Friday, April 24, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Friday, April 24, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಕೆಆರ್‌ಎಸ್ ಒಳಹರಿವು ಶೂನ್ಯಕ್ಕೆ ತಲುಪಿದೆ

ಬಸ್ ಅಗ್ನಿ ದುರಂತ ಬಗ್ಗೆ ವರದಿಗೆ ಸೂಚನೆ

by cklbkrish October 30, 2023
written by cklbkrish October 30, 2023 0 comments 1 minutes read
ಬೆಂಗಳೂರು:"ಕೆಆರ್ಎಸ್ ಒಳಹರಿವು ಶೂನ್ಯಕ್ಕೆ ತಲುಪಿದೆ. ನಮ್ಮ ಹತ್ತಿರ ತಮಿಳುನಾಡಿಗೆ ಹರಿಸಲು ನೀರಿಲ್ಲ, ನೀರು ಬಿಡುವ ಶಕ್ತಿಯೂ ನಮ್ಮಲ್ಲಿಲ್ಲ" ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ಗಿರಿನಗರದ ವೀರಭದ್ರನಗರದಲ್ಲಿ ಸಂಭವಿಸಿದ ಅಗ್ನಿ ಅನಾಹುತದಿಂದ ಬಸ್ ಗಳು ಸುಟ್ಟುಹೋದ ಸ್ಥಳಕ್ಕೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಡಿಸಿಎಂ ಸುದ್ದಿಗಾರರೊಂದಿಗೆ ಮಾತನಾಡಿದರು. ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಕುರಿತು ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಶಿಫಾರಸ್ಸಿನ ಕುರಿತು ಮಾನಾಡಿದ ಅವರು, "ಕೆಆರ್ಎಸ್ ಅಣೆಕಟ್ಟೆಗೆ ಕಾವೇರಿ ನೀರಿನ ಒಳಹರಿವು ಶೂನ್ಯಕ್ಕೆ ತಲುಪಿದೆ. ಕೆಆರ್ಎಸ್, ಕಬಿನಿಯಿಂದ ನೈಸರ್ಗಿಕವಾಗಿ 815 ಕ್ಯೂಸೆಕ್ ನೀರು ಹರಿದು ಹೋಗುತ್ತಿದ್ದು, ರಾಜ್ಯದ ಕಾವೇರಿ ಕೊಳ್ಳದಲ್ಲಿ 51 ಟಿಎಂಸಿ ನೀರು ಮಾತ್ರ ಲಭ್ಯವಿದೆ ಎಂಬ ಮಾಹಿತಿ ನೀಡಿದರು. ಕುಡಿಯುವ ನೀರನ್ನು ಉಳಿಸಿಕೊಳ್ಳಬೇಕು. ದೇವರ ಮೊರೆ ಹೋಗೋಣ, ಮಳೆ ಬೀಳಲಿ, ನೀರು ಕೆಳಗಡೆಗೆ ಹರಿಯಲಿ. ಈಗ ನಮ್ಮ ಬಳಿಯಂತೂ ನೀರಿಲ್ಲ. ಕಾವೇರಿ ನೀರಿನ ವಿಚಾರವಾಗಿ 89 ನೇ ಸಭೆ ನಡೆಸಿದ ಕಾವೇರಿ ನೀರು ನಿಯಂತ್ರಣ ಸಮಿತಿಯು ನ.1 ರಿಂದ ಮುಂದಿನ 15 ದಿನಗಳ ಕಾಲ 2,600 ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸಲು ಶಿಫಾರಸ್ಸು ಮಾಡಿದೆ" ಎಂದರು. ಬಸ್ ಅಗ್ನಿ ದುರಂತ ಬಗ್ಗೆ ವರದಿಗೆ ಸೂಚನೆ ಬಸ್ ಅಗ್ನಿ ದುರಂತದ ಬಗ್ಗೆ ಮಾತನಾಡಿ, "ವೆಲ್ಡಿಂಗ್ ಮಾಡುವ ವೇಳೆ ಕಿಡಿ ಹಾರಿ ಒಂದು ಬಸ್ಗೆ ಬೆಂಕಿ ಬಿದ್ದು, ಅದು ಹರಡಿಕೊಂಡಿದೆ. ಇಷ್ಟು ದೊಡ್ಡ ಅನಾಹುತ ನಡೆದರೂ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲದಿರುವುದು ಒಳ್ಳೆಯ ಸುದ್ದಿ. ಅಗ್ನಿಶಾಮಕ ದಳದವರು ಅತ್ಯಂತ ಶೀಘ್ರವಾಗಿ ಬೆಂಕಿ ನಂದಿಸಿದ್ದಾರೆ. ಪೊಲೀಸ್ ಮತ್ತು ಅಗ್ನಿಶಾಮಕದಳದ ಉನ್ನತ ಅಧಿಕಾರಿಗಳಿಗೆ ಈ ವಿಚಾರವಾಗಿ ಪ್ರತ್ಯೇಕ ವರದಿ ನೀಡುವಂತೆ ಸೂಚನೆ ನೀಡಿದ್ದೇನೆ" ಎಂದು ತಿಳಿಸಿದರು. "ದುರಂತ ನಡೆದ ಸ್ಥಳ ಖಾಸಗಿಯವರಿಗೆ ಸೇರಿದ್ದು, ಇವರು ಸಹ ಸಣ್ಣ ಪ್ರಮಾಣದ ಅಗ್ನಿ ನಿಯಂತ್ರಣ ವ್ಯವಸ್ಥೆ ಇಟ್ಟುಕೊಂಡಿದ್ದಾರೆ. ಆದರೂ ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರ ವಹಿಸಲು ಸೂಚನೆ ನೀಡಿದ್ದೇನೆ. ಇಂತಹ ಸೂಕ್ಷ್ಮ ಕೆಲಸಗಳು ನಡೆಯುವ ಜಾಗಗಳಲ್ಲಿ ಕಟ್ಟೆಚ್ಚರ ಅಗತ್ಯ ಎಂದು ಕಟ್ಟುನಿಟ್ಟಾಗಿ ಸೂಚಿಸಿದ್ದೇನೆ" ಎಂದರು. ಹೊರಗೆ ಹೋಗಲು ಒಂದೇ ಕಡೆ ಜಾಗ ಇದ್ದ ಕಾರಣ ಮತ್ತು ಮುಂಜಾಗ್ರತಾ ಕ್ರಮಗಳು ಇಲ್ಲದ ಕಾರಣ ಅನಾಹುತ ಸಂಭವಿಸಿತೆ ಎಂದು ಕೇಳಿದಾಗ "ತಾಂತ್ರಿಕ ಅಂಶ, ದೋಷಗಳನ್ನು ನಾನು ಈಗಲೇ ಹೇಳಲು ಆಗುವುದಿಲ್ಲ, ವರದಿ ಬರಲಿ ಆನಂತರ ಹೇಳುತ್ತೇನೆ" ಎಂದು ತಿಳಿಸಿದರು. ಸರ್ಕಾರ ಬಂದ ನಂತರ ಈಗಾಗಲೇ ಮೂರು ದೊಡ್ಡ ಬೆಂಕಿ ಅವಘಡಗಳು ನಡೆದಿವೆ, ಸರ್ಕಾರ ಕ್ರಮ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುತ್ತಿಲ್ಲವೇ ಎಂದು ಕೇಳಿದಾಗ "ಪಟಾಕಿ ದುರಂತ ನಡೆದ ನಂತರ ಕಠಿಣ ಕ್ರಮ ತೆಗೆದುಕೊಂಡಿದ್ದೇವೆ. ಇಂತಹ ಸೂಕ್ಷ್ಮ ವಲಯಗಳಲ್ಲಿ ಸುರಕ್ಷತಾ ಕ್ರಮಗಳನ್ನು ಪರಿಶೀಲಿಸಬೇಕು ಎಂದು ಅಧಿಕಾರಿಗಳಿಗೆ ಹೇಳಿದ್ದೇನೆ" ಎಂದು ಹೇಳಿದರು. ಮಾಲೀಕನ ಮೇಲೆ ಎಫ್ಐಆರ್ ದಾಖಲಾಗುತ್ತದೆಯೇ ಎಂದು ಕೇಳಿದಾಗ "ಎಷ್ಟು ಹಾನಿಯಾಗಿದೆ ಎಂದು ಇನ್ನೂ ಗೊತ್ತಿಲ್ಲ, ಮೊದಲು ವರದಿ ಬರಲಿ, ಆನಂತರ ಕ್ರಮ ತೆಗೆದುಕೊಳ್ಳೋಣ" ಎಂದರು.
2FacebookTwitterPinterestEmail
78

 ಡಿಸಿಎಂ ಡಿ‌.ಕೆ.ಶಿವಕುಮಾರ್ ಹೇಳಿಕೆ

ಬೆಂಗಳೂರು:“ಕೆಆರ್‌ಎಸ್ ಒಳಹರಿವು ಶೂನ್ಯಕ್ಕೆ ತಲುಪಿದೆ. ನಮ್ಮ ಹತ್ತಿರ ತಮಿಳುನಾಡಿಗೆ ಹರಿಸಲು ನೀರಿಲ್ಲ, ನೀರು ಬಿಡುವ ಶಕ್ತಿಯೂ ನಮ್ಮಲ್ಲಿಲ್ಲ” ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.

ಬೆಂಗಳೂರು:"ಕೆಆರ್ಎಸ್ ಒಳಹರಿವು ಶೂನ್ಯಕ್ಕೆ ತಲುಪಿದೆ. ನಮ್ಮ ಹತ್ತಿರ ತಮಿಳುನಾಡಿಗೆ ಹರಿಸಲು ನೀರಿಲ್ಲ, ನೀರು ಬಿಡುವ ಶಕ್ತಿಯೂ ನಮ್ಮಲ್ಲಿಲ್ಲ" ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.
ಗಿರಿನಗರದ ವೀರಭದ್ರನಗರದಲ್ಲಿ ಸಂಭವಿಸಿದ ಅಗ್ನಿ ಅನಾಹುತದಿಂದ ಬಸ್ ಗಳು ಸುಟ್ಟುಹೋದ ಸ್ಥಳಕ್ಕೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಡಿಸಿಎಂ ಸುದ್ದಿಗಾರರೊಂದಿಗೆ ಮಾತನಾಡಿದರು.
ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಕುರಿತು ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಶಿಫಾರಸ್ಸಿನ ಕುರಿತು ಮಾನಾಡಿದ ಅವರು, "ಕೆಆರ್ಎಸ್ ಅಣೆಕಟ್ಟೆಗೆ ಕಾವೇರಿ ನೀರಿನ ಒಳಹರಿವು ಶೂನ್ಯಕ್ಕೆ ತಲುಪಿದೆ. ಕೆಆರ್ಎಸ್, ಕಬಿನಿಯಿಂದ ನೈಸರ್ಗಿಕವಾಗಿ 815 ಕ್ಯೂಸೆಕ್ ನೀರು ಹರಿದು ಹೋಗುತ್ತಿದ್ದು, ರಾಜ್ಯದ ಕಾವೇರಿ ಕೊಳ್ಳದಲ್ಲಿ 51 ಟಿಎಂಸಿ ನೀರು ಮಾತ್ರ ಲಭ್ಯವಿದೆ ಎಂಬ ಮಾಹಿತಿ ನೀಡಿದರು.
ಕುಡಿಯುವ ನೀರನ್ನು ಉಳಿಸಿಕೊಳ್ಳಬೇಕು. ದೇವರ ಮೊರೆ ಹೋಗೋಣ, ಮಳೆ ಬೀಳಲಿ, ನೀರು ಕೆಳಗಡೆಗೆ ಹರಿಯಲಿ. ಈಗ ನಮ್ಮ ಬಳಿಯಂತೂ ನೀರಿಲ್ಲ. ಕಾವೇರಿ ನೀರಿನ ವಿಚಾರವಾಗಿ 89 ನೇ ಸಭೆ ನಡೆಸಿದ  ಕಾವೇರಿ ನೀರು ನಿಯಂತ್ರಣ ಸಮಿತಿಯು ನ.1 ರಿಂದ ಮುಂದಿನ 15 ದಿನಗಳ ಕಾಲ 2,600 ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸಲು ಶಿಫಾರಸ್ಸು ಮಾಡಿದೆ" ಎಂದರು.
ಬಸ್ ಅಗ್ನಿ ದುರಂತ ಬಗ್ಗೆ ವರದಿಗೆ ಸೂಚನೆ
ಬಸ್ ಅಗ್ನಿ ದುರಂತದ ಬಗ್ಗೆ ಮಾತನಾಡಿ, "ವೆಲ್ಡಿಂಗ್ ಮಾಡುವ ವೇಳೆ ಕಿಡಿ ಹಾರಿ ಒಂದು ಬಸ್ಗೆ ಬೆಂಕಿ ಬಿದ್ದು, ಅದು ಹರಡಿಕೊಂಡಿದೆ. ಇಷ್ಟು ದೊಡ್ಡ ಅನಾಹುತ ನಡೆದರೂ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲದಿರುವುದು ಒಳ್ಳೆಯ ಸುದ್ದಿ.
 ಅಗ್ನಿಶಾಮಕ ದಳದವರು ಅತ್ಯಂತ ಶೀಘ್ರವಾಗಿ ಬೆಂಕಿ ನಂದಿಸಿದ್ದಾರೆ. ಪೊಲೀಸ್ ಮತ್ತು ಅಗ್ನಿಶಾಮಕದಳದ ಉನ್ನತ ಅಧಿಕಾರಿಗಳಿಗೆ ಈ ವಿಚಾರವಾಗಿ ಪ್ರತ್ಯೇಕ ವರದಿ ನೀಡುವಂತೆ ಸೂಚನೆ ನೀಡಿದ್ದೇನೆ" ಎಂದು ತಿಳಿಸಿದರು.
"ದುರಂತ ನಡೆದ ಸ್ಥಳ ಖಾಸಗಿಯವರಿಗೆ ಸೇರಿದ್ದು, ಇವರು ಸಹ ಸಣ್ಣ ಪ್ರಮಾಣದ ಅಗ್ನಿ ನಿಯಂತ್ರಣ ವ್ಯವಸ್ಥೆ ಇಟ್ಟುಕೊಂಡಿದ್ದಾರೆ. ಆದರೂ ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರ ವಹಿಸಲು ಸೂಚನೆ ನೀಡಿದ್ದೇನೆ. ಇಂತಹ ಸೂಕ್ಷ್ಮ ಕೆಲಸಗಳು ನಡೆಯುವ ಜಾಗಗಳಲ್ಲಿ ಕಟ್ಟೆಚ್ಚರ ಅಗತ್ಯ ಎಂದು ಕಟ್ಟುನಿಟ್ಟಾಗಿ ಸೂಚಿಸಿದ್ದೇನೆ" ಎಂದರು.
ಹೊರಗೆ ಹೋಗಲು ಒಂದೇ ಕಡೆ ಜಾಗ ಇದ್ದ ಕಾರಣ ಮತ್ತು ಮುಂಜಾಗ್ರತಾ ಕ್ರಮಗಳು ಇಲ್ಲದ ಕಾರಣ ಅನಾಹುತ ಸಂಭವಿಸಿತೆ ಎಂದು ಕೇಳಿದಾಗ "ತಾಂತ್ರಿಕ ಅಂಶ, ದೋಷಗಳನ್ನು ನಾನು ಈಗಲೇ ಹೇಳಲು ಆಗುವುದಿಲ್ಲ, ವರದಿ ಬರಲಿ ಆನಂತರ ಹೇಳುತ್ತೇನೆ" ಎಂದು ತಿಳಿಸಿದರು.
ಸರ್ಕಾರ ಬಂದ ನಂತರ ಈಗಾಗಲೇ ಮೂರು ದೊಡ್ಡ ಬೆಂಕಿ ಅವಘಡಗಳು ನಡೆದಿವೆ, ಸರ್ಕಾರ ಕ್ರಮ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುತ್ತಿಲ್ಲವೇ ಎಂದು ಕೇಳಿದಾಗ "ಪಟಾಕಿ ದುರಂತ ನಡೆದ ನಂತರ ಕಠಿಣ ಕ್ರಮ ತೆಗೆದುಕೊಂಡಿದ್ದೇವೆ. ಇಂತಹ ಸೂಕ್ಷ್ಮ ವಲಯಗಳಲ್ಲಿ ಸುರಕ್ಷತಾ ಕ್ರಮಗಳನ್ನು ಪರಿಶೀಲಿಸಬೇಕು ಎಂದು ಅಧಿಕಾರಿಗಳಿಗೆ ಹೇಳಿದ್ದೇನೆ" ಎಂದು ಹೇಳಿದರು.
ಮಾಲೀಕನ ಮೇಲೆ ಎಫ್ಐಆರ್ ದಾಖಲಾಗುತ್ತದೆಯೇ ಎಂದು ಕೇಳಿದಾಗ "ಎಷ್ಟು ಹಾನಿಯಾಗಿದೆ ಎಂದು ಇನ್ನೂ ಗೊತ್ತಿಲ್ಲ, ಮೊದಲು ವರದಿ ಬರಲಿ, ಆನಂತರ ಕ್ರಮ ತೆಗೆದುಕೊಳ್ಳೋಣ" ಎಂದರು.
DK Shivakumar

ಗಿರಿನಗರದ ವೀರಭದ್ರನಗರದಲ್ಲಿ ಸಂಭವಿಸಿದ ಅಗ್ನಿ ಅನಾಹುತದಿಂದ ಬಸ್ ಗಳು ಸುಟ್ಟುಹೋದ ಸ್ಥಳಕ್ಕೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಡಿಸಿಎಂ ಸುದ್ದಿಗಾರರೊಂದಿಗೆ ಮಾತನಾಡಿದರು.

ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಕುರಿತು ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಶಿಫಾರಸ್ಸಿನ ಕುರಿತು ಮಾನಾಡಿದ ಅವರು, “ಕೆಆರ್‌ಎಸ್‌ ಅಣೆಕಟ್ಟೆಗೆ ಕಾವೇರಿ ನೀರಿನ ಒಳಹರಿವು ಶೂನ್ಯಕ್ಕೆ ತಲುಪಿದೆ. ಕೆಆರ್‌ಎಸ್, ಕಬಿನಿಯಿಂದ ನೈಸರ್ಗಿಕವಾಗಿ 815 ಕ್ಯೂಸೆಕ್ ನೀರು ಹರಿದು ಹೋಗುತ್ತಿದ್ದು, ರಾಜ್ಯದ ಕಾವೇರಿ ಕೊಳ್ಳದಲ್ಲಿ 51 ಟಿಎಂಸಿ ನೀರು ಮಾತ್ರ ಲಭ್ಯವಿದೆ ಎಂಬ ಮಾಹಿತಿ ನೀಡಿದರು.

ಕುಡಿಯುವ ನೀರನ್ನು ಉಳಿಸಿಕೊಳ್ಳಬೇಕು. ದೇವರ ಮೊರೆ ಹೋಗೋಣ, ಮಳೆ ಬೀಳಲಿ, ನೀರು ಕೆಳಗಡೆಗೆ ಹರಿಯಲಿ. ಈಗ ನಮ್ಮ ಬಳಿಯಂತೂ ನೀರಿಲ್ಲ. ಕಾವೇರಿ ನೀರಿನ ವಿಚಾರವಾಗಿ 89 ನೇ ಸಭೆ ನಡೆಸಿದ  ಕಾವೇರಿ ನೀರು ನಿಯಂತ್ರಣ ಸಮಿತಿಯು ನ.1 ರಿಂದ ಮುಂದಿನ 15 ದಿನಗಳ ಕಾಲ 2,600 ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸಲು ಶಿಫಾರಸ್ಸು ಮಾಡಿದೆ” ಎಂದರು.

ಬಸ್ ಅಗ್ನಿ ದುರಂತ ಬಗ್ಗೆ ವರದಿಗೆ ಸೂಚನೆ

ಬಸ್ ಅಗ್ನಿ ದುರಂತದ ಬಗ್ಗೆ ಮಾತನಾಡಿ, “ವೆಲ್ಡಿಂಗ್ ಮಾಡುವ ವೇಳೆ ಕಿಡಿ ಹಾರಿ ಒಂದು ಬಸ್‌ಗೆ ಬೆಂಕಿ ಬಿದ್ದು, ಅದು ಹರಡಿಕೊಂಡಿದೆ. ಇಷ್ಟು ದೊಡ್ಡ ಅನಾಹುತ ನಡೆದರೂ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲದಿರುವುದು ಒಳ್ಳೆಯ ಸುದ್ದಿ.

 ಅಗ್ನಿಶಾಮಕ ದಳದವರು ಅತ್ಯಂತ ಶೀಘ್ರವಾಗಿ ಬೆಂಕಿ ನಂದಿಸಿದ್ದಾರೆ. ಪೊಲೀಸ್ ಮತ್ತು ಅಗ್ನಿಶಾಮಕದಳದ ಉನ್ನತ ಅಧಿಕಾರಿಗಳಿಗೆ ಈ ವಿಚಾರವಾಗಿ ಪ್ರತ್ಯೇಕ ವರದಿ ನೀಡುವಂತೆ ಸೂಚನೆ ನೀಡಿದ್ದೇನೆ” ಎಂದು ತಿಳಿಸಿದರು.

“ದುರಂತ ನಡೆದ ಸ್ಥಳ ಖಾಸಗಿಯವರಿಗೆ ಸೇರಿದ್ದು, ಇವರು ಸಹ ಸಣ್ಣ ಪ್ರಮಾಣದ ಅಗ್ನಿ ನಿಯಂತ್ರಣ ವ್ಯವಸ್ಥೆ ಇಟ್ಟುಕೊಂಡಿದ್ದಾರೆ. ಆದರೂ ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರ ವಹಿಸಲು ಸೂಚನೆ ನೀಡಿದ್ದೇನೆ‌. ಇಂತಹ ಸೂಕ್ಷ್ಮ ಕೆಲಸಗಳು ನಡೆಯುವ ಜಾಗಗಳಲ್ಲಿ ಕಟ್ಟೆಚ್ಚರ ಅಗತ್ಯ ಎಂದು ಕಟ್ಟುನಿಟ್ಟಾಗಿ ಸೂಚಿಸಿದ್ದೇನೆ” ಎಂದರು.

ಹೊರಗೆ ಹೋಗಲು ಒಂದೇ ಕಡೆ ಜಾಗ ಇದ್ದ ಕಾರಣ ಮತ್ತು ಮುಂಜಾಗ್ರತಾ ಕ್ರಮಗಳು ಇಲ್ಲದ ಕಾರಣ ಅನಾಹುತ ಸಂಭವಿಸಿತೆ ಎಂದು ಕೇಳಿದಾಗ “ತಾಂತ್ರಿಕ ಅಂಶ,‌ ದೋಷಗಳನ್ನು ನಾನು ಈಗಲೇ ಹೇಳಲು ಆಗುವುದಿಲ್ಲ, ವರದಿ ಬರಲಿ ಆನಂತರ ಹೇಳುತ್ತೇನೆ” ಎಂದು ತಿಳಿಸಿದರು.

ಸರ್ಕಾರ ಬಂದ ನಂತರ ಈಗಾಗಲೇ ಮೂರು ದೊಡ್ಡ ಬೆಂಕಿ ಅವಘಡಗಳು ನಡೆದಿವೆ, ಸರ್ಕಾರ ಕ್ರಮ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುತ್ತಿಲ್ಲವೇ ಎಂದು ಕೇಳಿದಾಗ “ಪಟಾಕಿ ದುರಂತ ನಡೆದ ನಂತರ ಕಠಿಣ ಕ್ರಮ ತೆಗೆದುಕೊಂಡಿದ್ದೇವೆ. ಇಂತಹ ಸೂಕ್ಷ್ಮ ವಲಯಗಳಲ್ಲಿ ಸುರಕ್ಷತಾ ಕ್ರಮಗಳನ್ನು ಪರಿಶೀಲಿಸಬೇಕು ಎಂದು ಅಧಿಕಾರಿಗಳಿಗೆ ಹೇಳಿದ್ದೇನೆ” ಎಂದು ಹೇಳಿದರು.

ಮಾಲೀಕನ ಮೇಲೆ ಎಫ್‌ಐಆರ್ ದಾಖಲಾಗುತ್ತದೆಯೇ ಎಂದು ಕೇಳಿದಾಗ “ಎಷ್ಟು ಹಾನಿಯಾಗಿದೆ ಎಂದು ಇನ್ನೂ ಗೊತ್ತಿಲ್ಲ, ಮೊದಲು ವರದಿ ಬರಲಿ, ಆನಂತರ ಕ್ರಮ ತೆಗೆದುಕೊಳ್ಳೋಣ” ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
Cauverydk shivakumarkarnatakakmskmskannadakrswater
2 FacebookTwitterPinterestEmail
cklbkrish

previous post
ಆರ್ಯ ವೈಶ್ಯ ಮಕ್ಕಳಿಗೆ ಶೈಕ್ಷಣಿಕ ಸಾಲ
next post
ಹೊಸ ತಳಿಗಳ ತ್ವರಿತ ಬೀಜ ವಿತರಣೆಗೆ ಒಪ್ಪಂದ

You may also like

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026

ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

April 21, 2026

ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

April 20, 2026

ಬದಲಾಗದ ಮಹಿಳಾ ವಿರೋಧಿ ಕಾಂಗ್ರೆಸ್ ಮನಸ್ಥಿತಿ

April 18, 2026

ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ

April 17, 2026

ಪಕ್ಷ ವಿರೋಧಿ ಚಟುವಟಿಕೆ: ಸಚಿವ ಜಮೀರ್‌ಗೆ ಕಂಟಕ

April 16, 2026

ಪ್ರಧಾನಿ ಮೋದಿಗೆ ರಾಜ್ಯದ 18 ಬೇಡಿಕೆಗಳ ಪಟ್ಟಿ

April 15, 2026

ಶಾಸಕರ ಜೊತೆ ಪ್ರತ್ಯೇಕ ಸಭೆಗೆ ಶಿವಕುಮಾರ್ ಸಮರ್ಥನೆ

April 14, 2026

ಸಂಪುಟ ಪುನರ್ ರಚನೆಗೆ ಅವಕಾಶ ಕೊಡಬೇಡಿ

April 13, 2026

ಅಧಿಕಾರ ಹಸ್ತಾಂತರ ನಿರೀಕ್ಷೆಯಲ್ಲಿ ಡಿ.ಕೆ.ಶಿವಕುಮಾರ್

April 11, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (443)
  • ಅಂಕಣ (109)
  • ಉದ್ಯೋಗ (326)
  • ದಿನ ಭವಿಷ್ಯ (110)
  • ರಾಜಕೀಯ (1,937)
  • ರಾಜ್ಯ (2,252)
  • ರಾಷ್ಟ್ರ (2,222)
  • ವಿಶ್ಲೇಷಣೆ (189)
  • ಶಿಕ್ಷಣ (393)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026

KMS Special

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ