Thursday, October 22, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, October 22, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜ್ಯರಾಷ್ಟ್ರ

ಗಗನ ಚುಕ್ಕಿಯಲ್ಲಿ ಕೇಬಲ್ ಕಾರ್  

by KM Shivaraju December 5, 2023
written by KM Shivaraju December 5, 2023 0 comments 2 minutes read
0FacebookTwitterPinterestEmail
183
ರಾಜ್ಯದ 25 ಸಾವಿರ ಸ್ಮಾರಕಗಳ ರಕ್ಷಣೆ: ಸಚಿವ ಹೆಚ್.ಕೆ.ಪಾಟೀಲ್

ಬೆಳಗಾವಿ: ರಾಜ್ಯದಲ್ಲಿ 25 ಸಾವಿರಕ್ಕೂ ಹೆಚ್ಚಿನ ಸ್ಮಾರಕಗಳ ರಕ್ಷಣೆಗೆ ಸರ್ಕಾರ ಕ್ರಮ ವಹಿಸಿದೆ. ಖಾಸಗಿ ಸಹಭಾಗಿತ್ವದಲ್ಲಿ ರಾಜ್ಯದಲ್ಲಿನ ಪ್ರವಾಸೋದ್ಯಮವನ್ನು ಅಭಿವೃದ್ಧಿ ಮಾಡಲು ಯೋಜನೆ ರೂಪಿಸುವುದಾಗಿ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವ ಹೆಚ್.ಕೆ.ಪಾಟೀಲ್ ಹೇಳಿದರು.

ವಿಧಾನ ಸಭೆಯಲ್ಲಿ  ಪ್ರಶ್ನೋತ್ತರ  ಉತ್ತರಿಸಿದ  ಸಚಿವರು, ಸ್ಮಾರಕಗಳ ದತ್ತು ತೆಗೆದುಕೊಳ್ಳವ ಯೋಜನೆ ಜಾರಿಯಲ್ಲಿದೆ.  ಪ್ರವಾಸಿ ತಾಣಗಳಲ್ಲಿ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಲಾಗುವುದು.

 ಕರ್ನಾಟಕ ಪ್ರವಾಸೋದ್ಯಮ ನೀತಿ 2020-26 ಅಡಿ ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ ಸಾಹಸ, ಕೃಷಿ, ಮನರಂಜನಾ, ಕ್ಯಾರವಾನ್, ಸಾಂಸ್ಕೃತಿಕ ಪ್ರವಾಸೋದ್ಯಮ, ಸಾಂಸ್ಕೃತಿಕ ಗ್ರಾಮ, ಪರಿಸರ, ಪಾರಂಪರಿಕ, ಹೋಂಸ್ಟೇ, ಹೋಟೆಲ್, ಹೌಸ್ ಬೋಟ್, ವಸ್ತು ಸಂಗ್ರಹಾಲಯ, ಗ್ಯಾಲರಿ, ರೋಪ್ ವೇ, ಧ್ವನಿ ಮತ್ತು ಬೆಳಕು, ಥೀಮ್ ಪಾರ್ಕ್ ಸೇರಿದಂತೆ 26 ರೀತಿಯ ಪ್ರವಾಸಿ ಉತ್ಪನ್ನಗಳನ್ನು ಅಭಿವೃದ್ಧಿ ಪಡಿಸಲು ಮುಂದೆ ಬರುವ ಖಾಸಗಿ ಬಂಡವಾಳ ಹೂಡಿಕೆದಾರರನ್ನು ಸೆಳೆಯಲು ಸಹಾಯಧನ ಪ್ರೋತ್ಸಾಹಕಗಳು ಮತ್ತು ರಿಯಾಯಿತಿಗಳನ್ನು ನೀಡಲಾಗಿದೆ ಎಂದರು.

ಶಾಸಕ ಉಮಾನಾಥ ಕೋಟ್ಯಾನ್ ಮಾತನಾಡಿ, 2012-13 ರಲ್ಲಿ ಮೂಡುಬಿದರೆ ಕ್ಷೇತ್ರದ ಸಸಿಹಿತ್ಲು ಕಡಲ ತೀರದಲ್ಲಿ ಅಂತರಾಷ್ಟ್ರೀಯ ಸರ್ಫಿಂಗ್ ಪಂದ್ಯಾವಳಿ ಆಯೋಜಿಸಲಾಗಿತ್ತು. ಇದಕ್ಕೆ ಉತ್ತಮ ಪ್ರತಿಕ್ರಿಯೆ ಕಂಡುಬಂದಿದೆ. ಸರ್ಫಿಂಗ್ ನಂತಹ ಸಾಹಸ ಕ್ರೀಡೆಯ ಉತ್ತೇಜನಕ್ಕೆ ಸರ್ಕಾರ ಮುಂದಾಗಬೇಕು.

ಸಸಿಹಿತ್ಲು ಪ್ರದೇಶದಲ್ಲಿನ ಕುಡಿಯುವ ನೀರು ಹಾಗೂ ಬೀದಿ ದೀಪ ಅಳವಡಿಸುವ ಕಾಮಗಾರಿಯನ್ನು ಕೂಡಲೇ ಪ್ರಾರಂಭಿಸುವಂತೆ ಒತ್ತಾಯಿಸಿದರು.

ಪ್ರವಾಸಿ ತಾಣಗಳಾಗಿ ಅಭಿವೃದ್ಧಿ ಗುರಿತಿಸಲಾಗಿದೆ

ಆಗ ಸಚಿವ ಹೆಚ್.ಕೆ.ಪಾಟೀಲ್  ಮಾತನಾಡಿ, ಜೈನ ಕಾಶಿ ಮೂಡಬಿದರೆಯ ಯಾತ್ರಿ ನಿವಾಸಕ್ಕೆ 15 ಹೆಚ್ಚುವರಿ ಕೊಠಡಿಗಳ ನಿರ್ಮಾಣ ಕಾಮಗಾರಿಗೆ 70 ಲಕ್ಷ ರೂ.ಮಂಜೂರಾಗಿದ್ದು, ಸರ್ಕಾರದಿಂದ  52.50 ಲಕ್ಷ ರೂ. ಬಿಡುಗಡೆ ಮಾಡಲಾಗಿದೆ. ಕಾಮಗಾರಿ ಪೂರ್ಣಗೊಂಡಿದೆ. ಸಸಿಹಿತ್ಲು ಅಭಿವೃದ್ದಿ ಕಾಮಗಾರಿಗೆ ರೂ.25 ಲಕ್ಷ ಮೀಸಲಿರಿಸಿದ್ದು, ಆದ್ಯತೆಯ ಮೇರಗೆ ಶೀಘ್ರವೇ ಕೈಗೆತ್ತಿಕೊಂಡು ಕಾಮಗಾರಿ ಆರಂಭಿಸಲಾಗುವುದು ಎಂದು ಉತ್ತರಿಸಿದರು.

ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಅಮೃತ ಸಂಭ್ರಮಕ್ಕೆ ರಾಜ್ಯಪಾಲರಿಂದ ಚಾಲನೆ

ಮೂಡಬಿದರೆ ಕ್ಷೇತ್ರದ ಕಲಕಕೆರೆ ನಿಸರ್ಗಧಾಮ ಮತ್ತು ರಾಣಿ ಅಬ್ಬಕ್ಕ ಸಂಸ್ಕೃತಿ ಗ್ರಾಮಕ್ಕೆ 1 ಕೋಟಿ ರೂ., ಶಿರ್ತಾಡಿ ಗ್ರಾಮದ ಪ್ರವಾಸಿ ತಾಣ ಕೊಣಜಿಕಲ್ಲು ಗುಡ್ಡವನ್ನು ಅಭಿವೃದ್ಧಿ 50 ಲಕ್ಷ ರೂ. ಹಾಗೂ ಮೂಡಬಿದರೆಯ ಸಾವಿರ ಕಂಬದ ಬಸದಿ ಹಾಗೂ ಇತರೆ ಜೈನ ಮಂದಿರಗಳ ಅಭಿವೃದ್ದಿಗೆ 50 ಲಕ್ಷ ರೂ. ಬಿಡುಗಡೆ ಮಾಡಲು ಸರ್ಕಾರಕ್ಕೆ ಪ್ರಸ್ತಾವನೆಗಳು ಸಲ್ಲಿಕೆಯಾಗಿವೆ ಎಂದು ತಿಳಿಸಿದರು.

ಸಕಲೇಶಪುರ ಶಾಸಕ ಸಿಮೆಂಟ್ ಮಂಜು ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಸಕಲೇಶಪುರ ತಾಲ್ಲೂಕಿನ ಮರಗುಂದ, ಮಂಜರಾಬಾದ್ ಕೋಟೆ, ಮೂಕನಮನೆ ಜಲಪಾತ, ಅಬ್ಬಿ ಜಲಪಾತ, ಬಿಸಿಲೆ ಘಾಟ್, ಪಾಂಡವರ ಬೆಟ್ಟ, ಮೂರ್ಕಣ್ ಬೆಟ್ಟ, ಜೇನುಕಲ್ಲು ಬೆಟ್ಟ, ಗುಡ್ಡ ಬಸವಣ್ಣ, ಪಾಟ್ಲೆಬೆಟ್ಟ ಪ್ರದೇಶಗಳನ್ನು ಪ್ರವಾಸಿ ತಾಣಗಳಾಗಿ ಅಭಿವೃದ್ಧಿ ಗುರಿತಿಸಲಾಗಿದೆ ಎಂದು ತಿಳಿಸಿದರು.

ಕೇಬಲ್ ಕಾರ್ ಪ್ರಾರಂಭಕ್ಕೆ ಯೋಜನೆ 

ಮಳವಳ್ಳಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಪ್ರಶ್ನೆಗೆ ಉತ್ತರಿಸಿದ ಸಚಿವ ಹೆಚ್.ಕೆ.ಪಾಟೀಲ್ ಯಲ್ಲಮ್ಮನಗುಡ್ಡ, ಮಧುಗಿರಿ, ಅಂಜನಾದ್ರಿ, ನಂದಿಬೆಟ್ಟ ಹಾಗೂ ಗಗನ ಚುಕ್ಕಿಯಲ್ಲಿ ಕೇಬಲ್ ಕಾರ್ ಪ್ರಾರಂಭಿಸುವುದಕ್ಕೆ ಪರಿಶೀಲನೆ ಕಾರ್ಯ ನಡೆಸಲಾಗುತ್ತಿದೆ ಎಂದು ಸಚಿವ ಹೆಚ್.ಕೆ.ಪಾಟೀಲ್ ಸ್ಪಷ್ಟ ಪಡಿಸಿದರು.

2023-24ನೇ ಸಾಲಿನ ಆಯವ್ಯಯದಲ್ಲಿ ಪ್ರವಾಸೋದ್ಯಮ ಇಲಾಖೆಗೆ ಸರ್ಕಾರದಿಂದ 339.54 ಕೋಟಿ ರೂ. ಮೀಸಲಿರಿಸಲಾಗಿದೆ. ಈ ಪೈಕಿ 90 ರೂ. ಕೋಟಿಯನ್ನು ಬಂಡವಾಳ ವೆಚ್ಚಗಳ ಲೆಕ್ಕಶೀರ್ಷಿಕೆಗಳಡಿ ಈಗಾಗಲೇ ಒದಗಿಸಲಾಗಿದೆ ಎಂದರು.

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಮಾತನಾಡಿ, ಜಲ ಸಾಹಸ ಕ್ರೀಡಗಳನ್ನು ಕಲಿಯಲು ರಾಜ್ಯದಿಂದ ಹೊರ ರಾಷ್ಟçಗಳಿಗೆ ಅನೇಕರು ತೆರಳುತ್ತಾರೆ.

ರಾಜ್ಯದಲ್ಲಿ ಸುಮಾರು 300 ಕಿ.ಮೀ ಉದ್ದದ ಕರವಾಳಿ ತೀರವಿದೆ.  ಇಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ಜಲ ಸಾಹಸ ಕ್ರೀಡೆಗಳ ಪ್ರವಾಸೋದ್ಯಮಕ್ಕೆ ಸರ್ಕಾರ ಮುಂದಾಗಬೇಕು ಎಂದು ಕೋರಿದರು.

ವೈದ್ಯರ ಕಡ್ಡಾಯ ಗ್ರಾಮೀಣ ಸೇವೆ ವಿನಾಯಿತಿ ವಿಧೇಯಕ ಮಂಡನೆ

ರಾಜ್ಯದ ಕರಾವಳಿ ಜಿಲ್ಲೆಗಳು ಕಡಲು ಕಿನಾರೆ, ಧಾರ್ಮಿಕ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ನಾಡಿಗೆ ಹೆಸರಾಗಿವೆ. ಈ ಮೂರು ಅಂಶಗಳ ಮುಂದೆ ಇಟ್ಟುಕೊಂಡು, ಕರಾವಳಿ ಅಭಿವೃದ್ದಿ ಮಂಡಳಿಯಲ್ಲಿ ಪ್ರವಾಸೋದ್ಯಮದ ಅಭಿವೃದ್ಧಿ ಯೋಜನೆ ರೂಪಿಸುವಂತೆ ಸಭಾಧ್ಯಕ್ಷ ಯು.ಟಿ.ಖಾದರ್ ಸರ್ಕಾರಕ್ಕೆ ಸೂಚನೆ ನೀಡಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
cable carGagan ChukkiMinister H.K.PatilMonumentstourism
0 FacebookTwitterPinterestEmail
KM Shivaraju

previous post
ವೈದ್ಯರ ಕಡ್ಡಾಯ ಗ್ರಾಮೀಣ ಸೇವೆ ವಿನಾಯಿತಿ ವಿಧೇಯಕ ಮಂಡನೆ
next post
ಯಶಸ್ವಿನಿ ಯೋಜನೆಯ ಮಾನದಂಡಗಳ ಬದಲಾವಣೆಗೆ ಪರಿಶೀಲನೆ

You may also like

ಬರದಿಂದ ಭವಿಷ್ಯದಲ್ಲಿ ಅನ್ನ, ನೀರಿಗೂ ಹಾಹಾಕಾರ

October 19, 2026

ಸ್ಟಿಂಗ್‌ ಕಿಂಗ್‌ಪಿನ್‌ ಬಂಧಿಸದಿದ್ದರೆ ತೀವ್ರ ಹೋರಾಟ

October 17, 2026

ದೇಶ ಅಭದ್ರತೆಗೆ ಸಿಜೆಪಿಗೆ ಕಾಂಗ್ರೆಸ್‌ ಸರ್ಕಾರದ ಹಣ

October 16, 2026

ಸ್ಟಿಂಗ್‌ ಆಪರೇಷನ್‌: ಹೋರಾಡಲು ಅಖಾಡಕ್ಕೆ ಬನ್ನಿ

October 15, 2026

ಡಿಸೆಂಬರ್‌ ಒಳಗೆ 17,000 ಶಾಲಾ ಶಿಕ್ಷಕರ ನೇಮಕ

October 14, 2026

ಸ್ಟಿಂಗ್ ಆಪರೇಷನ್‌ ಆರೋಪ ಸಿಬಿಐ ತನಿಖೆ ಆಗಬೇಕು

October 13, 2026

ಚುನಾವಣೆ ವೇಳೆ ಕಾಂಗ್ರೆಸ್‌ನ 25 ಶಾಸಕರು ಬಿಜೆಪಿಗೆ

October 12, 2026

2027ರ ಏಪ್ರಿಲ್‌-ಮೇನಲ್ಲಿ ಮಂತ್ರಿಮಂಡಲ ಪುನಾರಚನೆ

October 10, 2026

ಸ್ಟಿಂಗ್‌ ಆಪರೇಷನ್‌ ಮಾಡಿ ಮುಖ್ಯಮಂತ್ರಿಯಾದ ಡಿಕೆಶಿ

October 7, 2026

ಚುನಾವಣಾ ವ್ಯವಸ್ಥೆ ದುರ್ಬಳಕೆ: ಬಿಜೆಪಿ ಕುತಂತ್ರ

October 6, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (593)
  • ಅಂಕಣ (109)
  • ಉದ್ಯೋಗ (357)
  • ದಿನ ಭವಿಷ್ಯ (110)
  • ರಾಜಕೀಯ (2,086)
  • ರಾಜ್ಯ (2,401)
  • ರಾಷ್ಟ್ರ (2,365)
  • ವಿಶ್ಲೇಷಣೆ (202)
  • ಶಿಕ್ಷಣ (413)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಬರದಿಂದ ಭವಿಷ್ಯದಲ್ಲಿ ಅನ್ನ, ನೀರಿಗೂ ಹಾಹಾಕಾರ

    October 19, 2026
  • ಸ್ಟಿಂಗ್‌ ಕಿಂಗ್‌ಪಿನ್‌ ಬಂಧಿಸದಿದ್ದರೆ ತೀವ್ರ ಹೋರಾಟ

    October 17, 2026
  • ದೇಶ ಅಭದ್ರತೆಗೆ ಸಿಜೆಪಿಗೆ ಕಾಂಗ್ರೆಸ್‌ ಸರ್ಕಾರದ ಹಣ

    October 16, 2026

KMS Special

  • ಬರದಿಂದ ಭವಿಷ್ಯದಲ್ಲಿ ಅನ್ನ, ನೀರಿಗೂ ಹಾಹಾಕಾರ

    October 19, 2026
  • ಸ್ಟಿಂಗ್‌ ಕಿಂಗ್‌ಪಿನ್‌ ಬಂಧಿಸದಿದ್ದರೆ ತೀವ್ರ ಹೋರಾಟ

    October 17, 2026
  • ದೇಶ ಅಭದ್ರತೆಗೆ ಸಿಜೆಪಿಗೆ ಕಾಂಗ್ರೆಸ್‌ ಸರ್ಕಾರದ ಹಣ

    October 16, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಬರದಿಂದ ಭವಿಷ್ಯದಲ್ಲಿ ಅನ್ನ, ನೀರಿಗೂ ಹಾಹಾಕಾರ

October 19, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ