Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜ್ಯರಾಷ್ಟ್ರ

ಫ್ರೂಟ್ ತಂತ್ರಾಂಶದಲ್ಲಿ ರೈತರು ಜಮೀನುಗಳ ಮಾಹಿತಿ ನೊಂದಾಯಿಸಿ

by cklbkrish November 7, 2023
written by cklbkrish November 7, 2023 0 comments 3 minutes read
0FacebookTwitterPinterestEmail
330
ರೈತರು ನೋಂದಣಿ ಕಾರ್ಯವನ್ನು ನವೆಂಬರ್ ಅಂತ್ಯದೊಳಗಾಗಿ ಪೂರ್ಣಗೊಳಿಸಬೇಕು

ಗದಗ: ರೈತರು ತಮ್ಮ ಜಮೀನುಗಳ ಮಾಹಿತಿಯನ್ನು ಫ್ರೂಟ್ ತಂತ್ರಾಂಶದಲ್ಲಿ ಅಳವಡಿಸಿಕೊಳ್ಳುವ ಮೂಲಕ ಬರ ಪರಿಹಾರ ಹಾಗೂ ಬೆಳೆ ವಿಮಾ ಪರಿಹಾರಗಳಂತಹ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು. ಈ ನಿಟ್ಟಿನಲ್ಲಿ ಇಲಾಖೆ ಅಧಿಕಾರಿಗಳು ರೈತರಲ್ಲಿ ಜಾಗೃತಿ ಮೂಡಿಸುವ ಮೂಲಕ ರೈತರ ಪ್ರತಿಯೊಂದು ಜಮೀನನ್ನು ಫ್ರೂಟ್ ತಂತ್ರಾಂಶದ ವ್ಯಾಪ್ತಿಗೆ ತರಬೇಕು ಎಂದು ಕಂದಾಯ ಸಚಿವರಾದ ಕೃಷ್ಣಭೈರೇಗೌಡ ಸೂಚಿಸಿದರು.

ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಜರುಗಿದ ಕಂದಾಯ ಇಲಾಖೆ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಸರ್ಕಾರದ ಪರಿಹಾರ ಮೊತ್ತಗಳನ್ನು ರೈತರ ನೇರವಾಗಿ ಖಾತೆಗೆ ಜಮೆ ಮಾಡಲು ಫ್ರೂಟ್ ತಂತ್ರಾಂಶ ಬಳಸಲಾಗುತ್ತಿದೆ. ರೈತರೆಲ್ಲರೂ ತಮ್ಮ ಜಮೀನಿನ ನಿಖರವಾದ ಮಾಹಿತಿಯನ್ನು ತಂತ್ರಾಂಶದಲ್ಲಿ ಅಳವಡಿಸಿಕೊಳ್ಳುವ ಮೂಲಕ ಪರಿಹಾರ ಪಡೆದುಕೊಳ್ಳಬೆಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ರೈತರಿಗೆ ಮಾಹಿತಿ ಒದಗಿಸಬೇಕು. ಜಿಲ್ಲೆಯಲ್ಲಿ ಫ್ರೂಟ್ ತಂತ್ರಾಂಶದಲ್ಲಿ ಈಗಾಗಲೇ ನೋಂದಣಿ ಮಾಡಲಾಗಿದ್ದು. ಬಾಕಿ ಉಳಿದ ಶೇ.20 ರಿಂದ 25 ರಷ್ಟು ರೈತರು ನೋಂದಣಿ ಕಾರ್ಯವನ್ನು ನವೆಂಬರ್ ಅಂತ್ಯದೊಳಗಾಗಿ ಪೂರ್ಣಗೊಳಿಸಬೇಕು ಎಂದರು.

ಜಿಲ್ಲೆಯಲ್ಲಿ ಬರ ಆವರಿಸಿದ ಹಿನ್ನಲೆಯಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರು ಹಾಗೂ ಮೇವಿನ ಕೊರತೆಯಾಗದಂತೆ ಮುಂಜಾಗ್ರತೆಯ ಕ್ರಮಗಳನ್ನು ಅಧಿಕಾರಿಗಳು ತೆಗೆದುಕೊಳ್ಳಬೇಕು. ಮೇವಿನ ಕೊರತೆ ಇದ್ದಲ್ಲಿ ಅಗತ್ಯಕ್ಕನುಸಾರ ಮೇವನ್ನು ಖರೀದಿ ಮಾಡಿಕೊಳ್ಳುವಂತೆ ಸೂಚಿಸಿದರು. ನೀರಿನ ವ್ಯವಸ್ಥೆ ಇರುವೆಡೆ ರೈತರಿಗೆ ಮೇವಿನ ಬೀಜದ ಕಿಟಗಳನ್ನು ನೀಡಲಾಗುವುದು. ಅವರು ಮೇವನ್ನು ಬೆಳೆದು ತಮ್ಮ ಜಾನುವಾರುಗಳಿಗೆ ಬಳಸಿಕೊಳ್ಳಬಹುದಾಗಿದೆ. ಅಧಿಕವಾದಲ್ಲಿ ಸರ್ಕಾರಕ್ಕೆ ನಿಗದಿಪಡಿಸಿದ ದರದಲ್ಲಿ ಮಾರಾಟ ಮಾಡಬಹುದಾಗಿದೆ. ಈ ಕುರಿತು ರೈತರಲ್ಲಿ ಜಾಗೃತಿ ಮೂಡಿಸಿ ಜಿಲ್ಲೆಯಲ್ಲಿ ಮೇವಿನ ಕೊರತೆ ಆಗದಂತೆ ನಿಗಾವಹಿಸಲು ತಿಳಿಸಿದರು.

ಜಿಲ್ಲಾಧಿಕಾರಿಗಳ ಖಾತೆಯಲ್ಲಿ 16.5 ಕೋಟಿ ರೂ. ಅನುದಾನವಿದ್ದು, ಇದನ್ನು ಅಗತ್ಯಕ್ಕನುಸಾರವಾಗಿ ಕುಡಿಯುವ ನೀರು, ಜಾನುವಾರುಗಳ ಮೇವು ಖರೀದಿಗೆ ಬಳಕೆ ಮಾಡಿಕೊಳ್ಳಬಹುದಾಗಿದೆ. ಅಗತ್ಯಬಿದ್ದಲ್ಲಿ ಗೋಶಾಲೆ, ಮೇವು ಬ್ಯಾಂಕ್ ತೆರೆಯಲು ಹೇಳಿದರು.

ದುರ್ಬಳಕೆ ತಡೆಗೆ ಡಿಜಿಟಲ್ ಸಾಗುವಳಿ ಚೀಟಿ

ಬಗರ್ ಹುಕುಂ ಅಡಿ ದುರ್ಬಳಕೆ ತಡೆಗಟ್ಟಲು ಮಂಜೂರಾತಿಗೆ ಡಿಜಿಟಲ್ ಸಹಿಗೆ ಅವಕಾಶ ಮಾಡಿಕೊಟ್ಟು ಡಿಜಿಟಲ್ ಸಾಗುವಳಿ ಚೀಟಿಯನ್ನು ನೀಡಲಾಗುತ್ತದೆ. ಈ ಹಿಂದೆ ನೀಡಿದ ಸಾಗುವಳಿ ಚೀಟಿ ನೀಡಿದ ನೈಜತೆಯ ಬಗ್ಗೆ ರಾಜ್ಯದಲ್ಲಿ ಲಕ್ಷಾಂತರ ಪ್ರಕಟಣಗಳು ನ್ಯಾಯಾಲಯದಲ್ಲಿವೆ. ಮುಂದಿನ ದಿನಗಳಲ್ಲಿ ಹೀಗಾಗದಂತೆ ಡಿಜಿಟಲಿಕರಣ ಮಾಡಲಾಗುತ್ತಿದೆ.

ಸರ್ಕಾರಿ ಭೂಮಿ ರಕ್ಷಣೆಗೆ ಬೀಟ್ ಪದ್ಧತಿ:

ಸರ್ಕಾರಿ ಜಮೀನುಗಳ ರಕ್ಷಣೆಗಾಗಿ ಆಪ್ ಸಿದ್ಧಪಡಿಸಲಾಗುತ್ತಿದ್ದು, ಶೀಘ್ರದಲ್ಲೇ ಅಸ್ತಿತ್ವಕ್ಕೆ ಬರಲಿದೆ. ಸರ್ಕಾರಿ ಜಮೀನುಗಳನ್ನು ಆಪ್ ಮೂಲಕ ಡಾಟಾಬೇಸನ್ನು ಸಿದ್ಧಪಡಿಸಿ ಪ್ರತಿ ಮೂರು ತಿಂಗಳಿಗೊಮ್ಮೆ ಸರ್ಕಾರಿ ಜಾಗಗಳ ಸ್ಥಳಕ್ಕೆ ಗ್ರಾಮ ಲೆಕ್ಕಿಗರು ಭೇಟಿ ನೀಡಿ ಭೂಮಿ ಒತ್ತುವರಿ ಆಗಿದೆಯೋ, ಇಲ್ಲವೋ ಎಂಬದುನ್ನು ಪರಿಶೀಲನೆ ನಡೆಸಿ ಆಪ್ ಮೂಲಕ ಆ ಸ್ಥಳದಿಂದಲೇ ಧೃಡೀಕರಿಸಿ ವರದಿಯನ್ನು ಆಪ್‍ಲೊಡ್ ಮಾಡಬೆಕು. ಒಂದು ವೇಳೆ ಸರ್ಕಾರಿ ಜಮೀನು ಒತ್ತುವರಿ ಆಗಿದ್ದಲ್ಲಿ ಆಪ್ ಬಳಸಿ ಆನಲೈನ್ ಮೂಲಕವೇ ತಹಶೀಲ್ದಾರರಿಗೆ ವರದಿ ನೀಡಬೇಕು. ಈ ಪ್ರಕ್ರಿಯೆಯಿಂದ ಸರ್ಕಾರಿ ಭೂ-ಕಬಳಿಕೆ ನಿಯಂತ್ರಣಗೊಳ್ಳಲಿದೆ ಎಂದರು.

ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಜಮೀನುಗಳ ವಿಷಯವಾಗಿ ಅನೇಕ ಪ್ರಕರಣಗಳು ಕೋರ್ಟ ಮೆಟ್ಟಿಲೇರಿದ್ದರೂ ಸಹ ಯಾವುದೇ ವಕಾಲತ್ತು ಹಾಕದೇ ಇದ್ದ  ರಾಜ್ಯದ ಸುಮಾರು 10,500 ಪ್ರಕರಣಗಳಿದ್ದವು. ಈ ಕುರಿತ ಪರಿಶೀಲನೆ ನಡೆಸಿ ವಕಾಲತ್ತು ಹಾಕಿಸಿದ್ದರಿಂದ ಸುಮಾರು 2500 ಕೇಸುಗಳು ಮಾತ್ರ ಉಳಿದುಕೊಂಡಿವೆ.

ಇ-ಆಫೀಸ ವ್ಯವಸ್ಥೆ ಅಳವಡಿಕೆ

 ಕಂದಾಯ ಇಲಾಖೆ ಕೆಲಸ ಕಾರ್ಯಗಳೆಲ್ಲವೂ ಚುರುಕುಗೊಳಿಸುವ ನಿಟ್ಟಿನಲ್ಲಿ ನಿಧಾನಗತಿ ತಪ್ಪಿಸಲು ಇ-ಆಫೀಸ ವ್ಯವಸ್ಥೆ ಅಳವಡಿಸಲಾಗಿದೆ. ಇದನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಸಂಪೂರ್ಣವಾಗಿ ಬಳಸಿಕೊಳ್ಳುವ ಮೂಲಕ ಇ-ಆಫೀಸ ಮೂಲಕವೇ ಕಡತಗಳ ಚಲನೆಯಾಗಬೇಕು. ಇದರಿಂದ ವಿಳಂಬಕ್ಕೆ ವಿದಾಯ ದೊರೆಯುತ್ತದೆ. ನಮ್ಮ ಸರ್ಕಾರದ ಜನಪರ ಹಾಗೂ ಪಾರದರ್ಶಕ ಆಡಳಿತದ ಉದ್ದೇಶ ಸಾಕಾರಗೊಳ್ಳಲಿದೆ ಎಂದರು. 

ದಾಖಲೆಗಳ ಡಿಜಿಟಲಿಕರಣ

ರೆಕಾರ್ಡ್ ರೂಂನಲ್ಲಿರುವ ದಾಖಲೆಗಳನ್ನು ಸ್ಕ್ಯಾನ್ ಮಾಡುವ ಮೂಲಕ ಶಾಶ್ವತವಾಗಿ ದಾಖಲೆಗಳನ್ನು ಉಳಿಸಲು ಡಿಜಿಟಲಿಕರಣ ವ್ಯವಸ್ಥೆ ಜಾರಿಗೊಳಿಸಲಾಗುತ್ತಿದೆ. ರಾಜ್ಯ ಮಟ್ಟದಲ್ಲಿ ದಾಖಲೆಗಳ ಸೂಕ್ತ ರಕ್ಷಣೆಗೆ ಉತ್ತಮ ತಂತ್ರಾಂಶವನ್ನು ಅಭಿವೃದ್ಧಿ ಪಡಿಸಿ ರಕ್ಷಣೆ ಮಾಡುತ್ತೇವೆ. ಜನಸಾಮಾನ್ಯರಿಗೆ ಸಲೀಸಾಗಿ ಅವರಿಗೆ ಸಂಬಂಧಿಸಿದ ದಾಖಲೆಗಳು ಸಿಗುವಂತೆ ಮಾಡಲು ಕ್ರಮ ವಹಿಸಲಾಗುತ್ತಿದೆ ಎಂದರು.

ಶಾಸಕರಾದ ಜಿ.ಎಸ್.ಪಾಟೀಲ ಮಾತನಾಡಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಿಂದ ಕೊನೆಯಲ್ಲಿರುವ ಗ್ರಾಮಗಳಿಗೆ ಸಮರ್ಪಕವಾಗಿ ನೀರು ಪೂರೈಕೆಯಾಗುತ್ತಿಲ್ಲ. ಗಜೇಂದ್ರಗಡ ತಾಲೂಕಿನ ಕೆಲವು ಗ್ರಾಮಗಳು ರೋಣ ತಾಲೂಕಿಗೆ ಸೇರ್ಪಡೆ ಹಾಗೂ ದಾಖಲೆಗಳ ಮಾರ್ಪಾಡು ಆಗದೇ ಇರುವುದರಿಂದ ಕೆಲವು ಗ್ರಾಮಗಳ ರೈತರಿಗೆ ಬೆಳೆ ವಿಮೆ ಹಾಗೂ ಪರಿಹಾರ ಪಡೆಯಲು ತೊಂದರೆಯಾಗುತ್ತಿದೆ ಎಂದು ಸಭೆಯ ಗಮನಕ್ಕೆ ತಂದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಕೃಷ್ಣಬೈರೇಗೌಡ ಆದಷ್ಟು ಬೇಗನೆ ಈ ಸಮಸ್ಯೆಗೆ ಪರಿಹಾರ ನೀಡಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ವಿಧಾನ ಪರಿಷತ ಸದಸ್ಯರಾದ ಎಸ್.ವಿ.ಸಂಕನೂರ ಮಾತನಾಡಿ,ಲಕ್ಷ್ಮೇಶ್ವರ ಹಾಗೂ ಗದಗ ನಗರದಲ್ಲಿ ಸಮರ್ಪಕ ನೀರು ಪೂರೈಕೆ ಆಗುತ್ತಿಲ್ಲ. ಇದರಿಂದ ಸಾರ್ವಜನಿಕರಿಗೆ ತುಂಬಾ ತೊಂದರೆಯಾಗುತ್ತಿರುವುದಾಗಿ ಸಭೆ ಗಮನಕ್ಕೆ ತಂದರು. ಇದಕ್ಕೆ ಪ್ರತಿಯಾಗಿ ಅಧಿಕಾರಿಗಳಿಂದ ಮಾಹಿತಿ ಪಡೆದು ಮಾತನಾಡಿದ ಸಚಿವರು, ನೀರು ಪೂರೈಕೆಯಲ್ಲಿ ಆಗುತ್ತಿರುವ ಸೋರಿಕೆ ತಡೆದು ನಿಯಮಿತವಾಗಿ ಜನಸಾಮಾನ್ಯರಿಗೆ ನೀರು ಪೂರೈಕೆ ಮಾಡಲು ನಿರ್ದೇಶನ ನೀಡಿದರು.

ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಮಾತನಾಡಿ, ಜಿಲ್ಲೆಯಲ್ಲಿ ಸದ್ಯ 11 ಹೋಬಳಿಗಳಿದ್ದು, ಜನಸಂಖ್ಯೆ ಅನುಸಾರ 3 ಹೊಸ ಹೊಬಳಿ ಆಗಬೇಕಿದೆ. ಈಗಾಗಲೇ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ. ಜೊತೆಗೆ ತಹಶೀಲ್ದಾರರಿಗೆ ಮೂರು ವಾಹನಗಳ ಅಗತ್ಯವಿದ್ದು, ತಕ್ಷಣ ಪೂರೈಸುವಂತೆ ಕೋರಿದರು. ಹೊಸ ತಾಲೂಕು ಹಾಗೂ ಶೀಥಿಲಾವಸ್ಥೆಯಲ್ಲಿರುವ ತಾಲೂಕು ಕಚೇರಿಗಳ ದುರಸ್ತಿಗೆ ಅನುದಾನ ಒದಗಿಸುವಂತೆ ಕೋರಿದರು.

ಸಭೆಯಲ್ಲಿ ಗದಗ-ಬೆಟಗೇರಿ ನಗರಸಭೆ ಅಧ್ಯಕ್ಷೆ ಉಷಾ ದಾಸರ, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ, ಕಂದಾಯ ಇಲಾಖೆ ಆಯುಕ್ತರಾದ ಪಿ.ಸುನೀಲಕುಮಾರ, ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ, ಉಪವಿಭಾಗಾಧಿಕಾರಿ ಡಾ.ವೆಂಕಟೇಶ ನಾಯ್ಕ, ಸೇರಿದಂತೆ ತಹಶೀಲ್ದಾರರು, ಕಂದಾಯ ನೀರಿಕ್ಷಕರು, ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು ಹಾಜರಿದ್ದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
formergadagakmskmskannadakrishnabyregowdalandsrevenue
0 FacebookTwitterPinterestEmail
cklbkrish

previous post
ಮರದ ಕೊಂಬೆ ತಲೆ ಮೇಲೆ ಬಿದ್ದು ಮೆದುಳಲ್ಲಿ ರಕ್ತಸ್ರಾವವಾಗಿದ್ದ ವ್ಯಕ್ತಿಗೆ ಯಶಸ್ವಿ ಸಂಕೀರ್ಣ ಶಸ್ತ್ರಚಿಕಿತ್ಸೆ
next post
ಬೆಂಗಳೂರು ನಗರಕ್ಕೆ 24 ಟಿಎಂಸಿ ನೀರು

You may also like

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

July 11, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (521)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,015)
  • ರಾಜ್ಯ (2,329)
  • ರಾಷ್ಟ್ರ (2,294)
  • ವಿಶ್ಲೇಷಣೆ (198)
  • ಶಿಕ್ಷಣ (401)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

    July 20, 2026

KMS Special

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

    July 18, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ