Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರಶಿಕ್ಷಣ

ಸರ್ಕಾರಿ ಶಾಲೆಗಳಿಗೆ ಉಚಿತ ನೀರು ಮತ್ತು ವಿದ್ಯುತ್ ಘೋಷಣೆ

ರಾಜ್ಯ ಸರ್ಕಾರದ ಮತ್ತೊಂದು ಗ್ಯಾರಂಟಿ

by cklbkrish November 1, 2023
written by cklbkrish November 1, 2023 0 comments 2 minutes read
4FacebookTwitterPinterestEmail
350

ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಉಚಿತ ನೀರು ಮತ್ತು ವಿದ್ಯುತ್ ನೀಡಲಾಗುವುದು ಎಂದು ಘೋಷಣೆ ಮಾಡುವ ಮೂಲಕ ಸರ್ಕಾರ ಮತ್ತೊಂದು ಗ್ಯಾರಂಟಿ ಜಾರಿಗೊಳಿಸಿದೆ.

ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 68 ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕನ್ನಡ ಧ್ವಜಾರೋಹಣ ನೆರವೇರಿಸಿ  ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ವಿಷಯ ಪ್ರಕಟಿಸಿದರು.

ಗುಣಮಟ್ಟದ ಶಿಕ್ಷಣ ಮತ್ತು ಉತ್ತಮ ಕಲಿಕಾ ವಾತಾವರಣ ಹಾಗೂ ಶಾಲೆಗಳ ಗುಣಮಟ್ಟ ಹೆಚ್ಚಿಸಿ ಅಗತ್ಯವಿರುವ ಎಲ್ಲಾ ಸವಲತ್ತುಗಳನ್ನು ಒದಗಿಸುವುದು ನಮ್ಮ ಸರ್ಕಾರದ ಆದ್ಯತೆ ಎಂದರು.

ತಮ್ಮ ಮಕ್ಕಳನ್ನು ಅವರ ಇಷ್ಟದ ಭಾಷೆಯಲ್ಲಿ ಕಲಿಸುವುದು ಪೋಷಕರ ನಿರ್ಧಾರಕ್ಕೆ ಬಿಟ್ಟ ವಿಷಯ ಎಂದು ಸುಪ್ರೀಂಕೋರ್ಟ್ ಹೇಳಿದೆ. ಆದರೆ, ಮಾತೃಭಾಷೆಯ ಮಾಧ್ಯಮದಲ್ಲೇ ಕಲಿಯುವುದು ಅತ್ಯಂತ ವೈಜ್ಞಾನಿಕ ಎನ್ನುವುದನ್ನು ಗ್ರಹಿಸಬೇಕು.

ಕನ್ನಡಿಗರನ್ನು ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿಶಾಲಿಗಳನ್ನಾಗಿ ಮಾಡುವ ಜತೆಗೆ ಶಿಕ್ಷಣದ ಗುಣಮಟ್ಟ ಹೆಚ್ಚಿಸುವ, ಕನ್ನಡ ಶಾಲೆಗಳ ಮೂಲಭೂತ ಸವಲತ್ತುಗಳನ್ನು ಹೆಚ್ಚಿಸಲು ನಮ್ಮ ಸರ್ಕಾರ ನಿರಂತರವಾಗಿ ಶ್ರಮಿಸುತ್ತಿದೆ ಎಂದು ಹೇಳಿದರು.

ದೇವರಾಜು ಅರಸು ಅವರು ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಹೆಸರಿಟ್ಟು 50 ವರ್ಷಗಳು ತುಂಬಿವೆ. ಈ ದಿನ ನಾವು ಒಂದು ಪ್ರತಿಜ್ಞೆ ಮಾಡೋಣ.

ಕೇಂದ್ರಕ್ಕೆ ಒತ್ತಾಯಿಸಿ ಸಿಎಂ ಪತ್ರ

ಕೇಂದ್ರ ಸರ್ಕಾರ ನಡೆಸುವ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳನ್ನುಕೇವಲ ಹಿಂದಿ, ಇಂಗ್ಲೀಷ್ ನಲ್ಲಿ ನಡೆಸಿದರೆ ಒಪ್ಪಲು ಸಾಧ್ಯವಿಲ್ಲ. ಕನ್ನಡದಲ್ಲೂ ಪ್ರವೇಶ ಪರೀಕ್ಷೆ ನಡೆಸಲು ಈ ಹಿಂದೆಯೂ ಒತ್ತಾಯಿಸಿದ್ದೆ. ಅಗತ್ಯಬಿದ್ದರೆ ಮತ್ತೆ ಕೇಂದ್ರಕ್ಕೆ ಪತ್ರ ಬರೆದು ಒತ್ತಾಯಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಕನ್ನಡದಲ್ಲೇ ವ್ಯವಹರಿಸುವ ಪ್ರತಿಜ್ಞೆಯನ್ನು ನಾವು ಮಾಡುವ ಮೂಲಕ ನಮ್ಮ ತಾಯ್ನೆಲದ ಋಣ ತೀರಿಸುವ ಕೆಲಸ ಮಾಡೋಣ. ಇಲ್ಲಿ ವಾಸ ಮಾಡುವ ಪ್ರತಿಯೊಬ್ಬರೂ ಕನ್ನಡದ ವಾತಾವರಣವನ್ನು ಸೃಷ್ಟಿಸಬೇಕು, ಸಂಭ್ರಮಿಸಬೇಕು ಎಂದು ಕರೆ ನೀಡಿದರು.

ಕನ್ನಡ ನೆಲದಲ್ಲಿದ್ದೂ ಕನ್ನಡ ಮಾತನಾಡದವರು ಹಲವು ಭಾಗಗಳಲ್ಲಿ ಇದ್ದಾರೆ. ನಮ್ಮ ಆಡಳಿತ ಭಾಷೆ ಕನ್ನಡವಾಗಿದ್ದು, ನಾವು ಕನ್ನಡದಲ್ಲೇ ವ್ಯವಹರಿಸಬೇಕು. ಹಾಗೆಯೇ ಪ್ರತಿಯೊಬ್ಬರ, ಪ್ರತಿಯೊಂದು ಭಾಷೆಗೂ ನಾವು ಗೌರವ ಕೊಡಬೇಕು.

ಆದರೆ ನಮ್ಮ ನಾಡಿನಲ್ಲಿ ವ್ಯವಹರಿಸುವಾಗ, ಆಡಳಿತದಲ್ಲಿ ಕನ್ನಡ ಬಳಕೆ ಆಗಬೇಕು. ಇದನ್ನು ಪ್ರತಿಯೊಬ್ಬ ಅಧಿಕಾರಿಯೂ ಚಾಚೂ ತಪ್ಪದೆ ಪಾಲಿಸಬೇಕು ಎಂದು ಸೂಚಿಸಿದರು.

ಕೇಂದ್ರ ಸರ್ಕಾರ ಕರ್ನಾಟಕದಲ್ಲಿ ಇಂಗ್ಲಿಷ್, ಹಿಂದಿಯಲ್ಲಿ ಮಾತ್ರ ಸ್ಪರ್ಧಾತ್ಮಕ ಪರೀಕ್ಷೆ ನಡೆಸುವುದನ್ನು ಒಪ್ಪಲು ಸಾಧ್ಯವಿಲ್ಲ. ಕನ್ನಡದಲ್ಲೂ ಪ್ರವೇಶ ಪರೀಕ್ಷೆ ನಡೆಸಲು ಈ ಹಿಂದೆಯೂ ಒತ್ತಾಯಿಸಿದ್ದೆ. ಅಗತ್ಯಬಿದ್ದರೆ ಮತ್ತೆ ಕೇಂದ್ರಕ್ಕೆ ಪತ್ರ ಬರೆದು ಒತ್ತಾಯಿಸುತ್ತೇನೆ ಎಂದರು.

ಕನ್ನಡದಲ್ಲಿ ಕಲಿತರೆ ಉದ್ಯೋಗ ಸಿಗುವುದಿಲ್ಲ, ಜ್ಞಾನ ಸಂಪಾದನೆ ಸಾಧ್ಯವಿಲ್ಲ ಎನ್ನುವ ತಪ್ಪು ಕಲ್ಪನೆಯಿಂದ ಇಂಗ್ಲಿಷ್ ಕಾನ್ವೆಂಟ್ ವ್ಯಾಮೋಹ ಬೆಳೆಸಿಕೊಂಡಿದ್ದಾರೆ. ಇದು ಸರಿಯಲ್ಲ.

ಸಮಾಜದ ಎಲ್ಲಾ ಕ್ಷೇತ್ರಗಳಲ್ಲೂ ಕನ್ನಡ ಮಾಧ್ಯಮದಲ್ಲಿ ಕಲಿತವರು ಉನ್ನತ ಹುದ್ದೆಗಳಲ್ಲಿ ಇದ್ದಾರೆ. ಉನ್ನತ ಮಟ್ಟದ ಸಾಧನೆ ಮಾಡಿದ್ದಾರೆ ಎಂದು ಉದಾಹರಿಸಿದರು.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ, ಕನ್ನಡ.. ಕನ್ನಡಿಗ.. ಕರ್ನಾಟಕ… ಈ ಮೂರಕ್ಕೂ ನವೆಂಬರ್‌ ಒಂದಕ್ಕೂ ಬಿಡಿಸಲಾರದ ನಂಟು. ಆದರೆ ಕನ್ನಡದ ಅಭಿಮಾನ ಬರೀ ನವೆಂಬರ್ ಒಂದಕ್ಕೆ ಸೀಮಿತ ಆಗದಿರಲಿ. ಕನ್ನಡ ಹೃದಯದ ಭಾಷೆಯಾಗಲಿ. ಕನ್ನಡ ಮನಸ್ಸಿನ ಭಾಷೆಯಾಗಲಿ

ತಂದೆ-ತಾಯಿ ಸ್ಪರ್ಶಿಸಿದ ನೆಲವೇ ಸ್ವರ್ಗ ಎಂದು. ನಮಗೆ ಆ ಸ್ವರ್ಗ ಕರ್ನಾಟಕ. ನಮಗೆ ಸ್ವರ್ಗ ಕನ್ನಡ ಭೂಮಿ. ತುಂಗಾ, ಭದ್ರಾ, ಕೃಷ್ಣ, ಕಾವೇರಿ ಹರಿಯುವ ಈ ತಾಯಿ ನೆಲವೇ ನಮಗೆ ಸ್ವರ್ಗ.

ಕರ್ನಾಟಕ. ನಮಗೆ ಸ್ವರ್ಗ

ಈ ಪವಿತ್ರ ದಿನದಂದು ಕರ್ನಾಟಕದ ಏಕೀಕರಣಕ್ಕೆ ಹೋರಾಡಿದ ಲಕ್ಷಾಂತರ ಜನರನ್ನ ನಾವು ನೆನೆಯೋಣ. 2000 ವರ್ಷಗಳ ಇತಿಹಾಸ ಇರುವ ಕನ್ನಡ ಮರೆತರೆ ತಾಯಿಯನ್ನು ಮರೆತಂತೆ ಎಂದು ಕವಿವಾಣಿಯನ್ನು ಉಲ್ಲೇಖಿಸಿ ಹೇಳಿದರು.

 ನಾವು ಕೋಮು ದ್ವೇಷಕ್ಕೆ ಸಿಲುಕದೆ,  ಕರ್ನಾಟಕದ ಮನಸ್ಸುಗಳನ್ನು ಒಡೆಯದೇ ಯಾವ ಹೊರಗಿನ ಶಕ್ತಿಗೂ ಹೆದರದೆ ಒಂದಾಗಿ ಬದುಕುತ್ತೇವೆ. ಸರ್ವಜನಾಂಗದ ಶಾಂತಿಯ ತೋಟ ಮರಳಿ ನಿರ್ಮಿಸುತ್ತೇವೆ ಎಂಬ ದೀಕ್ಷೆ  ತೊಡೋಣ.

ಬಹಳಷ್ಟು ಮಂದಿಯ ತ್ಯಾಗ ಮತ್ತು ಬಲಿದಾನದ ಫಲವೇ ಅಖಂಡ ಕರ್ನಾಟಕ. ಇದನ್ನು ಜೋಪಾನವಾಗಿ ಕಾಪಾಡಬೇಕು. ಕರ್ನಾಟಕದ ಸ್ಫೂರ್ತಿ ನಿರಂತರವಾಗಿರಲಿ. ಸಮೃದ್ಧ ಹಾಗೂ ಸ್ವಾವಲಂಬಿ ಕರ್ನಾಟಕ ಮೈದಾಳಲಿ ಎಂದು ಹೇಳಿದರು.

ನಾವು ಹುಟ್ಟಿದ ನಂತರ ಮಾತು ಕಲಿಯಲು ಎರಡು ವರ್ಷ ಬೇಕು. ಆದರೆ ಯಾವುದನ್ನು ಆಡಬಾರದು ಎಂಬುದನ್ನು ಕಲಿಯಲು ಇಡೀ ಜೀವಮಾನ ಸಾಲದು.

ಬಸ್ ಗೆ ಬೆಂಕಿ ಹಚ್ಚುವುದರಲ್ಲಿ ಭಾಷೆ ಅಭಿಮಾನ ಇರುವುದಿಲ್ಲ. ರೈಲಿಗೆ ಬೆಂಕಿ ಹಚ್ಚುವುದರಲ್ಲಿ ರಾಜ್ಯದ ಅಭಿಮಾನ ಇರುವುದಿಲ್ಲ. ಈ ದೇಶದ ಎಲ್ಲರೂ ಒಂದೇ ತಾಯಿಯ ಮಕ್ಕಳು ಎಂಬುದನ್ನು ಅರಿಯಬೇಕು ಎಂದರು.

 ಪ್ರಾಥಮಿಕ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ, ಶಾಸಕ ರಿಜ್ಷಾನ್ ಹರ್ಷದ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bengaluruchief mister of karnatakaeducationfree powerfree watergovt schoolkarnatakakmskmskannadaSiddaramaiah
4 FacebookTwitterPinterestEmail
cklbkrish

previous post
ಕನ್ನಡ ರಾಜ್ಯೋತ್ಸವಕ್ಕೆ ಶುಭಾಶಯ ಕೋರಿದ ಪ್ರಧಾನಿ
next post
ಸರ್ಕಾರ ಪತನ ತಂತ್ರಕ್ಕೆ ಆಪರೇಷನ್ ಹಸ್ತಾ ಪ್ರತಿ ತಂತ್ರ

You may also like

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

ಮನರೇಗಾ ಮರುಸ್ಥಾಪನೆ ಹೋರಾಟ ಬೆಂಬಲಿಸಿ

February 23, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ...

March 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ