Thursday, April 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, April 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯಶಿಕ್ಷಣ

ಕನ್ನಡತ್ವ ಮತ್ತಷ್ಟು ಆಳವಾಗಿ ಬೇರೂರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ

by cklbkrish November 3, 2023
written by cklbkrish November 3, 2023 0 comments 1 minutes read
4FacebookTwitterPinterestEmail
54

ಹೋರಾಟ-ತ್ಯಾಗ-ಬಲಿದಾನಗಳಿಂದ ಕನ್ನಡ ನಾಡು ಉದಯವಾಗಿದೆ

ಗದಗ: ಹೋರಾಟ, ತ್ಯಾಗ-ಬಲಿದಾನಗಳಿಂದ ಕನ್ನಡ ನಾಡು ಉದಯವಾಗಿದೆ. ಈ ನಾಡಲ್ಲಿ ಕನ್ನಡತ್ವ ಮತ್ತಷ್ಟು ಆಳವಾಗಿ ಬೇರೂರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಗದಗದಲ್ಲಿ “ಕರ್ನಾಟಕ ಸಂಭ್ರಮ-50” ಅದ್ದೂರಿ ಕಾರ್ಯಕ್ರಮವನ್ನು ವೈಭವದ ವೇದಿಕೆಯಲ್ಲಿ ಉದ್ಘಾಟಿಸಿ ಮಾತನಾಡಿದ ಅವರು, ಕರ್ನಾಟಕ ನಾಮಕರಣವಾಗಲು ಶ್ರಮಿಸಿ ಹೋರಾಡಿದ ಕೆ.ಎಚ್.ಪಾಟೀಲ್ ಮತ್ತು ಎಲ್ಲಾ ಹೋರಾಟದ ಸಂಗಾತಿಗಳನ್ನು ನಾನು ಸ್ಮರಿಸುತ್ತೇನೆ. 

ಅವತ್ತು ಕೆ.ಹೆಚ್.ಪಾಟೀಲ್, ಇಂದು ಹೆಚ್.ಕೆ.ಪಾಟೀಲ್. ಅವತ್ತು ದೇವರಾಜ ಅರಸು ಕುಳಿತಿದ್ದ ಮುಖ್ಯಮಂತ್ರಿ ಕುರ್ಚಿಯಲ್ಲಿ ಇವತ್ತು ನಾನು ಕುಳಿತಿದ್ದೇನೆ. ಇದೇನು ಕಾಕತಾಳೀಯ ಅಲ್ಲ ಎಂದರು.

ಇಂಗ್ಲಿಷ್ ನಲ್ಲಿ ಶೇಕ್ಸ್ ಪಿಯರ್ ಸಾಹಿತ್ಯ ರಚಿಸುವುದಕ್ಕೂ 500 ವರ್ಷಗಳ ಮೊದಲೇ ಕನ್ನಡದಲ್ಲಿ ವಿಶ್ವ ಮಟ್ಟದ ಅತ್ಯುನ್ನತ ಸಾಹಿತ್ಯ ರಚನೆಯಾಗಿತ್ತು. ಪಂಪನಿಂದ ಹಿಡಿದು ವಚನಕಾರರನ್ನೂ ಸೇರಿಸಿ ಹಲವರು ಅತ್ಯುನ್ನತ ಸಾಹಿತ್ಯ ರಚಿಸಿದ್ದರು ಎಂದು ಕನ್ನಡ ಭಾಷಾ ಹಿರಿಮೆಯನ್ನು ಉದಾಹರಿಸಿದರು.

ಕನ್ನಡ ಕಲಿಯದೆಯೂ ಕರ್ನಾಟಕದಲ್ಲಿ ವ್ಯವಹರಿಸಬಹುದು ಎನ್ನುವ ವಾತಾವರಣ ಬದಲಾಗಬೇಕು. ಕನ್ನಡದ ಸಂಸ್ಕೃತಿ ಜತೆಗೆ ನಮ್ಮೆಲ್ಲರಲ್ಲಿ ಕನ್ನಡತನ ಬೇರೂರಬೇಕು. ಆಗ ಮಾತ್ರ ಕನ್ನಡದ ವಾತಾವರಣ ಇಡಿ ನಾಡಿನಲ್ಲಿ ಪಸರಿಸುತ್ತದೆ.

ಕನ್ನಡ ಸಂಸ್ಕೃತಿ ಎಂದಾಗ ಬಸವಾದಿ ಶರಣರ ಕಾಯಕ ಸಂಸ್ಕೃತಿಯೂ ಸೇರಿದೆ. ಬಸವಣ್ಣನವರ ಆಶಯದಂತೆ ವರ್ಗರಹಿತ, ಜಾತಿರಹಿತ ಸಮಾಜದ ನಿರ್ಮಾಣ ಮತ್ತು ಈ ಸಮಾಜದ ಅಭಿವೃದ್ಧಿ ನಮ್ಮ ಗುರಿಯಾಗಿದೆ. ಆ ಕಾರಣಕ್ಕೇ ಸರ್ವ ಜಾತಿ-ಧರ್ಮದವರ ಬದುಕನ್ನು ಎತ್ತರಿಸುವ ಗ್ಯಾರಂಟಿ ಕಾರ್ಯಕ್ರಮಗಳನ್ನು ನಾವು ನೀಡಿದ್ದೇವೆ ಎಂದು ಸಮರ್ಥಿಸಿದರು.

ಹಿಂದೆ ಕೆ.ಹೆಚ್.ಪಾಟೀಲರು ಇಡೀ ಜಿಲ್ಲೆಗೆ ಕುಡಿಯುವ ನೀರು ಕೊಟ್ಟರು. ಅವರ ಪುತ್ರ ಹೆಚ್.ಕೆ.ಪಾಟೀಲರೂ ಇಡೀ ರಾಜ್ಯಕ್ಕೆ ಉತ್ತಮ ಕಾರ್ಯಕ್ರಮಗಳನ್ನು ನೀಡಿದ್ದಾರೆ. ಹೀಗಾಗಿ ನಾಮಪತ್ರ ಸಲ್ಲಿಸಿದರೆ ಸಾಕು , ನೀವೆಲ್ಲಾ ಹೆಚ್.ಕೆ.ಪಾಟೀಲರನ್ನು ಗೆಲ್ಲಿಸಬೇಕು. ಇಡೀ ರಾಜ್ಯಕ್ಕೆ ಅಷ್ಟೊಂದು ಕೆಲಸ ಮಾಡಿರುವ ಹೆಚ್.ಕೆ.ಪಾಟೀಲರು ಮತ ಕೇಳಬಾರದು. ನೀವೆಲ್ಲಾ ಅವರನ್ನೂ ಹಾಗೇ ಗೆಲ್ಲಿಸಬೇಕು ಎಂದು ಕರೆ ನೀಡಿದರು.

ಅವಳಿ ನಗರಕ್ಕೆ 61 ಕೋಟಿ ಕೊಟ್ಟಿದ್ದೇವೆ

ಗದಗ-ಬೆಟಗೇರಿ ಅವಳಿ ನಗರದ ಕುಡಿಯುವ ನೀರಿನ ವ್ಯವಸ್ಥೆಯನ್ನು ಇನ್ನಷ್ಟು ಸಮರ್ಪಕಗೊಳಿಸಲು ಈಗಾಗಲೇ 61 ಕೋಟಿ ನೀಡಿದ್ದೇವೆ. ಅಗತ್ಯಬಿದ್ದರೆ ಮತ್ತಷ್ಟು ಹಣ ಕೊಡಲು ನಮ್ಮ ಸರ್ಕಾರ ಸಿದ್ದವಿದೆ ಎಂದು ಭರವಸೆ ನೀಡಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
gadagkannadakmskannadaSiddaramaiah
4 FacebookTwitterPinterestEmail
cklbkrish

previous post
ಸಿದ್ದರಾಮಯ್ಯ ಬಳಿಕ ಪರಮೇಶ್ವರ್‍ ಮುಖ್ಯಮಂತ್ರಿಯಂತೆ
next post
ಇತಿಹಾಸ ಮರೆತವನು, ಇತಿಹಾಸ ಸೃಷ್ಟಿಸಲಾರ: ಡಿ.ಕೆ.ಶಿವಕುಮಾರ್

You may also like

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026

ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

April 21, 2026

ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

April 20, 2026

ಬದಲಾಗದ ಮಹಿಳಾ ವಿರೋಧಿ ಕಾಂಗ್ರೆಸ್ ಮನಸ್ಥಿತಿ

April 18, 2026

ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ

April 17, 2026

ಪಕ್ಷ ವಿರೋಧಿ ಚಟುವಟಿಕೆ: ಸಚಿವ ಜಮೀರ್‌ಗೆ ಕಂಟಕ

April 16, 2026

ಪ್ರಧಾನಿ ಮೋದಿಗೆ ರಾಜ್ಯದ 18 ಬೇಡಿಕೆಗಳ ಪಟ್ಟಿ

April 15, 2026

ಶಾಸಕರ ಜೊತೆ ಪ್ರತ್ಯೇಕ ಸಭೆಗೆ ಶಿವಕುಮಾರ್ ಸಮರ್ಥನೆ

April 14, 2026

ಸಂಪುಟ ಪುನರ್ ರಚನೆಗೆ ಅವಕಾಶ ಕೊಡಬೇಡಿ

April 13, 2026

ಅಧಿಕಾರ ಹಸ್ತಾಂತರ ನಿರೀಕ್ಷೆಯಲ್ಲಿ ಡಿ.ಕೆ.ಶಿವಕುಮಾರ್

April 11, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (443)
  • ಅಂಕಣ (109)
  • ಉದ್ಯೋಗ (326)
  • ದಿನ ಭವಿಷ್ಯ (110)
  • ರಾಜಕೀಯ (1,937)
  • ರಾಜ್ಯ (2,252)
  • ರಾಷ್ಟ್ರ (2,222)
  • ವಿಶ್ಲೇಷಣೆ (189)
  • ಶಿಕ್ಷಣ (393)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026

KMS Special

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ