80
ಯೋಧರ ಬಗ್ಗೆ ಅಪಾರ ಗೌರವ-ಅಭಿಮಾನ ಇದೆ: ಸಿದ್ದರಾಮಯ್ಯ
ಹುತಾತ್ಮ ಯೋಧ “ಕ್ಯಾಪ್ಟನ್ ಎಂ.ವಿ.ಪ್ರಾಂಜಲ್” ಅವರ ಕುಟುಂಬಕ್ಕೆ 50 ಲಕ್ಷ ರೂಪಾಯಿಗಳ ಪರಿಹಾರದ ಚೆಕ್ ಅನ್ನು ರಾಜ್ಯ ಸರ್ಕಾರ ಹಸ್ತಾಂತರಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಸಂಬಂಧ ಟ್ವೀಟ್ ಮಾಡಿ, ಪ್ರಾಣವನ್ನು ಪಣಕ್ಕೆ ಇಟ್ಟು ದೇಶ ಕಾಯುವ ಯೋಧರ ಬಗ್ಗೆ ನಮಗೆ ಅಪಾರವಾದ ಗೌರವ-ಅಭಿಮಾನ ಇದೆ, ಅಷ್ಟೇ ಗೌರವ ಮತ್ತು ಕಾಳಜಿ ಯೋಧರ ಕುಟುಂಬ ವರ್ಗದ ಬಗ್ಗೆಯೂ ಇದೆ ಎಂದಿದ್ದಾರೆ.
ಯೋಧರ ಸಾವು-ನೋವು ಮುಂದಿಟ್ಟುಕೊಂಡು ರಾಜಕಾರಣ ಮಾಡುವವರು ನಾವಲ್ಲ, ಕೆಲವರು ರಾಜಕೀಯ ದುರುದ್ದೇಶದಿಂದ ಸುಳ್ಳು ಸುದ್ದಿ ಸೃಷ್ಟಿಸಿ ಅಪಪ್ರಚಾರ ಮಾಡುವದರಲ್ಲಿಯೇ ವಿಕೃತ ಆನಂದ ಪಡುತ್ತಿದ್ದಾರೆ, ಅಂತಹವರಿಗೆ ದೇವರು ಸದ್ಬುದ್ಧಿ ನೀಡಲಿ ಎಂದಷ್ಟೇ ಹಾರೈಸುತ್ತೇನೆ.