ಆಕ್ಷೇಪಣೆ ಸಲ್ಲಿಕೆಗೆ ಡಿ. 9 ರವರೆಗೆ ಅವಕಾಶ; ಅಂತಿಮ ಪಟ್ಟಿ ಡಿ. 30 ಕ್ಕೆ ಪ್ರಕಟ
ಬೆಂಗಳೂರು: ಭಾರತದ ಚುನಾವಣಾ ಆಯೋಗದ ನಿರ್ದೇಶನದಂತೆ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳ ಕರಡು ಮತದಾರರ ಪಟ್ಟಿಯನ್ನು ಇಂದು ಪ್ರಕಟಿಸಲಾಗಿದೆ.
ಮತದಾರರ ಪಟ್ಟಿಗಳು ಸಂಬಂಧಪಟ್ಟ ಮತದಾರರ ನೋಂದಣಿ ಅಧಿಕಾರಿಗಳು/ಪ್ರಾದೇಶಿಕ ಆಯುಕ್ತರು, ಸಹಾಯಕ ಮತದಾರರ ನೋಂದಣಿ ಅಧಿಕಾರಿಗಳು/ಜಿಲ್ಲಾ ಚುನಾವಣಾ ಅಧಿಕಾರಿಗಳ ಕಚೇರಿ, ceo.karnataka.gov.in ವೆಬ್ ಸೈಟ್ ಮತ್ತು ಸಂಬಂಧಪಟ್ಟ ಪ್ರಾದೇಶಿಕ ಆಯುಕ್ತರು ಮತ್ತು ಜಿಲ್ಲಾ ಚುನಾವಣಾ ಅಧಿಕಾರಿಗಳ ವೆಬ್ ಸೈಟ್ ಗಳಲ್ಲಿ ಲಭ್ಯವಿದೆ.
ಕರ್ನಾಟಕ ಈಶಾನ್ಯ ಪದವೀಧರರ, ಕರ್ನಾಟಕ ನೈಋತ್ಯ ಪದವೀಧರರ, ಬೆಂಗಳೂರು ಪದವೀಧರರ, ಕರ್ನಾಟಕ ಆಗ್ನೇಯ ಶಿಕ್ಷಕರ, ಕರ್ನಾಟಕ ನೈರುತ್ಯ ಶಿಕ್ಷಕರ, ಕರ್ನಾಟಕ ದಕ್ಷಿಣ ಶಿಕ್ಷಕರ ಮತ್ತು ಬೆಂಗಳೂರು ಶಿಕ್ಷಕರ ಕ್ಷೇತ್ರಗಳ ಮತದಾರರ ಕರಡು ಪಟ್ಟಿ ಪ್ರಕಟಿಸಲಾಗಿದೆ.
ನವೆಂಬರ್ 23 ರಂದು ಮತದಾರರ ಪಟ್ಟಿಗಳ ಕರಡು ಪ್ರಕಟಣೆ ಮಾಡಲಾಗಿದ್ದು, ಹಕ್ಕುಗಳು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಡಿಸೆಂಬರ್ 9 ರವರೆಗೆ ಅವಕಾಶವಿದೆ. ಡಿಸೆಂಬರ್ 30 ರಂದು ಮತದಾರರ ಪಟ್ಟಿಗಳ ಅಂತಿಮ ಪ್ರಕಟಣೆ ಮಾಡಲಾಗುತ್ತದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
ಬೆಂಗಳೂರು ಪದವೀಧರರ ಕ್ಷೇತ್ರದಲ್ಲಿ70007 ಅರ್ಜಿಗಳು ಸ್ವೀಕರಿಸಲಾಗಿದ್ದು, 67787 ಅರ್ಜಿಗಳು ಕ್ರಮಬದ್ಧವಾಗಿವೆ. 2220 ಅರ್ಜಿಗಳನ್ನು ತಿರಸ್ಕರಿಸಲಾಗಿದೆ. 32271 ಪುರುಷ, 35506 ಮಹಿಳಾ,10 ಇತರೆ ಸೇರಿದಂತೆ ಒಟ್ಟು67787 ಮತದಾರರಿದ್ದಾರೆ.
ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ10749 ಅರ್ಜಿಗಳು ಸ್ವೀಕರಿಸಲಾಗಿದ್ದು,10022 ಅರ್ಜಿಗಳು ಕ್ರಮಬದ್ಧವಾಗಿವೆ. 727 ಅರ್ಜಿಗಳನ್ನು ತಿರಸ್ಕರಿಸಲಾಗಿದೆ. 3843 ಪುರುಷ, 6178 ಮಹಿಳಾ,1ಇತರೆ ಸೇರಿದಂತೆ ಒಟ್ಟು 10022 ಮತದಾರರಿದ್ದಾರೆ ಎಂದು ಪ್ರಕಟಿಸಲಾಗಿದೆ.
ನವೆಂಬರ್ 6 ರವರೆಗೆ ಅರ್ಜಿಗಳನ್ನು ಸಲ್ಲಿಸಿದ ಎಲ್ಲಾ ಅರ್ಜಿದಾರರು ceo.karnataka.gov.in ನಿಗದಿಪಡಿಸಿದ ಸಂಬಂಧಿತ ಪದವೀಧರ / ಶಿಕ್ಷಕರ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ಪರಿಶೀಲಿಸಲು ಮತ್ತು ಹಕ್ಕುಗಳು ಮತ್ತು ಆಕ್ಷೇಪಣೆಗಳು ಇದ್ದಲ್ಲಿ ಡಿಸೆಂಬರ್ 9 ರೊಳಗೆ ಸಂಬಂಧಪಟ್ಟ ಚುನಾವಣಾ ನೋಂದಣಿ ಅಧಿಕಾರಿಗಳಿಗೆ ಸಲ್ಲಿಸುವಂತೆ ಕೋರಲಾಗಿದೆ.