ಜೀವ ವೈವಿಧ್ಯ ಮಂಡಳಿಯಲ್ಲಿ ಕಂಪನಿಗಳ ನೋಂದಣಿ ಅವಧಿ ವಿಸ್ತರಣೆ: ಈಶ್ವರ ಖಂಡ್ರೆ
ಬೆಂಗಳೂರು: ದೇವನಹಳ್ಳಿ ಬಳಿ ಇರುವ ಅರಣ್ಯ ಪ್ರದೇಶದಲ್ಲಿ 400 ವರ್ಷಗಳಷ್ಟು ಪುರಾತನವಾದ ಹುಣಸೆ ಮರಗಳಿದ್ದು, ಈ ಪ್ರದೇಶವನ್ನು ಪ್ರವಾಸಿ ತಾಣವಾಗಿ ಅಭಿವೃದ್ಧಿ ಪಡಿಸಿ, ಸಂರಕ್ಷಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ.
ತಮ್ಮ ಕಚೇರಿಯಲ್ಲಿಂದು ನಡೆದ ಜೀವ ವೈವಿಧ್ಯ ಮಂಡಳಿಯ 54ನೇ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಮೀಪದಲ್ಲಿಯೇ ಈ ಹುಣಸೆ ತೋಪು ಇರುವ ಕಾರಣ ಈ ವೃಕ್ಷಗಳನ್ನು ಸಂರಕ್ಷಿಸಿ ಅಭಿವೃದ್ಧಿ ಪಡಿಸಿದರೆ ಉತ್ತಮ ಪ್ರವಾಸಿ ತಾಣವಾಗುವುದರಲ್ಲಿ ಸಂದೇಹವಿಲ್ಲ ಎಂದು ಅಭಿಪ್ರಾಯಪಟ್ಟರು.
ಅವಧಿ ವಿಸ್ತರಣೆ : ಕರ್ನಾಟಕದಲ್ಲಿ ಗಿಡಮೂಲಿಕೆ ಮತ್ತು ವಿವಿಧ ಜೀವಿ ವೈವಿಧ್ಯತೆಯ ಸಂಪನ್ಮೂಲವನ್ನು ಬಳಕೆ ಮಾಡಿಕೊಂಡು ಉತ್ಪನ್ನ ತಯಾರಿಸುವ ಕಂಪನಿಗಳು ಕರ್ನಾಟಕ ಜೀವ ವೈವಿಧ್ಯ ಮಂಡಳಿಯಲ್ಲಿ ನೋಂದಣಿ ಮಾಡಿಕೊಳ್ಳುವುದು ಕಡ್ಡಾಯವಾಗಿದ್ದು, ಇನ್ನೂ ಹಲವು ಕಂಪನಿಗಳು ನೋಂದಣಿ ಮಾಡಿಕೊಳ್ಳದ ಕಾರಣ, ಅವಧಿ ವಿಸ್ತರಿಸಿ 60 ದಿನಗಳ ಕಾಲಾವಕಾಶ ನೀಡಲು ತೀರ್ಮಾನಿಸಲಾಗಿದ್ದು, ಕಂಪನಿಗಳು ಇದರ ಸದುಪಯೋಗ ಪಡೆಯುವಂತೆ ಅರಿವು ಮೂಡಿಸಲು ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕರ್ನಾಟಕ ಜೀವ ವೈವಿಧ್ಯ ಮಂಡಳಿ ವತಿಯಿಂದ ನೀಡಲಾಗುವ ವಾರ್ಷಿಕ ಪ್ರಶಸ್ತಿಗಳಿಗೆ ಹೊಸದಾಗಿ ಅರ್ಜಿ ಆಹ್ವಾನಿಸಲು ಮತ್ತು ಪ್ರಶಸ್ತಿಯ ಮೊತ್ತವನ್ನು 25 ಸಾವಿರ ರೂ.ಗಳಿಂದ 50 ಸಾವಿರ ರೂ.ಗೆ ಹೆಚ್ಚಿಸಲು ಅವರು ಸೂಚಿಸಿದರು.
ಜಿಲ್ಲಾಮಟ್ಟದಲ್ಲಿ ಸ್ಥಳೀಯವಾಗಿ ಲಭ್ಯವಿರುವ ಅಪರೂಪದ ಮತ್ತು ಅಳಿವಿನಂಚಿನಲ್ಲಿರುವ ಸಸ್ಯ ಪ್ರಭೇದದ ಬಗ್ಗೆ ಸ್ಥಳೀಯರಲ್ಲಿ ಅರಿವು ಮೂಡಿಸಲು ಸರಣಿ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲೂ ಈ ಸಭೆಯಲ್ಲಿ ಸೂಚಿಸಿದರು.
ದೇವನಹಳ್ಳಿ ಬಳಿಯ 400 ವರ್ಷ ಪುರಾತನವಾದ ಹುಣಸೆ ಬನ ಅಭಿವೃದ್ಧಿಗೆ ಸೂಚನೆ