ಬೆಂಗಳೂರು: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ಜೆ.ಪಿ. ನಗರದಲ್ಲಿರುವ ಮನೆಗೆ ದೀಪಾಲಂಕಾರಕ್ಕೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆಯಲಾಗಿತ್ತೆಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಕಚೇರಿ ಗೋಡೆ ಮೇಲೆ ವಿವಾದಾತ್ಮಕ ಪೋಸ್ಟರ್ ಅಂಟಿಸಿರುವ ಘಟನೆ ವರದಿಯಾಗಿದೆ.
ಜೆಡಿಎಸ್ ಕಚೇರಿ ಜೆಪಿ ಭವನದ ಕಾಂಪೌಂಡ್ ಗೋಡೆ ಮೇಲೆ ಕುಮಾರಸ್ವಾಮಿ ಅವರನ್ನು ಅವಮಾನಿಸುವಂತಹ ಪೋಸ್ಟರ್ ಅಂಟಿಸಿರುವುದು ಕಂಡುಬಂದಿದೆ.
ಇದುವರೆಗೆ ಯಾವುದೇ ದೂರು ದಾಖಲಾಗಿಲ್ಲ
ಇದು ಕಿಡಿಗೇಡಿಗಳ ಕೃತ್ಯವೇ ಅಥವಾ ಕಾಂಗ್ರೆಸ್ ಕಾರ್ಯಕರ್ತರ ಕೃತ್ಯವೇ ಎಂಬುದು ಸದ್ಯಕ್ಕೆ ತಿಳಿದು ಬಂದಿಲ್ಲ, ಇದುವರೆಗೆ ಯಾವುದೇ ದೂರು ಸಹಾ ದಾಖಲಾಗಿಲ್ಲ.
ವಿದ್ಯುತ್ ಕಳವು ಪ್ರಕರಣಕ್ಕೆ ಸಂಬಧಿಸಿದಂತೆ ಸ್ವತಃ ಕುಮಾರಸ್ವಾಮಿ ಅವರೇ, ಅಚಾತುರ್ಯದಿಂದ ತಪ್ಪಾಗಿರುವುದನ್ನು ಒಪ್ಪಿಕೊಂಡು ದಂಡ ಕಟ್ಟುವುದಾಗಿ ಹೇಳಿದ್ದರೂ, ಪೋಸ್ಟರ್ ಅಂಟಿಸಲಾಗಿದೆ.
ವಿದ್ಯುತ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಕುಮಾರಸ್ವಾಮಿ ವಿರುದ್ಧ ಜಯನಗರದ ಬೆಸ್ಕಾಂ ಜಾಗೃತ ದಳದ ಅಧಿಕಾರಿಗಳು ಭಾರತೀಯ ವಿದ್ಯುತ್ ಕಾಯ್ದೆ 135ರ ಅಡಿ ಪ್ರಕರಣ ದಾಖಲಿಸಿದ್ದಾರೆ.