Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಷ್ಟ್ರವಿಶ್ಲೇಷಣೆ

ಬರ ಪರಿಸ್ಥಿತಿ ನಿರ್ವಹಣೆಯಲ್ಲಿ ಸರಕಾರ ಪೂರ್ಣ ವಿಫಲ

by KM Shivaraju December 3, 2023
written by KM Shivaraju December 3, 2023 0 comments 2 minutes read
4FacebookTwitterPinterestEmail
188
ರಾಜ್ಯಪಾಲರಿಗೆ ದೂರು ನೀಡಿದ ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ರಾಜ್ಯಾದ್ಯಂತ ಜೆಡಿಎಸ್ ಪಕ್ಷ ನಡೆಸಿದ್ದ ಬರ ಅಧ್ಯಯನ ವರದಿಯನ್ನು ಮಾಜಿ ಮುಖ್ಯಮಂತ್ರಿಗಳು  ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಅವರಿಗೆ ಸಲ್ಲಿಸಿದರು.

ಪಕ್ಷದ ಶಾಸಕರು, ಮಾಜಿ ಸಚಿವರು, ಮಾಜಿ ಶಾಸಕರು ಹಾಗೂ ಜಿಲ್ಲಾ ಘಟಕಗಳ ಅಧ್ಯಕ್ಷರ ಜತೆ ರಾಜಭವನಕ್ಕೆ ನಿಯೋಗದಲ್ಲಿ ತೆರಳಿದ ಅವರು, ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ಕೂಡಲೇ ತಾವು ರಾಜ್ಯದಲ್ಲಿ ಬರ ಪರಿಹಾರ ಕಾಮಗಾರಿಗಳನ್ನು ಕೈಗೊಳ್ಳಲು ಕೇಂದ್ರದಿಂದ  ಅನುದಾನ ಕೊಡಿಸಲು ಮಧ್ಯಪ್ರದೇಶ ಮಾಡಬೇಕೆಂದು ಮಾಜಿ ಮುಖ್ಯಮಂತ್ರಿಗಳು ರಾಜ್ಯಪಾಲರಲ್ಲಿ ಮನವಿ ಮಾಡಿದರು.

ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ  ರಾಜ್ಯಪಾಲರು, ನಿಮ್ಮ ಅಹವಾಲನ್ನು ಕೇಂದ್ರ ಸರ್ಕಾರದ ಗಮನಕ್ಕೆ ತರುವುದಾಗಿ ಭರವಸೆ ನೀಡಿದರು. ರಾಜ್ಯ ಎದುರಿಸುತ್ತಿರುವ ತೀವ್ರ ಬರ ಪರಿಸ್ಥಿತಿಯನ್ನು ಕೇಂದ್ರದ ಗಮನಕ್ಕೆ ತರುವುದಾಗಿ ತಿಳಿಸಿದರು.

ಮುಂಗಾರು ಮಳೆ ವೈಫಲ್ಯದಿಂದ ರಾಜ್ಯದಲ್ಲಿ ಒಟ್ಟು 48.15  ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. ಈ ಪೈಕಿ 46.09 ಲಕ್ಷ ಹೆಕ್ಟೇರ್ ಕೃಷಿ ಬೆಳೆ ಹಾಗೂ 2.06 ಲಕ್ಷ ಹೆಕ್ಟೇರ್ ತೋಟಗಾರಿಕೆ ಬೆಳೆ ನಾಶವಾಗಿದೆ. ರಾಜ್ಯ ಸರಕಾರವೇ ಅಂದಾಜು ಮಾಡಿರುವಂತೆ ರಾಜ್ಯದಲ್ಲಿ ಒಟ್ಟು 35.162.02 ಕೋಟಿ ರೂಪಾಯಿಯಷ್ಟು ಬೆಳೆ ಹಾನಿ ಆಗಿದೆ.

ಪ್ರತಿ ಹೆಕ್ಟೇರ್ ಬೆಳೆ ನಾಶಕ್ಕೆ ಹೆಚ್ಚುವರಿಯಾಗಿ 17,500 ರೂ. ಪರಿಹಾರ ನೀಡಬೇಕು

ಎನ್ ಸಿಆರ್ ಎಫ್ ಮಾನದಂಡದ ಅಡಿಯಲ್ಲಿ ಕೇಂದ್ರ ಸರಕಾರದಿಂದ 18,171.44 ಕೋಟಿ ರೂಪಾಯಿ ಪರಿಹಾರವನ್ನು ರಾಜ್ಯ ಸರಕಾರ ಕೋರಿದೆ. ಆದರೆ, ಇಷ್ಟು ಮೊತ್ತದ ಪರಿಹಾರದಿಂದ ರಾಜ್ಯದ ರೈತರ ಬವಣೆ ನೀಗುವುದಿಲ್ಲ.

ಕೃಷಿಕರು ಅನುಭವಿಸಿರುವ ಒಟ್ಟಾರೆ ನಷ್ಟದಲ್ಲಿ ಶೇ.10ರಷ್ಟು ಪರಿಹಾರವೂ ಅವರಿಗೆ ಸಿಗುವುದಿಲ್ಲ. ಆದ್ದರಿಂದ ಈ ಹಿಂದೆ ನೀಡದಂತೆ ಪ್ರತಿ ಹೆಕ್ಟೇರ್ ಬೆಳೆ ನಾಶಕ್ಕೆ ಹೆಚ್ಚುವರಿ ಪರಿಹಾರವಾಗಿ 17,500 ರೂಪಾಯಿ ನೀಡಬೇಕು. ಈ ನಿಟ್ಟಿನಲ್ಲಿ ತಾವು ರಾಜ್ಯ ಸರಕಾರಕ್ಕೆ ಕಟ್ಟುನಿಟ್ಟಿನ ನಿರ್ದೇಶನ ನೀಡಬೇಕು ಎಂದು ಕುಮಾರಸ್ವಾಮಿ ಅವರು ರಾಜ್ಯಪಾಲರಲ್ಲಿ ಮನವಿ ಮಾಡಿದರು.

ಬರ ಪರಿಸ್ಥಿತಿ ಬಗ್ಗೆ ರಾಜ್ಯ ಸರಕಾರ ಅಸಡ್ಡೆ

ರಾಜ್ಯದಲ್ಲಿ ಬರ ಪರಿಸ್ಥಿತಿ ನಿರ್ವಹಣೆ ಹಾಗೂ ಪರಿಹಾರ ಕ್ರಮ ಕೈಗೊಳ್ಳುವಲ್ಲಿ ರಾಜ್ಯ ಕಾಂಗ್ರೆಸ್ ಸರಕಾರ ಸಂಪೂರ್ಣವಾಗಿ ವಿಫಲವಾಗಿದೆ. ಅನೇಕ ಜಿಲ್ಲೆಗಳಲ್ಲಿ ಕುಡಿಯುವ ಸಮಸ್ಯೆ ಇದೆ. ಜಾನುವಾರುಗಳು ಕೂಡ ಸಂಕಷ್ಟದಲ್ಲಿವೆ. ರಾಜಧಾನಿ ಬೆಂಗಳೂರಿನಲ್ಲಿಯೂ ನೀರಿನ ಸಂಕಷ್ಟ ಎದುರಾಗಿದೆ ಎಂದು ರಾಜ್ಯಪಾಲರಿಗೆ ಕುಮಾರಸ್ವಾಮಿ ಅವರು ದೂರಿದರು.

ರಾಜ್ಯ ಸರಕಾರ ಬರ ಪರಿಸ್ಥಿತಿಯನ್ನು ಬಹಳ ಅಸಡ್ಡೆಯಿಂದ ನೋಡುತ್ತಿದೆ. ತೀವ್ರ ನಷ್ಟ ಅನುಭವಿಸಿದ ರೈತರಿಗೆ ಬರ ಪರಿಹಾರ ನೀಡದೆ ರಾಜ್ಯ ಸರಕಾರ ತನ್ನ ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿದೆ ಎಂಬ ಅಂಶವನ್ನು ಅವರು ರಾಜ್ಯಪಾಲರ ಗಮನಕ್ಕೆ ತಂದರು.

ರಾಜ್ಯದಲ್ಲಿ ರೈತರ ಆತ್ಮಹತ್ಯೆ ಸರಣಿ ಆರಂಭವಾಗಿದೆ. ಕಳೆದ ಆರು ತಿಂಗಳಿನಿಂದ ರಾಜ್ಯ ಸರಕಾರ ರೈತರ ಬಗ್ಗೆ ಎಳ್ಳಷ್ಟೂ ಕಾಳಜಿ ವಹಿಸಿಲ್ಲ. ರಾಜಕೀಯದಲ್ಲಿ ಮೈ ಮರೆತಿದೆ ಎಂದು ಮಾಜಿ ಮುಖ್ಯಮಂತ್ರಿ ಅವರು ಹೇಳಿದರು.

ರಾಜ್ಯಪಾಲರಿಂದ ಸಕಾರಾತ್ಮಕ ಸ್ಪಂದನೆ

ರಾಜ್ಯಪಾಲರ ಭೇಟಿ ನಂತರ ರಾಜಭವನದ ಮುಂಭಾಗದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಕುಮಾರಸ್ವಾಮಿ ಅವರು, ನಮ್ಮ ಮನವಿಗೆ ರಾಜ್ಯಪಾಲರು ಅತ್ಯಂತ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಮನವಿ ಬಗ್ಗೆ ಕೇಂದ್ರ ಸರಕಾರದ ಗಮನ ಸೆಳೆದು ನಾಡಿನ ಜನರ ಹಿತ ಕಾಪಾಡುವ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜೆಡಿಎಸ್ ರಾಜ್ಯ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡರು, ಶಾಸಕರಾದ ಸಿ.ಬಿ.ಸುರೇಶ್ ಬಾಬು, ಟಿ.ಎ.ಶರವಣ, ತಿಪ್ಪೇಸ್ವಾಮಿ, ಪಕ್ಷದ ಮುಖಂಡರಾದ ಬಿ.ಮುನೇಗೌಡ ಸೇರಿದಂತೆ ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ಮಾಜಿ ಸಚಿವರು, ಮಾಜಿ ಶಾಸಕರು ಹಾಗೂ ಜಿಲ್ಲಾ ಘಟಕಗಳ ಅಧ್ಯಕ್ಷರು ಮಾಜಿ ಮುಖ್ಯಮಂತ್ರಿ ಅವರ ಜತೆಯಲ್ಲಿ ಇದ್ದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
complainedcompletely faileddrought situationhd kumaraswamymanagingstate governmentthe Governor
4 FacebookTwitterPinterestEmail
KM Shivaraju

previous post
ಸೋಲಿನಿಂದ ಕುಗ್ಗುವುದಿಲ್ಲ
next post
ಮುಸ್ಲಿಂ ಮತ ಒಗ್ಗೂಡಿಸುವಲ್ಲಿ ಜಮೀರ್ ಯಶಸ್ವಿ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ