Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರಶಿಕ್ಷಣ

ಆರು ತಿಂಗಳಲ್ಲಿ ಸರ್ಕಾರ ರೂಪಿಸಿದ ಯೋಜನೆಗಳು ಯಶಸ್ವಿ

by KM Shivaraju November 20, 2023
written by KM Shivaraju November 20, 2023 0 comments 2 minutes read
5FacebookTwitterPinterestEmail
412
ಗ್ಯಾರೆಂಟಿ ಯೋಜನೆಗಳ ಅನುಷ್ಟಾನದಿಂದ ಜನತೆಗೆ ನೆಮ್ಮದಿಯ ಬದುಕು: ಸಿದ್ದರಾಮಯ್ಯ

ಬೆಂಗಳೂರು: ಬೆಲೆ ಏರಿಕೆಯಿಂದ ಕಂಗಾಲಾಗಿದ್ದ ಜನರಿಗೆ ಬದುಕು ಕಟ್ಟಿಕೊಳ್ಳಲು ಕಳೆದ ಆರು ತಿಂಗಳಲ್ಲಿ ನಮ್ಮ ಸರ್ಕಾರ ರೂಪಿಸಿದ ಯೋಜನೆಗಳು ಯಶಸ್ವಿಗೊಂಡಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಸಮರ್ಥಿಸಿಕೊಂಡಿದ್ದಾರೆ.

ತಮ್ಮ ನೇತೃತ್ವದ ಕಾಂಗ್ರೆಸ್ ಸರ್ಕಾರ ಸಂಕಷ್ಟ ಸಂದರ್ಭದಲ್ಲಿ ಅಧಿಕಾರ ಹಿಡಿದು ನಾಲ್ಕು ಗ್ಯಾರೆಂಟಿ ಯೋಜನೆಗಳ ಅನುಷ್ಟಾನದಿಂದ ಜನತೆ ನೆಮ್ಮದಿಯ ಬದುಕು ನಡೆಸುತ್ತಿದ್ದಾರೆ.

ಹವಮಾನ ವೈಪರೀತ್ಯದಿಂದ ಮಳೆ ಇಲ್ಲದೆ, ಬೆಳೆ ಕಳೆದುಕೊಂಡರೂ ರೈತರು ಕಂಗಾಲಾಗಿಲ್ಲ, ಯಾರೂ ಹಸಿವಿನಿಂದ ಬಳಲಿಲ್ಲ ಎಂದು ತಿಳಿಸಿದ್ದಾರೆ.

ತಮ್ಮ ಆರು ತಿಂಗಳ ಆಡಳಿತದ ಸಾಧನೆಯನ್ನು ಟ್ವೀಟ್ ಮೂಲಕ ಸಮರ್ಥಿಸಿಕೊಂಡಿರುವ ಮುಖ್ಯಮಂತ್ರಿ ಅವರು, ನಮ್ಮ ಯೋಜನೆಗಳಿಂದ ಕುಟುಂಬ ನಿರ್ವಹಣೆ ಹೊಣೆ ಹೊತ್ತ ನಾಡಿನ ಮಹಿಳೆಯರು ನೆಮ್ಮದಿಯಿಂದ ಬದುಕುತ್ತಿದ್ದಾರೆ.

ಸಮಾಜದ ಶಾಂತಿ-ಸಾಮರಸ್ಯದ ರಕ್ಷಣೆಗೆ ಸರ್ಕಾರ ಆದ್ಯತೆ

ಗ್ಯಾರೆಂಟಿ ಯೋಜನೆಗಳೂ ಸೇರಿದಂತೆ ಎಲ್ಲಾ ಅಭಿವೃದ್ಧಿ ಕಾರ್ಯಕ್ರಮಗಳ ಜಾರಿ ಮತ್ತು ಸಮಾಜದ ಶಾಂತಿ-ಸಾಮರಸ್ಯದ ರಕ್ಷಣೆಗೆ ಸರ್ಕಾರ ಆದ್ಯತೆ ನೀಡಿದೆ.  ನಮ್ಮ ಯೋಜನೆಗಳು ಇಡೀ ರಾಷ್ಟ್ರಕ್ಕೆ ಮಾದರಿಯಾಗಿ ಬೇರೆ ರಾಜ್ಯಗಳೂ ನಮ್ಮನ್ನು ಅನುಸರಿಸಲು ಮುಂದಾಗಿರುವುದೇ ಇದಕ್ಕೆ ಸಾಕ್ಷಿ ಎಂದರು.

ಗೃಹ ಲಕ್ಷ್ಮೀ ಯೋಜನೆಯಡಿ 99.52 ಲಕ್ಷ ಮಹಿಳೆಯರ ಖಾತೆಗೆ ಮಾಸಿಕ 2000 ರೂ. ಸಹಾಯಧನ ಸಂದಾಯವಾಗುತ್ತಿದ್ದು ಸಂಕಷ್ಟದಲ್ಲಿರುವ ಕುಟುಂಬಗಳಿಗೆ ನೆರವಾಗುತ್ತಿದೆ.

ಶಕ್ತಿ ಯೋಜನೆಯಡಿ ನಾಡಿನ ಮಹಿಳೆಯರು ನಿತ್ಯ ಸರಾಸರಿ 60 ಲಕ್ಷದಂತೆ ಇದುವರೆಗೂ 97.2  ಕೋಟಿಗೂ ಅಧಿಕ ಬಾರಿ ರಾಜ್ಯ ಸಾರಿಗೆ ಸಂಸ್ಥೆ ಬಸ್‌ಗಳಲ್ಲಿ ಉಚಿತ ಪ್ರಯಾಣ ಮಾಡಿದ್ದಾರೆ.

ಕೇಂದ್ರ ಸರ್ಕಾರದ ಮಲತಾಯಿ ದೋರಣೆ

ಕೇಂದ್ರ ಸರ್ಕಾರದ ಮಲತಾಯಿ ದೋರಣೆ ನಡುವೆಯೂ ಕಳೆದ ಆರು ತಿಂಗಳ ಅವಧಿಯಲ್ಲಿ ನಾಡಿನ ಜನತೆಗೆ ನಿಡಿದ್ದ ಎಲ್ಲಾ ಭರವಸೆಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇವೆ.

ನಮ್ಮ ಯೋಜನೆಗಳು ನಾಡಿನ ಪ್ರತಿಯೊಬ್ಬರನ್ನೂ ತಲುಪುವ ಪ್ರಾಮಾಣಿಕ ಪಯತ್ನ ಇದಾಗಿದೆ. ನಮ್ಮ ಈ ಪ್ರಯತ್ನದ ಫಲವಾಗಿ ಇಂದು ಪ್ರತೀ ಮನೆ-ಮನೆಯಲ್ಲೂ ಗ್ಯಾರೆಂಟಿ ಯೊಜನೆಗಳ ಫಲಾನುಭವಿಗಳನ್ನು ಕಾಣುವಂತಾಗಿರುವುದು ಖುಷಿಯ ವಿಚಾರ.

ಕರ್ನಾಟಕ ಮಾದರಿ ಆಡಳಿತದ ನವಕಲ್ಪನೆಗೆ ದೇಶದಲ್ಲಿ ಮನ್ನಣೆ

ಭರವಸೆಗಳನ್ನು ಈಡೇರಿಸುವ ಜೊತೆಗೆ ಅಭಿವೃದ್ಧಿಯನ್ನೂ ಸಮಾನವಾಗಿ ಮುನ್ನಡೆಸುವ ಕರ್ನಾಟಕ ಮಾದರಿ ಆಡಳಿತವೆಂಬ ನವಕಲ್ಪನೆ ಇಡೀ ದೇಶದಲ್ಲಿ ಮನ್ನಣೆ ಗಳಿಸಿದೆ.

ಜಾತಿ, ಧರ್ಮ, ಲಿಂಗ ಬೇಧವಿಲ್ಲದೆ ಸರ್ವರನ್ನೂ ಒಳಗೊಳ್ಳುವ ಸಮಾನ ಅವಕಾಶಗಳ ಸರ್ವತೋಮುಖ ಪ್ರಗತಿಯ ನಾಡು ಕಟ್ಟಲು ಇದು ನಮಗೆ ಬುನಾದಿ.

ಗ್ಯಾರೆಂಟಿ ಯೋಜನೆಗಳ ಅನುಷ್ಟಾನ ಜೊತೆಗೆ ಬರ ಪರಿಹಾರದ ಕೆಲಸ ಯುದ್ಧೋಪಾದಿಯಲ್ಲಿ ನಡೆದಿದೆ. ಕುಡಿಯುವ ನೀರು, ದನ-ಕರುಗಳಿಗೆ ಮೇವು, ಜನರಿಗೆ ಉದ್ಯೋಗ ಕೊಡುವ ಕೆಲಸವೂ ಆಗುತ್ತಿದೆ.

ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡ ರಾಜ್ಯಕ್ಕೆ ಭೇಟಿ ನೀಡಿ ಒಂದು ತಿಂಗಳ ಮೇಲಾಗಿದ್ದರೂ ಇದುವರೆಗೂ ಒಂದು ನಯಾಪೈಸೆ  ಪರಿಹಾರವನ್ನೂ ನೀಡಿಲ್ಲ ಎಂದು ಅಸಮಾಧಾನ ವ್ಯಕ್ತ ಪಡಿಸಿದರು.

ರಾಜ್ಯದಲ್ಲಿ ಬರ ಪರಿಹಾರ ಕಾಮಗಾರಿಗಳು ಪ್ರಾರಂಭವಾಗಿವೆ, ಕುಡಿಯುವ ನೀರು, ದನಕರುಗಳಿಗೆ ಮೇವು ಒದಗಿಸಲಾಗಿದೆ, ಮೇವಿಗೆ ಅಭಾವವಿಲ್ಲ, ಜನರಿಗೆ ಉದ್ಯೋಗ ನೀಡುವ ಕೆಲಸವೂ ಆಗುತ್ತಿದೆ.

ತಮ್ಮನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸುವ ಷಡ್ಯಂತ್ರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಮ್ಮ ಪಕ್ಷದ ವಿಚಾರ, ನಾವು ನೋಡಿಕೊಳ್ಳುತ್ತೇವೆ ಎಂದರು.

ಬಿಜೆಪಿ ಭರವಸೆಗಳನ್ನು ಜನತೆ ನಂಬುವುದಿಲ್ಲ

ಬಿಜೆಪಿ ನುಡಿದಂತೆ ನಡೆಯುವ ಪಕ್ಷ ಅಲ್ಲ, ಆದ್ದರಿಂದ ಅವರ ಯಾವುದೇ ಭರವಸೆಗಳನ್ನು ಜನತೆ ನಂಬುವುದಿಲ್ಲ. ವಿಧಾನಸಭೆ ಚುನಾವಣೆ ಎದುರಿಸುತ್ತಿರುವ ಐದು ರಾಜ್ಯಗಳಲ್ಲಿ ಬಿಜೆಪಿ ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡುತ್ತಿದೆ.

ಆ ಪಕ್ಷ ಬಹಳ ವರ್ಷಗಳಿಂದ ಮಧ್ಯಪ್ರದೇಶದಲ್ಲಿ ಅಧಿಕಾರದಲ್ಲಿದ್ದರೂ, ಯಾವುದೇ ಪ್ರಗತಿ ಸಾಧಿಸಿಲ್ಲ, ಈಗ ಪ್ರಗತಿ ಸಾಧಿಸುವುದಾಗಿ ಭರವಸೆಗಳನ್ನು ನೀಡುತ್ತಿದೆ, ಬಿಜೆಪಿ ಅವರ ಮಾತುಗಳನ್ನು ಜನತೆ ನಂಬುವುದಿಲ್ಲ ಎಂದರು.

ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ನಮ್ಮನ್ನು ಅಕ್ಷೇಪಿಸಲು ಯಾವ ನೈತಿಕತೆಯೂ ಇಲ್ಲ, ಮಾಜಿ ಶಾಸಕ ಯತೀಂದ್ರ ದುಡ್ಡಿನ ವ್ಯವಹಾರದ ಬಗ್ಗೆ ಮಾತನಾಡಿದ್ದಾರೆಯೇ, ಅವರ ಬಳಿ ಏನಾದರೂ ಪುರಾವೆ ಇದೆಯೇ ಎಂದು ಪ್ರಶ್ನಿಸಿದರು.

ಕುಮಾರಸ್ವಾಮಿ ಕಾಲದಲ್ಲಿ ವರ್ಗಾವಣೆ ಮೂಲಕ ದುಡ್ಡು ಮಾಡಲಾಗಿದೆ

ಯತೀಂದ್ರ ಅವರು ಸಿಎಸ್‌ಆರ್‌ಫಂಡ್ ಬಗ್ಗೆ ಮಾತನಾಡಿದರೆ, ವರ್ಗಾವಣೆ ಬಗ್ಗೆ ಮಾತನಾಡಿದ್ದಾರೆ ಎಂದು ಆರೋಪಿಸುತ್ತಾರೆ, ಕುಮಾರಸ್ವಾಮಿ ಕಾಲದಲ್ಲಿ ವರ್ಗಾವಣೆಗಳ ಮೂಲಕ ದುಡ್ಡು ಮಾಡಿರುವುದು ಜಗಜ್ಜಾಹೀರಾಗಿದೆ, ಅವರಿಗೆ ನಮ್ಮ ವಿರುದ್ಧ ಆರೋಪ ಮಾಡುವ ನೈತಿಕತೆ ಇಲ್ಲ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
6 months achivementcmsiddaramaiahdroughtgovernment succession planshappy lifekmspeople
5 FacebookTwitterPinterestEmail
KM Shivaraju

previous post
2 ಲಕ್ಷ ಕೋಟಿ ರೂ. ಪರಿಶಿಷ್ಟರ ಕಲ್ಯಾಣಕ್ಕೆ ವೆಚ್ಚ
next post
ಸಿಎಂ, ಡಿಸಿಎಂ, ಇಂಧನ ಸಚಿವರ ಮೇಲೆ ಎಫ್‌ಐಆರ್ ಹಾಕಿ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ