Saturday, October 24, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, October 24, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಬೆಸ್ಕಾಂ ವಿಧಿಸಿರುವ ದಂಡವೇ ಅಕ್ರಮ

by KM Shivaraju November 17, 2023
written by KM Shivaraju November 17, 2023 0 comments 2 minutes read
2FacebookTwitterPinterestEmail
117
ಈ ಬಗ್ಗೆ ತಮಗೆ ಸ್ಪಷ್ಟನೆ ಕೊಡಬೇಕು

ಬೆಂಗಳೂರು:ದೀಪಾವಳಿ ಸಂದರ್ಭದಲ್ಲಿ ಕಂಬದಿಂದ ವಿದ್ಯುತ್ ಸಂಪರ್ಕ ಪಡೆದ ಆರೋಪದ ಹಿನ್ನೆಲೆಯಲ್ಲಿ ಬೆಸ್ಕಾಂ ವಿಚಕ್ಷಣಾ ದಳ ತಮಗೆ ವಿಧಿಸಿದ್ದ 68,526 ರೂ. ದಂಡವನ್ನು ಪಾವತಿ ಮಾಡಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿಗಳು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಅವರು ತಿಳಿಸಿದರು.

ಅಲ್ಲದೆ, ಬೆಸ್ಕಾಂ ವಿಧಿಸಿರುವ ದಂಡದ ಮೊತ್ತ ಲೋಪದಿಂದ ಕೂಡಿದ್ದು ಈ ಬಗ್ಗೆ ತಮಗೆ ಸ್ಪಷ್ಟನೆ ಕೊಡಬೇಕು ಎಂದು ಅವರು ಇಂಧನ ಇಲಾಖೆಯನ್ನು ಒತ್ತಾಯ ಮಾಡಿದ್ದಾರೆ.

ಪಕ್ಷದ ಕಚೇರಿ ಜೆ.ಪಿ.ಭವನದಲ್ಲಿ ಅವರು ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

ಜೆ.ಪಿ.ನಗರದ ತಮ್ಮ ಮನೆಗೆ ಕಂಬದಿಂದ ವಿದ್ಯುತ್ ಪಡೆದಿರುವುದಕ್ಕೆ ಬೆಸ್ಕಾಂ ವಿಚಕ್ಷಣಾ ದಳ ವಿಧಿಸಿರುವ ದಂಡವೇ ಅಕ್ರಮ ಎಂದು ಅವರು ಕುಮಾರಸ್ವಾಮಿ ಅರೋಪ ಮಾಡಿದ್ದಾರೆ.

ನನ್ನ ಮನೆಗೆ ನಾನು 33 ಕೆವಿ ಅನುಮತಿ ಪಡೆದಿದ್ದೇನೆ. ವಿದ್ಯುತ್ ಕಳವು ಆರೋಪದಲ್ಲಿ 2.5 ಕೆವಿ ವಿದ್ಯುತ್ ಪಡೆಯಲಾಗಿದೆ ಎಂದು ಬೆಸ್ಕಾಂ ಹೇಳಿದೆ. ಅಸಲಿಗೆ 1 ಕೆವಿ ವಿದ್ಯುತ್ ಮಾತ್ರ ನಮ್ಮ ಮನೆಯ ಲೈಟಿಂಗ್ ಗೆ ಬಳಕೆ ಮಾಡಲಾಗಿತ್ತು. ಆದರೂ ಬೆಸ್ಕಾಂ ಅಧಿಕಾರಿಗಳು 2.5 ಕೆವಿ ಅಂತ ಸುಳ್ಳು ಲೆಕ್ಕ ತೋರಿಸಿದ್ದಾರೆ. ಯಾರದ್ದೋ ಒತ್ತಡಕ್ಕೆ ಮಣಿದು ಹೀಗೆ ಮಾಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.

ನಾನು ಬಳಕೆ ಮಾಡಿರುವುದು 71 ಯುನಿಟ್. ಅದಕ್ಕೆ 3 ಪಟ್ಟು ಫೈನ್ ಅಂದರೂ 2,526 ರೂ. ದಂಡ ಆಗುತ್ತದೆ. ಆದರೆ ಬೆಸ್ಕಾಂನವರು 68,000 ರೂ. ದಂಡ ಪಾವತಿ ಮಾಡಲು ಹೇಳಿದೆ. ನನ್ನ ಮನೆಗೆ ಅನುಮತಿ ಪಡೆದಿರೋ 33 ಕೆವಿಗೂ 66 ಸಾವಿರ ಬಿಲ್ ಹಾಕಿ.ಒಟ್ಟಾರೆ 68,526 ರೂ. ಬಿಲ್ ಹಾಕಿದೆ. ನಿಯಮದ ಪ್ರಕಾರ ಬಿಲ್ ಹಾಕದೇ ಹೆಚ್ಚುವರಿ ಬಿಲ್ ಹಾಕಿದೆ. ಮಾಜಿ ಮುಖ್ಯಮಂತ್ರಿ ಒಬ್ಬರಿಗೇ ಹೀಗಾದರೆ ಸಾಮಾನ್ಯ ಜನರ ಕಥೆ ಏನು? ಎಂದು ಅವರು ಪ್ರಶ್ನಿಸಿದರು.

ಈ ಬಗ್ಗೆ ಬೆಸ್ಕಾಂ ನವೆರಿಗೆ ಮರು ಪರಿಶೀಲನಾ ಪತ್ರ ಬರೆದಿದ್ದೇನೆ ಹಾಗೂ ದಂಡವನ್ನೂ ಕಟ್ಟಿದ್ದೇನೆ. ಆದರೆ ಇಷ್ಟು ಬಿಲ್ ಯಾಕೆ ಅಂತ ವಿವರಣೆ ಕೊಡಿ ಎಂದು ಆಕ್ಷೇಪಣೆ ವ್ಯಕ್ತಪಡಿಸಿ ಪತ್ರ ಬರೆದಿದ್ದೇನೆ. ಬೆಸ್ಕಾಂ ವಿಜಿಲೆನ್ಸ್ ಹೇಗೆ ಕೆಲಸ ಮಾಡುತ್ತಿದೆ ಎನ್ನುವುದು ನನಗೆ ಗೊತ್ತಿದೆ ಎಂದು ಬೆಸ್ಕಾಂ ಅಧಿಕಾರಿಗಳ ವಿರುದ್ದ ಕುಮಾರಸ್ವಾಮಿ ಕಿಡಿಕಾರಿದರು.


ದೀಪಾವಳಿ ಹಬ್ಬದ ವೇಳೆ ನಮ್ಮನೆ ಹುಡುಗರು ದೀಪಾಲಂಕಾರ ಮಾಡುವಾಗ ಅಚಾತುರ್ಯ ಆಗಿತ್ತು. ಇದಕ್ಕೆ ನಾನೇ ವಿಷಾದ ವ್ಯಕ್ತಪಡಿಸಿ ದಂಡ ಪಾವತಿ ಮಾಡುವುದಾಗಿ ಹೇಳಿದ್ದೆ. ಅದರಂತೆ ದಂಡ ಪಾವತಿ ಮಾಡಿದ್ದೇನೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ಯಾರೋ ಹುಡುಗರು ಮಾಡಿದ ತಪ್ಪಿಗೆ ವಿಷಾದ ವ್ಯಕ್ತಪಡಿಸಿ, ಅದರ ಜವಾಬ್ದಾರಿ ನಾನೇ ಹೊತ್ತೆ. ಈಗ ವಿದ್ಯುತ್ ಕಳ್ಳ ಅಂತ ಪಟ್ಟ ಬೇರೆ ಕೊಟ್ಟಿದ್ದಾರೆ. ಇದರ ಬಗ್ಗೆ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಆದಿಯಾಗಿ ಎಲ್ಲರೂ ಹೇಳಿಕೆ ಕೊಟ್ಟಿದ್ದರು. ದಂಡದ ಬಿಲ್ ಕೊಟ್ಟರು, ಕಟ್ಟಿದ್ದೇನೆ ಎಂದರು ಕುಮಾರಸ್ವಾಮಿ ಅವರು.

ಲುಲು ಮಾಲ್ ಗೆ ಬಳಸಿದ್ದ ಬಿಲ್‌ಗೆ ದಂಡ ಕಟ್ಟಿದ್ದಾರ

ಬೆಂಗಳೂರಿನ ಸುಜಾತ ಬಸ್ ನಿಲ್ದಾಣದ ಬಳಿ ಆಕಾಶದ ಎತ್ತರಕ್ಕೆ ಕಟ್ಟಿರುವ ಲುಲು ಮಾಲ್ ಪ್ರಾರಂಭಕ್ಕೂ ಮುನ್ನ 6 ತಿಂಗಳು ಬಳಕೆ ಮಾಡಿದ ವಿದ್ಯುತ್ ಬಿಲ್ ಬಗ್ಗೆ ಬೆಸ್ಕಾಂ ವಿಚಕ್ಷಣ ದಳ ಮಾಹಿತಿ ನೀಡುತ್ತಾ ಅದರ ಬಗ್ಗೆ ಇರುವ ಮಾಹಿತಿಯನ್ನು ಅವರು ಬಹಿರಂಗ ಮಾಡುತ್ತಾರಾ ಎಂದು ಅವರು ಪ್ರಶ್ನೆ ಮಾಡಿದರು.

ಲುಲು ಮಾಲ್ ಆರಂಭಕ್ಕೆ ಮೊದಲು 6 ತಿಂಗಳು ವಿದ್ಯುತ್ ಬಿಲ್ ಕಟ್ಟಲು ಬಿಟ್ಟಿಲ್ಲ. ಹಾಗಾದರೆ, ಅವರು ಎಲ್ಲಿಂದ ವಿದ್ಯುತ್ ಬಳಿಸಿದರು. ಆಕಾಶದಿಂದ ವಿದ್ಯುತ್ ಉತ್ಪಾದನೆ ಮಾಡಿದ್ರಾ ಇವರು. ಇವರ ಯೋಗ್ಯತೆಗೆ ನನ್ನನ್ನು ಕಳ್ಳ ಕಳ್ಳ ಅಂತಾರೆ ಎಂದು ಲುಲು ಮಾಲ್ ವಿರುದ್ಧ ಮಾಜಿ ಮುಖ್ಯಮಂತ್ರಿಗಳು ಗಂಭೀರ ಆರೋಪ ಮಾಡಿದರು.

ಲುಲು ಮಾಲ್ ಬಗ್ಗೆ ತನಿಖೆ ಮಾಡಿಸಿ

ಕುಮಾರಸ್ವಾಮಿಯನ್ನು ಕರೆಂಟ್ ಕಳ್ಳ ಅನ್ನುತ್ತಿರುವ ಕಾಂಗ್ರೆಸ್ ನಾಯಕರು ತಮ್ಮ ಪಕ್ಕದಲ್ಲಿಯೇ ಕೂರುವ ಮಹಾನ್ ಕಳ್ಳನ ಕಡೆಯೂ ನೋಡಬೇಕು. ಅಷ್ಟೇ ಅಲ್ಲ; ಲುಲು ಮಾಲ್ ಕೆಳಗಡೆ ಹೈ ಟೆನ್ಷನ್ ವೈರ್ ಅಂಡರ್ ಗ್ರೌಂಡ್ ನಲ್ಲಿ ತೆಗೆದುಕೊಂಡು ಹೋಗಿದ್ದಾರೆ. ಅದಕ್ಕೆ ಅವರು ಎಷ್ಟು ಹಣ ಕಟ್ಟಿದ್ದಾರೆ, ಸುಜಾತ ಟಾಕೀಸ್ ಮುಂದೆ ಇದ್ದ ಹೈ ಟೆನ್ಷನ್ ವೈರ್ ಹೇಗೆ ಅಂಡರ್ ಗ್ರೌಂಡ್ ನೊಳಕ್ಕೆ ಹೋಯಿತು, ಇದನ್ನು ಜನರಿಗಾಗಿ ಮಾಡಿದಿರಾ ಅಥವಾ ತಮ್ಮ ಸ್ವಾರ್ಥಕ್ಕಾಗಿ ಮಾಡಿದರಾ ಎಂದು ಅವರು ತೀಕ್ಷ್ಣವಾಗಿ ಪ್ರಶ್ನಿಸಿದರು.

ನಕಲಿ ಸೊಸೈಟಿಯನ್ನು ಅಸಲಿ ಮಾಡಿಕೊಂಡವರು ಇವರು. ಮೇಲೆ ಇದ್ದ ಹೂ ಟೆನ್ಷನ್ ವೈರ್ ಅನ್ನು ಅಂಡರ್ ಗ್ರೌಂಡ್ ಗೆ ತೆಗೆದುಕೊಂಡು ಹೋಗುವುದು ಇವರಿಗೆ ಕಷ್ಟವೇ ಎಂದ ಕುಮಾರಸ್ವಾಮಿ ಅವರು, ಲುಲು ಮಾಲ್ ಮಾತ್ರವೇ ಅಲ್ಲ, ಮೇಕೆದಾಟು ಪಾದಯಾತ್ರೆ ಮಾಡಿದಾಗ ಎಲ್ಲಿಂದ ಇವರು ಎಲ್ಲಿಂದ ವಿದ್ಯುತ್ ತೆಗೆದುಕೊಂಡಿದ್ದರು, ಕನಕಪುರದಲ್ಲಿ ನಡೆಯುವ ಕನಕೋತ್ಸವಕ್ಕೆ ಕರೆಂಟ್ ಯಾವ ಮೀಟರ್ ನಿಂದ ಪಡೆದುಕೊಂಡಿದ್ದರು, ಅದಕ್ಕೆ ಕರೆಂಟ್ ಬಿಲ್ ಎಷ್ಟು ಕಟ್ಟಿದ್ದಾರೆ ಈಗ ಯಾರು ದೊಡ್ಡ ಕಳ್ಳ, ಕಣ್ಣ ಮುಂದೆ ಎಲ್ಲ ವಿಡಿಯೋ ಇದೆ, ಬೇಕಿದ್ದರೆ ಸಾಕ್ಷಿ ಕೊಡೋಣ ಎಂದು ತಿರುಗೇಟು ಕೊಟ್ಟರು.

ನಾನು ದಂಡ ಕಟ್ಡಿದ್ದೇನೆ. ಈಗಲಾದರೂ ಕರೆಂಟ್ ಕಳ್ಳ ಅನ್ನೋದು ಬಿಡಿ. ನಾನು ನಿಮ್ಮಷ್ಟು ದೊಡ್ಡ ಕಳ್ಳ ಅಲ್ಲ ಅಂತ ಅವರು ವಾಗ್ದಾಳಿ ನಡೆಸಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bengalurubescomdk shivakumarhd kumaraswamykanakapurakanakotsavakarnatakakmskmskannadapolitics
2 FacebookTwitterPinterestEmail
KM Shivaraju

previous post
ಬ್ಯಾಕ್ ಮೇಲ್ ಗೆ ನಾನು ಹೆದರುವುದಿಲ್ಲ: ಡಿ.ಕೆ. ಶಿವಕುಮಾರ್ ತಿರುಗೇಟು
next post
ವಿಧಾನಸಭೆ ವಿರೋಧ ಪಕ್ಷದ ನಾಯಕರಾಗಿ ಅಶೋಕ್ ಆಯ್ಕೆ

You may also like

ಸ್ಟಿಂಗ್‌ ಕಾರಣಕರ್ತರ ವಿರುದ್ಧ ಕ್ರಮಕ್ಕೆ ಡಿಕೆಶಿಗೆ ತಾಕೀತು

October 23, 2026

ಸಚಿವರ ತಡೆದ ಅಧಿಕಾರಿಗಳ ಮೇಲೆ ಕ್ರಮಕ್ಕೆ ಆದೇಶ

October 22, 2026

ಬರದಿಂದ ಭವಿಷ್ಯದಲ್ಲಿ ಅನ್ನ, ನೀರಿಗೂ ಹಾಹಾಕಾರ

October 19, 2026

ಸ್ಟಿಂಗ್‌ ಕಿಂಗ್‌ಪಿನ್‌ ಬಂಧಿಸದಿದ್ದರೆ ತೀವ್ರ ಹೋರಾಟ

October 17, 2026

ದೇಶ ಅಭದ್ರತೆಗೆ ಸಿಜೆಪಿಗೆ ಕಾಂಗ್ರೆಸ್‌ ಸರ್ಕಾರದ ಹಣ

October 16, 2026

ಸ್ಟಿಂಗ್‌ ಆಪರೇಷನ್‌: ಹೋರಾಡಲು ಅಖಾಡಕ್ಕೆ ಬನ್ನಿ

October 15, 2026

ಡಿಸೆಂಬರ್‌ ಒಳಗೆ 17,000 ಶಾಲಾ ಶಿಕ್ಷಕರ ನೇಮಕ

October 14, 2026

ಸ್ಟಿಂಗ್ ಆಪರೇಷನ್‌ ಆರೋಪ ಸಿಬಿಐ ತನಿಖೆ ಆಗಬೇಕು

October 13, 2026

ಚುನಾವಣೆ ವೇಳೆ ಕಾಂಗ್ರೆಸ್‌ನ 25 ಶಾಸಕರು ಬಿಜೆಪಿಗೆ

October 12, 2026

2027ರ ಏಪ್ರಿಲ್‌-ಮೇನಲ್ಲಿ ಮಂತ್ರಿಮಂಡಲ ಪುನಾರಚನೆ

October 10, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (595)
  • ಅಂಕಣ (109)
  • ಉದ್ಯೋಗ (357)
  • ದಿನ ಭವಿಷ್ಯ (110)
  • ರಾಜಕೀಯ (2,088)
  • ರಾಜ್ಯ (2,403)
  • ರಾಷ್ಟ್ರ (2,367)
  • ವಿಶ್ಲೇಷಣೆ (202)
  • ಶಿಕ್ಷಣ (413)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸ್ಟಿಂಗ್‌ ಕಾರಣಕರ್ತರ ವಿರುದ್ಧ ಕ್ರಮಕ್ಕೆ ಡಿಕೆಶಿಗೆ ತಾಕೀತು

    October 23, 2026
  • ಸಚಿವರ ತಡೆದ ಅಧಿಕಾರಿಗಳ ಮೇಲೆ ಕ್ರಮಕ್ಕೆ ಆದೇಶ

    October 22, 2026
  • ಬರದಿಂದ ಭವಿಷ್ಯದಲ್ಲಿ ಅನ್ನ, ನೀರಿಗೂ ಹಾಹಾಕಾರ

    October 19, 2026

KMS Special

  • ಸ್ಟಿಂಗ್‌ ಕಾರಣಕರ್ತರ ವಿರುದ್ಧ ಕ್ರಮಕ್ಕೆ ಡಿಕೆಶಿಗೆ ತಾಕೀತು

    October 23, 2026
  • ಸಚಿವರ ತಡೆದ ಅಧಿಕಾರಿಗಳ ಮೇಲೆ ಕ್ರಮಕ್ಕೆ ಆದೇಶ

    October 22, 2026
  • ಬರದಿಂದ ಭವಿಷ್ಯದಲ್ಲಿ ಅನ್ನ, ನೀರಿಗೂ ಹಾಹಾಕಾರ

    October 19, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸ್ಟಿಂಗ್‌ ಕಾರಣಕರ್ತರ ವಿರುದ್ಧ ಕ್ರಮಕ್ಕೆ ಡಿಕೆಶಿಗೆ ತಾಕೀತು

October 23, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ