ಆಕ್ಷೇಪಣೆಗೆ 15 ದಿನ ಕಾಲಾವಕಾಶ ನೀಡಿದ ಮಂಡಳಿ
ಬೆಂಗಳೂರು: ಪ್ರಸಕ್ತ 2023-24ನೇ ಸಾಲಿನ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿ.ಯು.ಸಿ. ವಾರ್ಷಿಕ ಪರೀಕ್ಷೆ- 1 ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಪ್ರಕಟಿಸಿದೆ.
ರಾಜ್ಯದ ಎಲ್ಲಾ ಪ್ರೌಢಶಾಲಾ ಮುಖ್ಯ ಶಿಕ್ಷಕರು ಹಾಗೂ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರುಗಳು ತಮ್ಮ ಶಾಲಾ, ಕಾಲೇಜುಗಳ “ಪ್ರಕಟಣಾ ಫಲಕ”ದಲ್ಲಿ ಪ್ರಕಟಿಸಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲು ತಿಳಿಸಿದೆ.
ಮಂಡಲಿಯಿಂದ ಪ್ರಕಟಿಸಿರುವ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿ.ಯು.ಸಿ. ವಾರ್ಷಿಕ ಪರೀಕ್ಷೆ-1 ರ ತಾತ್ಕಾಲಿಕ ವೇಳಾಪಟ್ಟಿಗೆ ವಿದ್ಯಾರ್ಥಿಗಳು, ಪೋಷಕರು ಹಾಗೂ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಲು ಇಂದಿನಿಂದ ದಿ: 15-12-2023 ರವರೆಗೆ 15 ದಿನಗಳ ಕಾಲಾವಕಾಶವನ್ನು ನೀಡಲಾಗಿರುತ್ತದೆ.
ಆಕ್ಷೇಪಣೆ ಮಾಡಲಿಯ ಇಮೇಲ್ ವಿಳಾಸ : chairpersonkseab@gmail.com ಹಾಗೂ ಹಾರ್ಡ್ ಪ್ರತಿಯನ್ನು ಅಧ್ಯಕ್ಷರು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ, 6ನೇ ಅಡ್ಡರಸ್ತೆ, ಮಲ್ಲೇಶ್ವರಂ, ಬೆಂಗಳೂರು-560003 ಇಲ್ಲಿಗೆ ನಿಗದಿತ ಸಮಯದೊಳಗಾಗಿ ಕಳುಹಿಸುವುದು. ನಿಗದಿಪಡಿಸಿರುವ ಕೊನೆಯ ದಿನಾಂಕದ ನಂತರ ಬರುವ ಯಾವುದೇ ಆಕ್ಷೇಪಣೆಗಳನ್ನು ಪರಿಗಣಿಸುವುದಿಲ್ಲ ಎಂದು ಮಂಡಲಿ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.