Monday, September 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, September 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಉದ್ಯೋಗರಾಜಕೀಯರಾಜ್ಯರಾಷ್ಟ್ರ

ಬ್ಯಾಕ್ ಮೇಲ್ ಗೆ ನಾನು ಹೆದರುವುದಿಲ್ಲ: ಡಿ.ಕೆ. ಶಿವಕುಮಾರ್ ತಿರುಗೇಟು

by KM Shivaraju November 17, 2023
written by KM Shivaraju November 17, 2023 0 comments 1 minutes read
3FacebookTwitterPinterestEmail
121
ಲೆಕ್ಕ ಬೇಕೇ ಕೊಡುತ್ತೇನೆ; ತಪ್ಪು ಮಾಡಿದ್ದರೆ ಗಲ್ಲಿಗೆ ಹಾಕಿ

ಬೆಂಗಳೂರು: ಪೊಗರು ಮಾತುಗಳು, ಬ್ಲ್ಯಾಕ್ ಮೇಲ್ ಗಳಿಗೆ ನಾನು ಹೆದರುವುದಿಲ್ಲ. ಇದು ಅವರಿಗೂ ಗೊತ್ತಿದೆ. ಅವರು ಕೇಳಿರುವ ಎಲ್ಲಾ ಲೆಕ್ಕ ದಾಖಲೆಗಳನ್ನು ಕೊಡಲು ಸಿದ್ಧ ಎಂದು ಉಪಮುಖ್ಯಮಂ ಡಿ.ಕೆ. ಶಿವಕುಮಾರ್ ಅವರು ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ ತಿರುಗೇಟು ನೀಡಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನವರು ಮೇಕೆದಾಟು ಪಾದಯಾತ್ರೆ, ಕನಕೋತ್ಸವ ಮಾಡಿದಾಗ ಅನುಮತಿ ಪಡೆದು ಕರೆಂಟ್ ಬಳಸಿದ್ದರೆ, ಲುಲು ಮಾಲ್ ಸೇರಿದಂತೆ ದೊಡ್ಡ ಕಟ್ಟಡ ಕಟ್ಟುವಾಗ ಎಷ್ಟು ಕರೆಂಟ್ ಎಳೆದುಕೊಂಡಿಲ್ಲ, ಅದಕ್ಕೆ ಲೆಕ್ಕ ಕೊಡುವರೇ ಎಂಬ ಕುಮಾರಸ್ವಾಮಿ ಅವರ ಆರೋಪದ ಬಗ್ಗೆ ಮಾಧ್ಯಮಗಳು ಕೇಳಿದಾಗ ಶಿವಕುಮಾರ್ ಅವರು ಈ ರೀತಿ ಉತ್ತರಿಸಿದರು.

ಕುಮಾರಸ್ವಾಮಿ ತಾಳ್ಮೆ ಕಳೆದುಕೊಂಡಿದ್ದಾರೆ
“ಕುಮಾರಸ್ವಾಮಿ ಅವರು ತಮ್ಮ ತಾಳ್ಮೆ ಕಳೆದುಕೊಂಡಿದ್ದಾರೆ. ಹತಾಶೆಯಲ್ಲಿ ಅವರು ಬಾಯಿಗೆ ಬಂದದ್ದು ಮಾತನಾಡುತ್ತಿದ್ದಾರೆ. ಅವರು ಏನೇನು ಕೇಳುತ್ತಾರೆ, ಅವರ ಆಚಾರ ವಿಚಾರ, ಮಾತುಗಳಿಗೆ ರಾಜ್ಯದ ಜನ ಈಗಾಗಲೇ ಉತ್ತರ ಕೊಟ್ಟಿದ್ದಾರೆ. ಇನ್ನು ಬೇಕಾದರೆ ಆ ಉತ್ತರವನ್ನು ನಾನು ಕೊಡುತ್ತೇನೆ. ಅವರು ಕೇಳುತ್ತಿರುವ ಲೆಕ್ಕಾಚಾರದ ಪಟ್ಟಿ ಕೊಡೋಣ” ಎಂದು ತಿಳಿಸಿದರು.
ನಿಮ್ಮ ಮಾಲ್ ಅನ್ನು ಖರಾಬು ಭೂಮಿಯಲ್ಲಿ ಕಟ್ಟಿದ್ದೀರಿ ಎಂಬ ಕುಮಾರಸ್ವಾಮಿ ಅವರ ಆರೋಪದ ಬಗ್ಗೆ ಕೇಳಿದಾಗ, “ನಾನು ಮಾಲ್ ಕಟ್ಟಿರುವ ಜಾಗ ಕೇಂದ್ರ ಸರ್ಕಾರದ ಒಂದು ಸಂಸ್ಥೆಗೆ ಸೇರಿದ್ದು. ಆ ಸಂಸ್ಥೆಯವರು ದಾಖಲೆ ಮುಂದಿಟ್ಟು ಟೆಂಡರ್ ಕರೆದಿದ್ದರು. ಅದನ್ನು ನಮ್ಮ ಸ್ನೇಹಿತರು ಖರೀದಿ ಮಾಡಿದ್ದರು. ಅವರಿಂದ ನಾನು ಖರೀದಿ ಮಾಡಿ ಜಂಟಿ ಸಹಯೋಗದಲ್ಲಿ ಮಾಲ್ ಕಟ್ಟಿದ್ದೇವೆ.

ತಪ್ಪಿದ್ದರೆ ನನ್ನನ್ನು ಗಲ್ಲಿಗೆ ಹಾಕಲಿ

ಅದರಲ್ಲಿ ಏನಾದರೂ ತಪ್ಪಿದ್ದರೆ ನನ್ನನ್ನು ಗಲ್ಲಿಗೆ ಹಾಕಲಿ. ನನ್ನನ್ನು ಈ ರೀತಿ ನಿಯಂತ್ರಿಸಲು ಅವರು ಈಗಾಗಲೇ ಬೇಕಾದಷ್ಟು ಪ್ರಯತ್ನ ಮಾಡಿದ್ದಾರೆ. ಅವರ ತಂದೆಯವರು ಕೂಡ 10-15 ವರ್ಷಗಳ ಹಿಂದೆಯೇ ಜಯರಾಜ್ ಎಂಬ ಅಧಿಕಾರಿ ಮೂಲಕ ಎಲ್ಲಾ ರೀತಿಯ ಪ್ರಯತ್ನ ಮಾಡಿದ್ದರು. ಈಗಲೂ ಯಾವುದೇ ರೀತಿಯ ತನಿಖೆ ಮಾಡಿಸಲಿ. ನಾನು ಎಲ್ಲದಕ್ಕೂ ಸಿದ್ಧ ಎಂದರು.
ಸಾರ್ವಜನಿಕ ಜೀವನದಲ್ಲಿರುವ ವ್ಯಕ್ತಿಯಾಗಿ ಪ್ರತಿ ಸಂದರ್ಭದಲ್ಲೂ ನನ್ನ ಆಸ್ತಿ ವಿವರ ಘೋಷಿಸಿದ್ದೇನೆ. ನಾನು ಅಕ್ರಮವಾಗಿ ಕರೆಂಟ್ ಬಳಸಿರುವ ಬಗ್ಗೆ ಅವರು ಮಾತನಾಡುತ್ತಿದ್ದಾರೆ. ನಾನು ಕಟ್ಟಿರುವ ಮಾಲ್ ಅನ್ನು ನನ್ನ ಪಾರ್ಟ್ನರ್ ಶೋಭಾ ಡೆವಲಪ್ಪರ್ಸ್ ಅವರು ಕಟ್ಟಿದ್ದು, ನೀವು ಎಷ್ಟು ಕರೆಂಟ್ ಬಳಸಿದ್ದೀರಿ ಎಂದು ದಾಖಲೆ ಸಮೇತ ತಂದು ತೋರಿಸಿ ಎಂದು ಅವರಿಗೆ ಹೇಳುತ್ತೇನೆ” ಎಂದು ತಿಳಿಸಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
3 FacebookTwitterPinterestEmail
KM Shivaraju

previous post
ಬೆಂಗಳೂರು ಪರಂಪರೆ, ಸಂಸ್ಕೃತಿ, ಪರಿಸರ ರಕ್ಷಣೆ ಜವಾಬ್ದಾರಿ ನಮ್ಮ ಮೇಲಿದೆ: ಡಿ.ಕೆ.ಶಿವಕುಮಾರ್
next post
ಬೆಸ್ಕಾಂ ವಿಧಿಸಿರುವ ದಂಡವೇ ಅಕ್ರಮ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ