Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜ್ಯರಾಷ್ಟ್ರ

ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು ಕಟ್ಟಿದರೆ ಸುಮ್ಮನೆ ಬಿಡಲ್ಲ

by admin October 15, 2023
written by admin October 15, 2023 0 comments 1 minutes read
0FacebookTwitterPinterestEmail
286

ರಾಮನಗರ ಸೇರಿ ಬೆಂಗಳೂರು ಅಕ್ಕಪಕ್ಕದ ಜಿಲ್ಲೆಗಳಿಗೆ ಬೆಂಗಳೂರು ಕಸ ಡಂಪಿಂಗ್; ‌ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಕಟು ಟೀಕೆ


ಬೆಂಗಳೂರು: ರಾಮನಗರ ಜಿಲ್ಲೆ ಸೇರಿ ಬೆಂಗಳೂರು ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ರಾಜಧಾನಿಯ ಕಸ ಸುರಿಯುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; ಅಕ್ಕಪಕ್ಕದ ಜಿಲ್ಲೆಗಳ ಜನರ ಸಮಾಧಿ ಮೇಲೆ ಬ್ರ್ಯಾಂಡ್ ಬೆಂಗಳೂರು ಕಟ್ಟಿದರೆ ಅದಕ್ಕೆ ನಮ್ಮ ತೀವ್ರ ವಿರೋಧವಿದೆ. ಸರಕಾರ ಈ ನಿರ್ಧಾರವನ್ನು ಕೈಬಿಡದಿದ್ದರೆ ಜನರು ಬೀದಿಗೆ ಇಳಿದಾರು ಎಂದು ನೇರ ಎಚ್ಚರಿಕೆ ನೀಡಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಸಿಕ್ಕಸಿಕ್ಕ ಕಡೆ ಬಾಯಿ ಹಾಕುತ್ತಿರುವ ‘ಪರ್ಸಂಟೇಜ್ ಪಟಾಲಂ’ ಈಗ ಕಸಕ್ಕೂ ಬಾಯಿ ಹಾಕಿದೆ! ಬ್ರ್ಯಾಂಡ್ ಬೆಂಗಳೂರು ಅನ್ನುವುದು ಕೆಲವರಿಗೆ ಬಿರಿಯಾನಿ!! ಅದರ ಒಳಗುಟ್ಟು ರಟ್ಟಾಗಿದೆ!! ‘ಬ್ರ್ಯಾಂಡ್’ ಹೆಸರಿನಲ್ಲಿ ಕೊಳ್ಳೆ ಹೊಡೆಯಲು, ಕಂಡ ಕಂಡ ಕಡೆ ಬೇಲಿ ಹಾಕಲು ಬೆಂಗಳೂರಿನ ನಾಲ್ಕೂ ದಿಕ್ಕುಗಳಲ್ಲಿಯೂ ಕಸದ ಡಂಪಿಂಗ್ ಯಾರ್ಡ್ʼಗಳನ್ನು ಸೃಷ್ಟಿ ಮಾಡುತ್ತಿರುವುದು ದಿಟ. ದಿನವೊಂದಕ್ಕೆ 1,630 ಟನ್ ಕಸ ಸುರಿದರೆ ಅಲ್ಲಿನ ಜನರ ಪಾಡೇನು? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಂಡೂರು ಜನ ಎದುರಿಸಿದ ಕಷ್ಟ ಅಷ್ಟಿಷ್ಟಲ್ಲ. ಯಶವಂತಪುರ ಕ್ಷೇತ್ರದ ಜನ ಈ ನರಕದಲ್ಲೇ ಬೇಯುತ್ತಿದ್ದಾರೆ. ದೊಡ್ಡಬಳ್ಳಾಪುರದ ಜನರೂ ಕಸದ ಕಷ್ಟಕ್ಕೆ ಸಿಲುಕಿದ್ದಾರೆ. ಈಗ ರಾಮನಗರದ ಸರದಿ. ಬೆಂಗಳೂರು ಸುತ್ತಮುತ್ತಲಿನ ಪ್ರದೇಶಗಳನ್ನು ʼಕಸದ ತೊಟ್ಟಿʼಗಳನ್ನಾಗಿ ಮಾಡಿ ʼಸಾವಿನ ದಿಬ್ಬʼಗಳನ್ನು ನಿರ್ಮಿಸಲು ʼಬ್ರ್ಯಾಂಡ್ ಬೆಂಗಳೂರುʼ ಹೆಸರಿನಲ್ಲಿ ಹುನ್ನಾರ ಹೂಡಲಾಗಿದೆ. ಇದು ಘೊರ ಅಕ್ಷಮ್ಯ ಹಾಗೂ ರಾಜಧಾನಿಯ ಆಸುಪಾಸಿನಲ್ಲಿ ಈಗಾಗಲೇ ಕೆಟ್ಟಿರುವ ಪರಿಸರವನ್ನು ಮತ್ತಷ್ಟು ಹಾಳು ಮಾಡುವ ದುಷ್ಟ ತಂತ್ರವಷ್ಟೇ ಎಂದು ಕುಮಾರಸ್ವಾಮಿ ಅವರು ದೂರಿದ್ದಾರೆ.

ಬೆಂಗಳೂರು ಅಕ್ಕಪಕ್ಕದ ಜಿಲ್ಲೆಗಳು ಕೃಷಿ, ತೋಟಗಾರಿಕೆ, ಹೈನುಗಾರಿಕೆಯಲ್ಲಿ ಸಮೃದ್ಧವಾಗಿವೆ. ಅಲ್ಲಿನ ಪರಿಸರ, ಜೀವ ವೈವಿಧ್ಯಕ್ಕೆ ಹಾನಿ ಮಾಡಿ, ಜನಜೀವನವನ್ನು ಸರ್ವನಾಶ ಮಾಡುವುದು ಒಂದೆಡೆಯಾದರೆ; ಹೊಸ ಡಂಪಿಂಗ್ ಯಾರ್ಡ್ʼಗಳ ಮೂಲಕ ಕೋಟಿಗಟ್ಟಲೇ ಹಣವನ್ನು ಜೇಬಿಗೆ ಡಂಪ್ ಮಾಡಿಕೊಳ್ಳುವ ಖತರ್ನಾಕ್ ಐಡಿಯಾ ಇನ್ನೊಂದೆಡೆ ಅಡಗಿದೆ ಎಂದು ಮಾಜಿ ಮುಖ್ಯಮಂತ್ರಿಗಳು ಅನುಮಾನ ವ್ಯಕ್ತಪಡಿಸಿದ್ದಾರೆ.

ಸಿಕ್ಕಸಿಕ್ಕ ಕಡೆ ಬಾಯಿ ಹಾಕುತ್ತಿರುವ 'ಪರ್ಸಂಟೇಜ್ ಪಟಾಲಂ' ಈಗ ಕಸಕ್ಕೂ ಬಾಯಿ ಹಾಕಿದೆ! ಬ್ರ್ಯಾಂಡ್ ಬೆಂಗಳೂರು ಅನ್ನುವುದು ಕೆಲವರಿಗೆ ಬಿರಿಯಾನಿ!! ಅದರ ಒಳಗುಟ್ಟು ರಟ್ಟಾಗಿದೆ!! 'ಬ್ರ್ಯಾಂಡ್' ಹೆಸರಿನಲ್ಲಿ ಕೊಳ್ಳೆ ಹೊಡೆಯಲು, ಕಂಡ ಕಂಡ ಕಡೆ ಬೇಲಿ ಹಾಕಲು ಬೆಂಗಳೂರಿನ ನಾಲ್ಕೂ ದಿಕ್ಕುಗಳಲ್ಲಿಯೂ ಕಸದ ಡಂಪಿಂಗ್ ಯಾರ್ಡ್ʼಗಳನ್ನು ಸೃಷ್ಟಿ…

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) October 15, 2023

ಜಗತ್ತಿನಲ್ಲಿಯೇ ಉತ್ಕೃಷ್ಟ ಮಾವು, ರೇಷ್ಮೆ, ಹಣ್ಣು, ತರಕಾರಿ ಬೆಳೆಯುತ್ತಿರುವ ರಾಮನಗರ, ಬಿಡದಿ ಬಳಿ ನೂರು ಎಕರೆ ಪ್ರದೇಶದಲ್ಲಿ ಕಸ ಸುರಿಯಲು ಉಪ ಮುಖ್ಯಮಂತ್ರಿಗಳ ದೊಡ್ಡ ಹುನ್ನಾರದ ಒಳ ಉದ್ದೇಶ ಸ್ಪಷ್ಟ. ಈಗಾಗಲೇ ವೃಷಭಾವತಿ ಸೇರಿ ರಾಮನಗರ ಜಿಲ್ಲೆಯ ಜಲಮೂಲಗಳು ಪೂರ್ಣ ಹಾಳಾಗಿ ಅಂತರ್ಜಲವೂ ಕಲುಷಿತವಾಗಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.

ನೂರು ಎಕರೆ ಸರಕಾರಿ ಭೂಮಿಯನ್ನು ಅನಾಮತ್ತಾಗಿ ಎಗರಿಬಿಡುವ ರಿಯಲ್ ಎಸ್ಟೇಟ್ ಬ್ರ್ಯಾಂಡೆಡ್ ಪರಿಕಲ್ಪನೆ ಇದಲ್ಲದೆ ಮತ್ತೇನು? ಅಕ್ಕಪಕ್ಕದ ಜಿಲ್ಲೆಗಳ ಜನರ ಸಮಾಧಿಯ ಮೇಲೆ ಬ್ರ್ಯಾಂಡ್ ಬೆಂಗಳೂರು ಕಟ್ಟಿದರೆ ಅದಕ್ಕೆ ನಮ್ಮ ತೀವ್ರ ವಿರೋಧವಿದೆ. ಕಾಂಗ್ರೆಸ್ ಸರಕಾರವು ಈ ನಿರ್ಧಾರವನ್ನು ಕೈಬಿಡದಿದ್ದರೆ ಜನರು ಬೀದಿಗೆ ಇಳಿದಾರು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
brand bengalurudk shivakumargarbagehd kumaraswamykarnatakakmskmskannadanews
0 FacebookTwitterPinterestEmail
admin

previous post
ತಮಿಳುನಾಡಿಗೆ ಕಾವೇರಿ ನೀರು ಬಿಡಲ್ಲ ಎನ್ನುವ ಎದೆಗಾರಿಕೆ ಸರಕಾರಕ್ಕೆ ಇಲ್ಲ
next post
ಪ್ರಭಾವಿ ಸಚಿವರ ಜತೆ ಗೋವಾ ಸಿಎಂ, ಬಿಜೆಪಿ ಮುಖಂಡರ ಸಂಪರ್ಕ

You may also like

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

ಮನರೇಗಾ ಮರುಸ್ಥಾಪನೆ ಹೋರಾಟ ಬೆಂಬಲಿಸಿ

February 23, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ...

March 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ