Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಕೃಷಿ ವಿಶ್ವವಿದ್ಯಾಲಯ ಕೃಷಿ ಪದವೀಧರರನ್ನು ತಯಾರಿಸುವ ಸಂಸ್ಥೆಯಲ್ಲ

by admin November 17, 2023
written by admin November 17, 2023 0 comments 2 minutes read
2FacebookTwitterPinterestEmail
103
ಹಸಿರು ಕ್ರಾಂತಿ ನಿರಂತರವಾಗಿ ಆಗಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಹಸಿರು ಕ್ರಾಂತಿ ನಿರಂತರವಾಗಿ ಆಗಬೇಕು.  ಇದಾಗಬೇಕಾದರೆ ಹೊಸ ತಳಿಗಳು, ಹೊಸ ಔಷಧ, ಮಣ್ಣಿನ ಫಲವತ್ತತೆ, ತಂತ್ರಜ್ಞಾನ, ರೈತರಿಗೆ ನ್ಯಾಯಯುತ ಬೆಲೆ, ಆಹಾರ ಸಂಗ್ರಹಣೆಗೆ ಗೋದಾಮುಗಳು ಆಗಬೇಕು. ಆಗ ಮಾತ್ರ ಸುಸ್ಥಿರವಾದ ಕೃಷಿ ಬೆಳವಣಿಗೆ ಆಗುತ್ತದೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

6 ದಶಕಗಳಿಂದ ಕೃಷಿ ವಿಶ್ವವಿದ್ಯಾಲಯ ಕೃಷಿ ಮೇಳ

ಜಿಕೆವಿಕೆ ಆವರಣದಲ್ಲಿ ಕೃಷಿ ಮೇಳ ಉದ್ಘಾಟಿಸಿ, ಕೃಷಿ ಪ್ರಶಸ್ತಿಗಳನ್ನು ವಿತರಿಸಿ ಅವರು ಮಾತನಾಡಿದರು. ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ರಾಜ್ಯದಲ್ಲಿ ಸ್ಥಾಪನೆಗೊಂಡ ಮೊದಲ ಕೃಷಿವಿಶ್ವವಿದ್ಯಾಲಯ. 6 ದಶಕಗಳಿಂದ ಕೃಷಿ ವಿಶ್ವವಿದ್ಯಾಲಯ ಕೃಷಿ ಮೇಳವನ್ನು ಹಮ್ಮಿಕೊಳ್ಳುತ್ತಾ ಬಂದಿದೆ.

ರಾಜ್ಯದ ರೈತರಿಗೆ ಕೃಷಿಯಲ್ಲಿ ಆಗಿರುವ ಆವಿಷ್ಕಾರ ಹಾಗೂ ಬೆಳವಣಿಗೆಗಳನ್ನು ಜನರಿಗೆ ತಿಳಿಸುವ ಕೆಲಸ ಮಾಡುತ್ತಾ ಬಂದಿದೆ. ಕೃಷಿಕರಿಗೆ ವಿಶ್ವವಿದ್ಯಾಲಯದಲ್ಲಿ ಆಗುವ ತಂತ್ರಜ್ಞಾನದ ಅಭಿವೃದ್ಧಿ, ಹೊಸ ತಳಿಗಳು, ಮಣ್ಣಿನ ಫಲವತ್ತತೆಯನ್ನು ಕಾಪಾಡಿಕೊಳ್ಳುವುದು ಮುಂತಾದವನ್ನು ಜನರಿಗೆ ತಿಳಿಸುವ ಕೆಲಸವನ್ನು ಮಾಡಬೇಕು. ಕೃಷಿ ವಿದ್ಯಾಲಯ ಕೇವಲ ಕೃಷಿ ಪದವೀಧರರನ್ನು ತಯಾರು ಮಾಡುವ ಸಂಸ್ಥೆಯಲ್ಲ. ಕೃಷಿ ವಿದ್ಯಾರ್ಥಿಗಳನ್ನು ತಯಾರಿಸುವ ಜೊತೆಗೆ ಸಂಶೋಧನೆಗಳಿಗೆ ಒತ್ತು ನೀಡಬೇಕು.

ರಾಜಸ್ತಾನವನ್ನು ಬಿಟ್ಟರೆ ಹೆಚ್ಚು ಒಣ ಭೂಮಿ ಇರುವ ರಾಜ್ಯ

ನಮ್ಮ ರಾಜ್ಯ ಇಡೀ ದೇಶದಲ್ಲಿ ರಾಜಸ್ತಾನವನ್ನು ಬಿಟ್ಟರೆ ಹೆಚ್ಚು ಒಣ ಭೂಮಿ ಇರುವ ರಾಜ್ಯ. ಹೆಚ್ಚು ರೈತರು ಕೃಷಿಯನ್ನು ಅವಲಂಬಿಸಿದ್ದಾರೆ. ನಾವು ಎಲ್ಲಾ ರೈತರೂ ಕೃಷಿಯನ್ನು ಬಿಡದಂತೆ ಮಾಡಬೇಕಾದರೆ, ಕೃಷಿ ಲಾಭದಾಯಕವಾಗಬೇಕು. ಕೃಷಿ ಲಾಭದಾಯಕವಾಗದೇ ಹೋದರೆ ಬಹಳಷ್ಟು ಜನ ರೈತರು ಕೃಷಿಯನ್ನು ಬಿಡಬೇಕಾದ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಬಹಳಷ್ಟು ಜನ ರೈತರು ಕೃಷಿಯಿಂದ ವಿಮುಖರಾಗುತ್ತಿದ್ದಾರೆ. ಕೃಷಿ ಮಾಡಿ ಬದುಕಬಹುದು ಎಂಬ ಪರಿಸ್ಥಿತಿ ನಿರ್ಮಿಸಲು ಕೃಷಿ ವಿವಿಗಳಲ್ಲಿ ಕೆಲಸ ಮಾಡುವ ವಿಜ್ಞಾನಿಗಳು, ಅಧ್ಯಾಪಕರು ಹೆಚ್ಚು ಒತ್ತು ನೀಡಬೇಕು ಎಂದರು. 

 ಕಡಿಮೆ ನೀರಿನಲ್ಲಿಯೂ ಬೆಳೆಯುವಂಥ ತಳಿಗಳು ಅಗತ್ಯ

ಕೃಷಿ ವಿವಿ 5 ಹೊಸ ತಳಿಗಳನ್ನು ಬಿಡುಗಡೆ ಮಾಡಿರುವುದು ಸಂತೋಷ. ತಳಿಗಳು ನೀರು ಕಡಿಮೆಯಿದ್ದಾಗಲೂ ಬೆಳೆಯುವುದು ಸಾಧ್ಯವಿರಬೇಕು.  ರೋಗನಿರೋಧಕ ಶಕ್ತಿ ಇರುವಂತೆ ಆಗಬೇಕು. ಬಹಳಷ್ಟು ರೈತರು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಮಳೆ, ಬೆಳೆ ಇಲ್ಲದೇ, ಮಾರುಕಟ್ಟೆ ವ್ಯವಸ್ಥೆ ಇಲ್ಲದೇ ಕಷ್ಟದಲ್ಲಿದ್ದಾರೆ. ಹವಾಮಾನ  ವೈಪರೀತ್ಯದಿಂದಾಗಿ ಬರಗಾಲಕ್ಕೆ ತುತ್ತಾಗುವ ಸ್ಥಿತಿ ಇದೆ. ಕೃಷಿ ಇದ್ದಲೆಲ್ಲಾ ಬರಗಾಲ ಉಂಟಾಗಿದೆ.

ಮೊದಲು 4-5 ವರ್ಷಗಳಿಗೊಮ್ಮೆ ಬರಗಾಲ ಬರುತ್ತಿತ್ತು. ಕೆಲವೊಮ್ಮೆ ಭೀಕರ ಬರಗಾಲ ಬರುತ್ತದೆ.  ಈ ಬಾರಿ 223 ತಾಲ್ಲೂಕುಗಳಲ್ಲಿ ಬರಗಾಲ ಘೋಷಣೆ ಮಾಡಲಾಗಿದೆ. ಹೆಚ್ಚು ಕಡಿಮೆ ಶೇ 90 ರಷ್ಟು ಬರಗಾಲ ಉಂಟಾಗಿದೆ. ಸರ್ಕಾರ ಸಹಾಯಧನ ಕೊಡಬಹುದು. ಆದರೆ ಬೆಳೆಯ ನಷ್ಟವನ್ನು ತುಂಬಿಕೊಡಲು ಸಾಧ್ಯವಾಗುವುದಿಲ್ಲ.  ನಷ್ಟ ಭರಿಸುತ್ತೇವೆ ಎಂದರೆ ಅದು ರೈತರನ್ನು ತಪ್ಪು ದಾರಿಗೆ ಎಳೆದಂತಾಗುತ್ತದೆ.

ಸುಮಾರು 33 ಸಾವಿರ ಕೋಟಿ ರೂ.ಗಳಷ್ಟು ನಷ್ಟ

ಸುಮಾರು 33 ಸಾವಿರ ಕೋಟಿ ರೂ.ಗಳಷ್ಟು ನಷ್ಟವಾಗಿದೆ. ಎನ್.ಡಿ.ಆರ್‍ಎಫ್ ಮಾರ್ಗಸೂಚಿಯ ಪ್ರಕಾರ ಸರ್ಕಾರ 17900 ಕೋಟಿ ರೂ.ಗಳ ಪರಿಹಾರ ಕೇಳಿದೆ.  16 ಸಾವಿರ ಕೋಟಿಯಷ್ಟು ರೈತರಿಗೆ ನಷ್ಟವಾಗುತ್ತದೆ. ಬೆಳೆವಿಮೆ ಮಾಡಿದ್ದರೂ ಪೂರ್ಣ ನಷ್ಟ ಭರಿಸಲು ಸಾಧ್ಯವಿಲ್ಲ. ಇಂಥ ಪರಿಸ್ಥಿತಿಯಲ್ಲಿ ರೈತರನ್ನು ಕಾಪಾಡುವುದು ಸರ್ಕಾರದ ಹಾಗೂ ವಿವಿಗಳ ಜವಾಬ್ದಾರಿ. ಕೃಷಿ ವಿವಿಗಳ ಪಾತ್ರ ಮಹತ್ವದ್ದು.  ದೇಶದಲ್ಲಿ ಕೃಷಿ ಕ್ಷೇತ್ರ್ರದ ಮೇಲೆ ಆಹಾರಕ್ಕಾಗಿ ಅವಲಂಬನೆಯಾಗಿರುತ್ತಾರೆ. ಅವರಿಗೆ ಆಹಾರದ ಉತ್ಪಾದನೆಯಾಗಬೇಕು ಎಂದರು.

ರೈತರು ಬಹುಬೆಳೆಗಳನ್ನು ಬೆಳೆಯಬೇಕು:

ಕೃಷಿಯ ಹಿನ್ನಲೆಯಿಂದ ಬಂದ ನನಗೆ ರೈತರ ಕಷ್ಟ ತಿಳಿದಿದೆ. ರೈತರು ವರ್ಷಪೂರ್ತಿ ಜಮೀನಿನಲ್ಲಿ ದುಡಿಯುತ್ತಾರೆ. ಈ ಶ್ರಮಜೀವಿಗಳ ಜೀವನವನ್ನು ಹಸನುಗೊಳಿಸಲು, ಕೃಷಿ ವಿವಿಗಳು ಹೆಚ್ಚಿನ ಸಂಶೋಧನೆಯನ್ನು ಕೈಗೊಳ್ಳಬೇಕು. ಸಿರಿಧಾನ್ಯಗಳು, ಸೂರ್ಯಕಾಂತಿ ಸೇರಿದಂತೆ ವಿವಿಧ ಬೆಳೆಗಳಿಗೆ ಆರೋಗ್ಯದೃಷ್ಟಿಯಿಂದ  ಹೆಚ್ಚಿನ ಬೇಡಿಕೆ ಉಂಟಾಗಿದೆ. ಹೆಚ್ಚಿನ ಬೇಡಿಕೆ ಇರುವ ಸಿರಿಧಾನ್ಯಗಳನ್ನು ಬೆಳೆಸಲು ರೈತರಲ್ಲಿ ಜಾಗೃತಿ ಮೂಡಿಸಬೇಕು.

ರೈತರ ಉತ್ಪನ್ನಗಳಿಗೆ ಹೆಚ್ಚಿನ ಮಾರುಕಟ್ಟೆ ವ್ಯವಸ್ಥೆಯನ್ನು ಪೂರೈಸಬೇಕು. ನಮ್ಮ ಸರ್ಕಾರ ರೈತರಿಗೆ ಎಲ್ಲ ರೀತಿಯ ಸಹಕಾರವನ್ನು ನೀಡುತ್ತದೆ.  ಕೃಷಿ ವಿವಿಗಳು ಹೊಸ ತಳಿಗಳು, ಹೊಸ ಸಂಶೋಧನೆಗಳನ್ನು ನಡೆಸಲು ಹೆಚ್ಚಿನ ಹಣವನ್ನೂ ಸರ್ಕಾರ ನೀಡಲು ಸಿದ್ಧವಿದೆ. ನಮ್ಮ ಸರ್ಕಾರ ಕೃಷಿ ಭಾಗ್ಯ ಯೋಜನೆ ಪುನ: ಜಾರಿ ಮಾಡಿದೆ. ಹೊಸ ತಳಿಗಳನ್ನು ಬೆಳೆಯುವ ಮೂಲಕ ರೈತರಿಗೆ ಹೆಚ್ಚಿನ ಫಸಲು ದೊರೆಯುತ್ತದೆ. ಬಹುಬೆಳೆಗಳನ್ನು ಬೆಳೆಯುವ ಪ್ರವೃತ್ತಿಯನ್ನು ರೈತರು ಬೆಳೆಸಿಕೊಳ್ಳಬೇಕು. ಇಂದು ಪುರಸ್ಕೃತರಾಗಿರುವ ರೈತ ಸಾಧಕರ ಸಾಧನೆಗಳು  ರೈತರಿಗೆ ಮಾದರಿಯಾಗಬೇಕು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
agricultural fairagriculture graduatesagriculture universitybangalorebengaluruchief Minister siddaramaiahdry landgkvkgreen revolutionkarnatakakmskmskannadamulti-cropnew breedsnews
2 FacebookTwitterPinterestEmail
admin

previous post
ಕಾಸಿಗಾಗಿ ಹುದ್ದೆ ವಿಡಿಯೋ: ಡೂಪ್ಲಿಕೇಟ್ ಸಿಎಂ ಸಲಹೆ ಮೇರೆಗೆ ಸಿಎಸ್ಆರ್ ಕಥೆ ಕಟ್ಟಿದ ಮುಖ್ಯಮಂತ್ರಿ
next post
ಜನಾಕರ್ಷಿಸುತ್ತಿರುವ ಜಿಕೆವಿಕೆ ಕೃಷಿ ಮೇಳ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ