30
ಆಯೋಗದಿಂದ ಮತದಾರರ ಪಟ್ಟಿ ಪರಿಷ್ಕರಣೆ
ಬೆಂಗಳೂರು:ಮುಂಬರುವ ಲೋಕಸಭಾ ಚುನಾವಣಾ ಪೂರ್ವ ಸಿದ್ಧತೆಗಳ ಕುರಿತು ಭಾರತ ಚುನಾವಣಾ ಆಯೋಗದ ಕಾರ್ಯದರ್ಶಿ ಅಜಯ್ ಕುಮಾರ್ ವರ್ಮಾ ಮತ್ತು ಆಯೋಗದ ಅಧೀನ ಕಾರ್ಯದರ್ಶಿ ರಾಜೇಶ್ ಕುಮಾರ್ ಸಿಂಗ್ ಇಂದಿಲ್ಲಿ ಜಿಲ್ಲಾ ಚುನಾವಣಾಧಿಕಾರಿ ಮತ್ತು ಬೃಹತ್ ಬೆಂಗಳೂರು ಮಹಾನಗರಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರೊಂದಿಗೆ ಪರಿಶೀಲನೆ ನಡೆಸಿದರು.
ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ, ಸ್ವೀಪ್ ಚಟುವಟಿಕೆಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.
ಚುನಾವಣಾ ವಿಭಾಗದ ವಿಶೇಷ ಆಯುಕ್ತ ರಾಮಚಂದ್ರನ್, ಹೆಚ್ಚುವರಿ ಜಿಲ್ಲಾ ಚುನಾವಣಾಧಿಕಾರಿಗಳಾದ ಡಾ. ಕೆ ಹರೀಶ್ ಕುಮಾರ್, ಕೆ. ಎ. ದಯಾನಂದ ಸೇರಿದಂತೆ ಚುನಾವಣಾ ವಿಭಾಗದ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.