Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಕರ್ನಾಟಕದ ಕಲೆಕ್ಷನ್ ಪ್ರಿನ್ಸ್ ವಿಡಿಯೋದಲ್ಲಿ ನುಸುಳಿದ್ದ ವಿವೇಕಾನಂದ, ೪೮ ಗಂಟೆಗಲ್ಲೇ ವರ್ಗದ ಪಟ್ಟಿಯಲ್ಲಿ ಒಳನುಸಳಿದ್ದು ಹೇಗೆ?

by KM Shivaraju November 18, 2023
written by KM Shivaraju November 18, 2023 0 comments 1 minutes read
2FacebookTwitterPinterestEmail
473
ಸಿಎಂ ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಟೀಕಾಪ್ರಹಾರ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರ ನಡುವಿನ ಫೋನ್ ಸಂಭಾಷಣೆಯಲ್ಲಿ ಪ್ರಸ್ತಾಪಗೊಂಡಿದ್ದ ವಿವೇಕಾನಂದ ಎನ್ನುವ ಹೆಸರು ಕಳೆದ ರಾತ್ರಿ ಹೊರಬಿದ್ದ ಪೊಲೀಸ್ ಇನಸ್ಪೆಕ್ಟರ್‌ಗಳ ವರ್ಗಾವಣೆ ಪಟ್ಟಿಯಲ್ಲಿ ಪ್ರತ್ಯಕ್ಷವಾಗಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಟೀಕಾಪ್ರಹಾರ ನಡೆಸಿರುವ ಅವರು, ಕರ್ನಾಟಕದ ಕಲೆಕ್ಷನ್ ಪ್ರಿನ್ಸ್ ವಿಡಿಯೋದಲ್ಲಿ ನುಸುಳಿದ್ದ ವಿವೇಕಾನಂದ, 48 ಗಂಟೆಗಳ ಒಳಗಾಗಿಯೇ ವರ್ಗದ ಪಟ್ಟಿಯಲ್ಲಿ ಒಳನುಸಳಿದ್ದು ಹೇಗೆ? ಎಂದು ಪ್ರಶ್ನೆ ಮಾಡಿದ್ದಾರೆ.
ಬಾಯಿ ತೆರೆದರೆ ಭಗವದ್ಗೀತೆ! ನಾಲಿಗೆ ಮೇಲೆ ನೈತಿಕತೆಯ ನಾಟ್ಯ! ಮಾತಿ ಮಾತಿನಲ್ಲೂ ಮೌಲ್ಯಗಳದ್ದೇ ಮಥನ! ಕೊನೆಗೆ, ಝಣ ಝಣ ಕಾಂಚಾಣ. ಇದೇ ನೋಡಿ ಬಹಿರಂಗವಾದ ಸಿಎಂ ಸಾಹೇಬರ ಸದ್ಯದ ಅಂತರಂಗ ಶುದ್ಧಿ! ನಾಚಿಕೆ ಆಗಬೇಕು ಎಂದು ಕಿಡಿಕಾರಿದ್ದಾರೆ.

ಪೊಲೀಸ್ ವರ್ಗಾವಣೆ ಪಟ್ಟಿಯಲ್ಲಿ ವಿವೇಕಾನಂದ ಹೆಸರು ಪ್ರತ್ಯಕ್ಷ

ಕರ್ನಾಟಕದ ಕಲೆಕ್ಷನ್ ಪ್ರಿನ್ಸ್ ವಿಡಿಯೋದಲ್ಲಿ ನುಸುಳಿದ್ದ ವಿವೇಕಾನಂದ,48 ಗಂಟೆಗಳ ಒಳಗಾಗಿಯೇ ವರ್ಗದ ಪಟ್ಟಿಯಲ್ಲಿ ಒಳನುಸಳಿದ್ದು ಹೇಗೆ? ಒಂದು ಸರ್ಕಾರ, ವಿಸ್ಮಯಗಳ ಆಗರ! ಡೂಪ್ಲಿಕೇಟ್ ಸಿಎಂ-ಆಅಒ ಸಲಹೆ ಮೇರೆಗೆ ಕಾಸಿಗಾಗಿ ಹುದ್ದೆ ವಿಡಿಯೋಗೆ ಅSಖ ಕಥೆ ಕಟ್ಟಿದ್ದ ಮುಖ್ಯಮಂತ್ರಿಗಳ ನೈತಿಕತೆಗೆ ನಯಗಾರಿಕೆಗೆ ನೂರೆಂಟು ನಮನ ಎಂದು ಕುಮಾರಸ್ವಾಮಿ ಅವರು ವ್ಯಂಗ್ಯವಾಡಿದ್ದಾರೆ.


ವಿಡಿಯೋ ವಿವೇಕಾನಂದ, ಗುಪ್ತವಾರ್ತೆಯಿಂದ ಮೈಸೂರು ವಿ.ವಿ.ಪುರಂಗೆ ಪೋಸ್ಟಿಂಗ್ ಪಡೆದಿದ್ದು ಹೇಗೆ? ಬರ್ಮುಡಾ ಟ್ರ್ಯಾಂಗಲ್ ರಹಸ್ಯವನ್ನೇ ಮೀರಿಸಿದೆ ಈ ಚಿದಂಬರ ರಹಸ್ಯ. ಪ್ರಶ್ನೆ ಕೇಳುವುದು ನನ್ನ ವಿಧಿ, ಉತ್ತರ ಹೇಳಲೇಬೇಕು. ಅದು ನಿಮ್ಮ ದುರ್ವಿಧಿ. ಆನ್ಸರ್ ಮಾಡಿ ಸಿದ್ದರಾಮಯ್ಯನವರೇ? ಎಂದು ಮಾಜಿ ಮುಖ್ಯಮಂತ್ರಿಗಳು ಕಾಲೆಳೆದಿದ್ದಾರೆ.
ಕುಮಾರಸ್ವಾಮಿಗೆ ಹೊಟ್ಟೆಕಿಚ್ಚು. ದ್ವೇಷದಿಂದ ಮಗನ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದಲ್ಲವೇ ನೀವು ಹೇಳಿದ್ದು. ಹಾಗಾದರೆ,71 ಪೊಲೀಸ್ ಇನಸ್ಪೆಕ್ಟರ್‌ಗಳ ವರ್ಗದ ಈ ಯಾದಿಯ ೪ನೇ ಹೆಸರಿನಲ್ಲೇ ಅಡಗಿದೆಯಲ್ಲಾ ನಿಮ್ಮ ’ಸುಲಿಗೆಪುತ್ರ’ನ ಕೆಚ್ಚು! ಕ್ಷೇತ್ರತ್ಯಾಗದ ತ್ಯಾಗಮಯಿ, ಈಗ ವರುಣಾಕ್ಕೆ ವಕ್ಕರಿಸಿದ ಕೆಡಿಪಿ ಕಲಿ. ಏನಂತೀರಿ? ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.
ಈ ಪಾಪದ ಕಾಸಿನ ಕಮಟು ದುರ್ನಾತ ಅಸಹ್ಯಕರ. ’ವರ್ಗಾವರ್ಗಿ ಬಜೆಟ್’ನಲ್ಲಿ ನಿಮ್ಮ ಪಟಾಲಂದು ಶಿಖರಸಾಧನೆ. 6 ತಿಂಗಳ ಭರ್ಜರಿ ಅತೀಂದ್ರೀಯ. ’ಕಾಸಿಗಾಗಿ ಹುದ್ದೆ ಮತ್ತು ಕಾಂಗ್ರೆಸ್ ಹುಂಡಿ’ ಎಂಬ ಸಿನಿಮಾವನ್ನೂ ಮಾಡಿ, ಕೆಡಿಪಿ ಕಲಿಯೇ ನಾಯಕ, ಟೆಂಪರರಿ ಸಿಎಂ-ಖಿಅಒ ನಿರ್ಮಾಪಕ, ಡೂಪ್ಲಿಕೇಟ್ ಸಿಎಂ-ಆಅಒ ನಿರ್ದೇಶಕ. ಹೇಗಿದೆ? ಎಂದು ಕುಮಾಸ್ವಾಮಿ ಅವರು ಟಾಂಗ್ ನೀಡಿದ್ದಾರೆ.
ಸತ್ಯ ಹೇಳಿದರೆ ಗುಂಪುಗುಂಪಾಗಿ ಮೇಲೆ ಬೀಳುತ್ತೀರಿ. ಬೆದರಿಸುತ್ತೀರಿ. ಕುಮಾರಸ್ವಾಮಿಯದು ಹಿಟ್ ಮತ್ತು ರನ್ ಅಂತೀರಿ, ಸುಳ್ಳು ಎನ್ನುತ್ತೀರಿ. ಕಣ್ಮುಂದೆ ವಿಡಿಯೋ ಸಾಕ್ಷ್ಯವಿದೆ. ರಾಜ್ಯದ ಜನ ನೋಡಿದ್ದಾರೆ. ಪಲಾಯನಕ್ಕೆ ಅವಕಾಶವೇ ಇಲ್ಲ. ನಿಮ್ಮ ಕೌರವ ದುರ್ನೀತಿ ನನ್ನ ಮುಂದೆ ನಡೆಯಲ್ಲ. ನಾನು ಒಬ್ಬನೇ ಒಬ್ಬ, ಅಂಜಿಕೆ ನನ್ನ ರಕ್ತದಲ್ಲೇ ಇಲ್ಲ ಎಂದು ನೇರವಾಗಿ ತಿರುಗೇಟು ನೀಡಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bengalurucongressdr yathindrahd kumaraswamyinspector transfer listkarnatakakmskmskannada
2 FacebookTwitterPinterestEmail
KM Shivaraju

previous post
ಜನಾಕರ್ಷಿಸುತ್ತಿರುವ ಜಿಕೆವಿಕೆ ಕೃಷಿ ಮೇಳ
next post
ಲೋಕಸಭೆ ಚುನಾವಣೆಯ ನಂತರ ರಾಜ್ಯದ ರಾಜಕೀಯ ದಿಕ್ಕು ಬದಲು

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ