Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜ್ಯರಾಷ್ಟ್ರ

ನಕಲಿ ಹುಲಿ ಉಗುರು, ನಕಲಿ ಲಾಕೆಟ್ ಧರಿಸಬೇಡಿ: ಈಶ್ವರ ಖಂಡ್ರೆ

by cklbkrish October 26, 2023
written by cklbkrish October 26, 2023 0 comments 2 minutes read
0FacebookTwitterPinterestEmail
98

ಅಕ್ರಮ ವನ್ಯಜೀವಿ ಉತ್ಪನ್ನ ಸರ್ಕಾರಕ್ಕೆ ಮರಳಿಸಲು ಕೊನೆ ಅವಕಾಶ ನೀಡುವ ಚಿಂತನೆ

ಬೆಂಗಳೂರು: ಹುಲಿ ಉಗುರಿನ ಲಾಕೆಟ್ ಇರುವ ಸರ ಧರಿಸಿರುವವರ ವಿರುದ್ಧ ನಿತ್ಯ ದೂರುಗಳು ಬರುತ್ತಿದ್ದು, ಬಹುತೇಕರಿಗೆ ಇದು ಅಪರಾಧ ಎಂಬ ಅರಿವೇ ಇಲ್ಲ ಎಂಬುದು ಗೋಚರವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅಕ್ರಮವಾಗಿ ವನ್ಯಜೀವಿ ಉತ್ಪನ್ನಗಳನ್ನು ಇಟ್ಟುಕೊಂಡಿರುವವರು ಅವುಗಳನ್ನು ಸರ್ಕಾರಕ್ಕೆ ಮರಳಿಸಲು ಕೊನೆಯ ಅವಕಾಶ ನೀಡುವ ಕಾನೂನು ಸಾಧ್ಯತೆಗಳನ್ನು ಪರಾಮರ್ಶಿಸಲಾಗುತ್ತಿದೆ ಎಂದು ಅರಣ್ಯ, ವನ್ಯಜೀವಿ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ವಿಕಾಸಸೌಧದ ತಮ್ಮ ಕಚೇರಿಯಲ್ಲಿಂದು ಅರಣ್ಯ ಇಲಾಖೆಯ ಉನ್ನತಾಧಿಕಾರಿಗಳೊಂದಿಗೆ ಸುದೀರ್ಘ ಸಮಾಲೋಚನೆ ನಡೆಸಿದ ತರುವಾಯ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ಪೂರ್ವಜರು ಹೊಂದಿದ್ದ ವನ್ಯಜೀವಿ ಅಂಗಾಂಗದಿಂದ ಮಾಡಿದ ಟ್ರೋಫಿ, ಫಲಕ, ಪೆಂಡೆಂಟ್ ಸೇರಿದಂತೆ ಯಾವುದೇ ಉತ್ಪನ್ನಗಳನ್ನು ಅರಣ್ಯ ಇಲಾಖೆಯಿಂದ ದೃಢೀಕರಿಸಿಕೊಂಡು ಮಾಲೀಕತ್ವದ ಹಕ್ಕು ಪಡೆದುಕೊಳ್ಳಲು 2003ರವರೆಗೆ ಹಲವು ಅವಕಾಶ ನೀಡಲಾಗಿತ್ತು. ಹಲವರು ತಮ್ಮ ಬಳಿ ಇದ್ದ ವನ್ಯಜೀವಿ ಉತ್ಪನ್ನಗಳಿಗೆ ಮಾಲೀಕತ್ವದ ಹಕ್ಕು ಪಡೆದಿದ್ದಾರೆ. ಇನ್ನೂ ಅನೇಕರು ದೃಢೀಕರಣ ಮತ್ತು ಪ್ರಮಾಣ ಪತ್ರ ಪಡೆದಿಲ್ಲ ಎಂದು ಹೇಳಿದರು.

ಗ್ರಾಮೀಣ ಪ್ರದೇಶದ ಕೆಲವರ ಮನೆಗಳಲ್ಲಿ ಜಿಂಕೆ ಚರ್ಮ, ಆನೆ ದಂತದಿಂದ ಮಾಡಿದ ಕಲಾಕೃತಿಗಳು, ಜಿಂಕೆ ಮತ್ತು ಸಾರಂಗದ ಕೊಂಬು ಇತ್ಯಾದಿಗಳನ್ನು ಇಟ್ಟುಕೊಂಡಿರುತ್ತಾರೆ. ಇದು ಅಪರಾಧ ಎಂಬುದೂ ಅವರಿಗೆ ತಿಳಿದಿಲ್ಲ. ವರ್ತೂರು ಸಂತೋಷ ಪ್ರಕರಣ ವರದಿಯಾದ ಬಳಿಕ, ವನ್ಯಜೀವಿ ಉತ್ಪನ್ನಗಳ ಅಕ್ರಮ ದಾಸ್ತಾನಿನ ಬಗ್ಗೆ ಹೆಚ್ಚಾಗಿ ದೂರುಗಳು ಬರುತ್ತಿವೆ. ಕಾನೂನಿನ ಅರಿವಿಲ್ಲದ ಶ್ರೀಸಾಮಾನ್ಯರಿಗೆ ಆಗುವ ತೊಂದರೆ ತಪ್ಪಿಸಲು ಒಂದು ಬಾರಿ ಕೊನೆಯದಾಗಿ ಇಂತಹ ಅಕ್ರಮ ಸಂಗ್ರಹಣೆ/ದಾಸ್ತಾನಿನ ಬಗ್ಗೆ ಘೋಷಣೆ ಮಾಡಿಕೊಳ್ಳಲು ಮತ್ತು ಸರ್ಕಾರಕ್ಕೆ ಮರಳಿಸಲು ಅವಕಾಶ ನೀಡುವ ಬಗ್ಗೆ ಪರಾಮರ್ಶಿಸಿ, ಇದಕ್ಕೆ ಇತಿಶ್ರೀ ಹಾಡಲು ನಿರ್ಧರಿಸಲಾಗಿದೆ ಎಂದು ವಿವರಿಸಿದರು.‌

ಅಳಿವಿನಂಚಿನಲ್ಲಿರುವ, ಅಮೂಲ್ಯ ಮತ್ತು ಅಪರೂಪದ ವನ್ಯ ಜೀವಿಗಳಾದ ಹುಲಿ, ಚಿರತೆ, ಚಿಂಕಾರ, ಕೃಷ್ಣಮೃಗ, ಸಾಂಬಾರ್, ಕರಡಿ ಸೇರಿದಂತೆ ಹಲವು ಕಾಡು ಪ್ರಾಣಿಗಳನ್ನು ಪರಿಶಿಷ್ಟ 1ರಲ್ಲಿ ಪಟ್ಟಿ ಮಾಡಲಾಗಿದ್ದು, ಇಂತಹ ಪ್ರಾಣಿಗಳನ್ನು ಕೊಲ್ಲುವುದು, ಬೇಟೆ ಆಡುವುದು, ಅಂತಹ ಪ್ರಾಣಿಗಳ ದೇಹದ ಯಾವುದೇ ಭಾಗದಿಂದ ತಯಾರಿಸಿದ ವಸ್ತುವನ್ನು ಅಲಂಕಾರಿಕವಾಗಿ ಮನೆಯಲ್ಲಿಡುವುದು, ಧರಿಸುವುದು ಕೂಡ ಅಪರಾಧವಾಗಿರುತ್ತದೆ ಎಂದು ತಿಳಿಸಿದರು.

ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ. ಎಲ್ಲರಿಗೂ ಕಾನೂನು ಸಮಾನವಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಗಣ್ಯರೂ ಸೇರಿದಂತೆ ಹಲವರಿಗೆ ನೋಟಿಸ್ ನೀಡಲಾಗಿದೆ. ಅಧಿಕಾರಿಗಳು ಕಾನೂನು ರೀತ್ಯ ಮತ್ತು ಆಯಾ ಸಂದರ್ಭಕ್ಕೆ ಅನುಗುಣವಾಗಿ ತಮ್ಮ ವಿವೇಚನಾಧಿಕಾರ ಬಳಸಿ ಕ್ರಮ ಜರುಗಿಸಲಿದ್ದಾರೆ ಎಂದರು.

ನಕಲಿ ಲಾಕೆಟ್ ಕೂಡ ಧರಿಸದಂತೆ ಮನವಿ

ಚಿತ್ರನಟರು, ಗಣ್ಯರು ನಕಲಿ ಹುಲಿ ಉಗುರಿನ ಲಾಕೆಟ್ ಕೂಡ ಧರಿಸಿದರೂ ಇತರರಿಗೆ ಪ್ರೇರಣೆ ಸಿಗುತ್ತದೆ. ಅವರಿಗೆ ಸಾವಿರಾರು ಅಭಿಮಾನಿಗಳು ಇರುತ್ತಾರೆ. ಅವರು ಕೂಡ ತಮ್ಮ ನಾಯಕನಂತೆ ಹುಲಿ ಉಗುರಿನ ಲಾಕೆಟ್ ಧರ ಧರಿಸಲು ಬಯಸುತ್ತಾರೆ. ಆಗ ಬೇಡಿಕೆ ಹೆಚ್ಚುತ್ತದೆ. ವನ್ಯಜೀವಿಗಳ ಹತ್ಯೆ ಆಗುತ್ತದೆ. ಇದಕ್ಕೆ ಪರೋಕ್ಷ ಕುಮ್ಮಕ್ಕು ನೀಡಿದಂತೆ ಆಗುತ್ತದೆ. ಹೀಗಾಗಿ ಸಾಮಾಜಿಕ ಬದ್ಧತೆಯ ದೃಷ್ಟಿಯಿಂದ ಗಣ್ಯರು, ನಟರು ನಕಲಿ ಪೆಂಡೆಂಟ್ ಕೂಡ ಧರಿಸಬಾರದು ಎಂದು ಮನವಿ ಮಾಡಿದರು.

1926 ಹೆಲ್ಪ್ ಲೈನ್ ನಂಬರ್

ಅರಣ್ಯ ಇಲಾಖೆಗೆ 1926 ಎಂಬ ಸಹಾಯವಾಣಿ ಇದ್ದು ಸಾರ್ವಜನಿಕರು ಈ ಸಂಖ್ಯೆಗೆ ಕರೆ ಮಾಡಿ ದೂರು ದಾಖಲಿಸಲು, ಅರಣ್ಯ ಇಲಾಖೆಗೆ ಸಂಬಂಧಿಸಿದ ಮಾಹಿತಿ ಪಡೆಯಲು ಅವಕಾಶವಿದೆ ಎಂದು ಈಶ್ವರ ಖಂಡ್ರೆ ತಿಳಿಸಿದರು.
4000 ಹುದ್ದೆ ಖಾಲಿ: ಅರಣ್ಯ ಇಲಾಖೆಯಲ್ಲಿ ಸುಮಾರು 4 ಸಾವಿರ ಹುದ್ದೆ ಖಾಲಿ ಇದ್ದು, ಈಗಾಗಲೇ ಹಣಕಾಸು ಇಲಾಖೆ 800 ಹುದ್ದೆ ಭರ್ತಿಗೆ ಅನುಮತಿ ನೀಡಿದೆ. ಶೀಘ್ರವೇ ಇದರ ಭರ್ತಿ ಪ್ರಕ್ರಿಯೆ ಆರಂಭಿಸಲಾಗಿದೆ ಎಂದರು.

ಚಿನ್ನಾಭರಣ ತಯಾರಕರಿಗೆ ಮನವಿ: ಎಲ್ಲ ಚಿನ್ನಾಭರಣ ಮಳಿಗೆಗಳಲ್ಲಿ ತಮ್ಮಲ್ಲಿ ವನ್ಯಜೀವಿಯ ಯಾವುದೇ ಆಭರಣ ತಯಾರಿಸುವುದಿಲ್ಲ, ಮಾರಾಟ ಮಾಡುವುದಿಲ್ಲ. ಇದು ಶಿಕ್ಷಾರ್ಹ ಅಪರಾಧ ಎಂಬ ಫಲಕ ಹಾಕುವಂತೆ ಸೂಚಿಸಲಾಗುವುದು ಎಂದು ಈಶ್ವರ ಖಂಡ್ರೆ ತಿಳಿಸಿದರು.

ಹುಲಿ ಉಗರಿನ ಪೆಂಡೆಂಟ್‌ ಅರಣ್ಯಾಧಿಕಾರಿಗಳಿಗೆ ಒಪ್ಪಿಸಿದ ಜಗ್ಗೇಶ್‌
ಹುಲಿ ಬೇಟೆಗಾರನ ಸೆರೆ

ಇತ್ತೀಚೆಗೆ ಬೆಳಗಾವಿ ವಿಭಾಗದಲ್ಲಿ ಖಾನಾಪುರ ಬಳಿಯ ಜಳಗಾ ಅರಣ್ಯದ ವ್ಯಾಪ್ತಿಯಲ್ಲಿ ಮಧ್ಯಪ್ರದೇಶದ ಚಿಕ್ಕಾಅಲಿಯಾಸ್ ಕೃಷ್ಣಾ ಪಾಟ್ಲೆ ಪವಾರ್ ಎಂಬುವನನ್ನು ಬಂಧಿಸಲಾಗಿದ್ದು, ಆತ ಹುಲಿ ಕಳ್ಳಬೇಟೆಗಾರನಾಗಿದ್ದು, ಆತನ ವಿರುದ್ಧ ಹಲವು ರಾಜ್ಯಗಳಲ್ಲಿ ದೂರು ದಾಖಲಾಗಿದೆ. ಅರಣ್ಯ ಇಲಾಖೆ ಕಳ್ಳಬೇಟೆ ನಿಗ್ರಹಕ್ಕೂ ಕ್ರಮ ಕೈಗೊಂಡಿದೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಅರಣ್ಯ ಪಡೆ ಮುಖ್ಯಸ್ಥರಾದ ಬ್ರಿಜೆಶ್ ಕುಮಾರ್ ದೀಕ್ಷಿತ್, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ವನ್ಯಜೀವಿ) ಸುಭಾಶ್ ಮಾಲ್ಕಡೆ ಮತ್ತಿತರರು ಪಾಲ್ಗೊಂಡಿದ್ದರು.

ಅರಣ್ಯಾಧಿಕಾರಿಗಳ ಪರಿಶೀಲನೆಗೆ ಪೆಂಡೆಂಟ್‌ ನೀಡಿದ ಮಾಜಿ ಮುಖ್ಯಮಂತ್ರಿಗಳು

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
forest departmentkarnatakakmskmskannadaminister eshwar khandretigertiger clawtiger nail
0 FacebookTwitterPinterestEmail
cklbkrish

previous post
ರಾಷ್ಟ್ರದ ಆರ್ಥಿಕ ಅಭಿವೃದ್ಧಿಯಲ್ಲಿ ಐಐಎಂ ಕೊಡುಗೆ ಅಪಾರ: ರಾಜ್ಯಪಾಲರು
next post
ಮುಂದಿನ ವಿಜಯದಶಮಿಗೆ ನಾನೇ ಸಿಎಂ!

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ