Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರವಿಶ್ಲೇಷಣೆಶಿಕ್ಷಣ

ನ.24ಕ್ಕೆ ಜಾತಿ ಗಣತಿ ವರದಿ ಸರಕಾರಕ್ಕೆ ಸಲ್ಲಿಕೆ

by KM Shivaraju November 10, 2023
written by KM Shivaraju November 10, 2023 0 comments 1 minutes read
5FacebookTwitterPinterestEmail
147

ಮೂಲ ಪ್ರತಿ ನಾಪತ್ತೆಯಾದರೂ ವರದಿ ಸಲ್ಲಿಸಲು ತಯಾರಿ; ಒಕ್ಕಲಿಗ, ಲಿಂಗಾಯಿತರ ವಿರೋಧದ ನಡುವೆಯೂ ಆಯೋಗದ ಹಠ

ಬೆಂಗಳೂರು: ಕಾಂತರಾಜ್ ಅಧ್ಯಕ್ಷತೆಯಲ್ಲಿ ಸಿದ್ಧಪಡಿಸಲಾಗಿದ್ದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ವರದಿಯ ಮೂಲ ಪ್ರತಿಯೇ ನಾಪತ್ತೆಯಾಗಿದೆ ಎಂಬ ವಿವಾದದ ನಡುವೆಯೇ ಹಾಲಿ ಅಧ್ಯಕ್ಷ ಜಯಪ್ರಕಾಶ್ ಹೆಗಡೆ ನವೆಂಬರ್ 24ರಂದು ಸರ್ಕಾರಕ್ಕೆ ವರದಿ ಸಲ್ಲಿಸಲಿದ್ದಾರೆ.

ಆಯೋಗದ ವರದಿ ಸರ್ಕಾರಕ್ಕೆ ಸಲ್ಲಿಕೆಯಾಗಲಿದೆ ಎಂಬ ಹಿನ್ನೆಲೆಯಲ್ಲಿ ಒಕ್ಕಲಿಗ ಹಾಗೂ ವೀರಶೈವ-ಲಿಂಗಾಯತ ಸಮುದಾಯ ವಿರೋಧ ವ್ಯಕ್ತಪಡಿಸಿ, ಮರು ಸಮೀಕ್ಷೆಗೆ ಒತ್ತಾಯಿಸಿವೆ.

ಕಳೆದ 2015ರಲ್ಲಿ ಆಯೋಗದ ವತಿಯಿಂದ ಕೈಗೊಳ್ಳಲಾದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಮುಖ್ಯ ವರದಿಯಲ್ಲಿ ಸದಸ್ಯ ಕಾರ್ಯದರ್ಶಿಗಳ ಸಹಿ ಇಲ್ಲ ಎಂದು ಹಾಲಿ ಅಧ್ಯಕ್ಷರು, 2021ರ ಅಕ್ಟೋಬರ್ 5ರಂದೇ ಸರ್ಕಾರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದರು.

2021ರ ಆಗಸ್ಟ್ 26ರಂದು ಆಯೋಗದ ಕಚೇರಿಯಲ್ಲಿ ಇರಿಸಲಾಗಿದ್ದ ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆಯಲ್ಲಿ ಸಂಗ್ರಹಿಸಿದ್ದ ಅಂಕಿ-ಅಂಶಗಳು ಹಾಗೂ ಇತರೆ ವಿವರಗಳನ್ನು ಒಳಗೊಂಡ ಸೀಲ್ಡ್ ಬಾಕ್ಸ್‌ಗಳನ್ನು ಆಯೋಗದ ಅಧ್ಯಕ್ಷರು, ಸದಸ್ಯರು ಹಾಗೂ ಸದಸ್ಯ ಕಾರ್ಯದರ್ಶಿ ಅವರ ಸಮ್ಮುಖದಲ್ಲಿ ಮಹಜರು ನಡೆಸಿ ತೆರೆಯಲಾಗಿತ್ತು.

ಮುದ್ರಿತ ಮುಖ್ಯ ವರದಿಯಲ್ಲಿ ಸದಸ್ಯ ಕಾರ್ಯದರ್ಶಿಯವರ ಸಹಿ ಇಲ್ಲದೆ ಇರುವುದನ್ನು ಆಯೋಗ ಗಮನಿಸಿತ್ತು.
ಇದಕ್ಕೆ ಸಂಬಂಧಿಸಿದಂತೆ ಮೂಲ ಪ್ರತಿ ಸೀಲ್ಡ್ ಬಾಕ್ಸ್‌ನಲ್ಲಿ ಲಭ್ಯವಿಲ್ಲದೆ ಇರುವುದರಿಂದ, ಹಸ್ತ ಪ್ರತಿಯನ್ನು ಕೂಡಲೇ ಆಯೋಗದ ಕಚೇರಿಗೆ ಸಲ್ಲಿಸಲು ಸಂಬಂಧಪಟ್ಟ ಅಧಿಕಾರಿಗೆ ಸೂಚಿಸಲಾಗಿತ್ತು.

ಸೂಚನೆಗೆ ಸಂಬಂಧಪಟ್ಟವರು ಉತ್ತರ ನೀಡಿದ್ದು, ಆ ಪತ್ರದ ಪ್ರತಿಯನ್ನೂ ಲಗತ್ತಿಸಿ, ಈ ವಿಚಾರವನ್ನು ಸರ್ಕಾರದ ಗಮನಕ್ಕೆ ತರಲಾಗಿದೆ.
ಇದಕ್ಕೆ ಸಂಬಂಧಪಟ್ಟಂತೆ ಯಾವ ರೀತಿಯ ಕ್ರಮ ಕೈಗೊಳ್ಳಬೇಕು ಎಂಬುದರ ಬಗ್ಗೆ ಸ್ಪಷ್ಟ ಪಡಿಸುವಂತೆ ಕೋರಿದ್ದ ಪತ್ರ ಬಹಿರಂಗಗೊಂಡಿದೆ.

ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್, ಹಿಂದುಳಿದ ವರ್ಗಗಳ ಜಾತಿ ಗಣತಿಯನ್ನು ಪ್ರಕಟಿಸುತ್ತಿದ್ದಂತೆ ಕಾಂಗ್ರೆಸ್‌ನ ಅಧಿನಾಯಕ ರಾಹುಲ್ ಗಾಂಧಿ ಇದಕ್ಕೆ ಬೆಂಬಲ ವ್ಯಕ್ತಪಡಿಸಿದ್ದರು.

ರಾಹುಲ್ ಹೇಳಿಕೆ ನೀಡಿದ ಬೆನ್ನಲ್ಲೇ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಸಹಾ, ಕಾಂತರಾಜ್ ವರದಿಯನ್ನು ಸರ್ಕಾರಕ್ಕೆ ಸಲ್ಲಿಸುವಂತೆ ಕೋರಿದ್ದರು.

ಮುಖ್ಯಮಂತ್ರಿ ಅವರ ಹೇಳಿಕೆ ಬೆನ್ನಲ್ಲೇ ಕಾಂತರಾಜ್ ವರದಿ ಬಗ್ಗೆ ಪರ ಮತ್ತು ವಿರೋಧ ಹೇಳಿಕೆಗಳು ವ್ಯಕ್ತವಾದವು.

ಬರುವ ಏಪ್ರಿಲ್-ಮೇ ತಿಂಗಳಲ್ಲಿ ಲೋಕಸಭಾ ಚುನಾವಣೆ ಎದುರಾಗಲಿದ್ದು ಈ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರು ವರದಿ ಬಗ್ಗೆ ಏನು ನಿರ್ಧಾರ ಕೈಗೊಳ್ಳುತ್ತಾರೋ ಕಾದುನೋಡಬೇಕಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bjpcaste censuscaste politicscongress governamentjdskarnatakanewsvakkaligaveerashaiva
5 FacebookTwitterPinterestEmail
KM Shivaraju

previous post
ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ
next post
545 ಪಿಎಸ್ ಐ ನೇಮಕಾತಿಗೆ ಮರು ಪರೀಕ್ಷೆ

You may also like

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

July 20, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (521)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,015)
  • ರಾಜ್ಯ (2,329)
  • ರಾಷ್ಟ್ರ (2,294)
  • ವಿಶ್ಲೇಷಣೆ (198)
  • ಶಿಕ್ಷಣ (401)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

    July 20, 2026

KMS Special

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

    July 18, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ