Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಅಂಕಣಉದ್ಯೋಗರಾಜಕೀಯರಾಜ್ಯರಾಷ್ಟ್ರವಿಶ್ಲೇಷಣೆಶಿಕ್ಷಣಸಂದರ್ಶನ

ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಶೋಭಾ ಕರಂದ್ಲಾಜೆ

by cklbkrish October 18, 2023
written by cklbkrish October 18, 2023 0 comments 2 minutes read
4FacebookTwitterPinterestEmail
504

ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ನೇಮಕ ಇನ್ನೂ ವಿಳಂಬ; ಬಸವರಾಜ ಬೊಮ್ಮಾಯಿ ಪರ ಯಡಿಯೂರಪ್ಪ ಬ್ಯಾಟಿಂಗ್

ಬೆಂಗಳೂರು: ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ನೇಮಕ ಮಾಡುವ ಸಾಧ್ಯತೆ ಇದೆ ಎಂದು ದೆಹಲಿಯ ಬಿಜೆಪಿ ಮೂಲಗಳು ಸ್ಪಷ್ಟವಾಗಿ ಹೇಳಿವೆ.

ಅಕ್ಟೋಬರ್ 17ರ (ಮಂಗಳವಾರ) ರಾತ್ರಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ದೂರವಾಣಿ ಕರೆ ಮಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಈ ವಿಷಯ ತಿಳಿಸಿದ್ದಾರೆ ಎಂದು ಆ ಮೂಲಗಳು ತಿಳಿಸಿವೆ.

ಕಳೆದ ವಾರ ದೆಹಲಿಗೆ ಹೋಗಿದ್ದ ಯಡಿಯೂರಪ್ಪ ಅವರಿಗೆ, ಅವರ ಹಿರಿಯ ಪುತ್ರ ಬಿ.ವೈ.ರಾಘವೇಂದ್ರ ಅಧ್ಯಕ್ಷರಾಗಲಿ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಹೇಳಿದ್ದರು. ಇದರಿಂದ ತೀವ್ರ ನಿರಾಶರಾಗಿ ಅವರು ಬೆಂಗಳೂರಿಗೆ ವಾಪಸ್‌ ಬಂದಿದ್ದರು. ರಾಘವೇಂದ್ರ ಬದಲು ಬಿ.ವೈ.ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷ ಸ್ಥಾನಕ್ಕೆ ತಂದರೆ ಅನುಕೂಲ ಎಂದು ಯಡಿಯೂರಪ್ಪ ಅವರಿಗೆ ಹೇಳಿದ್ದರು. ಆದರೆ, ಯಡಿಯೂರಪ್ಪ ಅವರು ಈ ಮಾತಿಗೆ ಸಹಮತ ವ್ಯಕ್ತಪಡಿಸಿರಲಿಲ್ಲ.

ಆದಾಗ್ಯ ಯಡಿಯೂರಪ್ಪ ಅವರು ಪಟ್ಟು ಸಡಿಲಿಸದೆ ವಿಜಯೇಂದ್ರ ಅವರೇ ಅಧ್ಯಕ್ಷರಾಗಬೇಕು ಎಂದು ಹೇಳಿದರೂ, ನಡ್ಡಾ ಅವರು ಅಸಹಾಯಕತೆ ವ್ಯಕ್ತಪಡಿಸಿ, ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್‌ ಶಾ ಅವರ ಕಡೆ ಬೆರಳು ಮಾಡಿದ್ದರು. ವಿಜಯೇಂದ್ರ ಅವರನ್ನು ಅಧ್ಯಕ್ಷ ಸ್ಥಾನಕ್ಕೆ ತರಲು ಯಡಿಯೂರಪ್ಪ ವಿರೋಧಿ ಬಣದ ದೊಡ್ಡ ಪ್ರಮಾಣದಲ್ಲಿ ಅಪಸ್ವರ ಎತ್ತಿದ ಕಾರಣಕ್ಕೆ ವರಿಷ್ಠರು ಶೋಭಾ ಕರಂದ್ಲಾಜೆ ಅವರನ್ನು ಫೈನಲ್‌ ಮಾಡಿದ್ದಾರೆ ಎನ್ನಲಾಗಿದೆ.

ಈ ಅಪಸ್ವರಕ್ಕೆ ಮನ್ನಣೆ ನೀಡಬೇಕು ಹಾಗೂ ಯಡಿಯೂರಪ್ಪ ಅವರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂಬ ಕಾರಣಕ್ಕಾಗಿ ಸಂಸದ ಬಿ.ವೈ.ರಾಘವೇಂದ್ರ ಅವರಿಗೆ ರಾಜ್ಯಾಧ್ಯಕ್ಷ ಪಟ್ಟ ಕಟ್ಟುವ ಮಾತನಾಡಿದ್ದರು ಜಗತ್ ಪ್ರಕಾಶ್ ನಡ್ಡಾ. ಆದರೆ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಘವೇಂದ್ರ ಸುತರಾಂ ಬೇಡ ಎಂದು ಹೇಳಿ ವಾಪಸ್‌ ಬಂದಿದ್ದರು ಯಡಿಯೂರಪ್ಪ. ಈ ಹಿನ್ನೆಲೆಯಲ್ಲಿ ಪುನಾ ಕಸರತ್ತು ನಡೆಸಿದ ಬಿಜೆಪಿ ವರಿಷ್ಠರು, ಯಡಿಯೂರಪ್ಪ ಮತ್ತವರ ವಿರೋಧಿ ಬಣಕ್ಕೆ ಒಮ್ಮತದ ಅಭ್ಯರ್ಥಿಯ ಬಗ್ಗೆ ಚರ್ಚೆ ನಡೆಸಿದ್ದಾರೆ. ಈ ಚರ್ಚೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಒಮ್ಮತವಾಗಿ ಕೇಳಿ ಬಂದ ಹೆಸರು ಶೋಭಾ ಕರಂದ್ಲಾಜೆ ಅವರದ್ದು. ಈ ಹಿನ್ನೆಲೆಯಲ್ಲಿ ಯಡಿಯೂರಪ್ಪ ಅವರೊಂದಿಗೆ ಮಂಗಳವಾರ ರಾತ್ರಿ ಮಾತನಾಡಿದ ಅಮಿತ್ ಶಾ ಅವರು, ಮಾತುಕತೆಯ ಸಂದರ್ಭದಲ್ಲಿ ಶೋಭಾ ಕರಂದ್ಲಾಜೆ ಅಧ್ಯಕ್ಷ ಸ್ಥಾನಕ್ಕೆ ಆಗಬಹುದೇ? ಎಂದು ಕೇಳಿದ್ದಾರೆ. ಈ ಪ್ರಸ್ತಾಪಕ್ಕೆ ಯಡಿಯೂರಪ್ಪ ಅವರು ಸಮ್ಮತಿ ವ್ಯಕ್ತಪಡಿಸಿದ್ದಾರೆ ಎಂದು ಗೊತ್ತಾಗಿದೆ. ಮುಂದಿನ ಸೋಮವಾರ ಇಲ್ಲವೇ ಮಂಗಳವಾರದ ವೇಳೆಗೆ ಶೋಭಾ ಕರಂದ್ಲಾಜೆ ಹೆಸರು ಅಧಿಕೃತವಾಗಿ ಘೋಷಣೆಯಾಗುವ ಸಾಧ್ಯತೆ ಇದೆ. ಆದರೆ ಬಿಜೆಪಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಮತ್ತಷ್ಟು ವಿಳಂಬವಾಗುವ ಸಾಧ್ಯತೆ ದಟ್ಟವಾಗಿದೆ.

ಮಂಡಿ ನೋವು ಹಾಗೂ ಹೃದ್ರೋಗ ಚಿಕಿತ್ಸೆಯಿಂದ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಗುಣಮುಖರಾದ ಮೇಲೆ ಶಾಸಕಾಂಗ ಪಕ್ಷದ ನಾಯಕನ ಹೆಸರು ಪ್ರಕಟಿಸಿ ಎಂದು ಅಮಿತ್‌ ಶಾ ಅವರಿಗೆ ಯಡಿಯೂರಪ್ಪ ಅವರು ಸಲಹೆ ಮಾಡಿದ್ದಾರೆ ಎಂದು ಹೇಳಲಾಗಿದೆ. ಬೊಮ್ಮಾಯಿ ಅವರೇ ಶಾಸಕಾಂಗ ಪಕ್ಷದ ನಾಯಕರಾಗಬೇಕು ಎಂದು ಯಡಿಯೂರಪ್ಪ ಪಟ್ಟು ಹಿಡಿದಿದ್ದಾರೆ ಎನ್ನುವ ಮಾಹಿತಿಯೂ ಇದೆ. ಆದರೆ; ಶಾಸಕಾಂಗ ಪಕ್ಷ ನಾಯಕನ ಸ್ಥಾನಕ್ಕೆ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬರಲಿ ಎಂದು ಪಟ್ಟು‌ ಹಿಡಿದಿದೆ ಯಡಿಯೂರಪ್ಪ ವಿರೋಧಿ ಬಣ. ಹೀಗಾಗಿ ಈ ನೇಮಕ ಮತ್ತಷ್ಟು ತಡವಾಗಲಿದೆ ಎಂದು ತಿಳಿದುಬಂದಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
amit shabjpckcknewsnowkarnatakakarnataka bjp presidentpoliticsshobha karandlajeyeddyurappa
4 FacebookTwitterPinterestEmail
cklbkrish

previous post
ಬೆಳಗಾವಿ ರಾಜಕೀಯ: ಡಿಸಿಎಂ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಪಟ್ಟು; ಸಿದ್ದು ಸರಕಾರಕ್ಕೆ ಇಕ್ಕಟ್ಟು
next post
ನಾನೇ ಒರಿಜಿನಲ್ ಎಂದ ಸಿ.ಎಂ.ಇಬ್ರಾಹಿಂಗೆ ಜೆಡಿಎಸ್‌ ಗೇಟ್‌ಪಾಸ್ ‌

You may also like

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ...

March 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ