Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಉದ್ಯೋಗರಾಜಕೀಯರಾಜ್ಯರಾಷ್ಟ್ರಶಿಕ್ಷಣ

ರಾಜಧಾನಿ ಸಮೀಪ ಜಾಗತಿಕ ಮಟ್ಟದ ಕೆಎಚ್‌ಐಆರ್ ಸಿಟಿ ನಿರ್ಮಾಣ

by KM Shivaraju November 11, 2023
written by KM Shivaraju November 11, 2023 0 comments 2 minutes read
6FacebookTwitterPinterestEmail
101
40 ಸಾವಿರ ಕೋಟಿ ರೂ. ಹೂಡಿಕೆ, 1 ಲಕ್ಷ ಉದ್ಯೋಗ ಸೃಷ್ಟಿ: ಎಂ ಬಿ ಪಾಟೀಲ

ಬೆಂಗಳೂರು: ರಾಜಧಾನಿಯಿಂದ60-80 ಕಿ.ಮೀ. ದೂರದಲ್ಲಿ ಜಾಗತಿಕ ದರ್ಜೆಯ ‘ಜ್ಞಾನ, ಆರೋಗ್ಯ, ನಾವೀನ್ಯತೆ ಮತ್ತು ಸಂಶೋಧನಾ ನಗರ’ (ಕೆಎಚ್‌ಐಆರ್ ಸಿಟಿ)ವನ್ನು ಅಭಿವೃದ್ಧಿ ಪಡಿಸಲಾಗುವುದು. ಇಲ್ಲಿ 40ಸಾವಿರ ಕೋಟಿ ರೂ. ಹೂಡಿಕೆ ಆಗಲಿದ್ದು, 80 ಸಾವಿರದಿಂದ ೧ ಲಕ್ಷ ಉದ್ಯೋಗ ಸೃಷ್ಟಿ ಆಗಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.
ಉದ್ದೇಶಿತ ಕೆಎಚ್‌ಐಆರ್ ಸಿಟಿ ಬಗ್ಗೆ ಗಣ್ಯ ಉದ್ಯಮಿಗಳು, ವೈದ್ಯರು, ಶಿಕ್ಷಣ ತಜ್ಞರು ಮತ್ತು ಸಂಶೋಧಕರ ಸಲಹೆ/ಅಭಿಪ್ರಾಯಗಳನ್ನು ಪಡೆಯಲು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ದುಂಡು ಮೇಜಿನ ಸಭೆಯ ಬಳಿಕ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಜತೆಯಲ್ಲಿ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಕೂಡ ಇದ್ದರು.
ಜಗತ್ತಿನ ಅತ್ಯುತ್ತಮ ಕಂಪನಿಗಳು, ವಿಶ್ವವಿದ್ಯಾಲಯಗಳ ಕ್ಯಾಂಪಸ್, ಆಸ್ಪತ್ರೆ, ಆರ್ ಮತ್ತು ಡಿ ಕೇಂದ್ರಗಳು, ಆಧುನಿಕ ಸ್ಟಾರ್ಟಪ್ಸ್, ಕೆಎಚ್‌ಐಆರ್ ಸಿಟಿಯಲ್ಲಿ ನೆಲೆಯೂರಲಿವೆ. ಒಟ್ಟು ಎರಡು ಹಂತಗಳಲ್ಲಿ ಇದನ್ನು ತಲಾ ಒಂದು ಸಾವಿರ ಎಕರೆಯಲ್ಲಿ ಅಭಿವೃದ್ಧಿ ಪಡಿಸಲಾಗುವುದು. ಈ ಯೋಜನೆಯು ಸಾಕಾರಗೊಂಡರೆ 1 ಲಕ್ಷ ಕೋಟಿ ರೂ.ಗಳಷ್ಟು ವಾರ್ಷಿಕ ವರಮಾನ ಉತ್ಪತ್ತಿಯಾಗಲಿದ್ದು, ರಾಜ್ಯದ ಜಿಡಿಪಿಗೆ ಶೇಕಡ ೫ರಷ್ಟು ಕೊಡುಗೆ ಇದರಿಂದ ಬರಲಿದೆ ಎಂದು ಅವರು ತಿಳಿಸಿದರು.

2ಸಾವಿರ ಎಕರೆ ವಿಸ್ತೀರ್ಣ, ಮೊದಲ ಹಂತದಲ್ಲಿ ಸಾವಿರ ಎಕರೆಯಲ್ಲಿ ಸಾಕಾರ

ಅಮೆರಿಕ, ಸಿಂಗಪುರ, ಜಪಾನ್, ಅರಬ್, ಸ್ವೀಡನ್, ಡೆನ್ಮಾರ್ಕ್, ಚೀನಾ ಮುಂತಾದ ದೇಶಗಳಲ್ಲಿ ಇಂತಹ ‘ಸಿಟಿ’ಗಳಿವೆ. ನಿರೀಕ್ಷಿತ ಮಟ್ಟದ ಆರ್ಥಿಕ ಅಭಿವೃದ್ಧಿಯನ್ನು ಸಾಧಿಸಬೇಕೆಂದರೆ ಆರೋಗ್ಯ, ಶಿಕ್ಷಣ, ಸಂಶೋಧನೆ, ನಾವೀನ್ಯತೆ, ವಿಜ್ಞಾನ, ತಂತ್ರಜ್ಞಾನ ಇವುಗಳ ಮೇಲೆ ಗಮನವನ್ನು ಕೇಂದ್ರೀಕರಿಸಬೇಕಾಗಿದೆ. ಬೆಂಗಳೂರು ಇವುಗಳ ಆಡುಂಬೊಲವಾಗಿದ್ದು, ಇದರ ಗರಿಷ್ಠ ಲಾಭವನ್ನು ನಾವು ಪಡೆದುಕೊಳ್ಳಬೇಕಾಗಿದೆ ಎಂದು ಅವರು ಪ್ರತಿಪಾದಿಸಿದರು.
ಕೆಎಚ್‌ಐಆರ್ ಸಿಟಿಯಲ್ಲಿ ಆರೋಗ್ಯ ಕ್ಷೇತ್ರದ ಕಂಪನಿಗಳು, ವೈದ್ಯಕೀಯ ಕೇಂದ್ರಗಳು, ರಿಯಲ್ ಎಸ್ಟೇಟ್, ಹೂಡಿಕೆದಾರರು ಮತ್ತು ವಿಮಾ ಕಂಪನಿಗಳ ನಡುವೆ ಸಹಭಾಗಿತ್ವಕ್ಕೆ ಒತ್ತು ಇರಲಿದೆ. ಇದು ಅಂತಿಮವಾಗಿ ಜಾಗತಿಕ ಮಟ್ಟದಲ್ಲಿ ಉತ್ಕೃಷ್ಟತೆಯ ಮಾನದಂಡವಾಗಿ ಗುರುತಿಸಿಕೊಳ್ಳುವಂತೆ ಮಾಡುವುದು ಸರಕಾರದ ಗುರಿಯಾಗಿದೆ ಎಂದು ಅವರು ವಿವರಿಸಿದರು.

ರಾಜ್ಯಕ್ಕೆ ವಾಣಿಜ್ಯ ದೃಷ್ಟಿಯಿಂದ ಲಾಭದಾಯಕ

ಈ ‘ಸಿಟಿ’ಯನ್ನು ಸರಿಯಾದ ದಿಕ್ಕಿನಲ್ಲಿ ಮುಂದಿನ ಹಂತಕ್ಕೆ ಕೊಂಡೊಯ್ಯಲು ಗಣ್ಯ ಸಾಧಕರ ಸಲಹೆಗಳನ್ನು ಪಡೆಯಲಾಗಿದ್ದು, ಒಂದೊಂದು ವಲಯಕ್ಕೂ ಉಪಸಮಿತಿಗಳನ್ನು ರಚಿಸಲಾಗುವುದು. ಒಟ್ಟಾರೆಯಾಗಿ ಯೋಜನೆಯು ರಾಜ್ಯಕ್ಕೆ ವಾಣಿಜ್ಯ ದೃಷ್ಟಿಯಿಂದ ಲಾಭದಾಯಕವಾಗಿ ಪರಿಣಮಿಸಬೇಕು ಎನ್ನುವ ನಿಟ್ಟಿನಲ್ಲಿ ನೀಲನಕ್ಷೆ ಮತ್ತು ಕಾರ್ಯತಂತ್ರ ರೂಪಿಸಲಾಗುವುದು ಎಂದು ಸಚಿವರು ನುಡಿದರು.
ಸಭೆಯಲ್ಲಿ ಉದ್ಯಮಿಗಳಾದ ಕ್ರಿಸ್ ಗೋಪಾಲಕೃಷ್ಣನ್, ಗೀತಾಂಜಲಿ ಕಿರ್ಲೋಸ್ಕರ್, ಪ್ರಶಾಂತ್ ಪ್ರಕಾಶ್, ಹೆಸರಾಂತ ವೈದ್ಯರಾದ ಡಾ.ದೇವಿಶೆಟ್ಟಿ, ಡಾ.ಸಿ ಎನ್ ಮಂಜುನಾಥ್, ಡಾ.ವಿವೇಕ್ ಜವಳಿ, ಡಾ.ಶರಣ್ ಪಾಟೀಲ್, ಡಾ.ತಸ್ಲಿಂ ಸೈಯದ್, ಅಂಶುಲ್ ಗುಪ್ತ, ಕೈಗಾರಿಕಾ ಇಲಾಖೆಯ ಆಯುಕ್ತೆ ಗುಂಜನ್ ಕೃಷ್ಣ, ಆರೋಗ್ಯ ಇಲಾಖೆಯ ಉನ್ನತಾಧಿಕಾರಿ ಟಿ.ಕೆ.ಅನಿಲ್ ಕುಮಾರ್, ಕೌಶಲ್ಯಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಪ್ರಧಾನ ಕಾರ್ಯದರ್ಶಿ ಉಮಾ ಮಹದೇವನ್ ಮುಂತಾದವರು ಉಪಸ್ಥಿತರಿದ್ದರು.

ಕೆಎಚ್‌ಐಆರ್ ಸಿಟಿ ಪರಿಕಲ್ಪನೆಗೆ ಸಾಧಕರ ಸ್ವಾಗತ

ಸರ್ಕಾರವು ಅಭಿವೃದ್ಧಿಪಡಿಸಲಿರುವ ಕೆಎಚ್‌ಐಆರ್ ಸಿಟಿ ಪರಿಕಲ್ಪನೆಯನ್ನು ಸಭೆಯಲ್ಲಿ ಭಾಗವಹಿಸಿದ್ದ ಡಾ.ಸಿ ಎನ್ ಮಂಜುನಾಥ್, ಡಾ.ವಿವೇಕ್ ಜವಳಿ ಮತ್ತು ಡಾ.ದೇವಿಶೆಟ್ಟಿ ಮೆಚ್ಚಿಕೊಂಡು, ಸಚಿವ ಎಂ.ಬಿ.ಪಾಟೀಲ ಅವರ ದೂರದೃಷ್ಟಿಯನ್ನು ಸ್ವಾಗತಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಇವರುಗಳು, ‘ವೇಗದಿಂದ ಬೆಳೆಯುತ್ತಿರುವ ಬೆಂಗಳೂರಿಗೆ ಇಂಥದ್ದೊಂದು ಯೋಜನೆಯ ಅಗತ್ಯವಿತ್ತು. ಇದರಿಂದ ರಾಜ್ಯದ ಜನರಿಗೆ ಕೈಗೆಟುಕುವ ರೀತಿಯಲ್ಲಿ ಅತ್ಯಾಧುನಿಕ ಚಿಕಿತ್ಸೆಗಳನ್ನು ಕೊಡಲು ಮತ್ತು ಈ ನಿಟ್ಟಿನಲ್ಲಿ ಸಂಶೋಧನೆಗಳನ್ನು ಕೈಗೊಳ್ಳಲು ಸಾಧ್ಯವಾಗಲಿದೆ. ಇಲ್ಲಿ ಬರಲಿರುವ ನಾಲ್ಕೂ ವಲಯಗಳು ಒಂದಕ್ಕೊಂದು ಪೂರಕವಾಗಿದ್ದು, ಸುಸ್ಥಿರ ಅಭಿವೃದ್ಧಿ ಸಾಧಿಸಲು ನೆರವಿಗೆ ಬರಲಿದೆ’ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bengaluruemploymentjobskarnatakakhircitykmskmskannadamb patil
6 FacebookTwitterPinterestEmail
KM Shivaraju

previous post
ರಾಜ್ಯದಲ್ಲಿ58282 ಬೂತ್‌ಗಳಲ್ಲಿ ಪಕ್ಷದ ಸಂಘಟನೆ ಬಲವರ್ಧನೆ
next post
ಬ್ಲೂಟೂತ್ ಪರೀಕ್ಷೆ ಹಗರಣ

You may also like

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

July 20, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (521)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,015)
  • ರಾಜ್ಯ (2,329)
  • ರಾಷ್ಟ್ರ (2,294)
  • ವಿಶ್ಲೇಷಣೆ (198)
  • ಶಿಕ್ಷಣ (401)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

    July 20, 2026

KMS Special

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

    July 18, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ