Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜ್ಯರಾಷ್ಟ್ರಶಿಕ್ಷಣ

ರಾಜ್ಯಾದ್ಯಂತ ಮರು ಭೂ ಮಾಪನಕ್ಕೆ (ರೀ ಸರ್ವೇ) ಸೂಚನೆ

by KM Shivaraju November 22, 2023
written by KM Shivaraju November 22, 2023 0 comments 2 minutes read
3FacebookTwitterPinterestEmail
96
ಪಹಣಿ ವ್ಯತ್ಯಾಸಕ್ಕೆ  ಶಾಶ್ವತ ಪರಿಹಾರ ನೀಡಲು  ಅಧಿಕಾರಿಗಳಿಗೆ  ಕೃಷ್ಣ ಬೈರೇಗೌಡ ತಾಕೀತು

ಬೆಂಗಳೂರು : ಸರ್ವೇ ಇಲಾಖೆಯಲ್ಲಿ ಕೆಲವು ಗೊಂದಲಗಳ ಕಾರಣಕ್ಕೆ ರೈತರು ಸಾಕಷ್ಟು ಸಮಸ್ಯೆಗಳಿಗೆ ಒಳಗಾಗುತ್ತಿದ್ದಾರೆ. ಪಹಣಿ  ಮತ್ತು  ಆಕಾರ ಬಂದು,  ಆರ್ ಟಿಸಿ ವ್ಯತ್ಯಾಸದ ಪ್ರಕರಣಗಳ ಕಾರಣಕ್ಕೆ ರೈತರು ದಿನಂಪ್ರತಿ ಸರ್ಕಾರಿ ಕಚೇರಿಗೆ ಅಲೆಯುವಂತಾಗಿದೆ. ಈ ಪ್ರಕರಣಗಳಿಗೆ ಶೀಘ್ರ ಮುಕ್ತಿ ನೀಡಿ ರೈತರಿಗೆ ತುಸು ನೆಮ್ಮದಿ ನೀಡಿ ಎಂದು ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಅವರು ಸೂಚಿಸಿದರು.

ಸರ್ವೇ ಇಲಾಖೆಯಲ್ಲಿನ ಸಮಸ್ಯೆಗಳು ಹಾಗೂ ಪಹಣಿ 3 ಮತ್ತು 9 ವ್ಯತ್ಯಾಸ (RTC Mismatch)ಗಳ ಬಗ್ಗೆ ಚರ್ಚಿಸುವ ಸಲುವಾಗಿ ವಿಕಾಸಸೌಧದ ತಮ್ಮಕಚೇರಿಯಲ್ಲಿ ಬುಧವಾರ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆ ಸಚಿವರು ಈ ಸೂಚನೆ ನೀಡಿದರು.

ಸಭೆಯಲ್ಲಿ ಅಧಿಕಾರಿಗಳಿಗೆ ಹಲವು ಸೂಚನೆಗಳನ್ನು ನೀಡಿದ ಅವರು, “ರಾಜ್ಯದಲ್ಲಿ ಪಹಣಿ 3 ಮತ್ತು 9 ವ್ಯತ್ಯಾಸವಿರುವ 54,175 ಪ್ರಕರಣಗಳು ದಾಖಲಾಗಿವೆ. ಇನ್ನೂ ಆಕಾರಬಂದು ಮತ್ತು ಆರ್ ಟಿಸಿ ವ್ಯತ್ಯಾಸಕ್ಕೆ ಸಂಬಂಧಿಸಿದಂತೆ ಒಟ್ಟು 1,12,865 ಪ್ರಕರಣಗಳು ದಾಖಲಾಗಿವೆ.

ಈ ಪ್ರಕರಣಗಳ ಇತ್ಯರ್ಥಕ್ಕಾಗಿ ರೈತರು ಸರ್ಕಾರಿ ಕಚೇರಿಗೆ ಅಲೆದು ಸಾಕಾಗಿದ್ದಾರೆ. ಈ ಸಮಸ್ಯೆಗಳಿಗೆ ಮುಕ್ತಿಯೇ  ಇಲ್ಲವೇ?  ಜನರಿಗೆ ಪ್ರತಿನಿಧಿಗಳಾಗಿ ನಾವು ಅವರಿಗೆ ಏನೆಂದು ಉತ್ತರಿಸಬೇಕು? ಎಂದು ಅಧಿಕಾರಿಗಳನ್ನು” ಸಚಿವರು ಪ್ರಶ್ನಿಸಿದರು.

ಮುಂದುವರೆದು “ಈ ಎಲ್ಲಾ ತಿದ್ದುಪಡಿ ಪ್ರಕರಣಗಳಿಗೆ ಅಳತೆಯ ಅವಶ್ಯಕತೆ ಇದೆಯಾ? ಎಂಬುದನ್ನು ಅಧಿಕಾರಿಗಳು ಖಾತ್ರಿಪಡಿಸಿಕೊಳ್ಳಬೇಕು ಮತ್ತು ಸರ್ವೇ ಇಲಾಖೆ ತಹಶೀಲ್ದಾರ್ ಗ್ರೇಡ್ ಅಧಿಕಾರಿಗಳಿಗೆ ತಿಂಗಳು ಅಥವಾ ವಾರಕ್ಕೆ ಇಂತಿಷ್ಟು ಪ್ರಕರಣ ಎಂದು ಗುರಿ ನಿಗದಿಪಡಿಸಿ ರೈತರ ಸಮಸ್ಯೆಗಳನ್ನು ಪರಿಹರಿಸಬೇಕು” ಎಂದು ಅವರು ಸೂಚಿಸಿದರು.

ಪೋಡಿ ಮುಕ್ತ ಗ್ರಾಮಕ್ಕೆ ಸೂಚನೆ

ಸಭೆಯಲ್ಲಿ ಪೋಡಿ ಮುಕ್ತ ಗ್ರಾಮದ ಬಗ್ಗೆಯೂ ಚರ್ಚಿಸಲಾಯಿತು. ಈ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದ ಸಚಿವರು, “ ರಾಜ್ಯದಲ್ಲಿ ಈಗಾಗಲೇ 17,000 ಗ್ರಾಮಗಳನ್ನು ಪೋಡಿ ಮುಕ್ತ ಗ್ರಾಮಗಳು ಎಂದು ಘೋಷಿಸಲಾಗಿದೆ. 14,000 ಗ್ರಾಮಗಳನ್ನು ಪೋಡಿ ಮುಕ್ತ ಗ್ರಾಮ ಎಂದು ಘೋಷಿಸುವುದು ಬಾಕಿ ಇದೆ.

ಈಗಾಗಲೇ ರಾಮನಗರ ಜಿಲ್ಲೆಯಲ್ಲಿ “ಡ್ರೋನ್ ತಂತ್ರಜ್ಞಾನ” ಆಧಾರಿತ ಭೂ ಮರು-ಮಾಪನಕ್ಕೆ (ರೀ ಸರ್ವೇ) ಪ್ರಾಯೋಗಿಕವಾಗಿ ಚಾಲನೆ ನೀಡಲಾಗಿತ್ತು. ಈ ಪ್ರಯೋಗ ಯಶಸ್ವಿಯಾಗಿದ್ದು, ಇದನ್ನೇ ಆಧರಿಸಿ ರಾಜ್ಯಾದ್ಯಂತ ಮತ್ತೊಮ್ಮೆ ಭೂ ಮರು-ಮಾಪನ ಮಾಡಿ ಪೋಡಿ ಮರು ಅಭಿಯಾನಕ್ಕೆ ಚಾಲನೆ ನೀಡಿ” ಎಂದರು.

ನಮೂನೆ 57 ಅರ್ಜಿ ಇತ್ಯರ್ಥಕ್ಕೂ ಸೂಚನೆ

ನಮೂನೆ 57ರ ಅಡಿಯಲ್ಲಿ ಸಾಗುವಳಿ ಭೂಮಿ ಮಂಜೂರು ಮಾಡಲು ರಾಜ್ಯಾದ್ಯಂತ ಲಕ್ಷಾಂತರ ಅರ್ಜಿಗಳು ಸಲ್ಲಿಕೆಯಾಗಿವೆ. ಈ ಎಲ್ಲಾ ಅರ್ಜಿಗಳನ್ನೂ ಕಾನೂನಿನ ಮಿತಿಯೊಳಗೆ ಯಾರ ಪ್ರಭಾವಕ್ಕೂ ಒಳಗಾಗದೆ,  ಶೀಘ್ರವಾಗಿ ಅರ್ಹ ಫಲಾನುಭವಿಗಳಿಗೆ ಸಾಗುವಳಿ ಚೀಟಿ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಅಲ್ಲದೆ, ಈ ನಮೂನೆ 57ರ ಅರ್ಜಿಯ ಅಡಿಯಲ್ಲಿ ಈ ಹಿಂದೆಯೇ ಭೂಮಿ ಮಂಜೂರಾಗಿದ್ದರೆ ಅಧಿಕಾರಿಗಳು ಪೋಡಿ ಮುಕ್ತ ಮಾಡುವ ಅಥವಾ ಏಕ ವ್ಯಕ್ತಿ ಅಡಿಯಲ್ಲಿ ಪೋಡಿ ನೀಡುವ ಬಗ್ಗೆ ಕ್ರಮಕೈಗೊಳ್ಳಿ.

 ಮುಂದಿನ ದಿನಗಳಲ್ಲಿ ಫಾರಂ 57ರ ಅರ್ಜಿಗಳನ್ನು ಮಂಜೂರು ಮಾಡುವ ಮುನ್ನ ಭೂಮಿಯನ್ನು ಅಳತೆ ಮಾಡಿ ಮಂಜೂರು ನಕ್ಷೆ ತಯಾರಿಸಿದ ನಂತರ ಸಾಗುವಳಿ ಚೀಟಿ ನೀಡಿ ಪೋಡಿ ಪ್ರಕ್ರಿಯೆ ನಡೆಸಿ ನೋಂದಾಯಿಸಿ ಹಕ್ಕು ದಾಖಲೆಗಳನ್ನು ತಯಾರಿಸಿ ಎಂದು ಹೇಳಿದರು.

 ಕಂದಾಯ-ಅರಣ್ಯ ಗಡಿ ಗುರುತಿಸಿ

ಕಂದಾಯ ಹಾಗೂ ಅರಣ್ಯ ಜಮೀನುಗಳ ನಡುವಿನ  ಗಡಿಯ ಬಗ್ಗೆ ಸಾಕಷ್ಟು ಸ್ಪಷ್ಟತೆ  ಇಲ್ಲದ ಕಾರಣಕ್ಕೂ ಜನ ಸಾಕಷ್ಟು ತೊಂದರೆಗೆ ಒಳಗಾಗುತ್ತಿದ್ದಾರೆ. ಇಲಾಖೆಗೂ ಇದರಿಂದ ಸಾಕಷ್ಟು ನಷ್ಟ ಉಂಟಾಗುತ್ತಿದೆ.  

ಹೀಗಾಗಿ ಅಧಿಕಾರಿಗಳು ಶೀಘ್ರವಾಗಿ ಹಲವಾರು ಸರ್ವೇ ನಂಬರುಗಳಲ್ಲಿ ಹಂಚಿ ಹೋಗಿರುವ ಅರಣ್ಯ ಹಾಗೂ ಕಂದಾಯ ಭೂಮಿಗಳನ್ನು ಗುರುತಿಸಿ, ಸರ್ವೇ ನಂಬರುಗಳನ್ನು ಶೀಘ್ರವಾಗಿ ಅಳತೆ ಕೈಗೊಂಡು ಗಡಿ ಗುರುತಿಸಿ ದಾಖಲೆಗಳನ್ನು ತಯಾರಿಸಿ  ಎಂದರು.

ಅಲ್ಲದೆ, ರಾಜ್ಯದಲ್ಲಿ ಹಲವು ಸ್ವರೂಪಗಳಲ್ಲಿ ಸರ್ಕಾರಿ ಜಮೀನುಗಳು ಇದ್ದು, ಎಲ್ಲಾ ಸರ್ಕಾರಿ ಸರ್ವೇ ನಂಬರುಗಳನ್ನೂ ಒಂದು ಬಾರಿ ಅಳತೆ ಮಾಡಿ ಸಂರಕ್ಷಿಸಿ ಎಂದು ಕೃಷ್ಣ ಬೈರೇಗೌಡ ಅಧಿಕಾರಿಗಳಿಗೆ ಸೂಚಿಸಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
directionskmskmskannadakrishna byregowdare-serverevenue departmentrtc correction
3 FacebookTwitterPinterestEmail
KM Shivaraju

previous post
ಕಾಂಗ್ರೆಸ್ ಮುಖಂಡ ಎಸ್.ಮನೋಹರ್ ಸೇರಿ ಐವರ ಬಂಧನಕ್ಕೆ ಆಗ್ರಹ
next post
ಸಂಪುಟದ ಸಹೋದ್ಯೋಗಿಗಳಿಂದ ಮುಖ್ಯಮಂತ್ರಿಗೆ ಒತ್ತಡ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ