Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಕೊಡಗಿನಲ್ಲಿ ಕೃಷಿ ಪ್ರದೇಶ ವಿಸ್ತರಣೆಗೆ ಆದ್ಯತೆ

by cklbkrish November 3, 2023
written by cklbkrish November 3, 2023 0 comments 1 minutes read
ಬೆಂಗಳೂರು: ವಿವಿಧ ಬೆಳೆಗಳ ಹೊಸ ತಳಿಗಳ ತ್ವರಿತ ಬೀಜ ವಿತರಣೆ ವಿಷಯಗಳ ಕುರಿತು ಇಂದು ಕರ್ನಾಟಕ ರಾಜ್ಯ ಬೀಜ ನಿಗಮ ಮತ್ತು ಹೈದರಾಬಾದಿನ ಅಂತರಾಷ್ಟ್ರೀಯ ಬೆಳೆ ಸಂಶೋಧನಾ ಸಂಸ್ಥೆ ಮಹತ್ವದ ಒಡಂಬಡಿಕೆಗೆ ಸಹಿ ಮಾಡಿವೆ. ಕೃಷಿ ಸಚಿವ ಚೆಲುವರಾಯಸ್ವಾಮಿಯವರ ಸಮ್ಮುಖದಲ್ಲಿ ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರಾದ ಹೆಚ್.ಎಸ್.ದೇವರಾಜ ಮತ್ತು ಹೈದರಾಬಾದ್ ನ ಐಸಿಆರ್ ಐಎಸ್ಎಟಿ ಉಪ ಮಹಾ ನಿರ್ದೇಶಕರಾದ ಡಾ. ಅರವಿಂದ ಕುಮಾರ್ಅವರು ಈ ಒಡಂಬಡಿಕೆಗೆ ಸಹಿ ಹಾಕಿದರು. ಕರ್ನಾಟಕ ರಾಜ್ಯ ಬೀಜ ನಿಗಮವು ರಾಜ್ಯ ಸರ್ಕಾರದ ಅಂಗ ಸಂಸ್ಥೆಯಾಗಿದ್ದು, ರೈತರಿಗೆ ಗುಣಮಟ್ಟದ ಬೀಜ ಪೂರೈಕೆ ಮಾಡುವಲ್ಲಿ ರಾಜ್ಯದಲ್ಲಿ ಮುಂಚೂಣಿ ಸ್ಥಾನದಲ್ಲಿದೆ. ವರ್ಷಕ್ಕೆ ಸರಾಸರಿ ಮೂರುವರೆ ಲಕ್ಷ ಕ್ವಿಂಟಲ್ ಬೀಜ ಸರಬರಾಜು ಮಾಡುತ್ತಿದ್ದು, ಉತ್ತಮ ಗುಣಮಟ್ಟದ ಬೀಜ ಪೂರೈಕೆ ಸೌಲಭ್ಯಗಳನ್ನು ಹೊಂದಿದೆ. ಒಂದು ಅಂತರಾಷ್ಟ್ರೀಯ ಬೆಳೆ ತಳಿ ಸಂಶೋಧನಾ ಕೇಂದ್ರವಾಗಿದ್ದು ಹೊಸ ತಂತ್ರಜ್ಞಾನದ ಮೂಲಕ ಅರೆ ಶುಷ್ಕ ವಾತಾವರಣಕ್ಕೆ ಹೊಂದಿಕೊಳ್ಳುವ ಹೊಸ ತಳಿಗಳನ್ನು ಅಭಿವೃದ್ಧಿಪಡಿಸಿ ರೈತರಿಗೆ ಪರಿಚಯಿಸುತ್ತಿದೆ. ಈಗಾಗಲೇ ಈ ಸಂಸ್ಥೆಯು ಅಭಿವೃದ್ಧಿಪಡಿಸಿದ ಶೇಂಗಾ, ತೊಗರಿ, ಜೋಳ, ಕಡಲೆ ಮತ್ತು ಸಜ್ಜೆ ತಳಿಗಳು ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಪ್ರಚಲಿತದಲ್ಲಿವೆ. ಈ ಒಡಂಬಡಿಕೆಯಿಂದ ಕರ್ನಾಟಕ ರಾಜ್ಯ ಬೀಜ ನಿಗಮಕ್ಕೆ ಹೊಸ ತಳಿಗಳು ಲಭ್ಯವಾಗಲಿದ್ದು ಸಂಸ್ಥೆಯ ಉತ್ಪನ್ನಗಳ ಪಟ್ಟಿ ಬಲಿಷ್ಠವಾಗುತ್ತದೆ. ಇದರಿಂದ ರೈತರಿಗೆ ತೊಗರಿ, ಕಡಲೆ, ಜೋಳ, ಸಜ್ಜೆ, ಮತ್ತು ಸಿರಿಧಾನ್ಯಗಳಲ್ಲಿ ಹೊಸ ಶಕ್ತಿ ವರ್ಧಕ ತಳಿಗಳನ್ನು ಪರಿಚಯಿಸಲು ಅನುಕೂಲವಾಗುತ್ತದೆ. ಈ ಹೊಸ ತಳಿಗಳನ್ನು ಕೆ.ಎಸ್.ಎಸ್.ಸಿ ಯ ತಳಿ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರ ಧಾರವಾಡದಲ್ಲಿ ಹಾಗೂ ಕೃಷಿ ವಿಶ್ವವಿದ್ಯಾಲಯಗಳ ಸಹಯೋಗದಲ್ಲಿ ಮೌಲ್ಯವೀಕರಣ ಮಾಡಿ ವಿವಿಧ ಬೆಳೆಗಳಲ್ಲಿ ಹೊಸ ತಳಿ ಬಿಡುಗಡೆ ಮಾಡಲು ಸಹಾಯವಾಗುತ್ತದೆ. ಒಟ್ಟಾರೆ ಮೂರು ವರ್ಷಗಳ ಒಡಂಬಡಿಕೆಯ ಅವಧಿಯಲ್ಲಿ, ಬರ ಮತ್ತು ರೋಗ ನಿರೋಧಕ ತಳಿಗಳನ್ನು ರಾಜ್ಯದ ರೈತರಿಗೆ ತ್ವರಿತವಾಗಿ ತಲುಪಿಸಲು ಉಪಯೋಗವಾಗುತ್ತದೆ. ಹಾಗೂ ಈ ಬೆಳೆಗಳಲ್ಲಿ ರಾಜ್ಯದ ಸರಾಸರಿ ಉತ್ಪಾದಕತೆಯನ್ನು ಹೆಚ್ಚಿಸಲು ಅನುಕೂಲವಾಗುತ್ತದೆ.
2FacebookTwitterPinterestEmail
84

ಮಡಿಕೇರಿ: ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ಅವರು ಮಡಿಕೇರಿಯ ಕೊಡಗು  ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ  ಕೃಷಿ ಇಲಾಖೆ ಯೋಜನೆಗಳ ‌ಅನುಷ್ಠಾನದ ಪ್ರಗತಿ ಪರಿಶೀಲನೆ‌ ಸಭೆ  ನಡೆಸಿದರು.

ನಿಗದಿತ  ಕಾಲ ಮಿತಿಯಲ್ಲಿ ಆರ್ಥಿಕ ಹಾಗೂ ಭೌತಿಕ ‌ಗುರಿ ಸಾಧನೆ ಮಾಡುವಂತೆ ಸಚಿವರು ಅಧಿಕಾರಿಗಳಿಗೆ ‌ನಿರ್ದೇಶನ‌ ನೀಡಿದರು. ಕೊಡಗು ಜಿಲ್ಲೆಯಲ್ಲಿ  ತೋಟಗಾರಿಕೆ ಬೆಳೆಪ್ರದೇಶ ಹೆಚ್ಚಾಗಿದ್ದರೂ ಮುಂದಿನ‌ ದಿನಗಳಲ್ಲಿ ಕೃಷಿ ಪ್ರದೇಶ ವಿಸ್ತರಣೆಗೂ ಆದ್ಯತೆ ನೀಡುವಂತೆ ಸೂಚಿಸಿದರು.

ರಸಗೊಬ್ಬರ ಪೂರೈಕೆಯಲ್ಲಿ ಯಾವುದೇ ಕೊರತೆಯಾಗದಂತೆ ನಿಗಾವಹಿಸಿ, ಕೆ.ವೈ ಸಿ ನೊಂದಣೆ ಶೇ.100 ರಷ್ಟು ಸಾಧನೆ ಮಾಡುವಂತೆ ನಿರ್ದೇಶನ ನೀಡಿದರು. ಅಂತರ್ಜಲ‌ ಸಂರಕ್ಷಣೆಗೆ ಗಮನ ಹರಿಸಿ‌, ಜಲಾನಯನ ಇಲಾಖೆ  ಯೋಜನೆಗಳ ಅನುಷ್ಠಾನವನ್ನು ಚುರುಕುಗೊಳಿಸಿ ಎಂದು ಹೇಳಿದರು.

ಕೊಡಗು ಜಿಲ್ಲೆಯ 5 ತಾಲ್ಲೂಕು ಸೇರಿದಂತೆ ಈಗಾಗಗಲೇ ರಾಜ್ಯದ 216 ತಾಲ್ಲೂಕುಗಳಲ್ಲಿ ಬರ ಘೋಷಣೆ ಮಾಡಲಾಗಿದೆ. ಕೇಂದ್ರದ ತಂಡ ಬರ ಪರಿಶೀಲನೆ ನಡೆಸಿ ತೆರಳಿದರೂ ಈವರಗೆ ಪರಿಹಾರ ಧನ ಬಿಡುಗಡೆಯಾಗಿಲ್ಲ. ಮೊನ್ನೆಯೂ  ಕೇಂದ್ರದ  ಅಧಿಕಾರಿಗಳನ್ನು ಭೇಟಿ ಮಾಡಿ  ಮನವಿ ಮಾಡಲಾಗಿದೆ ಎಂದು ಸಚಿವರು ಹೇಳಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
agriculturechaluvarayaswamycoorgextensionmadakeri
2 FacebookTwitterPinterestEmail
cklbkrish

previous post
2.32 ಲಕ್ಷ ಮನೆ ಉಚಿತ ನೀಡಲು ಸಿ ಎಂ ಸಮ್ಮತಿ
next post
ಬಂಡವಾಳ ಹೂಡಿಕೆ ಬಗ್ಗೆ ಅಮೆರಿಕ ಕಂಪನಿಗಳ ಸಿಇಓಗಳೊಂದಿಗೆ ಎಂ.ಬಿ.ಪಾಟೀಲ್ ಮಹತ್ವದ ಮಾತುಕತೆ

You may also like

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

ಮನರೇಗಾ ಮರುಸ್ಥಾಪನೆ ಹೋರಾಟ ಬೆಂಬಲಿಸಿ

February 23, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ...

March 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ