Saturday, November 21, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, November 21, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಮಹೇಶ್‌ ಟೆಂಗಿನಕಾಯಿಗೆ ರಾಜ್ಯ ಬಿಜೆಪಿ ಸಾರಥ್ಯ

by KM Shivaraju November 20, 2026
written by KM Shivaraju November 20, 2026 0 comments 1 minutes read
0FacebookTwitterPinterestEmail
5

ಬೆಂಗಳೂರು:ಹುಬ್ಬಳ್ಳಿ-ಧಾರವಾಡ ಸೆಂಟ್ರಲ್‌ ವಿಧಾನಸಭಾ ಕ್ಷೇತ್ರ ಪ್ರತಿನಿಧಿಸುವ ಮಹೇಶ್‌ ಟೆಂಗಿನಕಾಯಿ ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನದ ರೇಸ್‌ನಲ್ಲಿ ಮುಂಚೂಣಿಯಲ್ಲಿದ್ದಾರೆ.

ಟೆಂಗಿನಕಾಯಿ ಅವರಿಗೆ ಆರ್‌ಎಸ್‌ಎಸ್‌ ಪೂರ್ಣ ಬೆಂಬಲ ವ್ಯಕ್ತಪಡಿಸಿ, ಮುಂಬರುವ ವಿಧಾನಸಭಾ ಚುನಾವಣೆಯನ್ನು ಇವರ ನಾಯಕತ್ವದಲ್ಲೇ ಎದುರಿಸಬೇಕೆಂಬ ನಿಲುವನ್ನು ಹೊಂದಿದೆ.

ಪಟ್ಟ ಕಟ್ಟಲು ಸಿದ್ಧತೆ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ನಿತಿನ್‌ ನಬೀನ್‌ ಆಯ್ಕೆ ಆದಂತೆ, ರಾಜ್ಯಾಧ್ಯಕ್ಷ ಸ್ಥಾನಕ್ಕೂ ಆರ್‌ಎಸ್‌ಎಸ್‌ ಹಿನ್ನೆಲೆ ಉಳ್ಳ ಟೆಂಗಿನಕಾಯಿ ಅವರಿಗೆ ಪಟ್ಟ ಕಟ್ಟಲು ಸಿದ್ಧತೆ ನಡೆದಿದೆ.

ಹಾಲಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವಧಿ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಆ ಸ್ಥಾನಕ್ಕೇರಲು ಭಾರೀ ಪೈಪೋಟಿ ನಡೆದಿದೆ.

ವಿಜಯೇಂದ್ರ ಸಹಾ ಇನ್ನೊಂದು ಅವಧಿಗೆ ಮುಂದುವರೆಸುವಂತೆ ರಾಷ್ಟ್ರೀಯ ಬಿಜೆಪಿ ನಾಯಕರು ಮತ್ತು ಗೃಹ ಸಚಿವ ಅಮಿತ್‌ ಷಾ ಅವರಲ್ಲಿ ಮನವಿ ಮಾಡಿದ್ದಾರೆ.

ವರಿಷ್ಠರಿಗೆ ಮನವಿ

ಕರ್ನಾಟಕದಲ್ಲಿ ಪಕ್ಷವನ್ನು ಅಧಿಕಾರಕ್ಕೆ ತಂದೇ ತರುತ್ತೇನೆ, ನನ್ನನ್ನೇ ಮತ್ತೊಂದು ಅವಧಿಗೆ ಮುಂದುವರೆಸಿ, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಸಂಘಟನೆ ಮಾಡುವುದಾಗಿ ಪಕ್ಷದ ವರಿಷ್ಠರಿಗೆ ಮನವಿ ಮಾಡಿದ್ದಾರೆ.

ವಿಜಯೇಂದ್ರ ಸ್ಥಾನಕ್ಕೆ ಕೇಂದ್ರ ಸಚಿವ ವಿ.ಸೋಮಣ್ಣ, ಮುರುಗೇಶ್‌ ನಿರಾಣಿ, ಬಿ.ಶ್ರೀರಾಮುಲು, ಸುನಿಲ್‌ ಕುಮಾರ್‌ ಭಾರೀ ಕಸರತ್ತು ನಡೆಸಿದ್ದಾರೆ.

ಪಕ್ಷದ ರಾಜ್ಯ ಉಸ್ತುವಾರಿ, ರಾಷ್ಟ್ರೀಯ ಪ್ರಧಾನಕಾರ್ಯದರ್ಶಿ ಹರಿಶ್ಚಂದ್ರ ದ್ವಿವೇದಿ ನೀಡಿರುವ ವರದಿ ಆಧರಿಸಿ ದೆಹಲಿ ವರಿಷ್ಠರು ಮಹತ್ವದ ತೀರ್ಮಾನ ಕೈಗೊಳ್ಳಲಿದ್ದಾರೆ.

ವರಿಷ್ಠರ ಸರಣಿ ಸಭೆ

ವಿಜಯೇಂದ್ರ ಅವರನ್ನು ಮುಂದುವರೆಸಬೇಕೇ ಅಥವಾ ಬೇರೆಯವರನ್ನು ತರಬೇಕೇ ಎಂಬ ಬಗ್ಗೆ ಬಿಜೆಪಿ ವರಿಷ್ಠರು ಸರಣಿ ಸಭೆಗಳನ್ನು ನಡೆಸಿದ್ದು, ಈ ವಿಷಯ ತಿಳಿಯುತ್ತಿದ್ದಂತೆ ಆಕಾಂಕ್ಷಿಗಳು ದೆಹಲಿ ದಂಡಯಾತ್ರೆ ನಡೆಸಿದ್ದಾರೆ.

ಇದರ ನಡುವೆ ಆರ್‌ಎಸ್‌ಎಸ್‌ ಸಕ್ರಿಯ ಕಾರ್ಯಕರ್ತರೊಬ್ಬರಿಗೆ ಈ ಬಾರಿ ಅವಕಾಶ ಮಾಡಿಕೊಡಬೇಕೆಂದು ಟೆಂಗಿನಕಾಯಿ ಹೆಸರನ್ನು ಮುನ್ನಲೆಗೆ ತಂದಿದೆ.

ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಪಕ್ಷ ತೊರೆದು ಕಾಂಗ್ರೆಸ್‌ ಚಿನ್ಹೆಯಡಿ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್‌ನಿಂದ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಣಕ್ಕಿಳಿದಿದ್ದರು.

ಶೆಟ್ಟರ್‌ ವಿರುದ್ಧ ಜಯ

ಈ ಸಂದರ್ಭದಲ್ಲಿ ಸಾಮಾನ್ಯ ಕಾರ್ಯಕರ್ತರಾಗಿದ್ದ ಟೆಂಗಿನಕಾಯಿ ಅವರನ್ನು ಶೆಟ್ಟರ್‌ ವಿರುದ್ಧ ಬಿಜೆಪಿ ಕಣಕ್ಕಿಳಿಸಿತ್ತು, ಭಾರೀ ಅಂತರದಿಂದ ಶೆಟ್ಟರ್‌ ಅವರನ್ನು ಪರಾಭವಗೊಳಿಸಿ ಕ್ಷೇತ್ರವನ್ನು ಬಿಜೆಪಿಗೆ ಉಳಿಸಿಕೊಟ್ಟಿದ್ದರು.

ಇದೀಗ ಮಹೇಶ್‌ ಟೆಂಗಿನಕಾಯಿ ಅವರಿಗೆ ಪಕ್ಷದ ರಾಜ್ಯ ನಾಯಕತ್ವ ವಹಿಸಲು ಆರ್‌ಎಸ್‌ಎಸ್‌ ಮುಂದಾಗಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
b y vijyendramla mahesh tenginakayinational bjp leadersstate bjp leadership
0 FacebookTwitterPinterestEmail
KM Shivaraju

previous post
ರಾಜ್ಯ ಬಿಜೆಪಿಯಲ್ಲಿ ಮಹತ್ತರ ಬದಲಾವಣೆಗೆ ನಿರ್ಧಾರ

You may also like

ರಾಜ್ಯ ಬಿಜೆಪಿಯಲ್ಲಿ ಮಹತ್ತರ ಬದಲಾವಣೆಗೆ ನಿರ್ಧಾರ

November 19, 2026

ಸಂಶೋಧನೆ ಹೆಸರಲ್ಲಿ ಬಸವಣ್ಣನ ವಿಚಾರ-ತತ್ವಕ್ಕೆ ಅಪಚಾರ

November 19, 2026

ಗ್ರಾಮೀಣ ಎಲ್ಲಾ ಆಸ್ತಿಗಳಿಗೆ ಇ-ಸ್ವತ್ತು ದೃಢೀಕರಣ

November 18, 2026

ಕಾಂಗ್ರೆಸ್‌ ವಲಯದಲ್ಲಿ ಕುಸಿದ ಸಿದ್ದರಾಮಯ್ಯ ವರ್ಚಸ್ಸು

November 17, 2026

ಕುಮಾರಕೃಪದ ʼಗಂಗಾʼ ಮುಖ್ಯಮಂತ್ರಿ ಅಧಿಕೃತ ನಿವಾಸ

November 16, 2026

ಕಾವೇರಿ ನೀರೇ ತಮಿಳುನಾಡಿಗೆ ರಾಜಕೀಯ ಅಸ್ತ್ರ

November 14, 2026

ಕರ್ನಾಟಕಕ್ಕೆ ಕೇಂದ್ರ ಸರ್ಕಾರ ತಾರತಮ್ಯ ಮಾಡಿಲ್ಲ

November 13, 2026

ಕೆಪಿಎಸ್‌ಸಿ ಪ್ರೊಬೇಷನರ್‌ ಪರೀಕ್ಷೆಗೆ ಸರ್ಪಗಾವಲು

November 12, 2026

ವಿಶ್ವ ಕನ್ನಡ ಸಾಹಿತ್ಯ ಸಮ್ಮೇಳನ: ಬಜೆಟ್‌ನಲ್ಲಿ ಘೋಷಣೆ

November 11, 2026

ಮುಂದಿನ 6 ತಿಂಗಳು ಸ್ಥಳೀಯ ಸಂಸ್ಥೆ ಚುನಾವಣೆ ಇಲ್ಲ

November 9, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (618)
  • ಅಂಕಣ (109)
  • ಉದ್ಯೋಗ (366)
  • ದಿನ ಭವಿಷ್ಯ (110)
  • ರಾಜಕೀಯ (2,110)
  • ರಾಜ್ಯ (2,426)
  • ರಾಷ್ಟ್ರ (2,390)
  • ವಿಶ್ಲೇಷಣೆ (202)
  • ಶಿಕ್ಷಣ (420)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮಹೇಶ್‌ ಟೆಂಗಿನಕಾಯಿಗೆ ರಾಜ್ಯ ಬಿಜೆಪಿ ಸಾರಥ್ಯ

    November 20, 2026
  • ರಾಜ್ಯ ಬಿಜೆಪಿಯಲ್ಲಿ ಮಹತ್ತರ ಬದಲಾವಣೆಗೆ ನಿರ್ಧಾರ

    November 19, 2026
  • ಸಂಶೋಧನೆ ಹೆಸರಲ್ಲಿ ಬಸವಣ್ಣನ ವಿಚಾರ-ತತ್ವಕ್ಕೆ ಅಪಚಾರ

    November 19, 2026

KMS Special

  • ಮಹೇಶ್‌ ಟೆಂಗಿನಕಾಯಿಗೆ ರಾಜ್ಯ ಬಿಜೆಪಿ ಸಾರಥ್ಯ

    November 20, 2026
  • ರಾಜ್ಯ ಬಿಜೆಪಿಯಲ್ಲಿ ಮಹತ್ತರ ಬದಲಾವಣೆಗೆ ನಿರ್ಧಾರ

    November 19, 2026
  • ಸಂಶೋಧನೆ ಹೆಸರಲ್ಲಿ ಬಸವಣ್ಣನ ವಿಚಾರ-ತತ್ವಕ್ಕೆ ಅಪಚಾರ

    November 19, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ರಾಜ್ಯ ಬಿಜೆಪಿಯಲ್ಲಿ ಮಹತ್ತರ ಬದಲಾವಣೆಗೆ ನಿರ್ಧಾರ

November 19, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ