Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಕಾಂಗ್ರೆಸ್ ಹೊಟ್ಟೆ ತುಂಬಿಸುತ್ತದೆ, ಬಿಜೆಪಿ ಭಾವನೆ ಕೆರಳಿಸುತ್ತದೆ

by cklbkrish October 31, 2023
written by cklbkrish October 31, 2023 0 comments 1 minutes read
ಬೆಂಗಳೂರು: ಮಹಾರಾಷ್ಟ್ರ ಮಾದರಿಯಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸಹೋದರ ಮಾಜಿ ಸಚಿವ ಮತ್ತು ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಇಂದಿಲ್ಲಿ ಬಾಂಬ್ ಸಿಡಿಸಿದ್ದಾರೆ. ಕರ್ನಾಟಕದ ಏಕನಾಥ್ಸಿಂಧೆ ಯಾರು ಎಂದು ಬಹಿರಂಗಪಡಿಸದಿದ್ದರೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾಜಿ ಆಗುವುದಾಗಿ ಭವಿಷ್ಯ ನುಡಿದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹಾಗೂ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಔತಣಕೂಟದ ಸಭೆಗಳನ್ನು ನಡೆಸಿದ ಬೆನ್ನಲ್ಲೇ ರಮೇಶ್ ಇಂತಹ ಹೇಳಿಕೆ ನೀಡಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ. ತುರ್ತು ಪತ್ರಿಕಾಗೋಷ್ಠಿ ನಡೆಸಿ ಸರ್ಕಾರ ಪತನದ ಮಾಹಿತಿ ನೀಡಿದ್ದಲ್ಲದೆ, ನ್ಯಾವ್ಯಾರೂ ಈ ಸರ್ಕಾರವನ್ನು ಬೀಳಿಸುತ್ತಿಲ್ಲ. ಮಹಾರಾಷ್ಟ್ರದಲ್ಲಿ ಆದಂತೆ ಇಲ್ಲಿಯೂ ಆಗುತ್ತದೆ. ಬಿಜೆಪಿ ಆಪರೇಷನ್ ಕಮಲದಿಂದ ಕುಮಾರಸ್ವಾಮಿ ನೇತೃತ್ವದ ಜೆಡಿಎಸ್-ಕಾಂಗ್ರೆಸ್ ಸರ್ಕಾರ ಪತನವಾಗಲಿಲ್ಲ. ಶಿವಕುಮಾರ್ ಅವರ ದುರಂಹಕಾರದ ವರ್ತನೆ ಪ್ರತಿಭಟಿಸಿ ಹೊರಬಂದ ಕಾರಣ ಅಂದು ಸರ್ಕಾರ ಪತನಗೊಂಡಿತು. ಬೆಳಗಾವಿ ರಾಜಕೀಯವೇ ಸರ್ಕಾರಕ್ಕೆ ಕಂಟಕ ಬೆಳಗಾವಿ ರಾಜಕೀಯವೇ ಇಂದಿನ ಸರ್ಕಾರದ ಪತನಕ್ಕೂ ಮೂಲ ಕಾರಣವಾಗುತ್ತದೆ ಎಂದ ರಮೇಶ್, ಯಾವಾಗ, ಏನಾಗಲಿದೆ ಎಂಬುದನ್ನು ಮಾತ್ರ ಬಹಿರಂಗಪಡಿಸಲಿಲ್ಲ. ಕುಮಾರಸ್ವಾಮಿ ಅವರ ಆತ್ಮೀಯನಾಗಿರುವುದಕ್ಕೆ ಡಿಕೆಶಿ ನನ್ನ ವಿರುದ್ಧ ಹುನ್ನಾರ ನಡೆಸುತ್ತಿದ್ದಾರೆ. ನಿತ್ಯ ಡಿಕೆಶಿ ನಾಟಕ ಮಂಡಳಿ ಆಪರೇಷನ್ ಕಮಲ ಮಾಡುತ್ತಿರುವ ಬಗ್ಗೆ ಮಾತನಾಡುತ್ತಿದೆ. ಮೈತ್ರಿ ಸರಕಾರ ಬಿದ್ದಾಗ ಬಿಜೆಪಿಯೇನೂ ನಮ್ಮನ್ನು ಆಪರೇಷನ್ ಮಾಡಿರಲಿಲ್ಲ. ನಾವೇ ಮೈತ್ರಿ ಸರಕಾರ ತೆಗೆದು ಬಿಜೆಪಿಗೆ ಸೇರಿದೆವು. ಈಗ ಬಿಜೆಪಿ ಹೆಸರು ಕೆಡಿಸಲು ಡಿಕೆಶಿ ನಾಟಕ ಮಂಡಳಿ ಹೆಣಗಾಡುತ್ತಿದೆ. ಬಿಜೆಪಿ ಹೆಸರು ಕೆಡಿಸಲು ಡಿಕೆಶಿ ನಾಟಕ ಮಂಡಳಿ ನಿರಂತರವಾಗಿ ಕೆಲಸ ಮಾಡುತ್ತಿದೆ ಎಂದು ಅವರು ದೂರಿದರು. ಸುಳ್ಳು ಗ್ಯಾರಂಟಿ ನೀಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಎಲ್ಲ ರಂಗದಲ್ಲೂ ಫೇಲ್ ಆಗಿದೆ. ಸರಕಾರ ಪತನ ಆಗುವುದು ಬೇಡ, ಮುಂದುವರೆಯಲಿ. ಕಾಂಗ್ರೆಸ್ ಶಾಸಕರೇ ಸರಕಾರದ ವಿರುದ್ಧ ಮಾತನಾಡುತ್ತಿದ್ದಾರೆ. ಡಿಕೆಶಿ ಇರುವ ಸರಕಾರ ಯಾವಾಗಲೂ ಡೇಂಜರ್. ಡಿಕೆಶಿ ಅಧಿಕಾರ ಇದ್ದಾಗ ಒಂದು ರೀತಿ ಇರುತ್ತಾರೆ, ಪ್ರತಿಪಕ್ಷದಲ್ಲಿದ್ದಾಗ ಇನ್ನೊಂದು ರೀತಿ ಇರುತ್ತಾರೆ. ಡಿಕೆಶಿಯೇ ಸಿಡಿ ಮಾಸ್ಟರ್, ಅದೇ ಅವರ ಶಕ್ತಿ. ಸಿಡಿ ಇಟ್ಟುಕೊಂಡೇ ರಾಜಕಾರಣ ಮಾಡುತ್ತಾರೆ ಎಂದು ಆರೋಪಿಸಿದರು. ಸಿಡಿ ಇಟ್ಟುಕೊಂಡು ನೆಲಮಂಗಲ ಮಾಜಿ ಶಾಸಕ ನಾಗರಾಜ್ಗೆ ಡಿಕೆಶಿ ಬ್ಲ್ಯಾಕ್ ಮೇಲ್ ಮಾಡಿದ್ದಾರೆ.ನಿನ್ನ ಹಾಗೂ ರಮೇಶ್ ಜಾರಕಿಹೊಳಿದು ಬಹಳಷ್ಟಾಗಿದೆ. ಎಸ್ಐಟಿ ಕ್ಯಾನ್ಸಲ್ ಮಾಡಿ ಮರು ತನಿಖೆಗೆ ಆದೇಶಿಸುವ ಬೆದರಿಕೆ ಹಾಕುತ್ತಿದ್ದಾರೆ ಎಂದು ಸ್ಪೋಟಕ ಹೇಳಿಕೆ ನೀಡಿದರು. ಎಷ್ಟೇ ಸಿಡಿ ಬಂದರೂ ನಾನು ಹೆದರಲ್ಲ. ಮರು ತನಿಖೆ ಆದರೆ ಸಿಬಿಐನಿಂದ ಆಗಲಿ ಎಂದು ನಾನು ಕೋರ್ಟ್ ಮೊರೆ ಹೋಗುವೆ ಎಂದು ಅವರು ಡಿಕೆಶಿ ಮೇಲೆ ವಾಗ್ದಾಳಿ ನಡೆಸಿದರು. ವಿನಾಕಾರಣ ನನ್ನ ಮೇಲೆ ಡಿಕೆಶಿ ಹಗೆತನ ಸಾಧಿಸುತ್ತಿದ್ದಾರೆ. ಹೆಚ್ಡಿಕೆ ಜತೆಗೆ ಆಪ್ತನಾಗುತ್ತಿರುವುದಕ್ಕೆ ಡಿಕೆಶಿ ನನ್ನ ವಿರುದ್ಧ ಹುನ್ನಾರ ಮಾಡುತ್ತಿದ್ದಾರೆ. ಒಂದೇ ರಾತ್ರಿಯಲ್ಲಿ ಬೆಳವಣಿಗೆ ಆಗಿ ಸರಕಾರ ಪತನವಾಗಲಿದೆ ಎಂದರು. ರಮೇಶ್ ಜಾರಕಿಹೊಳಿ ಹೇಳಿಕೆ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸುತ್ತಿದ್ದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್, ರಾಜ್ಯದ ಜನ ಚುನಾವಣೆಯಲ್ಲಿ ಏನು ತೀರ್ಪು ನೀಡಬೇಕೋ ನೀಡಿದ್ದಾರೆ. ನಮಗೆ ಮಾಡಲು ಅನೇಕ ಕೆಲಸಗಳಿವೆ. ಆ ಕೆಲಸ ಮಾಡುತ್ತಿದ್ದೇವೆ ಎಂದಷ್ಟೇ ತಿಳಿಸಿದರು. ಹೆಚ್ಚಿನ ಪ್ರತಿಕ್ರಿಯೆ ನೀಡಲು ಆಸಕ್ತಿ ತೋರಲಿಲ್ಲ.
2FacebookTwitterPinterestEmail
115

ಡಿಸಿಎಂ ಡಿ.ಕೆ.ಶಿವಕುಮಾರ್ ಕಟು ಟೀಕೆ

ಬೆಂಗಳೂರು:“ಕಾಂಗ್ರೆಸ್ ಬದುಕಿನ ಆಧಾರದ ಮೇಲೆ ರಾಜಕೀಯ ಮಾಡಿದರೆ, ಬಿಜೆಪಿ ಭಾವನೆಗಳ ಮೇಲೆ ಮಾಡುತ್ತದೆ. ಇಂದಿರಾ ಗಾಂಧಿ ಅವರು ಜನರ ಬದುಕಿಗೆ ನೆರವಾಗುವ ಯೋಜನೆಗಳನ್ನು ನೀಡಿದ ಮಹಾನ್ ಶಕ್ತಿ” ಎಂದು ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಇಂದಿರಾ ಗಾಂಧಿ ಅವರ 39 ನೇ ವರ್ಷದ ಪುಣ್ಯಸ್ಮರಣೆ ಮತ್ತು ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಸಮಾಜ ಒಡೆಯುವ ಯೋಜನೆಗಳನ್ನು ಕೊಟ್ಟಿದ್ದಾರೆ ಎಂದರು.

 ತಮ್ಮ ಸ್ವಂತ ಹಣದಿಂದ ದೇಶಕ್ಕೆ 60/40 ಅಳತೆಯ ಒಂದೇ ಒಂದು ನಿವೇಶನವನ್ನೂ ನೀಡಿಲ್ಲ. ನೆಹರು ಅವರು ತಮ್ಮ ಮುಕ್ಕಾಲು ಪಾಲು ಆಸ್ತಿಯನ್ನೇ ಈ ದೇಶಕ್ಕೆ ಬರೆದರು. ಈಗ ರಾಹುಲ್ ಗಾಂಧಿ ಅವರ ಬಳಿ ಏನೂ ಇಲ್ಲ. ಇಂದಿರಾ ಗಾಂಧಿ, ರಾಜೀವ್ ಗಾಂಧಿ ಅವರು ಆಸ್ತಿಯ ಜೊತೆಗೆ ಪ್ರಾಣತ್ಯಾಗವನ್ನು ಮಾಡಿದ್ದಾರೆ. ಬಿಜೆಪಿಯವರು ಒಬ್ಬರಾದರೂ ಇಂತಹ ಕೆಲಸ ಮಾಡಿದ್ದಾರೆಯೇ?  ಎಂದು ಪ್ರಶ್ನಿಸಿದರು.

ಕಬ್ಬಿಣದಿಂದ ಸೂಜಿ ಮತ್ತು ಕತ್ತರಿ ಎರಡನ್ನೂ ತಯಾರಿಸಬಹುದು. ಸೂಜಿಯಿಂದ ಕೂಡಿಸಿ ಹೊಲಿಯಬಹುದು, ಕತ್ತರಿಯಿಂದ ಕತ್ತರಿಸಬಹುದು. ನಾವು ಸಮಾಜದ ಎಲ್ಲಾ ವರ್ಗದವರನ್ನು ಕೂಡಿಸಿ ಹೊಲಿಯುತ್ತೇವೆ, ಬಿಜೆಪಿಯವರು ಕತ್ತರಿಸುತ್ತಾರೆ.

ಬಿಜೆಪಿಯವರದ್ದು ತಲೆಬುಡವಿಲ್ಲದ ಕಾನೂನುಗಳು, ನಾವು ಬೆಂಗಳೂರಿನಲ್ಲಿ ʼಇಂಡಿಯಾʼಎಂದು ಹೆಸರಿಟ್ಟ ತಕ್ಷಣ ಇಂಡಿಯಾ ಎನ್ನುವ ಹೆಸರನ್ನೇ ಬದಲಾಯಿಸಲು ಹೊರಟಿದ್ದಾರೆ. ಇಂಡಿಯನ್ ಅಡ್ಮಿನಿಸ್ಟ್ರೇಷನ್ ಸರ್ವೀಸ್ ಸೇರಿದಂತೆ ನೋಟಿನಲ್ಲಿಯೂ ಹೆಸರು ಬದಲಾಯಿಸಲು ಬಿಜೆಪಿ ಹೊರಟಿರುವುದು ಹಾಸ್ಯಾಸ್ಪದ.

ಮೇಕ್ ಇನ್ ಇಂಡಿಯಾ ಎಂದು ಹೆಸರಿಟ್ಟಿದ್ದೇ ಅವರು, ಅದರ ಗುರುತು ಸಿಂಹವನ್ನು ಮುಖ್ಯಮಂತ್ರಿ ಮನೆಯ ಎದುರೇ ನಿಲ್ಲಿಸಲಾಗಿದೆ. ಅವರು ಮಾಡಿದ ಯೋಜನೆಯ ಹೆಸರನ್ನೇ ಬದಲಾಯಿಸಲು ಹೊರಟಿದ್ದಾರೆ.

 ಇಂಡಿಯಾ ಎನ್ನುವ ಹೆಸರು ಭಾವನಾತ್ಮಕವಾಗಿ ನಮ್ಮೊಳಗೆ ಹಾಸುಹೊಕ್ಕಾಗಿದೆ. ಈ ರೀತಿ ಭಾವನೆ ಕೆರಳಿಸುವ ಕೆಲಸಕ್ಕೆ ಬಿಜೆಪಿಯವರು ಕೈ ಹಾಕಿದ್ದಾರೆ, ನಾವು ಜನರ ಹೊಟ್ಟೆ ತುಂಬಿಸುವ ಕೆಲಸಕ್ಕೆ ಕೈ ಹಾಕೋಣ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bengalurudk shivakumarindiragandhikarnatakakmskmskannadakpcc
2 FacebookTwitterPinterestEmail
cklbkrish

previous post
ಬರಗಾಲ ಸರಿಯಾಗಿ ನಿರ್ವಹಿಸಿ. ಅಧಿಕಾರಿಗಳ ಬೇಜವಾಬ್ದಾರಿಯನ್ನು ಸರ್ಕಾರ ಸುತಾರಾಂ ಸಹಿಸಲ್ಲ: ಮುಖ್ಯಮಂತ್ರಿ ಎಚ್ಚರಿಕೆ
next post
ನ.2ರಂದು ಮತದಾರರ ವಿಶೇಷ ನೋಂದಣಿ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ