನ ಚೀಟಿ ಪರಿಶೀಲನೆ, ತಪಾಸಣೆ ಮತ್ತು ಕೊಠಡಿಯ ಹಿಂಭಾಗದಿಂದ ನಿಗಾ ವಹಿಸಲು ಇಬ್ಬರು ಮೇಲ್ವಿಚಾರಕರ ನೇಮಕ.

ಪರೀಕ್ಷಾ ದಿನದಂದೇ ಒಎಂಆರ್‌ ಶೀಟ್‌ ಅಪ್ಲೋಡ್: ಪಾರದರ್ಶಕತೆ ಉದ್ದೇಶದಿಂದ ಪರೀಕ್ಷಾ ದಿನದಂದೇ ಎಲ್ಲಾ ಸ್ಕ್ಯಾನ್ ಮಾಡಿದ ಒಎಂಆರ್‌ ಪ್ರತಿಗಳನ್ನು ಕೆಪಿಎಸ್‌ಸಿ ಜಾಲತಾಣದಲ್ಲಿ ಸಾರ್ವಜನಿಕರ ವೀಕ್ಷಣೆಗೆ ಅಪ್ಲೋಡ್ ಮಾಡಲಾಗುವುದು, 12 ಜಿಲ್ಲೆಗಳಲ್ಲಿ ಒಎಂಆರ್‌ ಹಾಳೆ ಸ್ಕ್ಯಾನ್‌ಗೆ ವ್ಯವಸ್ಥೆ ಮಾಡಲಾಗಿದೆ ಎಂದು ವಿವರಿಸಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
319 postsgezetted probationers postkpsc preliminary examno postponement of examnovember 15th exam
0 FacebookTwitterPinterestEmail
admin

previous post
ವಿಶ್ವ ಕನ್ನಡ ಸಾಹಿತ್ಯ ಸಮ್ಮೇಳನ: ಬಜೆಟ್‌ನಲ್ಲಿ ಘೋಷಣೆ

You may also like

ವಿಶ್ವ ಕನ್ನಡ ಸಾಹಿತ್ಯ ಸಮ್ಮೇಳನ: ಬಜೆಟ್‌ನಲ್ಲಿ ಘೋಷಣೆ

November 11, 2026

ಮುಂದಿನ 6 ತಿಂಗಳು ಸ್ಥಳೀಯ ಸಂಸ್ಥೆ ಚುನಾವಣೆ ಇಲ್ಲ

November 9, 2026

ಸಂಪುಟಕ್ಕೆ ಬಹುಕೋಟಿ ಹಗರಣ ಆರೋಪಿ ನಾಗೇಂದ್ರ

November 7, 2026

ಹೆಚ್ಚು ಎಥೆನಾಲ್ ಮಿಶ್ರಣದಿಂದ ವಾಹನಗಳಿಗೆ ಧಕ್ಕೆ

November 6, 2026

ಬಸ್‌ ಪ್ರಯಾಣ ದರ ಶೇ.23ರಿಂದ ಶೇ.37ರಷ್ಟು ಹೆಚ್ಚಳ

November 4, 2026

ನೋಟಿಸ್‌ ನೀಡಿ ಬಂಧಿಸಲಿ, ನನ್ನ ತಾಕತ್ತು ತೋರಿಸುವೆ

November 3, 2026

ಪ್ರಜ್ವಲ್‌ ಪೆನ್‌ಡ್ರೈವ್‌ ಹಗರಣದಲ್ಲಿ ಡಿ.ಕೆ.ಶಿ. ಷಡ್ಯಂತ್ರ

November 2, 2026

ಮೈತ್ರಿ ಹೋರಾಟಕ್ಕೆ ದೇವೇಗೌಡ-ಬಿಎಸ್‌ವೈ ಸಮ್ಮತಿ

October 31, 2026

ನಿಯಮ ಮೀರಿ ಪಟಾಕಿ ಸಿಡಿಸಿದರೆ ಕಠಿಣ ಕ್ರಮ

October 30, 2026

ನವೆಂಬರ್‌ನಿಂದ ಹಾಲು-ಬಸ್‌ ಪ್ರಯಾಣ ದರ ಹೆಚ್ಚಳ

October 29, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (610)
  • ಅಂಕಣ (109)
  • ಉದ್ಯೋಗ (364)
  • ದಿನ ಭವಿಷ್ಯ (110)
  • ರಾಜಕೀಯ (2,102)
  • ರಾಜ್ಯ (2,418)
  • ರಾಷ್ಟ್ರ (2,382)
  • ವಿಶ್ಲೇಷಣೆ (202)
  • ಶಿಕ್ಷಣ (418)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಕೆಪಿಎಸ್‌ಸಿ ಪ್ರೊಬೇಷನರ್‌ ಪರೀಕ್ಷೆಗೆ ಸರ್ಪಗಾವಲು

    November 12, 2026
  • ವಿಶ್ವ ಕನ್ನಡ ಸಾಹಿತ್ಯ ಸಮ್ಮೇಳನ: ಬಜೆಟ್‌ನಲ್ಲಿ ಘೋಷಣೆ

    November 11, 2026
  • ಮುಂದಿನ 6 ತಿಂಗಳು ಸ್ಥಳೀಯ ಸಂಸ್ಥೆ ಚುನಾವಣೆ ಇಲ್ಲ

    November 9, 2026

KMS Special

  • ಕೆಪಿಎಸ್‌ಸಿ ಪ್ರೊಬೇಷನರ್‌ ಪರೀಕ್ಷೆಗೆ ಸರ್ಪಗಾವಲು

    November 12, 2026
  • ವಿಶ್ವ ಕನ್ನಡ ಸಾಹಿತ್ಯ ಸಮ್ಮೇಳನ: ಬಜೆಟ್‌ನಲ್ಲಿ ಘೋಷಣೆ

    November 11, 2026
  • ಮುಂದಿನ 6 ತಿಂಗಳು ಸ್ಥಳೀಯ ಸಂಸ್ಥೆ ಚುನಾವಣೆ ಇಲ್ಲ

    November 9, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ವಿಶ್ವ ಕನ್ನಡ ಸಾಹಿತ್ಯ ಸಮ್ಮೇಳನ: ಬಜೆಟ್‌ನಲ್ಲಿ ಘೋಷಣೆ

November 11, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ