Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಪ್ರಧಾನಿಯವರ ರಾಜಕೀಯ ಭಾಷಣದಲ್ಲಿ ಮಾಡಿರುವ ಆರೋಪವೆಲ್ಲ ಸುಳ್ಳಿನ ಕಂತೆ

by cklbkrish November 6, 2023
written by cklbkrish November 6, 2023 0 comments 2 minutes read
2FacebookTwitterPinterestEmail
67
ಕಾಂಗ್ರೆಸ್ ಸಿದ್ಧಾಂತ ಬೆಂಬಲಿಸಿ ಬರುವವರಿಗೆ ಸ್ವಾಗತ – ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಕಾಂಗ್ರೆಸ್ ಪಕ್ಷದ ಸಿದ್ದಾಂತ, ನಾಯಕತ್ವವನ್ನು ಬೆಂಬಲಿಸಿ ಬರುವವರನ್ನು ಪಕ್ಷಕ್ಕೆ ಸ್ವಾಗತಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಕಾಂಗ್ರೆಸ್ ಆಪರೇಷನ್ ಹಸ್ತ ಕೈಗೊಳ್ಳುತ್ತಿದೆ ಎಂಬ ಆರೋಪದ ಬಗ್ಗೆ ಉತ್ತರಿಸುತ್ತಾ, ಆಪರೇಷನ್ ಹಸ್ತ ಮಾಡುವ ಪ್ರಶ್ನೆಯೇ ಇಲ್ಲ. ಬಿಜೆಪಿ ಹಾಗೂ ಜೆಡಿಎಸ್ ನಿಂದ ಹಾಲಿ ಹಾಗೂ ಮಾಜಿ ಶಾಸಕರು ಕಾಂಗ್ರೆಸ್ ಗೆ ಬರಲಿದ್ದಾರೆ ಎಂದರು.

ಈಗಿನ ಮುಖ್ಯಮಂತ್ರಿಗಳು ಎಷ್ಟು ಅವಧಿಗೆ ಮುಖ್ಯಮಂತ್ರಿಗಳಾಗಿ ಉಳಿಯಲಿದ್ದಾರೆ ಎಂಬ ಪ್ರಧಾನಿಯವರ ರಾಜಕೀಯ ಭಾಷಣದಲ್ಲಿನ ಹೇಳಿಕೆಗೆ ಪ್ರತಿಕ್ರಿಯೆ ನೀಡುತ್ತಾ, ಕೇವಲ ಆರೋಪ ಮಾಡಬೇಕೆಂಬ ಉದ್ದೇಶದಿಂದ ಆರೋಪ ಮಾಡಲಾಗುತ್ತಿದ್ದು, ಇವೆಲ್ಲವೂ ಸುಳ್ಳಿನ ಕಂತೆ ಎಂದರು.

ರಾಜ್ಯದಲ್ಲಿ ಬಿಜೆಪಿಯ ದಿವಾಳಿತನ

ಮಧ್ಯಪ್ರದೇಶದ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಪ್ರಧಾನಿ ಮೋದಿಯವರು ಕರ್ನಾಟಕವನ್ನೇ ಗುರಿ ಮಾಡಿ ಮಾತನಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಅವರು ಪ್ರಚಾರ ಮಾಡಿದಲ್ಲೆಲ್ಲಾ ಬಿಜೆಪಿ ಸೋತಿದೆ. ರಾಜ್ಯದಲ್ಲಿ ಇದುವರೆಗೆ ವಿರೋಧಪಕ್ಷದ ನಾಯಕರನ್ನು ಆಯ್ಕೆಮಾಡಿಲ್ಲ. ಇದು ಬಿಜೆಪಿಯ ದಿವಾಳಿಯಾಗಿರುವುದನ್ನು ಸೂಚಿಸುತ್ತದೆ ಎಂದು ಹೇಳಿದರು.

ಕೇಂದ್ರ ಸರ್ಕಾರ ಬರಪರಿಹಾರ ನೀಡಿಲ್ಲ

ಸಿಎಂ ಮತ್ತು ಡಿಸಿಎಂ ರಾಜ್ಯವನ್ನು ಲೂಟಿ ಮಾಡುತ್ತಿದ್ದಾರೆ ಎಂಬ ಪ್ರಧಾನಮಂತ್ರಿಗಳ ಭಾಷಣದಲ್ಲಿ ಮಾಡಿರುವ ಟೀಕೆಗೆ ಪ್ರತ್ಯುತ್ತರ ನೀಡುತ್ತಾ, 40 ಪರ್ಸೆಂಟ್ ಕಮೀಷನ್ ಸರ್ಕಾರ ಎಂಬ ಆರೋಪ ಬಿಜೆಪಿ ಸರ್ಕಾರದ ಮೇಲಿತ್ತು. ಈ ಬಗ್ಗೆ ನಮ್ಮ ಸರ್ಕಾರ ತನಿಖೆ ಮಾಡಿಸುತ್ತಿದೆ. ದೇಶದ ಪ್ರಧಾನಿಯಾದವರು ಈ ವಿಷಯದ ಬಗ್ಗೆಯೂ ಮಾತನಾಡಬೇಕಲ್ಲವೇ? ಕೇಂದ್ರ ಸರ್ಕಾರದ ಅಧೀನದಲ್ಲಿ ಎಲ್ಲ ತನಿಖಾ ಸಂಸ್ಥೆಗಳಿವೆ, ಪುರಾವೆಗಳು, ದಾಖಲೆಗಳಿಲ್ಲದೇ ಆರೋಪ ಮಾಡಬಾರದು. ಇಡೀ ದೇಶವೇ ದಿವಾಳಿಯಾಗಿದೆ ಎಂದು ಆರೋಪಿಸಿದರು.

 ರಾಜ್ಯದ ವಿರುದ್ಧ ಕೇಂದ್ರ ಮಲತಾಯಿ ಧೋರಣೆಯನ್ನು ತಳೆದಿದೆ. ಬರಗಾಲದ ಪರಿಹಾರವನ್ನು ರಾಜ್ಯಕ್ಕೆ ಬಿಡುಗಡೆ ಮಾಡಿಲ್ಲ. ರಾಜ್ಯದಲ್ಲಿ ಪಂಚ ಗ್ಯಾರಂಟಿಗಳನ್ನು ಜಾರಿಗೊಳಿಸಲು ಸಾಧ್ಯವೇ ಇಲ್ಲ ಎಂದು ಪ್ರಧಾನ ಮಂತ್ರಿಗಳು ಹೇಳಿದ್ದರು. ಆದರೆ ನಮ್ಮ ಸರ್ಕಾರ ಅವುಗಳನ್ನು ಸಾಧಿಸಿ ತೋರಿಸಿದೆ. ಇಂತಹ ಹೇಳಿಕೆಗಳನ್ನು ದೇಶದ ಪ್ರಧಾನ ಮಂತ್ರಿಗಳಿಂದ ಅಪೇಕ್ಷಿಸಿರಲಿಲ್ಲ.  ತಮ್ಮ ರಾಜಕೀಯ ಭಾಷಣದಲ್ಲಿ ರಾಜ್ಯದ ಬಗ್ಗೆ ಟೀಕೆಗಳನ್ನು ಮಾಡುವುದು ಪ್ರಧಾನಮಂತ್ರಿಯವರಿಗೆ ಶೋಭೆ ತರುವಂಥದ್ದಲ್ಲ ಎಂದರು.

ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಉಪಹಾರ ಸಭೆ

ಮುಖ್ಯಮಂತ್ರಿಗಳು, ಶಾಸಕರೊಂದಿಗೆ ನಡೆಸಲಾದ ಉಪಹಾರ ಸಭೆಯ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ, ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಸಭೆಯನ್ನು ನಡೆಸಲಾಗಿತ್ತು. ಪ್ರತಿ ಜಿಲ್ಲೆಗೆ ಓರ್ವ ಮಂತ್ರಿಯನ್ನು  ವೀಕ್ಷಕರನ್ನಾಗಿ ನೇಮಿಸಲಾಗಿದೆ. ಬರಗಾಲ ಪರಿಸ್ಥಿತಿ ನಿರ್ವಹಣೆಯ ಜವಾಬ್ದಾರಿಯನ್ನೂ ವಹಿಸಲಾಗಿದೆ ಎಂದರು.

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು  ಸಿಎಂ ಆದವರು ಪ್ರಧಾನಿಯವರನ್ನು ಭೇಟಿ ಮಾಡಿ ಬರ ಪರಿಹಾರ ಬಿಡುಗಡೆ ಮಾಡಿಸಿಕೊಳ್ಳಬೇಕು ಎಂದು ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಬರಪರಿಹಾರ ಕೋರಿ ಕೇಂದ್ರಕ್ಕೆ ಮನವಿಯನ್ನು ಈಗಾಗಲೇ ಸಲ್ಲಿಸಲಾಗಿದೆ. ಕುಮಾರಸ್ವಾಮಿಯವರು ಹೇಗಿದ್ದರೂ ಬಿಜೆಪಿಯವರೊಂದಿಗೆ ಸೇರಿದ್ದಾರೆ. ಅವರು ರಾಜ್ಯಕ್ಕೆ ಪರಿಹಾರ ಬಿಡುಗಡೆ ಮಾಡಿಸಲು ಕೇಂದ್ರದೊಂದಿಗೆ ಮಾತನಾಡಲಿ ಎಂದರು.

ಮುಖ್ಯಮಂತ್ರಿ ಬದಲಾವಣೆ ವಿಚಾರ ಹೈಕಮಾಂಡ್ ನಿರ್ಧಾರಕ್ಕೆ

ಲೋಕಸಭೆ ಚುನಾವಣೆಗೂ ಮುಂಚೆ ಅಥವಾ ನಂತರ ಮುಖ್ಯಮಂತ್ರಿಗಳು ಬದಲಾಗುತ್ತಾರೆ ಎಂಬ ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಅವರ ಹೇಳಿಕೆ ಬಗ್ಗೆ ಪ್ರತಿಕ್ರಯಿಸಿ, ಇಂತಹ ವಿಚಾರಗಳ ಬಗ್ಗೆ ಪಕ್ಷದ  ಹೈಕಮಾಂಡ್ ನಿರ್ಧರಿಸುತ್ತದೆ. ಇವರಿಗೆ ಮಾತನಾಡುವ ಹಕ್ಕಿಲ್ಲ. ವಿರೋಧಪಕ್ಷ ನಾಯಕರ ಆಯ್ಕೆಯನ್ನೇ ಬಿಜೆಪಿಯವರಿಗೆ ಮಾಡಲು ಸಾಧ್ಯವಾಗಿಲ್ಲ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bengalurucmkarnatakakmskmskannadanatoinnewspmpoliticsSiddaramaiah
2 FacebookTwitterPinterestEmail
cklbkrish

previous post
ನೀರಾವರಿ ಪಂಪ್‍ಸೆಟ್‍ಗಳಿಗೆ  7 ಗಂಟೆಗಳ ವಿದ್ಯುತ್ ಸರಬರಾಜು: ಮುಖ್ಯಮಂತ್ರಿ ಸಿದ್ದರಾಮಯ್ಯ
next post
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ ಪ್ರದಾನ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ