Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಡಿಕೆಶಿ ಸಿಬಿಐ ಕೇಸ್ ವಾಪಸ್; ಸಂಪುಟ ನಿರ್ಧಾರಕ್ಕೆ ಕುಮಾರಸ್ವಾಮಿ ಕಿಡಿ

by KM Shivaraju November 24, 2023
written by KM Shivaraju November 24, 2023 0 comments 2 minutes read
4FacebookTwitterPinterestEmail
103
ಸಂಪುಟ ಸಭೆಯಿಂದ ಹೊರಗುಳಿದು ಡಿಸಿಎಂ ದೊಡ್ಡತನ ಪ್ರದರ್ಶನ

ರಾಮನಗರ: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ವಿರುದ್ಧ ಸಿಬಿಐ ತನಿಖೆಗೆ ನೀಡಲಾಗಿದ್ದ ಅನುಮತಿಯನ್ನು ವಾಪಸ್ ಪಡೆಯುವ ನಿರ್ಧಾರ ಕೈಗೊಂಡ ರಾಜ್ಯ ಕಾಂಗ್ರೆಸ್  ಸರಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಮನಗರದಲ್ಲಿ ವಕೀಲರು ನಡೆಸುತ್ತಿದ್ದ ಪ್ರತಿಭಟನೆ ಸ್ಥಳಕ್ಕೆ ಭೇಟಿ ನೀಡಿದ ನಂತರ ಅವರು ಮಾಧ್ಯಮಗಳ ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದರಲ್ಲದೆ; ಕಳ್ಳಕಾಕರ ರಕ್ಷಣೆಗೆ ಈ ಸರಕಾರ ಇದೆ ಎನ್ನುವ ರೀತಿಯಲ್ಲಿ ವರ್ತಿಸುತ್ತಿದೆ ಎಂದು ಕಿಡಿಕಾರಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ವಕೀಲರಾಗಿ, ವಕೀಲ ಉಪನ್ಯಾಸಕರಾಗಿ ಕೆಲಸ ಮಾಡಿದ್ದಾರೆ. ಆದರೆ, ಅವರ ನೇತೃತ್ವದ ಸಂಪುಟ ಸಭೆಯಲ್ಲಿ ತೆಗೆದುಕೊಂಡ ನಿರ್ಣಯ ಸರಿಯಲ್ಲ. ಸುಪ್ರೀಂ ಕೋರ್ಟ್ ನೀಡಿರುವ ಹಲವಾರು ತೀರ್ಪುಗಳು ನಮ್ಮ ಕಣ್ಣಮುಂದೆ ಇವೆ. ಈಗಾಗಲೇ ಇದೇ ವಿಷಯವಾಗಿ ಎರಡು ಬಾರಿ ಹೈಕೋರ್ಟ್ ನಲ್ಲಿ ವಿಚಾರಣೆ ನಡೆದು ಆದೇಶಗಳು ಬಂದಿವೆ. ಸಿಬಿಐ ತನಿಖೆ ರದ್ದು ಕೋರಿ ಡಿ.ಕೆ.ಶಿವಕುಮಾರ್ ಅವರು ಎರಡು ಸಲ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ಮಾನ್ಯ ಮಾಡಿಲ್ಲ. ಇದು ಸಿಎಂಗೆ ಗೊತ್ತಿಲ್ಲವೇ? ಎಂದು ಅವರು ಪ್ರಶ್ನಿಸಿದರು.

ಇಂಥ ಸೂಕ್ಷ್ಮ ವಿಚಾರ ನ್ಯಾಯಾಲಯದ ಮುಂದೆ ಇದ್ದಾಗ ಸರಕಾರ ಏಕಾಏಕಿ ಈ ನಿರ್ಧಾರ ತೆಗೆದುಕೊಂಡಿರುವುದು  ತಪ್ಪು. ಕಾನೂನನ್ನು ಧಿಕ್ಕರಿಸಿದವರು ಇವರು. ನಾವು ಕಾನೂನಿಗಿಂತ ದೊಡ್ಡವರು ಎಂಬುದನ್ನು ಅವರು ಪ್ರದರ್ಶನ ಮಾಡಿಕೊಂಡಿದ್ದಾರೆ. ಬಡವರಿಗೆ ರಕ್ಷಣೆ ಇಲ್ಲ, ಲೂಟಿ‌ ಮಾಡುವವರಿಗೆ ಕೊಳ್ಳೆ ಹೊಡೆಯುವವರ ಪರವಾಗಿ ಸರಕಾರ ಇದೆ ಎಂಬುದನ್ನು ಇವರು  ನಿರೂಪಿಸಿದ್ದಾರೆ ಎಂದು ಅವರು ಕಿಡಿ ಕಾರಿದರು.

ಡಿಸಿಎಂ ಬಗ್ಗೆ ಹೆಚ್ಡಿಕೆ ವ್ಯಂಗ್ಯ

ಸಂಪುಟ ಸಭೆಯಿಂದ ಹೊರಗುಳಿದ ಡಿಕೆಶಿ ಬಗ್ಗೆ ವ್ಯಂಗ್ಯವಾಡಿದ ಅವರು, ಡಿಸಿಎಂ ಎಂತಹ ದೊಡ್ಡತನ ತೋರಿಸಿದ್ದಾರೆ ಅಂದರೆ, ತಮ್ಮ ಕೇಸಿನ  ವಿಚಾರ ಕ್ಯಾಬಿನೆಟ್ ನಲ್ಲಿ ಚರ್ಚೆ ಆಗುತ್ತದೆ ಎಂದು ಅವರು ಕ್ಯಾಬಿನೆಟ್ ಸಭೆಯಿಂದ ಹೊರಗೆ ಉಳಿದಿದ್ದರು. ಅವರು ಸಂಪುಟ ಸಭೆಗೂ ಹೋಗಿಲ್ಲ. ಅವರ ಸಹಕಾರಕ್ಕೆ ಅಭಿನಂದಿಸಲೇಬೇಕು ಎಂದು ಟಾಂಗ್ ನೀಡಿದರು.

ಡಿಸಿಎಂ ಅವರು ಕಳೆದ 3 ದಿನಗಳ ಹಿಂದೆ ಹಿರಿಯ ವಕೀಲರ ಸಭೆ ಕರೆದು, ಈ ಕೇಸಿನಿಂದ ಯಾವ ರೀತಿ ರಕ್ಷಣೆ ಪಡೆಯಬೇಕು ಎಂದು ಚರ್ಚೆ ಮಾಡಿದ್ದಾರೆ. ನಮಗೆ ಎಲ್ಲಾ ಮಾಹಿತಿ ಇದೆ. ಮೊನ್ನೆಯೇ ಈ ವಿಚಾರ ನನ್ನ ಗಮನಕ್ಕೆ ಬಂತು. ಸಂಪುಟ ಸಭೆಯ ತೀರ್ಮಾನದ ಈ ನಡವಳಿಕೆಗೆ ಅಂತರಾಷ್ಟ್ರೀಯ ಮಟ್ಟದಲ್ಲಿ ಚರ್ಚೆ ಆಗುತ್ತದೆ. ಈ ವಿಚಾರವನ್ನು ಮುಂದಿನ ಸದನದಲ್ಲಿ ಚರ್ಚೆ ಮಾಡೋಣ ಎಂದರು ಅವರು.

ನಿರ್ಣಯ ಮಾಡಿರೋದು ಸರಕಾರಕ್ಕೆ ಛೀಮಾರಿ ಹಾಕಿದಂತೆ

ರಾಜ್ಯ ಸರಕಾರದ ಮೇಲೆ ಡಿಕೆಶಿ ಒತ್ತಡ ಹಾಕಿದ್ದಾರಾ? ಎನ್ನುವ ಮಾಧ್ಯಮಗಳ ಪ್ರಶ್ನೆಗೆ ಉತ್ತರ ನೀಡಿದ ಅವರು, ಇಲ್ಲಿ ಒತ್ತಡದ ಪ್ರಶ್ನೆ ಅಲ್ಲ, ಸರಕಾರ ಇರೋದು ಕಾನೂನು ವ್ಯಾಪ್ತಿಯಲ್ಲಿ ಕೆಲಸ ಮಾಡುವುದಕ್ಕೆ. ತಿಳಿವಳಿಕೆ ಇರುವವರೇ ಇಂತಹ ನಿರ್ಣಯ ಮಾಡಿರೋದು ಸರಕಾರಕ್ಕೆ ಛೀಮಾರಿ ಹಾಕಿದಂತೆ ಇದೆ ಇದು. ಒಂದು ಬಾರಿ ಆದೇಶ ಮಾಡಿದ ಮೇಲೆ ಬದಲಾವಣೆ ಮಾಡಲು ಆಗುವುದಿಲ್ಲ ಎಂದರು.

ಅಕ್ರಮ ಆಸ್ತಿ ಕೇಸನ್ನು ಸಿಬಿಐನಿಂದ ವಾಪಸ್ ಪಡೆದು  ಲೋಕಾಯುಕ್ತ ಅಥವಾ ಸ್ಥಳೀಯ ಪೊಲೀಸರಿಂದ ತನಿಖೆ ಮಾಡಲು ಆಗುತ್ತದೆಯೇ? ಲೋಕಾಯುಕ್ತ ಅಥವಾ ಪೊಲೀಸರು ಈ ತನಿಖೆ ಮಾಡಲು ಸಾಧ್ಯವೇ? ಹಿಂದಿನ ಸರಕಾರವು ಸಿಬಿಐಗೆ ವಹಿಸಲು ಸ್ಪೀಕರ್ ಅನುಮತಿ ಪಡೆದಿರಲಿಲ್ಲ ಎನ್ನುವುದಾದರೆ, ಇವರು ಸ್ಪೀಕರ್ ಅವರಿಂದ ಅನುಮತಿ ಪಡೆದಿದ್ದಾರಾ? ಇದೆಲ್ಲಾ ಕೇವಲ ಸಬೂಬುಗಳು ಮಾತ್ರ. ತನಿಖೆ ಮುಂದುವರಿಸಿ ಎಂದು ಈಗಾಗಲೇ  ಕೋರ್ಟ್ ಆದೇಶ ಆಗಿದೆ. ಈಗ ಸ್ಪೀಕರ್ ಅನುಮತಿ ಪಡೆದರೂ ಸಿಬಿಐನಿಂದ ಕೇಸ್ ವಾಪಸ್ ಪಡೆಯಲು ಆಗುತ್ತಾ? ಎಂದು ರಾಜ್ಯ ಸರಕಾರಕ್ಕೆ ಪ್ರಶ್ನೆಗಳ ಸುರಿಮಳೆಗರೆದರು.

ಇದೇ ಸಿದ್ದರಾಮಯ್ಯ ಅವರು ಐದು ವರ್ಷ ಸಿಎಂ ಆಗಿದ್ದಾಗ, ಲೋಕಾಯುಕ್ತ ರದ್ದು ಮಾಡಿ, ಎಸಿಬಿ ರಚನೆ ಮಾಡಿ ಎಲ್ಲಾ ಅಕ್ರಮಗಳನ್ನು ಮುಚ್ಚಿ ಹಾಕಿದರು. ಇಂಥ ಕೆಲಸದಲ್ಲಿ ಸಿದ್ದರಾಮಯ್ಯ ನಿಪುಣರು. ಈ ಬಗ್ಗೆ ಅವರಿಗೆ ಬಹಳ ಅನುಭವ ಇದೆ. ಹಾಗಾಗಿ ಕಾನೂನು ವ್ಯವಸ್ಥೆಯಲ್ಲಿ ಹೊಸ ಹೆಜ್ಜೆ ಹಾಕಲು ಹೊರಟಿದ್ದಾರೆ ಎಂದು ಸಿದ್ದರಾಮಯ್ಯ ಅವರನ್ನು ತರಾಟೆಗೆ ತೆಗೆದುಕೊಂಡರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
cabinetcbi casedkshd kumaraswamykmskmskannada
4 FacebookTwitterPinterestEmail
KM Shivaraju

previous post
ಲೋಕಸಭಾ ಚುನಾವಣಾ ಪೂರ್ವ ಸಿದ್ಧತೆ
next post
ಶಕ್ತಿ ಯೋಜನೆ ಶತಕೋಟಿ ಸಂಭ್ರಮ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ