Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಉದ್ಯೋಗರಾಜ್ಯರಾಷ್ಟ್ರ

 ‘ಪೋಡಿ ಮುಕ್ತ ಗ್ರಾಮ’ ಸಾಧಿಸುವವರೆಗೆ ಸುಮ್ಮನಿರೋಲ್ಲ

by KM Shivaraju December 4, 2023
written by KM Shivaraju December 4, 2023 0 comments 2 minutes read
2FacebookTwitterPinterestEmail
526
ಪರವಾನಗಿ ಹೊಂದಿರುವ 1800 ಭೂಮಾಪಕರ ನೇಮಕ

ಬೆಳಗಾವಿ: ರಾಜ್ಯಾದ್ಯಂತ ಪೋಡಿಗೆ ಸಂಬಂಧಿಸಿದಂತೆ ಶೇ.70 ರಷ್ಟು ಬಗೆಹರಿಸಬಹುದಾದ ಸಮಸ್ಯೆಯಾಗಿದ್ದ,  ನಾವೇ ಪ್ರತಿ ಹಳ್ಳಿಗೂ ಹೋಗಿ “ಪೋಡಿ ಮುಕ್ತ ಗ್ರಾಮ” ಯೋಜನೆಯನ್ನು ಅಭಿಯಾನದ ರೀತಿಯಲ್ಲಿ ನಡೆಸಲಿದ್ದೇವೆ. ರೈತರ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಲು ಸಂಕಲ್ಪ ಮಾಡಿದ್ದೇವೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ವಿಧಾನಸಭೆಗೆ ಭರವಸೆ ನೀಡಿದರು.

ಬೆಳಗಾವಿ ಅಧಿವೇಶನದ ಮೊದಲ ದಿನ “ಪೋಡಿ ಮುಕ್ತ ಗ್ರಾಮ” ಬಗೆಗಿನ ವಿರೋಧ ಪಕ್ಷದ ಶಾಸಕ ಸಿ.ಎನ್. ಅಶ್ವತ್ಥ್ ನಾರಾಯಣ್ ಅವರ ಪ್ರಶ್ನೆಗೆ ಸಚಿವ ಕೃಷ್ಣ ಬೈರೇಗೌಡ ಅವರು ಉತ್ತರಿಸಿದರು.

“ಪೋಡಿ ಬಾಕಿ ಪ್ರಕರಣಗಳಿಂದಾಗಿ ರೈತರಿಗೆ ಸಾಕಷ್ಟು ಸಮಸ್ಯೆಯಾಗಿದೆ. ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಡೆಸಿದ ಜನತಾದರ್ಶನ ಕಾರ್ಯಕ್ರಮದಲ್ಲೂ ಸಹ ರೈತರ ಪೋಡಿ ಸಮಸ್ಯೆಗಳ ಸಂಖ್ಯೆಯೇ ಹೆಚ್ಚಾಗಿ ಕಂಡು ಬಂದಿದೆ.

ಹೀಗಾಗಿ ಪೋಡಿ ಮುಕ್ತ ಗ್ರಾಮಕ್ಕೆ ನಮ್ಮ ಸರ್ಕಾರ ಸಂಕಲ್ಪ ಮಾಡಿದೆ. ಅಭಿಯಾನದ ಮಾದರಿಯಲ್ಲಿ ಶೀಘ್ರ ನಾವೇ ಗ್ರಾಮಗಳಿಗೆ ತೆರಳಿ ರೈತರಿಗೆ ಪೋಡಿ ಮಾಡಿಕೊಡುತ್ತೇವೆ” ಎಂದು ಭರವಸೆ ನೀಡಿದರು.

16,430 ಗ್ರಾಮಗಳಉ ಪೋಡಿ ಮುಕ್ತ

“ಪೋಡಿ ಮುಕ್ತ ಗ್ರಾಮ ಯೋಜನೆ ಆರಂಭವಾದದ್ದು 2015ರಲ್ಲಿ. ಆ ವರ್ಷ 1791 ಹಳ್ಳಿಗಳನ್ನು ಪೋಡಿ ಮುಕ್ತ ಗ್ರಾಮ ಎಂದು ಘೋಷಿಸಲಾಗಿತ್ತು.  2017 ರಲ್ಲಿ 1634, 2018 ರಲ್ಲಿ 4337. 2019 ರಲ್ಲಿ 4647, 2020 ರಲ್ಲಿ 2977, 2021ರಲ್ಲಿ 1016 ಹಾಗೂ 2022ರಲ್ಲಿ 228 ಗ್ರಾಮಗಳನ್ನು ಪೋಡಿ ಮುಕ್ತ ಮಾಡಲಾಗಿದೆ. ಈವರೆಗೆ ಒಟ್ಟಾರೆ 16,430 ಗ್ರಾಮಗಳನ್ನು ಪೋಡಿ ಮುಕ್ತ ಮಾಡಲಾಗಿದೆ. ಇನ್ನೂ 16,085 ಗ್ರಾಮಗಳು ಬಾಕಿ ಇವೆ.

ಹಿಂದಿನ ವರ್ಷಗಳ ಸಾಧನೆಗೆ ಹೋಲಿಸಿದರೆ ಕಳೆದ ಮೂರು ವರ್ಷದಿಂದ ಪೋಡಿ ಮುಕ್ತ ಗ್ರಾಮ ಯೋಜನೆಯ ಸಾಧನೆ ಸಮಾಧಾನಕರವಾಗಿಲ್ಲ. ಹೀಗಾಗಿ ಸಾಧ್ಯವಾದಷ್ಟು ಶೀಘ್ರದಲ್ಲಿ ಈ ಪ್ರಕರಣಗಳನ್ನೂ ಇತ್ಯರ್ಥ ಮಾಡಲು ಕಂದಾಯ ಇಲಾಖೆ ಬದ್ದವಾಗಿದೆ. ಈ ಬಗ್ಗೆ ಸರ್ವೇ ಇಲಾಖೆಗೂ ಅಗತ್ಯ ಸೂಚನೆ ನೀಡಲಾಗಿದೆ” ಎಂದು ಅವರು ತಿಳಿಸಿದರು. 

ಪೋಡಿ ಸಮಸ್ಯೆಯ ಹಿಂದಿನ ಕಾರಣಗಳ ಬಗ್ಗೆಯೂ ಸದನದಲ್ಲಿ ಚರ್ಚಿಸಿದ ಸಚಿವ ಕೃಷ್ಣ ಬೈರೇಗೌಡ ಅವರು, “ ರೈತರ ಹೆಸರಲ್ಲಿ ಆರ್ ಟಿಸಿ ಇದೆ. ಆದರೆ, ಸರ್ವೇ, ನಕ್ಷೆ ಮತ್ತು ಹಕ್ಕಿನ ದಾಖಲೆಗಳನ್ನು ನೀಡಲಾಗಿಲ್ಲ. ಅಲ್ಲದೆ, ಭೂಮಿಯ ವಿಸ್ತೀರ್ಣಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಪಹಣಿಗಳಿರುವುದು ಪೋಡಿ ಸಮಸ್ಯೆ ಬಗೆಹರಿಯದೆ ಇರುವುದಕ್ಕೆ ಮುಖ್ಯ ಕಾರಣ. ಆದರೂ, ರಾಜ್ಯಾದ್ಯಂತ ಇರುವ ಶೇ.70 ರಷ್ಟು ಪ್ರಕರಣಗಳಲ್ಲಿ ಸಮಸ್ಯೆ ಬಗೆಹರಿಸಬಹುದು.

ಈ ಪ್ರಕರಣಗಳಲ್ಲಿ ಯಾವುದಾದರೂ ಮಾರ್ಗ ಹುಡುಕಿ ರೈತರ ಸಮಸ್ಯೆಯನ್ನು ತುರ್ತು ಬಗೆಹರಿಸಿ ಎಂದು ನಾನು ಈಗಾಗಲೇ ನಮ್ಮ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಆದರೆ, ಉಳಿದ ಶೇ.30 ರಷ್ಟು ಪ್ರಕರಣಗಳಲ್ಲಿ ಸಮಸ್ಯೆ ಬಗೆಹರಿಸುವುದು ಅಷ್ಟು ಸುಲಭದ ಕೆಲಸವಲ್ಲ. ಪರಿಹಾರ ಕೆಲಸಕ್ಕೆ ಕೈಹಾಕುತ್ತಿದ್ದಂತೆ ತಕರಾರುಗಳು ಎದುರಾಗುತ್ತವೆ. ಇವನ್ನೂ ಸಹ ಎದುರುಗೊಳ್ಳಲು ನಾವು ಸಿದ್ದರಿದ್ದೇವೆ” ಎಂದರು.

ಪರವಾನಗಿ ಹೊಂದಿರುವ 1800 ಭೂಮಾಪಕರ ನೇಮಕ

ಪೋಡಿ ಮುಕ್ತ ಗ್ರಾಮ ಯಶಸ್ವಿಯಾಗದಿರುವುದಕ್ಕೆ ಮಾನವ ಸಂಪ ನ್ಮೂಲ ಕೊರತೆಯೂ ಕಾರಣ ಎಂದು ಸದನದಲ್ಲಿ ತಿಳಿಸಿದ ಸಚಿವರು, “ಈಗಾಗಲೇ ಪರವಾನಗಿ ಹೊಂದಿರುವ 1800 ಭೂ ಮಾಪಕರು (ಸರ್ವೇಯರ್) ಗಳನ್ನು ನೇಮಕ ಮಾಡಲಾಗಿದೆ.

ಇದರ ಜೊತೆಗೆ 364 ಸರ್ಕಾರಿ ಭೂ ಮಾಪಕರು ಹಾಗೂ 27 ಎಡಿಎಲ್ ಆರ್ ಗಳನ್ನೂ ಸಹ ನೇಮಕ ಮಾಡಲಾಗಿದೆ. ಮಾನವ ಸಂಪನ್ಮೂಲಗಳನ್ನು ಹೆಚ್ಚು ಮಾಡಿಕೊಂಡು ಪೋಡಿ ಸಮಸ್ಯಗಳಿಗೆ ಪರಿಹಾರ ನೀಡುವುದಕ್ಕೆ ನಾವು ಸಂಕಲ್ಪ ಮಾಡಿದ್ದೇವೆ” ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
1800 licensedDon't restland surveyorsPodi Mukta Gramarecruitmentuntil achieve
2 FacebookTwitterPinterestEmail
KM Shivaraju

previous post
ಜನವರಿಯಿಂದ ಶಾಲೆಯಲ್ಲಿ ನ್ಯಾಪ್ಕಿನ್‌ ವಿತರಣೆ
next post
ಬರ ಘೋಷಣೆಗೆ ರಾಜ್ಯಕ್ಕಿಲ್ಲ ಸ್ವಾತಂತ್ರ್ಯ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ