Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಮಹಾರಾಷ್ಟ್ರದ ಶಿವಸೇನೆ – ಕಾಂಗ್ರೆಸ್ ಸರಕಾರದಂತೆ ಸಿದ್ದು ಸರಕಾರವೂ ಪತನ ಗ್ಯಾರಂಟಿ

ಬಾಂಬ್ ಸಿಡಿಸಿದ ಜಾರಕಿಹೊಳಿ

by cklbkrish October 30, 2023
written by cklbkrish October 30, 2023 0 comments 2 minutes read
2FacebookTwitterPinterestEmail
80

ಹೊಸ ಬಾಂಬ್ ಸಿಡಿಸಿದ ಜಾರಕಿಹೊಳಿ

ಬೆಂಗಳೂರು: ಮಹಾರಾಷ್ಟ್ರ ಮಾದರಿಯಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸಹೋದರ ಮಾಜಿ ಸಚಿವ ಮತ್ತು ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಇಂದಿಲ್ಲಿ ಬಾಂಬ್ ಸಿಡಿಸಿದ್ದಾರೆ.

ಕರ್ನಾಟಕದ ಏಕನಾಥ್‌ಸಿಂಧೆ ಯಾರು ಎಂದು ಬಹಿರಂಗಪಡಿಸದಿದ್ದರೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾಜಿ ಆಗುವುದಾಗಿ ಭವಿಷ್ಯ ನುಡಿದಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹಾಗೂ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಔತಣಕೂಟದ ಸಭೆಗಳನ್ನು ನಡೆಸಿದ ಬೆನ್ನಲ್ಲೇ ರಮೇಶ್ ಇಂತಹ ಹೇಳಿಕೆ ನೀಡಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ.

ತುರ್ತು ಪತ್ರಿಕಾಗೋಷ್ಠಿ ನಡೆಸಿ ಸರ್ಕಾರ ಪತನದ ಮಾಹಿತಿ ನೀಡಿದ್ದಲ್ಲದೆ, ನ್ಯಾವ್ಯಾರೂ ಈ ಸರ್ಕಾರವನ್ನು ಬೀಳಿಸುತ್ತಿಲ್ಲ. ಮಹಾರಾಷ್ಟ್ರದಲ್ಲಿ ಆದಂತೆ ಇಲ್ಲಿಯೂ ಆಗುತ್ತದೆ.

ಬೆಂಗಳೂರು: ಮಹಾರಾಷ್ಟ್ರ ಮಾದರಿಯಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸಹೋದರ ಮಾಜಿ ಸಚಿವ ಮತ್ತು ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಇಂದಿಲ್ಲಿ ಬಾಂಬ್ ಸಿಡಿಸಿದ್ದಾರೆ.
ಕರ್ನಾಟಕದ ಏಕನಾಥ್ಸಿಂಧೆ ಯಾರು ಎಂದು ಬಹಿರಂಗಪಡಿಸದಿದ್ದರೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾಜಿ ಆಗುವುದಾಗಿ ಭವಿಷ್ಯ ನುಡಿದಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹಾಗೂ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಔತಣಕೂಟದ ಸಭೆಗಳನ್ನು ನಡೆಸಿದ ಬೆನ್ನಲ್ಲೇ ರಮೇಶ್ ಇಂತಹ ಹೇಳಿಕೆ ನೀಡಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ.
ತುರ್ತು ಪತ್ರಿಕಾಗೋಷ್ಠಿ ನಡೆಸಿ ಸರ್ಕಾರ ಪತನದ ಮಾಹಿತಿ ನೀಡಿದ್ದಲ್ಲದೆ, ನ್ಯಾವ್ಯಾರೂ ಈ ಸರ್ಕಾರವನ್ನು ಬೀಳಿಸುತ್ತಿಲ್ಲ. ಮಹಾರಾಷ್ಟ್ರದಲ್ಲಿ ಆದಂತೆ ಇಲ್ಲಿಯೂ ಆಗುತ್ತದೆ.
ಬಿಜೆಪಿ ಆಪರೇಷನ್ ಕಮಲದಿಂದ ಕುಮಾರಸ್ವಾಮಿ ನೇತೃತ್ವದ ಜೆಡಿಎಸ್-ಕಾಂಗ್ರೆಸ್ ಸರ್ಕಾರ ಪತನವಾಗಲಿಲ್ಲ. ಶಿವಕುಮಾರ್ ಅವರ ದುರಂಹಕಾರದ ವರ್ತನೆ ಪ್ರತಿಭಟಿಸಿ ಹೊರಬಂದ ಕಾರಣ ಅಂದು ಸರ್ಕಾರ ಪತನಗೊಂಡಿತು.
ಬೆಳಗಾವಿ ರಾಜಕೀಯವೇ ಸರ್ಕಾರಕ್ಕೆ ಕಂಟಕ
ಬೆಳಗಾವಿ ರಾಜಕೀಯವೇ ಇಂದಿನ ಸರ್ಕಾರದ ಪತನಕ್ಕೂ ಮೂಲ ಕಾರಣವಾಗುತ್ತದೆ ಎಂದ ರಮೇಶ್, ಯಾವಾಗ, ಏನಾಗಲಿದೆ ಎಂಬುದನ್ನು ಮಾತ್ರ ಬಹಿರಂಗಪಡಿಸಲಿಲ್ಲ.
ಕುಮಾರಸ್ವಾಮಿ ಅವರ ಆತ್ಮೀಯನಾಗಿರುವುದಕ್ಕೆ ಡಿಕೆಶಿ ನನ್ನ ವಿರುದ್ಧ ಹುನ್ನಾರ ನಡೆಸುತ್ತಿದ್ದಾರೆ. ನಿತ್ಯ ಡಿಕೆಶಿ ನಾಟಕ ಮಂಡಳಿ ಆಪರೇಷನ್ ಕಮಲ  ಮಾಡುತ್ತಿರುವ ಬಗ್ಗೆ ಮಾತನಾಡುತ್ತಿದೆ.
ಮೈತ್ರಿ ಸರಕಾರ ಬಿದ್ದಾಗ ಬಿಜೆಪಿಯೇನೂ ನಮ್ಮನ್ನು ಆಪರೇಷನ್ ಮಾಡಿರಲಿಲ್ಲ. ನಾವೇ ಮೈತ್ರಿ ಸರಕಾರ ತೆಗೆದು ಬಿಜೆಪಿಗೆ ಸೇರಿದೆವು.
ಈಗ ಬಿಜೆಪಿ ಹೆಸರು ಕೆಡಿಸಲು ಡಿಕೆಶಿ ನಾಟಕ ಮಂಡಳಿ ಹೆಣಗಾಡುತ್ತಿದೆ. ಬಿಜೆಪಿ ಹೆಸರು ಕೆಡಿಸಲು ಡಿಕೆಶಿ ನಾಟಕ ಮಂಡಳಿ ನಿರಂತರವಾಗಿ  ಕೆಲಸ ಮಾಡುತ್ತಿದೆ ಎಂದು ಅವರು ದೂರಿದರು.
ಸುಳ್ಳು ಗ್ಯಾರಂಟಿ ನೀಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಎಲ್ಲ ರಂಗದಲ್ಲೂ ಫೇಲ್ ಆಗಿದೆ. ಸರಕಾರ ಪತನ ಆಗುವುದು ಬೇಡ, ಮುಂದುವರೆಯಲಿ. ಕಾಂಗ್ರೆಸ್ ಶಾಸಕರೇ ಸರಕಾರದ ವಿರುದ್ಧ ಮಾತನಾಡುತ್ತಿದ್ದಾರೆ. ಡಿಕೆಶಿ ಇರುವ ಸರಕಾರ ಯಾವಾಗಲೂ ಡೇಂಜರ್. ಡಿಕೆಶಿ ಅಧಿಕಾರ ಇದ್ದಾಗ ಒಂದು ರೀತಿ ಇರುತ್ತಾರೆ, ಪ್ರತಿಪಕ್ಷದಲ್ಲಿದ್ದಾಗ ಇನ್ನೊಂದು ರೀತಿ ಇರುತ್ತಾರೆ.
ಡಿಕೆಶಿಯೇ ಸಿಡಿ ಮಾಸ್ಟರ್, ಅದೇ ಅವರ ಶಕ್ತಿ. ಸಿಡಿ ಇಟ್ಟುಕೊಂಡೇ ರಾಜಕಾರಣ ಮಾಡುತ್ತಾರೆ ಎಂದು ಆರೋಪಿಸಿದರು.
ಸಿಡಿ ಇಟ್ಟುಕೊಂಡು ನೆಲಮಂಗಲ ಮಾಜಿ ಶಾಸಕ ನಾಗರಾಜ್ಗೆ ಡಿಕೆಶಿ ಬ್ಲ್ಯಾಕ್ ಮೇಲ್ ಮಾಡಿದ್ದಾರೆ.ನಿನ್ನ ಹಾಗೂ ರಮೇಶ್ ಜಾರಕಿಹೊಳಿದು ಬಹಳಷ್ಟಾಗಿದೆ. ಎಸ್ಐಟಿ ಕ್ಯಾನ್ಸಲ್ ಮಾಡಿ ಮರು ತನಿಖೆಗೆ ಆದೇಶಿಸುವ ಬೆದರಿಕೆ ಹಾಕುತ್ತಿದ್ದಾರೆ ಎಂದು ಸ್ಪೋಟಕ ಹೇಳಿಕೆ ನೀಡಿದರು.
ಎಷ್ಟೇ ಸಿಡಿ ಬಂದರೂ ನಾನು ಹೆದರಲ್ಲ. ಮರು ತನಿಖೆ ಆದರೆ ಸಿಬಿಐನಿಂದ ಆಗಲಿ ಎಂದು ನಾನು ಕೋರ್ಟ್ ಮೊರೆ ಹೋಗುವೆ ಎಂದು ಅವರು ಡಿಕೆಶಿ ಮೇಲೆ ವಾಗ್ದಾಳಿ ನಡೆಸಿದರು.
ವಿನಾಕಾರಣ ನನ್ನ ಮೇಲೆ ಡಿಕೆಶಿ ಹಗೆತನ ಸಾಧಿಸುತ್ತಿದ್ದಾರೆ. ಹೆಚ್ಡಿಕೆ ಜತೆಗೆ ಆಪ್ತನಾಗುತ್ತಿರುವುದಕ್ಕೆ ಡಿಕೆಶಿ ನನ್ನ ವಿರುದ್ಧ ಹುನ್ನಾರ ಮಾಡುತ್ತಿದ್ದಾರೆ. ಒಂದೇ ರಾತ್ರಿಯಲ್ಲಿ ಬೆಳವಣಿಗೆ ಆಗಿ ಸರಕಾರ ಪತನವಾಗಲಿದೆ ಎಂದರು.
ರಮೇಶ್ ಜಾರಕಿಹೊಳಿ ಹೇಳಿಕೆ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸುತ್ತಿದ್ದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್, ರಾಜ್ಯದ ಜನ ಚುನಾವಣೆಯಲ್ಲಿ ಏನು ತೀರ್ಪು ನೀಡಬೇಕೋ ನೀಡಿದ್ದಾರೆ. ನಮಗೆ ಮಾಡಲು ಅನೇಕ ಕೆಲಸಗಳಿವೆ. ಆ ಕೆಲಸ ಮಾಡುತ್ತಿದ್ದೇವೆ ಎಂದಷ್ಟೇ ತಿಳಿಸಿದರು. ಹೆಚ್ಚಿನ ಪ್ರತಿಕ್ರಿಯೆ ನೀಡಲು ಆಸಕ್ತಿ ತೋರಲಿಲ್ಲ.

ಬಿಜೆಪಿ ಆಪರೇಷನ್ ಕಮಲದಿಂದ ಕುಮಾರಸ್ವಾಮಿ ನೇತೃತ್ವದ ಜೆಡಿಎಸ್-ಕಾಂಗ್ರೆಸ್ ಸರ್ಕಾರ ಪತನವಾಗಲಿಲ್ಲ. ಶಿವಕುಮಾರ್ ಅವರ ದುರಂಹಕಾರದ ವರ್ತನೆ ಪ್ರತಿಭಟಿಸಿ ಹೊರಬಂದ ಕಾರಣ ಅಂದು ಸರ್ಕಾರ ಪತನಗೊಂಡಿತು.

ಬೆಳಗಾವಿ ರಾಜಕೀಯವೇ ಸರ್ಕಾರಕ್ಕೆ ಕಂಟಕ

ಬೆಳಗಾವಿ ರಾಜಕೀಯವೇ ಇಂದಿನ ಸರ್ಕಾರದ ಪತನಕ್ಕೂ ಮೂಲ ಕಾರಣವಾಗುತ್ತದೆ ಎಂದ ರಮೇಶ್, ಯಾವಾಗ, ಏನಾಗಲಿದೆ ಎಂಬುದನ್ನು ಮಾತ್ರ ಬಹಿರಂಗಪಡಿಸಲಿಲ್ಲ.

ಕುಮಾರಸ್ವಾಮಿ ಅವರ ಆತ್ಮೀಯನಾಗಿರುವುದಕ್ಕೆ ಡಿಕೆಶಿ ನನ್ನ ವಿರುದ್ಧ ಹುನ್ನಾರ ನಡೆಸುತ್ತಿದ್ದಾರೆ. ನಿತ್ಯ ಡಿಕೆಶಿ ನಾಟಕ ಮಂಡಳಿ ಆಪರೇಷನ್ ಕಮಲ  ಮಾಡುತ್ತಿರುವ ಬಗ್ಗೆ ಮಾತನಾಡುತ್ತಿದೆ.

ಮೈತ್ರಿ ಸರಕಾರ ಬಿದ್ದಾಗ ಬಿಜೆಪಿಯೇನೂ ನಮ್ಮನ್ನು ಆಪರೇಷನ್ ಮಾಡಿರಲಿಲ್ಲ. ನಾವೇ ಮೈತ್ರಿ ಸರಕಾರ ತೆಗೆದು ಬಿಜೆಪಿಗೆ ಸೇರಿದೆವು.

ಈಗ ಬಿಜೆಪಿ ಹೆಸರು ಕೆಡಿಸಲು ಡಿಕೆಶಿ ನಾಟಕ ಮಂಡಳಿ ಹೆಣಗಾಡುತ್ತಿದೆ. ಬಿಜೆಪಿ ಹೆಸರು ಕೆಡಿಸಲು ಡಿಕೆಶಿ ನಾಟಕ ಮಂಡಳಿ ನಿರಂತರವಾಗಿ  ಕೆಲಸ ಮಾಡುತ್ತಿದೆ ಎಂದು ಅವರು ದೂರಿದರು.

ಸುಳ್ಳು ಗ್ಯಾರಂಟಿ ನೀಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಎಲ್ಲ ರಂಗದಲ್ಲೂ ಫೇಲ್ ಆಗಿದೆ. ಸರಕಾರ ಪತನ ಆಗುವುದು ಬೇಡ, ಮುಂದುವರೆಯಲಿ. ಕಾಂಗ್ರೆಸ್ ಶಾಸಕರೇ ಸರಕಾರದ ವಿರುದ್ಧ ಮಾತನಾಡುತ್ತಿದ್ದಾರೆ. ಡಿಕೆಶಿ ಇರುವ ಸರಕಾರ ಯಾವಾಗಲೂ ಡೇಂಜರ್. ಡಿಕೆಶಿ ಅಧಿಕಾರ ಇದ್ದಾಗ ಒಂದು ರೀತಿ ಇರುತ್ತಾರೆ, ಪ್ರತಿಪಕ್ಷದಲ್ಲಿದ್ದಾಗ ಇನ್ನೊಂದು ರೀತಿ ಇರುತ್ತಾರೆ.

ಡಿಕೆಶಿಯೇ ಸಿಡಿ ಮಾಸ್ಟರ್, ಅದೇ ಅವರ ಶಕ್ತಿ. ಸಿಡಿ ಇಟ್ಟುಕೊಂಡೇ ರಾಜಕಾರಣ ಮಾಡುತ್ತಾರೆ ಎಂದು ಆರೋಪಿಸಿದರು.

ಸಿಡಿ ಇಟ್ಟುಕೊಂಡು ನೆಲಮಂಗಲ ಮಾಜಿ ಶಾಸಕ ನಾಗರಾಜ್‌ಗೆ ಡಿಕೆಶಿ ಬ್ಲ್ಯಾಕ್ ಮೇಲ್ ಮಾಡಿದ್ದಾರೆ.ನಿನ್ನ ಹಾಗೂ ರಮೇಶ್ ಜಾರಕಿಹೊಳಿದು ಬಹಳಷ್ಟಾಗಿದೆ. ಎಸ್‌ಐಟಿ ಕ್ಯಾನ್ಸಲ್ ಮಾಡಿ ಮರು ತನಿಖೆಗೆ ಆದೇಶಿಸುವ ಬೆದರಿಕೆ ಹಾಕುತ್ತಿದ್ದಾರೆ ಎಂದು ಸ್ಪೋಟಕ ಹೇಳಿಕೆ ನೀಡಿದರು.

ಎಷ್ಟೇ ಸಿಡಿ ಬಂದರೂ ನಾನು ಹೆದರಲ್ಲ. ಮರು ತನಿಖೆ ಆದರೆ ಸಿಬಿಐನಿಂದ ಆಗಲಿ ಎಂದು ನಾನು ಕೋರ್ಟ್ ಮೊರೆ ಹೋಗುವೆ ಎಂದು ಅವರು ಡಿಕೆಶಿ ಮೇಲೆ ವಾಗ್ದಾಳಿ ನಡೆಸಿದರು.

ವಿನಾಕಾರಣ ನನ್ನ ಮೇಲೆ ಡಿಕೆಶಿ ಹಗೆತನ ಸಾಧಿಸುತ್ತಿದ್ದಾರೆ. ಹೆಚ್‌ಡಿಕೆ ಜತೆಗೆ ಆಪ್ತನಾಗುತ್ತಿರುವುದಕ್ಕೆ ಡಿಕೆಶಿ ನನ್ನ ವಿರುದ್ಧ ಹುನ್ನಾರ ಮಾಡುತ್ತಿದ್ದಾರೆ. ಒಂದೇ ರಾತ್ರಿಯಲ್ಲಿ ಬೆಳವಣಿಗೆ ಆಗಿ ಸರಕಾರ ಪತನವಾಗಲಿದೆ ಎಂದರು.

ರಮೇಶ್ ಜಾರಕಿಹೊಳಿ ಹೇಳಿಕೆ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸುತ್ತಿದ್ದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್, ರಾಜ್ಯದ ಜನ ಚುನಾವಣೆಯಲ್ಲಿ ಏನು ತೀರ್ಪು ನೀಡಬೇಕೋ ನೀಡಿದ್ದಾರೆ. ನಮಗೆ ಮಾಡಲು ಅನೇಕ ಕೆಲಸಗಳಿವೆ. ಆ ಕೆಲಸ ಮಾಡುತ್ತಿದ್ದೇವೆ ಎಂದಷ್ಟೇ ತಿಳಿಸಿದರು. ಹೆಚ್ಚಿನ ಪ್ರತಿಕ್ರಿಯೆ ನೀಡಲು ಆಸಕ್ತಿ ತೋರಲಿಲ್ಲ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
BelagavicmcongressdkshivakumarkarnatakaMaharashtramlaShivasenaSiddaramaiah
2 FacebookTwitterPinterestEmail
cklbkrish

previous post
ಮೇಕೆದಾಟು ವಿಚಾರದಲ್ಲಿ ತಪ್ಪು ಮಾಹಿತಿ ನಿಲ್ಲಿಸಿ: ಸಿಎಂಗೆ ಜಲಶಕ್ತಿ ಸಚಿವ ತಾಕೀತು
next post
ಕಲ್ಲಿದ್ದಲು  ಅಭಾವದಿಂದ ಕಗ್ಗತ್ತಲಿನತ್ತ ಕರ್ನಾಟಕ

You may also like

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

July 11, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (521)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,015)
  • ರಾಜ್ಯ (2,329)
  • ರಾಷ್ಟ್ರ (2,294)
  • ವಿಶ್ಲೇಷಣೆ (198)
  • ಶಿಕ್ಷಣ (401)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

    July 20, 2026

KMS Special

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

    July 18, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ