Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಸಿದ್ದರಾಮಯ್ಯ ಸಂಪುಟ ಡಿ.ಕೆ.ಶಿವಕುಮಾರ್ ಪಾದದಡಿಯಲ್ಲಿದೆ

by KM Shivaraju November 24, 2023
written by KM Shivaraju November 24, 2023 0 comments 2 minutes read
3FacebookTwitterPinterestEmail
124
ಅಂತಿಮ ತೀರ್ಪು ಕೊಡುವ ತೀರ್ಪುಗಾರ ಮೇಲಿದ್ದಾನೆ: ಕುಮಾರಸ್ವಾಮಿ

ಹಾಸನ: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ದದ ಸಿಬಿಐ ತನಿಖೆ ವಾಪಸ್ ಪಡೆಯುವ ನಿರ್ಧಾರವನ್ನು ರಾಜ್ಯ ಸಚಿವ ಸಂಪುಟದಲ್ಲಿ ತೆಗೆದುಕೊಳ್ಳುವ ಮೂಲಕ ಸಿದ್ದರಾಮಯ್ಯ ನೇತೃತ್ವದ ಸರಕಾರ ಡಿ.ಕೆ.ಶಿವಕುಮಾರ್ ಪಾದದಡಿಯಲ್ಲಿ ಬಿದ್ದಿದೆ ಎನ್ನುವುದು ಸಾಬೀತಾದಂತೆ ಆಗಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ.

 ಖಾಸಗಿ ಕಾರ್ಯಕ್ರಮದ ನಿಮಿತ್ತ ಹಾಸನಕ್ಕೆ ಬಂದಿದ್ದ ಅವರು ತಮ್ಮನ್ನು ಭೇಟಿಯಾದ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದರು.

ಸಿದ್ದರಾಮಯ್ಯ ಏನು ಎನ್ನುವುದು ಬಯಲಾಗಿದೆ

ಈ ಸರಕಾರಕ್ಕೆ ಕನಿಷ್ಠ ಸಾಮಾನ್ಯ ತಿಳಿವಳಿಕೆಯೂ ಇಲ್ಲ. ಕಾಂಗ್ರೆಸ್ ನಾಯಕರು ಅನೇಕ ಬಾರಿ ಸಂವಿಧಾನದ ವ್ಯವಸ್ಥೆ ಉಳಿಯಬೇಕಾದರೆ ಕಾಂಗ್ರೆಸ್‌ಗೆ ಮತ ನೀಡಿ ಎಂದು ಹೇಳುತ್ತಾರೆ‌. ಈ ನಿರ್ಧಾರದ ಮೂಲಕ ಎಷ್ಟರಮಟ್ಟಿಗೆ ಅವರು ಸಂವಿಧಾನ ಉಳಿಸುತ್ತಿದ್ದಾರೆ. ಕಾನೂನಿನ ಮೇಲೆ ಅವರ ಗೌರವ ಎಷ್ಟಿದೆ ಎಂದು ಗೊತ್ತಾಗುತ್ತಿದೆ. ಈ ತೀರ್ಮಾನದ ಮೂಲಕ ಸಂಪೂರ್ಣ ಸಿದ್ದರಾಮಯ್ಯ‌ ನೇತೃತ್ವದ ಕರ್ನಾಟಕದ ರಾಜ್ಯ ಸರಕಾರದ  ಸಂಪುಟ ಡಿ.ಕೆ.ಶಿವಕುಮಾರ್ ಪಾದದಡಿಯಲ್ಲಿದೆ ಅನ್ನುವುದು ರುಜುವಾತಾಗಿದೆ ಎಂದು ಅವರು ಹರಿಹಾಯ್ದರು.

ಲೆಟರ್ ಹೆಡ್ ಸ್ವಂತಕ್ಕೆ ಬಳಕೆ

ಈ ದೇಶದ ಕಾನೂನು ವ್ಯವಸ್ಥೆಯನ್ನು ಡಿಕೆಶಿ ಪಾದದಡಿಗೆ ತೆಗೆದುಕೊಂಡು ಹೋಗುವ ಕೆಲಸವನ್ನು ಮಾಡಿದ್ದಾರೆ ಸಿದ್ದರಾಮಯ್ಯ ಎಂದು ಅವರು ಅರೋಪಿಸಿದರು.

ಕೆಪಿಸಿಸಿ ಕಚೇರಿಯಲ್ಲಿ ನಡೆದ ನೆಹರು ಜಯಂತಿ ಕಾರ್ಯಕ್ರಮ

ತನಿಖಾ ಸಂಸ್ಥೆಗಳು ತನಿಖೆ ಮುಂದುವರಿಸುವ ನಿಟ್ಟಿನಲ್ಲಿ ಅಂದಿನ ರಾಜ್ಯ ಸರಕಾರದ ಅನುಮತಿ ಕೋರಿದ್ದರು. ತನಿಖೆಗೆ ಅಂದಿನ ಸರಕಾರ  ಅನುಮತಿ ಕೊಟ್ಟಿತ್ತು. ಉಪ ಮುಖ್ಯಮಂತ್ರಿ ಡಿಕೆಶಿರವರು ಅಂದು ಶಾಸಕರಾಗಿದ್ದರು, ಈ ಬಗ್ಗೆ ಅವರು ಕೆಲ ದಾಖಲೆಗಳನ್ನು ಕೇಳಿ ಶಾಸಕರ ಲೆಟರ್‌ಹೆಡ್‌ನಲ್ಲಿ ಪತ್ರ ಬರೆದ ದಾಖಲೆಗಳಿವೆ. ಅವರು ಶಾಸಕರಾಗಿ ಜನತೆಯ ಪರವಾಗಿ ಕೆಲಸ ಮಾಡಿದ್ದಕ್ಕಿಂತ ಹೆಚ್ಚಾಗಿ ಅವರ ವೈಯಕ್ತಿಕ ಸಮಸ್ಯೆಗಳಿಗೆ ಹೆಚ್ಚಾಗಿ ಲೆಟರ್‌ಹೆಡ್ ಬಳಸಿಕೊಂಡಿದ್ದಾರೆ ಎಂದು ಕುಮಾರಸ್ವಾಮಿ ಅವರು ಆರೋಪಿಸಿದರು.

ಗಣಿಗಾರಿಕೆ, ಗ್ರಾನೈಟ್ ಮೈನಿಂಗ್ ಸೇರಿದಂತೆ ಕಾನೂನು ಮೀರಿ ಮಾಡಿರುವ ಸಂಪಾದನೆ ರಕ್ಷಿಸಿಕೊಳ್ಳಲು ಶಾಸಕ ಸ್ಥಾನವನ್ನು ಬಳಸಿಕೊಂಡಿದ್ದಾರೆ ಎಂದು ಮಾಜಿ ಸಿಎಂ ದೂರಿದರು.

ವಕೀಲರಿಗೆ ಉಪನ್ಯಾಸ ಮಾಡಿದ್ದ ಸಿಎಂ

ಸುಪ್ರೀಂ ಕೋರ್ಟ್‌, ಹೈಕೋರ್ಟ್‌ನಲ್ಲಿ ಪ್ರಕರಣ ವಿಚಾರಣಾ ಹಂತದಲ್ಲಿರುವುದರಿಂದ ಈ ರೀತಿ ನಿರ್ಧಾರವನ್ನು ಸಂಪುಟದಲ್ಲಿ‌ ತೆಗೆದುಕೊಳ್ಳಲು ಸಾಧ್ಯವಿಲ್ಲ. ವಕೀಲರಾಗಿದ್ದವರೂ, ವಕೀಲರಿಗೆ ಉಪನ್ಯಾಸ ಮಾಡಿದ ಸಿದ್ದರಾಮಯ್ಯನವರು ಈ ನಿರ್ಧಾರದ ಮೂಲಕ ಎಷ್ಟರಮಟ್ಟಿಗೆ ಕಾನೂನು ರಕ್ಷಕರು ಎಂಬುದು ಗೊತ್ತಾಗುತ್ತದೆ‌  ಎಂದು ಸಿಎಂ ವಿರುದ್ಧವೂ ಅವರು ಟೀಕಾಪ್ರಹಾರ ನಡೆಸಿದರು.

1 ಲಕ್ಷದ 23 ಸಾವಿರ ಅಂತರದಿಂದ ಚುನಾವಣೆ ಗೆದ್ದೆ ಎಂದು  ಡಿ.ಕೆ.ಶಿವಕುಮಾರ್‌ ಅವರು ಹೇಳಿಕೊಳ್ಳುತ್ತಾರೆ‌. ಕನಕಪುರದಲ್ಲಿ ಇನ್ನೂ ಬಡವರಿದ್ದಾರೆ. ಅವರಿಗೂ ಎರಡು ಮೂರು ವರ್ಷಗಳಲ್ಲಿ 30%, 40%, 200%, 300% ಹಣ ಹೆಚ್ಚಿಸಿಕೊಳ್ಳುವ ಪ್ರತಿಭೆಯನ್ನು ಧಾರೆ ಎರೆದು ಆ ಕಲೆಯನ್ನು ಕಲಿಸಿದರೆ‌ ಒಳಿತಾಗುತ್ತದೆ ಎಂದು ಕುಮಾರಸ್ವಾಮಿ ಮಾರ್ಮಿಕವಾಗಿ ಡಿಕೆಶಿಗೆ ಕುಟುಕಿದರು‌‌.

ಸಂಪುಟದಲ್ಲಿ ಈ ರೀತಿ‌ ತೀರ್ಮಾನವಾಗಿದ್ಯಾ? ತೆಗೆದು ನೋಡ್ತೀನಿ ಎಂದು ಡಿ.ಕೆ.ಶಿವಕುಮಾರ್ ಮಾಧ್ಯಮಗಳಿಗೆ  ಪ್ರತಿಕ್ರಿಯೆ ನೀಡಿದ್ದಾರೆ. ಈ ರೀತಿಯ ಹಾಸ್ಯಾಸ್ಪದ ಹೇಳಿಕೆ ಕೊಡುವ ಅವರನ್ನು ದೇವರೇ ಕಾಪಾಡಬೇಕು ಎಂದು ಅವರು ಟೀಕಿಸಿದರು.

ತಡೆಯಾಜ್ಞೆ ಸಿಗದ ಕೇಸ್ ಬಗ್ಗೆ ಸಂಪುಟ ನಿರ್ಧಾರ

ಕೋರ್ಟ್‌ನಲ್ಲಿ ತಡೆ ನೀಡಲು ಆಗದ ಪ್ರಕರಣಗಳನ್ನು ಸಚಿವ ಸಂಪುಟದಲ್ಲಿ ಚರ್ಚಿಸಲು ಅವಕಾಶವಿದೆಯಾ? ಇಂತಹ ಸಂದರ್ಭದಲ್ಲಿ ತರಾತುರಿ ನಿರ್ಧಾರ ಮಾಡಿದ್ದು ಎಷ್ಟರ ಮಟ್ಟಿಗೆ ಸರಿ? ಎಂದು ಕುಮಾರಸ್ವಾಮಿ ಅವರು  ಪ್ರಶ್ನಿಸಿದರು.

ಈಗಾಗಲೇ ರಾಜ್ಯದಲ್ಲಿ ಕಾನೂನು ತಜ್ಞರು ಈ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ. ವಿರೋಧ ಪಕ್ಷವಾಗಿ ನಾವು ಏನು ಕೆಲಸ ಮಾಡಲು ಸಾಧ್ಯವಿದೆಯೋ ಅದನ್ನು ಮಾಡುತ್ತೇವೆ. ವಿಪಕ್ಷ  ಸದಸ್ಯರಾಗಿ ತಪ್ಪನ್ನು ಜನರ ಮುಂದಿಡುವ ಕೆಲಸ ಮಾಡುತ್ತೇವೆ. ಸ್ಥಳೀಯ ಪೋಲಿಸರು ಅಥವಾ ಲೋಕಾಯುಕ್ತದವರು ಈ ವ್ಯಕ್ತಿ ಬಗ್ಗೆ ತನಿಖೆ ಮಾಡಲು ಸಾಧ್ಯವಾ? ತೀರ್ಪು ಕೊಡುವ ತೀರ್ಪುಗಾರ ಮೇಲಿದ್ದಾನೆ.  ಅವನು ಏನು ತೀರ್ಪು ಕೊಡುತ್ತಾನೆ ನೋಡೊಣ ಎಂದು ಕುಮಾರಸ್ವಾಮಿ ಹೇಳಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
cabinet decisioncbi casedkshivakumarhasanhdkumaraswamykms
3 FacebookTwitterPinterestEmail
KM Shivaraju

previous post
ಪೋಸ್ಟರ್ ಅಂಟಿಸಿದ ಕಿಡಿಗೇಡಿಗಳ ಬಂಧನಕ್ಕೆ ಜೆಡಿಎಸ್ ಆಗ್ರಹ
next post
ನವೆಂಬರ್ 27ರಂದು ಮುಖ್ಯಮಂತ್ರಿ ಜನತಾ ದರ್ಶನ

You may also like

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

July 11, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (521)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,015)
  • ರಾಜ್ಯ (2,329)
  • ರಾಷ್ಟ್ರ (2,294)
  • ವಿಶ್ಲೇಷಣೆ (198)
  • ಶಿಕ್ಷಣ (401)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

    July 20, 2026

KMS Special

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

    July 18, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ