Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ತೆಲಂಗಾಣದ ಸಿಎಂಆರೋಪ ಚುನಾವಣಾ ಪ್ರೇರಿತ

by KM Shivaraju November 26, 2023
written by KM Shivaraju November 26, 2023 0 comments 2 minutes read
2FacebookTwitterPinterestEmail
100
ರಾಜ್ಯದ ಜನರಿಗೆ  ಮೋಸ ಮಾಡುವ ಪ್ರಶ್ನೆಯೇ ಇಲ್ಲ : ಸಿದ್ದರಾಮಯ್ಯ

ತೆಲಂಗಾಣ: ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳನ್ನು ಸರಿಯಾಗಿ ಜಾರಿ ಮಾಡಲಾಗುತ್ತಿಲ್ಲ ಎಂಬ ತೆಲಂಗಾಣದ ಮುಖ್ಯಮಂತ್ರಿಗಳ ಆರೋಪಗಳು ಚುನಾವಣಾ ಪ್ರೇರಿತ ಮತ್ತು ಸತ್ಯಕ್ಕೆ ದೂರವಾಗಿದೆ.  ಕರ್ನಾಟಕ ರಾಜ್ಯದ ಜನತೆಯನ್ನು ಮೋಸ ಮಾಡಿರುವ  ಪ್ರಶ್ನೆಯೇ ಉದ್ಭವಿಸುವುದಿಲ್ಲ. ಕಾಂಗ್ರೆಸ್ ಪಕ್ಷ ನೀಡಿರುವ ಎಲ್ಲ ಪಂಚ ಗ್ಯಾರಂಟಿಗಳನ್ನು 5 ವರ್ಷಗಳವರೆಗೆ ಅನುಷ್ಠಾನಗೊಳಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ತೆಲಂಗಾಣ ರಾಜ್ಯಕ್ಕೆ ಭೇಟಿ ನೀಡಿ ಕಾಂಗ್ರೆಸ್ ಪಕ್ಷದ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಮೇ ತಿಂಗಳಲ್ಲಿ ಅಧಿಕಾರಕ್ಕೆ ಬಂದಿತು. ನಾವು ಅಧಿಕಾರ ಸ್ವೀಕರಿಸಿದ ಮೇ 20 ರ ದಿನದಂದೇ ಕಾಂಗ್ರೆಸ್ ನೀಡಿದ್ದ ಐದೂ ಗ್ಯಾರಂಟಿಗಳ ಅನುಷ್ಠಾನಗೊಳಿಸಲು ಸಂಪುಟ ಸಭೆ ನಡೆಸಿ ತೀರ್ಮಾನಿಸಿ, ಸಂಬಂಧಪಟ್ಟ ಸರ್ಕಾರಿ ಆದೇಶಗಳನ್ನು ಅಂದೇ ನೀಡಲಾಯಿತು ಎಂದರು.

ಶಕ್ತಿ ಯೋಜನೆಗೆ ಮಹಿಳೆಯರ ಮೆಚ್ಚುಗೆ
ತೆಲಂಗಾಣ ಚುನಾವಣೆ ಪ್ರಚಾರಕ್ಕೆ ಸಿಎಂ ಜೊತೆ ತೆರಳಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ನಮ್ಮ ಮೊದಲ ಗ್ಯಾರಂಟಿಯಾದ ಮಹಿಳೆರಿಗೆ ಉಚಿತ ಪ್ರಯಾಣ ಸೌಲಭ್ಯ ಒದಗಿಸುವ ಶಕ್ತಿ ಯೋಜನೆಯನ್ನು ಜೂನ್ 11 ರಿಂದ ಜಾರಿಗೊಳಿಸಲಾಯಿತು. ನಿನ್ನೆಯ ದಿನ ರಾಜ್ಯದಲ್ಲಿ 100.47 ಕೋಟಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ ಶಕ್ತಿ ಯೋಜನೆಯ ಯಶಸ್ವಿ ಅನುಷ್ಠಾನದ ಸಂಭ್ರಮವನ್ನು ಆಚರಿಸಲಾಯಿತು.

ರಾಜ್ಯದಲ್ಲಿ ಯಾವ ಜಾತಿಧರ್ಮಗಳ ಬೇಧವಿಲ್ಲದೇ ಪ್ರತಿದಿನ 60 ಲಕ್ಷ ಮಹಿಳೆಯರು ಸರ್ಕಾರಿ ಬಸ್ ನಲ್ಲಿ ಉಚಿತವಾಗಿ ಪ್ರಯಾಣಿಸುತ್ತಾರೆ. ಶ್ರಮಿಕ , ಉದ್ಯೋಗಸ್ಥ  ಸೇರಿದಂತೆ ಎಲ್ಲ ವರ್ಗದ ಮಹಿಳೆಯರು ಯೋಜನೆಯ ಲಾಭಪಡೆಯುತ್ತಿದ್ದು, ಇದರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ತೆಲಂಗಾಣದ ಮುಖ್ಯಮಂತ್ರಿಗಳು ಚುನಾವಣೆಯ ಹಿನ್ನಲೆಯಲ್ಲಿ ಕರ್ನಾಟಕ ಸರ್ಕಾರದ ಬಗ್ಗೆ ಸುಳ್ಳು ಹೇಳುತ್ತಿದ್ದಾರೆ. ಆದರೆ, ಇಲ್ಲಿನ ಇತರೆ ಪಕ್ಷಗಳು ಏಕೆ ಸುಳ್ಳು ಹೇಳುತ್ತಿವೆ ಎಂದು ಪ್ರಶ್ನಿಸಿದರು.

ಜನವರಿ 2024ರಲ್ಲಿ ಯುವನಿಧಿ

ಯುವನಿಧಿ ಯೋಜನೆಯಡಿ ರಾಜ್ಯದ ನಿರುದ್ಯೋಗಿ ಯುವಜನರನ್ನು ಸಶಕ್ತಗೊಳಿಸುವ ಉದ್ದೇಶದಿಂದ  ಜಾರಿಗೊಳಿಸಲಾಗುವುದು. 2022-23ನೇ ಸಾಲಿನಲ್ಲಿ ಪದವಿ ಪಡೆದ ಯುವಜನರಿಗೆ  2 ವರ್ಷಗಳವರೆಗೆ ಮಾಸಿಕ 3000 ರೂ. 2 ವರ್ಷದವರಗೆ ಡಿಪ್ಲೊಮಾ ಮಾಡಿದ ಯುವಜನರಿಗೆ ಮಾಸಿಕ 1500 ರೂ.ಗಳನ್ನು ನೀಡಲಾಗುವುದು.

ಇದಲ್ಲದೇ ಯುವಜನರಿಗೆ ಕೌಶಲ್ಯಾಭಿವೃದ್ಧಿ ತರಬೇತಿಯನ್ನೂ ನೀಡಲಾಗುತ್ತದೆ. ಈ ಯೋಜನೆಯನ್ನು ಜನವರಿ 2024 ರಿಂದ ಜಾರಿಗೆ ತರಲಾಗುವುದು. ಕರ್ನಾಟಕ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಒಂದೇ ವರ್ಷದೊಳಗೇ ಜಾರಿಗೊಳಿಸಿದೆ. ಈ ವರ್ಷ ಎಲ್ಲ ಗ್ಯಾರಂಟಿ ಯೋಜನೆಗಳಿಗೆ ಸುಮಾರು 38 ಸಾವಿರ ಕೋಟಿಗಳು ವೆಚ್ಚವಾಗುತ್ತಿದೆ ಎಂದರು.

ಬಿಜೆಪಿ ತನ್ನ ಪ್ರಣಾಳಿಕೆಯ ಭರವಸೆಗಳನ್ನು ಈಡೇರಿಸಿಲ್ಲ

ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ನುಡಿದಂತೆ ನಡೆದಿದ್ದೇವೆ. ಈ ಹಿಂದೆಯೂ ಕಾಂಗ್ರೆಸ್ ಸರ್ಕಾರ ನೀಡಿದ್ದ 165 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಿತ್ತು. ಆದರೆ ಬಿಜೆಪಿ ಸರ್ಕಾರ ತಮ್ಮ ಪ್ರಣಾಳಿಕೆಯಲ್ಲಿ ಸಾಕಷ್ಟು ಭರವಸೆಗಳನ್ನು ನೀಡಿದ್ದರೂ , 2019-2023ರ ತಮ್ಮ ಅವಧಿಯಲ್ಲಿ ಕೇವಲ ಶೇ. 10 ರಷ್ಟು ಭರವಸೆಗಳನ್ನು ಈಡೇರಿಸಿದ್ದಾರೆ.

ತೆಲಂಗಾಣ ಚುನಾವಣಾ ಪ್ರಚಾರದಲ್ಲಿ ಸಿಎಂ ಸಿದ್ದರಾಮಯ್ಯ, ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಭಾಗಿ
 

ಪ್ರಧಾನಿ ನರೇಂದ್ರ ಮೋದಿಯವರು ಬಿಡುಗಡೆಗೊಳಿಸಿದ್ದ ಬಿಜೆಪಿ ಪ್ರಣಾಳಿಕೆಯಲ್ಲಿನ ಭರವಸೆಗಳನ್ನು ಈಡೇರಿಸದೇ ಇರುವುದು ಸತ್ಯ. ಆದ್ದರಿಂದ ರಾಜ್ಯದ ಕಾಂಗ್ರೆಸ್ ಸರ್ಕಾರದ ಮೇಲೆ ವಿರೋಧಪಕ್ಷಗಳು ಮಾಡುತ್ತಿರುವ ಆರೋಪಗಳು ಚುನಾವಣಾ ಪ್ರೇರಿತವಾಗಿದ್ದು, ಸತ್ಯಕ್ಕೆ ದೂರವಾಗಿದೆ ಎಂದರು.

ರಾಜ್ಯದ ಆರ್ಥಿಕತೆ ಸದೃಢವಾಗಿದೆ:

ಪ್ರಧಾನಿ ಮೋದಿಯವರು ರಾಜಸ್ಥಾನದ ತಮ್ಮ ಚುನಾವಣಾ ಭಾಷಣದಲ್ಲಿ ಕರ್ನಾಟಕ ಗ್ಯಾಟಂಟಿ ಯೋಜನೆಗಳನ್ನು ಜಾರಿ ಮಾಡಲಾಗುವುದಿಲ್ಲ. ಹಾಗೂ ರಾಜ್ಯದ ಆರ್ಥಿಕತೆ ಕುಂಠಿತವಾಗುತ್ತದೆ ಎಂದು ಟೀಕಿಸಿದ್ದರು. ಅವರ ಈ ಮಾತು ಸತ್ಯಕ್ಕೆ ದೂರವಾಗಿದ್ದು, ರಾಜ್ಯದ ಆರ್ಥಿಕತೆ ಸದೃಢವಾಗಿದ್ದು, ಅನುದಾನಕ್ಕೆ ಕೊರತೆ ಇಲ್ಲ.

ಆದ್ದರಿಂದ ತೆಲಂಗಾಣ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಖಂಡಿತ ಜಯ ಸಾಧಿಸಲಿದ್ದು, ಅಧಿಕಾರಕ್ಕೆ ಬರಲಿದೆ. ತೆಲಂಗಾಣದಲ್ಲಿ ಪಕ್ಷ ನೀಡಿರುವ ಆರು ಗ್ಯಾರಂಟಿಗಳನ್ನು ಕಾಂಗ್ರೆಸ್ ಈಡೇರಿಸಲಿದ್ದು, ಇದರ ಬಗ್ಗೆ ತೆಲಂಗಾಣ ಜನರಿಗೆ ಯಾವುದೇ ಸಂಶಯ ಬೇಡ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
cm's allegationelection motivatedkarnatakakhargekmskannadaSiddaramaiahtelanganayuvanidi in January
2 FacebookTwitterPinterestEmail
KM Shivaraju

previous post
 28ಲೋಕಸಭೆ ಕ್ಷೇತ್ರ ಗೆಲ್ಲುತ್ತೇವೆ
next post
ಒನ್‌ ಎಂ.ಜಿ. ಲಿಡೋ ಮಾಲ್‌ ನಲ್ಲಿ ಫ್ಯಾಷನ್‌ ಶೋ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ