Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಉದ್ಯೋಗರಾಜ್ಯರಾಷ್ಟ್ರಶಿಕ್ಷಣ

ಗ್ರಾಮೀಣ ಶಾಲೆಗಳಿಗೆ ಸಿಎಸ್ಆರ್ ನಿಧಿ ಮೀಸಲಿಡಿ

by KM Shivaraju November 29, 2023
written by KM Shivaraju November 29, 2023 0 comments 2 minutes read
4FacebookTwitterPinterestEmail
94
 ಉದ್ಯಮಿಗಳಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಕರೆ

ಬೆಂಗಳೂರು:“ನಮ್ಮ ರಾಜ್ಯದಲ್ಲಿ ಹೊಸ ಶಿಕ್ಷಣ ವ್ಯವಸ್ಥೆಯನ್ನು ಜಾರಿಗೆ ತರಲು ಪ್ರಯತ್ನಿಸುತ್ತಿದ್ದೇವೆ. ಗ್ರಾಮೀಣ ಭಾಗದ ಶಾಲೆಗಳ ಗುಣಮಟ್ಟ ಸುಧಾರಣೆಗೆ ಸಿಎಸ್ಆರ್ ನಿಧಿಯನ್ನು ಮೀಸಲಿಡಿ” ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಉದ್ಯಮಿಗಳಿಗೆ ಕರೆ ನೀಡಿದರು.

ಬೆಂಗಳೂರು ಮುಖ್ಯ ಅರಮನೆಯಲ್ಲಿ ನಡೆದ ಬೆಂಗಳೂರು ಟೆಕ್ ಸಮ್ಮೇಳನದಲ್ಲಿ ಮಾತನಾಡಿದ ಅವರು,“ಗ್ರಾಮೀಣ ಭಾಗದ ಶಾಲೆಗಳ ಗುಣಮಟ್ಟ ಹೆಚ್ಚಿದರೆ ಆ ಭಾಗದ ಮಕ್ಕಳು ಕೂಡ ಜಾಗತಿಕ ಮಟ್ಟದಲ್ಲಿ ಸ್ಪರ್ಧಿಸಲು ನೆರವಾಗುತ್ತದೆ. ಈ ಬಗ್ಗೆ ಉದ್ಯಮಿ ಪ್ರೇಮ್ ಜೀ ಸೇರಿದಂತೆ ಹಲವರ ಜತೆ ಚರ್ಚೆ ಮಾಡಿದ್ದು, ಈಗಾಗಲೇ 2 ಸಾವಿರ ಕೋಟಿ ಹಣವನ್ನು ಈ ಉದ್ದೇಶಕ್ಕೆ ನೀಡಲು ಅವರು ಮುಂದಾಗಿದ್ದಾರೆ. ನಾವೆಲ್ಲರೂ ಒಟ್ಟಿಗೆ ಸೇರಿ ಕೆಲಸ ಮಾಡೋಣ ಎಂದರು.

ನೂತನ ಜೈವಿಕ ತಂತ್ರಜ್ಞಾನ ನೀತಿ

ರಾಜ್ಯದಲ್ಲಿ ನೂತನ ಜೈವಿಕ ತಂತ್ರಜ್ಞಾನ ನೀತಿಯನ್ನು ರೂಪಿಸಲಾಗಿದೆ. ಆದರೂ ಉದ್ಯಮದಾರರಿಗೆ ರಾಜ್ಯ ಸರ್ಕಾರ ಯಾವ ಸವಲತ್ತು ಹಾಗೂ ಪ್ರೋತ್ಸಾಹ ಸಿಗುತ್ತದೆ ಎಂಬುದು ಮುಖ್ಯವಾಗುತ್ತದೆ.

ಉದ್ಯಮಿಗಳು, ಬಂಡವಾಳ ಹೂಡಿಕೆದಾರರು ಬಲಿಷ್ಠವಾದರೆ, ಸರ್ಕಾರ ಬಲಿಷ್ಠವಾಗುತ್ತದೆ. ನೀವು ದುರ್ಬಲರಾದರೆ ನಾವು ದುರ್ಬಲವಾಗುತ್ತೇವೆ. ನೀವು ಆರ್ಥಿಕವಾಗಿ ಸಧೃಡವಾದರೆ ರಾಜ್ಯ ಕೂಡ ಆರ್ಥಿಕವಾಗಿ ಸಧೃಡವಾಗುತ್ತದೆ ಎಂದು ನಾವು ನಂಬಿದ್ದೇವೆ ಎಂದು ಹೇಳಿದರು.

ನಾನು ಬಹಳ ವರ್ಷಗಳಿಂದ ಸಚಿವನಾಗಿ ಕೆಲಸ ಮಾಡುತ್ತಾ ಬಂದಿದ್ದೇನೆ. ಮೊದಲ ಬಾರಿಗೆ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಪಾಲ್ಗೊಂಡ ನಾರಾಯಣ ಮೂರ್ತಿ ಹಾಗೂ ಅಜೀಂ ಪ್ರೇಮ್ ಜಿ ಅವರು ಇದಕ್ಕೆ ದೇಶದಲ್ಲೇ ಒಂದು ಹೊಸ ರೂಪ ನೀಡಿದರು.

ನಂತರ ವಿಶ್ವದ ಪ್ರಮುಖ ನಾಯಕರು ಬೆಂಗಳೂರಿಗೆ ಬರಲು ಆರಂಭಿಸಿದರು. ಬೆಂಗಳೂರಿಗೆ ಸಾವಿರಾರು ಬಹುರಾಷ್ಟ್ರೀಯ ಕಂಪನಿಗಳು ಕಾಲಿಟ್ಟವು. ಅವರು ಇಲ್ಲಿ ವ್ಯಾಪಾರ ವ್ಯವಹಾರ ಮಾಡುತ್ತಿದ್ದಾರೆ. ನಾನು ಅಜೀಂ ಪ್ರೇಮ್ ಜೀ ಅವರ ಜತೆ ಚರ್ಚೆ ಮಾಡುವಾಗ ಅವರು ಒಂದು ವಿಚಾರ ಹೇಳಿದರು. ನಮ್ಮಲ್ಲಿ 5 ಮಿಲಿಯನ್ (50 ಲಕ್ಷ) ಐಟಿ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದಾರೆ. ಅದರಲ್ಲಿ 2 ಮಿಲಿಯನ್ ನಷ್ಟು ಐಟಿ ಉದ್ಯೋಗಸ್ಥರು ಬೆಂಗಳೂರಿನಲ್ಲಿದ್ದಾರೆ.

ತಂತ್ರಜ್ಞಾನದ ಬೆಳವಣಿಗೆಯಲ್ಲಿ ಬೆಂಗಳೂರು ಜಾಗತಿಕ ಮಟ್ಟದಲ್ಲೇ ತನ್ನದೇ ಆದ ಹೆಸರು ಸಂಪಾದಿಸಿದೆ. ಹೆಚ್ಚು ಇಂಜಿನಿಯರಿಂಗ್ ಕಾಲೇಜುಗಳು ಬೆಂಗಳೂರಿನಲ್ಲಿವೆ. ರಾಜ್ಯದಲ್ಲಿ 70ಕ್ಕೂ ಹೆಚ್ಚು ಮೆಡಿಕಲ್ ಕಾಲೇಜುಗಳಿವೆ. ಈ ದೇಶದಲ್ಲಿ ಇಷ್ಟು ದೊಡ್ಡ ಪ್ರಮಾಣದಲ್ಲಿ ಮಾನವಸಂಪನ್ಮೂಲ ಉತ್ಪಾದನೆ ಬೇರೆ ಯಾವುದೇ ರಾಜ್ಯಗಳಲ್ಲಿ ಆಗುತ್ತಿಲ್ಲ. ಆ ಮೂಲಕ ಇಡೀ ವಿಶ್ವಕ್ಕೆ ಶಕ್ತಿ ನೀಡುತ್ತಿದ್ದೇವೆ.

ತೆರಿಗೆ ಪಾವತಿಯಲ್ಲಿ ಕರ್ನಾಟಕದ ಪಾಲು ಶೇ.37ರಷ್ಟು

ನಮ್ಮ ಮಕ್ಕಳು ಜಾಗತಿಕ ಮಟ್ಟದಲ್ಲಿ ಸ್ಪರ್ಧಿಸುತ್ತಿದ್ದಾರೆ. ನಾವು ನಿಮ್ಮೆಲ್ಲರಿಗೂ ಎಲ್ಲಾ ರೀತಿಯ ಅಗತ್ಯ ಸಹಕಾರ ನೀಡುತ್ತೇವೆ. ನಮ್ಮ ರಾಜ್ಯದಲ್ಲಿ ತಾಂತ್ರಿಕ ವಿಚಾರವಾಗಿ ಕ್ಷಮತೆ ಹೊಂದಿರುವ ಮಾನವ ಸಂಪನ್ಮೂಲವಿದೆ ಎಂಬ ಭರವಸೆಯನ್ನು ನಾನು ನೀಡಬಲ್ಲೆ. ನಿಮ್ಮಲ್ಲಿ ಏನಾದರೂ ಸಮಸ್ಯೆ, ತೊಂದರೆ ಇದ್ದರೆ ಅವುಗಳನ್ನು ಹೇಳಿ. ನಾವು ನಿಮ್ಮ ಜತೆ ಕೈಜೋಡಿಸಿ ಕೆಲಸ ಮಾಡುತ್ತೇವೆ. ನೀವು ಉದ್ಯೋಗ ಸೃಷ್ಟಿಸಿ, ತೆರಿಗೆ ಪಾವತಿಸಿ ರಾಜ್ಯಕ್ಕೆ ಶಕ್ತಿ ತುಂಬುತ್ತಿದ್ದೀರಿ. ದೇಶದ ತೆರಿಗೆ ಪಾವತಿಯಲ್ಲಿ ಕರ್ನಾಟಕ ಶೇ.37ರಷ್ಟು ಪಾಲನ್ನು ಹೊಂದಿದ್ದು, ಈ ಶಕ್ತಿಯನ್ನು ನೀವು ತುಂಬಿದ್ದೀರಿ.

ಮಾಹಿತಿ ತಂತ್ರಜ್ಞಾನ ನೀತಿ ರೂಪಿಸಿದ ಮೊದಲ ರಾಜ್ಯ ಕರ್ನಾಟಕ.

ಸಚಿವ ಪ್ರಿಯಾಂಕ್ ಖರ್ಗೆ ಅವರ ನೇತೃತ್ವದಲ್ಲಿ ಈ ಟೆಕ್ ಸಮಿಟ್ ನಡೆದಿದ್ದು, ಅವರು ಅತ್ಯುತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸಿದ್ದಾರೆ. ಅವರು ಬಹಳ ಉತ್ಸುಕತೆಯಿಂದ ಈ ಇಲಾಖೆಯ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದಾರೆ. ಈ ಬೆಂಗಳೂರಿನ ಸಮ್ಮೇಳನದಲ್ಲಿ ನೀವು ನಿಮ್ಮ ಅಭಿಪ್ರಾಯ, ಆಲೋಚನೆ, ಸಮಸ್ಯೆ ಎಲ್ಲವನ್ನು ಹಂಚಿಕೊಳ್ಳಿ. ನಾವು ಅದನ್ನು ಸರಿಪಡಿಸುವ ಪ್ರಯತ್ನ ಮಾಡುತ್ತೇವೆ.

ಮಾಹಿತಿ ತಂತ್ರಜ್ಞಾನ ನೀತಿ ರೂಪಿಸಿದ ಮೊದಲ ರಾಜ್ಯ ಕರ್ನಾಟಕ. ಈಗ ನಾವು ಜೈವಿಕ ಇಂಧನ, ಅನ್ವೇಷಣಾ ನೀತಿಯನ್ನು ರೂಪಿಸಿದ್ದೇವೆ. ಈ ಸಮ್ಮೇಳನದಲ್ಲಿ ನಿಮ್ಮ ಸಲಹೆಗಳನ್ನು ನಾವು ನಿರೀಕ್ಷಿಸುತ್ತೇವೆ. ನಾವು ನಿಮ್ಮ ಜತೆ ಇರುತ್ತೇವೆ ಎಂಬ ವಾಗ್ದಾನ ನೀಡುತ್ತಾ ನಿಮ್ಮೆಲ್ಲರಿಗೂ ಶುಭ ಕೋರುತ್ತೇನೆ” ಎಂದು ಹೇಳಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
businessmencsr fundinformation technology policykarnataka first statekmskmskannadaset asiderural schoolsshivakumar call
4 FacebookTwitterPinterestEmail
KM Shivaraju

previous post
62 ಕೈಗಾರಿಕಾ ಯೋಜನೆಗಳಿಗೆ ಅನುಮತಿ
next post
ಯುಜಿ ಆಯುಷ್ ನೋಂದಣಿ, ಪ್ರವೇಶ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ