Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜ್ಯರಾಷ್ಟ್ರ

ಸೋಲಾರ್‌ ಕೃಷಿ ಪಂಪ್‌ ಸೆಟ್‌ ಬಳಕೆಗೆ ‘ಮಾಸ್ಟರ್‌ ಟ್ರೇನರ್‌’ಗಳಿಂದ ರೈತರಿಗೆ ತರಬೇತಿ

by KM Shivaraju November 16, 2023
written by KM Shivaraju November 16, 2023 0 comments 2 minutes read
0FacebookTwitterPinterestEmail
92
ಕುಸುಮ್‌ ಬಿ ಯೋಜನೆ ಸಮರ್ಪಕ ಅನುಷ್ಠಾನಕ್ಕೆ ಅಧಿಕಾರಿಗಳಿಗೆ ತರಬೇತಿ ಕಾರ್ಯಾಗಾರ

ಬೆಂಗಳೂರು:ನೀರಾವರಿಗೆ ಸಾಂಪ್ರದಾಯಿಕ ಇಂಧನದ ಅವಲಂಬನೆ ತಗ್ಗಿಸಿ  ಸೌರ ಪಂಪ್‌ಸೆಟ್‌ ಬಳಕೆಗೆ ಉತ್ತೇಜಿಸುವ ನಿಟ್ಟಿನಲ್ಲಿ ‘ಕುಸುಮ್‌ ಬಿ’ ಯೋಜನೆ ಅನುಷ್ಠಾನಕ್ಕೆ ಒತ್ತು ನೀಡಿರುವ ರಾಜ್ಯ ಸರ್ಕಾರ, ರೈತರಿಗೆ ಇದರಿಂದ ಆಗುವ ಪ್ರಯೋಜನಗಳ ಬಗ್ಗೆ ಅರಿವು ಮೂಡಿಸಲು ನಿರ್ಧರಿಸಿದೆ.

ಈ ನಿಟ್ಟಿನಲ್ಲಿ ಯೋಜನೆಯ ಅನುಕೂಲತೆಗಳ ಬಗ್ಗೆ ರೈತರಲ್ಲಿ ಜಾಗೃತಿ ಮೂಡಿಸಿ ಅವರು ಸೋಲಾರ್ ಪಂಪ್ ಸೆಟ್ ಅಳವಡಿಸಿಕೊಳ್ಳುವಂತೆ ಮಾಡಲು ಇಂಧನ ಇಲಾಖೆ ಅಧಿಕಾರಿಗಳಿಗೆ ತರಬೇತಿ ನೀಡಲು ಕ್ರೆಡಲ್‌ ವತಿಯಿಂದ ಗುರುವಾರ ಒಂದು ದಿನದ ಕಾರ್ಯಾಗಾರ ಏರ್ಪಡಿಸಲಾಗಿತ್ತು.

ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತದ ಕಚೇರಿಯಲ್ಲಿ ಆಯೋಜಿಸಿದ್ದ ಕಾರ್ಯಾಗಾರವನ್ನು ಉದ್ದೇಶಿಸಿ ಮಾತನಾಡಿದ ಇಂಧನ ಮತ್ತು ಮೂಲಸೌಕರ್ಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ‘ಕುಸುಮ್‌ ಬಿ ಯೋಜನೆ ಅನುಷ್ಠಾನದಿಂದ ರೈತರಿಗೂ ಹಾಗೂ ಸರ್ಕಾರಕ್ಕೂ ಲಾಭವಿದೆ. ಈ ಯೋಜನೆ ರಾಜ್ಯದ ಪ್ರತಿ ರೈತರಿಗೂ ತಲುಪಿಸುವುದು ಅಧಿಕಾರಿಗಳ ಹೊಣೆ. ಈ ನಿಟ್ಟಿನಲ್ಲಿ ಇಂಧನ ಸಚಿವ ಕೆ.ಜೆ ಜಾರ್ಜ್‌ ಅವರ ನಿರ್ದೇಶನದಂತೆ ಅಧಿಕಾರಿಗಳಿಗೆ ತರಬೇತಿ ನೀಡಲಾಗುತ್ತಿದೆ,”ಎಂದರು.

ರಾಜ್ಯ ಸರ್ಕಾರದ ಸಬ್ಸಿಡಿಯನ್ನು ಶೇ. 50ಕ್ಕೆ  ಹೆಚ್ಚಳ

“ರಾಜ್ಯದಲ್ಲಿ ನೀರಾವರಿ ಪಂಪ್ ಸೆಟ್‌ಗಳ ಸಂಖ್ಯೆ‌ ಜತೆಗೆ ಅವುಗಳ ಬಳಕೆ ಪ್ರಮಾಣವೂ ಹೆಚ್ಚಿದೆ. ಶೇ.40ರಷ್ಟು ವಿದ್ಯುತ್ ಇದೇ ಉದ್ದೇಶಕ್ಕೆ ಬಳಕೆಯಾಗುತ್ತಿದೆ. ಹಾಗಾಗಿ ಪೂರೈಕೆ ಕಷ್ಟ ಆಗುತ್ತಿದೆ. ರೈತರ ಅಗತ್ಯಕ್ಕೆ ತಕ್ಕಂತೆ ವಿದ್ಯುತ್ ಪೂರೈಸಲು ಸೌರ ಪಂಪ್‌ಸೆಟ್‌ ಬಳಕೆಯೇ ಪರಿಹಾರ ಈ ನಿಟ್ಟಿನಲ್ಲಿ ‘ಕುಸುಮ್‌ ಬಿ’ ಯೋಜನೆ ಅನುಷ್ಠಾನಕ್ಕೆ ಒತ್ತು ನೀಡಲಾಗಿದೆ. ಈ ಬಗ್ಗೆ ರೈತರಲ್ಲಿ ಮೂಡುವ ಎಲ್ಲ ಗೊಂದಲಗಳಿಗೆ ಪರಿಹಾರ ಸೂಚಿಸಲು ಅಧಿಕಾರಿಗಳು ಸಜ್ಜಾಗಲಿದ್ದಾರೆ. ತರಬೇತಿ ಪಡೆದ ‘ಮಾಸ್ಟರ್‌ ಟ್ರೇನರ್‌’ಗಳು ರೈತರಿಗೆ ಈ ಬಗ್ಗೆ ಮಾಹಿತಿ ನೀಡಿದ್ದು, ಯೋಜನೆ ಜಾರಿಗೆ ಸಹಕರಿಸಲಿದ್ದಾರೆ,”ಎಂದರು.

ಮಹಾರಾಷ್ಟ್ರದಲ್ಲಿ ‘ಕುಸುಮ್‌ ಬಿ’ ಯೋಜನೆಯನ್ನು ಉತ್ತಮವಾಗಿ ಅನುಷ್ಠಾನಗೊಳಿಸಲಾಗಿದೆ. ನಮ್ಮ ರಾಜ್ಯದ ಅಧಿಕಾರಿಗಳು ಅಲ್ಲಿಗೆ ತೆರಳಿ ಅಧ್ಯಯನ ಮಾಡಿದ್ದಾರೆ. ಇಂದಿನ ಕಾರ್ಯಾಗಾರದಲ್ಲಿ ಮಹಾರಾಷ್ಟ್ರದ ಅಧಿಕಾರಿಗಳು ತರಬೇತಿ ನೀಡಿದ್ದಾರೆ. ಪೂರ್ಣ ತರಬೇತಿ ಪಡೆದ ‘ಮಾಸ್ಟರ್‌ ಟ್ರೇನರ್‌’ಗಳನ್ನು ಮಹಾರಾಷ್ಟ್ರಕ್ಕೆ ಕಳುಹಿಸಲಾಗುತ್ತದೆ,”ಎಂದು ವಿವರಿಸಿದರು.  

“ಸೌರಶಕ್ತಿಯ  ಸುಲಭ ಸ್ಥಾಪನೆ ಮತ್ತು ದೀರ್ಘಕಾಲ ಬಾಳಿಕೆ ಬರುವ ಕಾರಣದಿಂದ ಗ್ರಾಮೀಣ ಪ್ರದೇಶಗಳಲ್ಲೂ  ಸೌರ ತಂತ್ರಜ್ಞಾನ ಹೆಚ್ಚು ಜನಪ್ರಿವಾಗುತ್ತಿದೆ. ಈ ಹಿಂದೆ ಯೋಜನೆಗೆ ರಾಜ್ಯದಿಂದ ಶೇ.30 ಮತ್ತು ಕೇಂದ್ರ ಸರ್ಕಾರದಿಂದ ಶೇ.30 ಸಬ್ಸಿಡಿ ನೀಡಲಾಗುತ್ತಿತ್ತು. ಇತ್ತೀಚಿನ ಸಂಪುಟ ಸಭೆಯ ನಿರ್ಧಾರದಂತೆ ರಾಜ್ಯ ಸರ್ಕಾರದ ಸಬ್ಸಿಡಿಯನ್ನು ಶೇ. 50ಕ್ಕೆ ಏರಿಸಲಾಗಿದೆ. ಯೋಜನೆಯಡಿ ಪಂಪ್, ಮೀಟರ್, ಪೈಪ್‌ಗಳನ್ನು ಒದಗಿಸಲಾಗುತ್ತದೆ,”ಎಂದು ಗುಪ್ತ ಹೇಳಿದರು.

ಯೋಜನೆ ಅನುಷ್ಠಾನಕ್ಕೆ ಶೀಘ್ರದಲ್ಲೇ ಟೆಂಡರ್‌ 

“ರೈತರ ಕಲ್ಯಾಣಕ್ಕಾಗಿ ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಜಾರಿಗೊಳಿಸುತ್ತಿರುವ ಯೋಜನೆಗೆ ಅಧಿಕೃತ ವಿತರಕರನ್ನು ನಿಯೋಜಿಸಲು ಶೀಘ್ರದಲ್ಲಿಯೇ ಟೆಂಡರ್ ಕರೆಯಲಾಗುವುದು. ಮಹಾರಾಷ್ಟ್ರ ಮಾದರಿಯಲ್ಲಿ 20-30 ವಿತರಕರನ್ನು ಗುರುತಿಸಿ ಆಯಾ ಜಿಲ್ಲೆಗಳಿಗೆ ನಿಯೋಜಿಸಲಾಗುತ್ತದೆ. ಸೋಲಾರ್‌ ಪಂಪ್‌ಸೆಟ್‌ ಅಳವಡಿಕೆ, ನಿರ್ವಹಣೆಯ ಜವಾಬ್ದಾರಿಯನ್ನು ಅವರೇ ನಿಭಾಯಿಸುತ್ತಾರೆ,”ಎಂದು ಅವರು ಮಾಹಿತಿ ನೀಡಿದರು.

ಕುಸುಮ್‌ ಬಿ

ಸಾಂಪ್ರದಾಯಿಕ ಗ್ರಿಡ್-ಆಧಾರಿತ ವಿದ್ಯುತ್‌ ಅವಲಂಬನೆಯನ್ನು ತಗ್ಗಿಸಲು, ರೈತರಿಗೆ  ಸೌರ ಚಾಲಿತ ಪಂಪ್‌ಸೆಟ್‌ಗಳ ಬಳಕೆಗೆ ಒತ್ತು ನೀಡಲು ಸರ್ಕಾರ ರೈತರಿಗೆ ಸಬ್ಸಿಡಿ ನೀಡುತ್ತದೆ. ಯೋಜನೆಯಡಿಯಲ್ಲಿ ಕೇಂದ್ರ ಸರ್ಕಾರದಿಂದ 7.5 ಎಚ್.ಪಿ. ಸಾಮರ್ಥ್ಯದ ಸೌರ ಪಂಪ್ ಸೆಟ್‍ಗೆ ಶೇಕಡ 30 ಕೇಂದ್ರ ಸರ್ಕಾರದಿಂದ ಸಹಾಯಧನ ಒದಗಿಸುತ್ತದೆ.

ಸಭೆಯಲ್ಲಿ ಇಂಧನ ಮತ್ತು ಮೂಲಸೌಕರ್ಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ಕೆಪಿಟಿಸಿಎಲ್‌ನ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ, ಕ್ರೆಡಲ್ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ ರುದ್ರಪ್ಪಯ್ಯ  ಮತ್ತು ಇತರ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
agriculture pumpsetbengaluruipsetkarnatakakmskmskannadakusum b programpowersolarpower
0 FacebookTwitterPinterestEmail
KM Shivaraju

previous post
ಕೆಎಂಎಫ್  ಮಾದರಿಯಲ್ಲಿ ಕುರಿ ಹಾಗೂ ಮೇಕೆ ಮಾಂಸ ವಿತರಣೆ
next post
ಕುಡಿಯುವ ನೀರು , ಮೇವಿನ ನಿರ್ವಹಣೆ  ಹೊಣೆ ಟಾಸ್ಕ್ ಫೋರ್ಸ್ ಗೆ

You may also like

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

ಮನರೇಗಾ ಮರುಸ್ಥಾಪನೆ ಹೋರಾಟ ಬೆಂಬಲಿಸಿ

February 23, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ...

March 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ