Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಬರ ಪರಿಸ್ಥಿತಿಯ ಅಧ್ಯಯನ ಮಾಡಿ, ವರದಿ ನೀಡುವಂತೆ  ಸಚಿವರಿಗೆ ಪತ್ರ

by cklbkrish November 5, 2023
written by cklbkrish November 5, 2023 0 comments 5 minutes read
2FacebookTwitterPinterestEmail
59

ನವೆಂಬರ್ 15 ರೊಳಗೆ ವರದಿ ಸಲ್ಲಿಸಲು ಸೂಚನೆ : ಮುಖ್ಯಮಂತ್ರಿ ಸಿದ್ದರಾಮಯ್ಯ  ಸೂಚನೆ

ಮೈಸೂರು:  ಎಲ್ಲಾ ಜಿಲ್ಲಾ ಉಸ್ತುವಾರಿ ಮಂತ್ರಿಗಳು ನವೆಂಬರ್ 15 ರೊಳಗೆ  ಆಯಾ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಿಗೆ  ಭೇಟಿ ನೀಡಿ ಬರಪರಿಸ್ಥಿತಿಯ ಅಧ್ಯಯನ ಹಾಗೂ ಜನರನ್ನು ಭೇಟಿ ಮಾಡಿ ವರದಿ ನೀಡುವಂತೆ ಪತ್ರ ಬರೆಯಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರದಿಂದ ಹಣ ಬಿಡುಗಡೆಯಾಗಿಲ್ಲ ಎಂದು ಯಾವುದೇ ಕೆಲಸ ನಿಲ್ಲಿಸಿಲ್ಲ. ಬರ  ಪರಿಹಾರ ಕಾರ್ಯಗಳಿಗೆ 900 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದ್ದು, ಪರಿಹಾರ ಕಾರ್ಯಗಳು ಪ್ರಾರಂಭವಾಗಿವೆ. ಕುಡಿಯುವ ನೀರು, ಉದ್ಯೋಗ ನೀಡುವುದು ಯಾವುದೂ ನಿಂತಿಲ್ಲ ಎಂದರು.

ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ 600 ಕೋಟಿ ರೂ.ಗಳ ಬಿಡುಗಡೆ

ನಾವು ಪತ್ರ ಬರೆದ ಮೇಲೆ 600 ಕೋಟಿ ರೂ.ಗಳನ್ನು ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ಹಣ ಬಿಡುಗಡೆ ಮಾಡಿದ್ದಾರೆ. 33 ಸಾವಿರ ಕೋಟಿ ರೂ.ಗಳಷ್ಟು ಹಾನಿಯಾಗಿದ್ದು, ಮಾರ್ಗಸೂಚಿ ಪ್ರಕಾರ 17,900 ಕೋಟಿ ರೂ.ಗಳನ್ನು ಬಿಡುಗಡೆ ಮಾಡಬೇಕೆಂದು ಕೋರಿದ್ದೇವೆ.

ಇವತ್ತಿನವರೆಗೆ ನಮ್ಮ ರಾಜ್ಯದ ಮಂತ್ರಿಗಳಿಗೆ ಕೇಂದ್ರ ಸಚಿವರು ಭೇಟಿಗೆ ಅವಕಾಶವನ್ನೇ ನೀಡಿಲ್ಲ. ಕಂದಾಯ, ಗ್ರಾಮೀಣಾಭಿವೃದ್ಧಿ ಮತ್ತು ಕೃಷಿ ಸಚಿವರನ್ನು ಕಳುಹಿಸಲಾಗಿತ್ತು. ಮೂವರು ಸಚಿವರ ಭೇಟಿಗೆ ಅವಕಾಶ ನೀಡಿಲ್ಲ. ಪ್ರಧಾನಮಂತ್ರಿಗಳೂ ಸಮಯಾವಕಾಶ ನೀಡಿಲ್ಲದ ಕಾರಣ ಅವರ ಕೃಷಿ, ಕಂದಾಯ ಹಾಗೂ ಗೃಹ ಕಾರ್ಯದರ್ಶಿಗಳನ್ನು ಭೇಟಿ ಮಾಡಿ ಬಂದಿದ್ದಾರೆ ಎಂದರು.

ಕೇಂದ್ರ ಸರ್ಕಾರ ಕರ್ನಾಟಕದ ಬಗ್ಗೆ ನಿರ್ಲಕ್ಷ್ಯ ಹಾಗೂ ಮಲತಾಯಿ ಧೋರಣೆಯನ್ನುತಾಳಿದೆ

ಭೇಟಿಗೆ ಅವಕಾಶ ನೀಡದಿರುವುದು ಕೇಂದ್ರಕ್ಕೆ ಕರ್ನಾಟಕದ ಬಗ್ಗೆ ಇರುವ  ನಿರ್ಲಕ್ಷ್ಯ ಹಾಗೂ ಮಲತಾಯಿ ಧೋರಣೆಯನ್ನು ಕೇಂದ್ರ ಸರ್ಕಾರ ತಾಳಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿರುವುದನ್ನು ಸಹಿಸಲು ಸಾಧ್ಯವಾಗುತ್ತಿಲ್ಲ.

ಕರ್ನಾಟಕದಲ್ಲಿ ಕಾಂಗ್ರೆಸ್ 135 ಸ್ಥಾನ ಗಳಿಸುತ್ತದೆ ಎಂದು ಅವರು ನಿರೀಕ್ಷಿಸಿರಲಿಲ್ಲ. ಬಿಜೆಪಿ ಕೇಂದ್ರಕ್ಕೆ ತಪ್ಪುಚಿತ್ರಣ ನೀಡಿದ್ದರು. ಅದಕ್ಕಾಗಿ  ಪ್ರಧಾನಿ ನರೇಂದ್ರ ಮೋದಿಯವರು ಕರ್ನಾಟಕದಲ್ಲಿ ಬದಲಾವಣೆ ಮಾಡಿಬಿಡುತ್ತೇವೆ ಎಂದು ಸಾಕಷ್ಟು ಬಾರಿ ಭೇಟಿ ನೀಡಿದ್ದರು ಎಂದರು.

ಕೇಂದ್ರಕ್ಕೆ ಮರು ಪತ್ರ ಬರೆದಿದೆ

ಪರಿಹಾರಕ್ಕಾಗಿ ಒತ್ತಾಯ ಮಾಡಲು ಪ್ರಧಾನಮಂತ್ರಿಗಳಿಗೆ ಹಾಗೂ ಗೃಹ ಸಚಿವರಿಗೆ ಪುನಃ ಪತ್ರ ಬರೆಯಲಾಗಿದೆ. ಬಿಜೆಪಿಯವರು ರಾಜ್ಯದಲ್ಲಿ ಪ್ರವಾಸ ಮಾಡುತ್ತಿರುವ ಬಗ್ಗೆ ಸುದ್ದಿಗಾರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ ಬಿಜೆಪಿ ಶಾಸಕರು ಇಲ್ಲಿ ಪ್ರವಾಸ ಮಾಡಿ ಏನು ಮಾಡುತ್ತಾರೆ? ಅವರಿಗೆ ಕರ್ನಾಟಕದ ರೈತರ ಬಗ್ಗೆ ನಿಜವಾಗಿಯೂ ಕಾಳಜಿ ಇದ್ದರೆ ದೆಹಲಿಗೆ ತೆರಳಿ ಹಣ ಬಿಡುಗಡೆ ಮಾಡಿಸಲಿ ಎಂದರು.

ಕೆ.ಇ. ಎ ಪರೀಕ್ಷೆ ಅಕ್ರಮ: ಸಂಪೂರ್ಣ ತನಿಖೆ

ಕಲಬುರಗಿಯಲ್ಲಿ ಕೆ.ಇ.ಎ ಪರೀಕ್ಷೆಯಲ್ಲಿ ತಾಳಿ, ಕಾಲುಂಗುರ ಬಿಚ್ಚಿಸಿದ್ದು,  ಬ್ಲೂಟೂತ್ ಬಳಕೆಯಾಗುವ ಬಗ್ಗೆ ಮಾತನಾಡಿ ಈ ಬಗ್ಗೆ ಸಂಪೂರ್ಣ ತನಿಖೆ ಮಾಡಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

ಕೊಲೆ ಬಗ್ಗೆ ತನಿಖೆ

ಗಣಿಗಾರಿಕೆ ಅಧಿಕಾರಿ ಪ್ರತಿಮಾ ಅವರು ಕೊಲೆಯಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ  ಒಬ್ಬಂಟಿಯಾಗಿದ್ದ  ಅವರ ಕೊಲೆಯಾಗಿರುವ ಬಗ್ಗೆ ಈಗಷ್ಟೇ ಗಮನಕ್ಕೆ ಬಂದಿದೆ. ಕಾರಣ ಏನೆಂದು ತಿಳಿದುಬಂದಿಲ್ಲ ಈ ಬಗ್ಗೆ ವಿಚಾರ ಮಾಡುವುದಾಗಿ ತಿಳಿಸಿದರು.

ಬಡವರಿಗೆ ಗ್ಯಾರಂಟಿ ಯೋಜನೆ ನೀಡುವುದು ಟೀಕಿಸುವ ವಿಚಾರವಲ್ಲ

ಇಲ್ಲಿಯ ತನಕ ಗ್ಯಾರಂಟಿ ಯೋಜನೆಗಳ ಬಗ್ಗೆ ಟೀಕಿಸುತ್ತಿದ್ದ ಮೋದಿ ಅವರು ಪಂಚ ರಾಜ್ಯಗಳ ಚುನಾವಣೆಯಲ್ಲಿ ಆಶ್ವಾಸನೆ ಕೊಡುತ್ತಿರುವ ಬಗ್ಗೆ ಮಾತನಾಡಿ ರಾಜಕೀಯವಾಗಿ ಟೀಕೆ  ಮಾಡಿದ್ದಾರೆ. ರಾಜ್ಯ ದಿವಾಳಿಯಾಗುತ್ತದೆ, ಕೊಡಲಾಗುವುದಿಲ್ಲ ಎಂದು ರಾಜಕೀಯವಾಗಿ ಹೇಳಿದ್ದಾರೆ. ಬಡವರಿಗೆ ಗ್ಯಾರಂಟಿ ಯೋಜನೆ ನೀಡುವುದು ಟೀಕಿಸುವ ವಿಚಾರವಲ್ಲ ಎಂದರು.

ಅವರು ಗ್ಯಾರಂಟಿಗಳನ್ನು ಕೊಟ್ಟರೆ ಅದು ಬಡವರ ಕಾರ್ಯಕ್ರಮ. ನಾವು ನೀಡಿದರೆ ರಾಜ್ಯ ದಿವಾಳಿಯಾಗುತ್ತದೆ ಎನ್ನುತ್ತಾರೆ. ಅವರೇನೇ ಹೇಳಿದರೂ ನಾವು ಬಡವರ, ಸಾಮಾನ್ಯ ಜನರ, ಹಳ್ಳಿಗಾಡಿನ, ಎಲ್ಲಾ ಜಾತಿಯ ಬಡವರ ಪರವಾಗಿದ್ದೇವೆ ಎಂದರು.

ಬಿಜೆಪಿ, ಜೆಡಿಎಸ್ ಹತಾಶರಾಗಿದ್ದಾರೆ

ಮುಖ್ಯಮಂತ್ರಿಗಳ ಕುರ್ಚಿ ಇವತ್ತು ನಾಳೆ ಬೀಳಲಿದೆ ಎಂದು ಬಿಜೆಪಿ, ಜೆಡಿಎಸ್ ಹೇಳಿಕೆ ನೀಡುತ್ತಿರುವ ಬಗ್ಗೆ ಮಾತನಾಡಿ, ಅವರು ಹತಾಶರಾಗಿದ್ದಾರೆ. ಅವರು ಸರ್ಕಾರ ರಚಿಸುವುದಾಗಿ ಭಾವಿಸಿದ್ದರು. ಅದಾಗದೆ ಇದ್ದುದರಿಂದ ಹತಾಶರಾಗಿದ್ದಾರೆ ಎಂದು ಹೇಳಿದರು.

ಕ್ಷೇತ್ರಗಳ ಸಾಧನೆಗಳ ಬಗ್ಗೆ ಮಾತನಾಡಲು ಮಂತ್ರಿಗಳಿಗೆ ಸೂಚನೆ

ಸಿಎಂ ಕುರ್ಚಿ ಬಗ್ಗೆ ಬಿಜೆಪಿ  ಚರ್ಚೆ ಮಾಡುತ್ತಿದ್ದಾರೆ. ನಮ್ಮ ಶಾಸಕರು ಸಚಿವರು ಈ ಬಗ್ಗೆ ಮಾತನಾಡಕೂಡದು ಎಂದು ತಿಳಿಸಲಾಗಿದೆ. ಲೋಕಸಭೆ ಚುನಾವಣೆ ಬಗ್ಗೆ ಚರ್ಚೆ ಮಾಡಲಾಗಿದ್ದು, ಇನ್ನು ಮುಂದೆ ಮುಖ್ಯಮಂತ್ರಿಗಳ ಸ್ಥಾನದ ಬಗ್ಗೆ ಮಾತನಾಡಬಾರದು. ಏನಿದ್ದರೂ ನಿಮ್ಮ ಕ್ಷೇತ್ರಗಳ ಸಾಧನೆಗಳ ಬಗ್ಗೆ ಮಾತನಾಡಿ ಎಂದು ಸೂಚಿಸಲಾಗಿದೆ ಎಂದರು.

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ  ಬಗ್ಗೆ ಪ್ರತಿಕ್ರಿಯೆ ನೀಡಿ  ಅದು ವ್ಯಂಗ್ಯ ವಾಗಿ ಹೇಳಿರುವುದು. ಕುಮಾರಸ್ವಾಮಿ ಅವರಿಗೆ ವ್ಯಂಗ್ಯ ವಾಗಿ ಹೇಳುವುದೂ ಬರುತ್ತದೆ ಎನ್ನುವುದೇ ನಮಗೆ ಖುಷಿ ಎಂದರು.

ಈಶ್ವರಪ್ಪ ಸವಕಲು ನಾಣ್ಯ

ಕಾಂತರಾಜು ವರದಿ ಜಾರಿಮಾಡಿ ಎಂದು ಈಶ್ವರಪ್ಪ ಭಾಷಣ ಮಾಡಿದ್ದರು. ಅವರ ಮಾತಿಗೆ ಬೆಲೆ ಇದೆಯೇ. ಅವರೆಲ್ಲಾ ಸವಕಲು ನಾಣ್ಯಗಳು. ಬಿಜೆಪಿಯಲ್ಲಿಯೇ ಅವರು ಸವಕಲು ನಾಣ್ಯ ಎಂದು ಟಿಕೆಟ್ ನೀಡಿಲ್ಲ. ಅವರ ಮಾತಿಗೆ ಏನು ಬೆಲೆ ಇದೆ. ವರದಿ ನೀಡಿದರೆ ಅದನ್ನು ಸ್ವೀಕರಿಸುತ್ತೇವೆ ಎಂದರು. ವರದಿಯಲ್ಲಿ ಏನಿದೆ ಎಂದು ನಮಗೆ ತಿಳಿದಿಲ್ಲ ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
cmkmskmskannadaletterministermysuruSiddaramaiah
2 FacebookTwitterPinterestEmail
cklbkrish

previous post
ಬೆಂಗಳೂರು ಕಂಬಳಕ್ಕೆ ಬರಲಿದ್ದಾರೆ  ಐಶ್ವರ್ಯಾ ರೈ, ಅನುಷ್ಕಾ ಶೆಟ್ಟಿ
next post
ಅಧಿಕಾರಿಗಳ ಒಗ್ಗಟ್ಟಿನ ಕಾರ್ಯಕ್ಷಮತೆಯಿಂದ ದಸರಾ ಯಶಸ್ವಿ:  ಮುಖ್ಯಮಂತ್ರಿ ಸಿದ್ದರಾಮಯ್ಯ ಮೆಚ್ಚುಗೆ

You may also like

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

ಮನರೇಗಾ ಮರುಸ್ಥಾಪನೆ ಹೋರಾಟ ಬೆಂಬಲಿಸಿ

February 23, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ...

March 6, 2026
Sign In

Prove your humanity

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ