Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ವೈಯಕ್ತಿಕವಾಗಿ ಕೆಣಕಿದರೆ ನಾನು ಸುಮ್ಮನಿರಲ್ಲ

by KM Shivaraju December 5, 2023
written by KM Shivaraju December 5, 2023 0 comments 1 minutes read
2FacebookTwitterPinterestEmail
187
ಬರ, ಉತ್ತರ ಕರ್ನಾಟಕದ ಬಗ್ಗೆ ಚರ್ಚೆ ನನ್ನ ಆದ್ಯತೆ: ಹೆಚ್.ಡಿ.ಕುಮಾರಸ್ವಾಮಿ

ಬೆಳಗಾವಿ: ಉತ್ತರ ಕರ್ನಾಟಕದ ಸಮಸ್ಯೆಗಳು ಸೇರಿ ರಾಜ್ಯ ಎದುರಿಸುತ್ತಿರುವ ತೀವ್ರ ಬರದ ಬಗ್ಗೆ ಕಲಾಪದಲ್ಲಿ ಚರ್ಚೆ ಮಾಡುವುದು ನನ್ನ ಉದ್ದೇಶ. ಆದರೆ, ನನ್ನನ್ನು ವೈಯಕ್ತಿಕವಾಗಿ ಕೆಣಕಿದರೆ ನಾನು ಸುಮ್ಮನಿರುವ ಪ್ರಶ್ನೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಎಚ್ಚರಿಕೆ ನೀಡಿದರು.

ಬೆಳಗಾವಿಯಲ್ಲಿಸುವರ್ಣಸೌಧದಲ್ಲಿ ಕಲಾಪದಲ್ಲಿ ಭಾಗಿಯಾಗುವ ಮುನ್ನ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.

ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚಿಸುವುದಕ್ಕೆ ನನ್ನ ಆದ್ಯತೆ. ಬರ, ಉತ್ತರ ಕರ್ನಾಟಕದ ಅಭಿವೃದ್ಧಿ ಬಗ್ಗೆ ನನ್ನ ಮಹತ್ವ ಇರುತ್ತದೆ. ಈ ಚಳಿಗಾಲ ಅಧಿವೇಶನದಲ್ಲಿ ಆ ಬಗ್ಗೆ  ಚರ್ಚೆ ಮಾಡುತ್ತೇ‌ನೆ. ಈ ಭಾಗದ ಜನರು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ ಎಂದರು.

ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ನಾವು ಮತ್ತು ಬಿಜೆಪಿ ಜಂಟಿಯಾಗಿ ಹೋರಾಟ ಮಾಡುತ್ತೇವೆ. ಬಿಜೆಪಿ ಅಧಿಕೃತವಾದ ವಿರೋಧ ಪಕ್ಷ. ಜನವರಿಯಲ್ಲಿ ಜಂಟಿ ಅಧಿವೇಶನ ನಡೆಯಲಿದೆ. ಅಲ್ಲಿ ಬೇರೆ ಬೇರೆ ವಿಚಾರಗಳ‌ ಬಗ್ಗೆ ಮಾತನಾಡುತ್ತೇನೆ. ವರ್ಗಾವಣೆ ದಂಧೆ ಸೇರಿದಂತೆ ಬೇರೆ ಬೇರೆ ವಿಚಾರಗಳ ಬಗ್ಗೆ ಅವತ್ತು ಮಾತನಾಡುತ್ತೇನೆ. ಒಂದು ವೇಳೆ ಏನಾದರೂ ವೈಯಕ್ತಿಕವಾಗಿ ಕೆಣಕಿದರೆ  ನಾನು ಸುಮ್ಮನೆ ಇರಲ್ಲ ಎಂದು ಅವರು ತಿಳಿಸಿದರು.

ಈ ಸರಕಾರ ಬಂದು ಇನ್ನೂ ಆರು ತಿಂಗಳು ಆಗಿದೆ. ಇನ್ನು ನಾಲ್ಕೂವರೆ ವರ್ಷ ಸರಕಾರ ಇರುತ್ತದೆ. ಹಂತ ಹಂತವಾಗಿ ಎಲ್ಲ ವಿಚಾರದ ಬಗ್ಗೆ ಮಾತನಾಡುತ್ತೇನೆ ಎಂದು ಕುಮಾರಸ್ವಾಮಿ ಅವರು ಗುಡುಗಿದರು.

ಸಿಎಂ ಓಲೈಕೆ ರಾಜಕಾರಣ ಸರಿ ಅಲ್ಲ

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಕುಮಾರಸ್ವಾಮಿ ಅವರು, ಸಿಎಂ ಹೇಳಿಕೆ ಮುಸ್ಲಿಂ ಓಲೈಕೆ ಅಲ್ಲದೇ ಮತ್ತೇನು ಎಂದು ಖಾರವಾಗಿ ಪ್ರಶ್ನಿಸಿದರು.

ಒಂದು ಸಮುದಾಯವನ್ನು ಓಲೈಕೆ ಮಾಡಲು ಸರಕಾರ  ಇರೋದಲ್ಲ. ಎಲ್ಲರನ್ನೂ ಸಮಾನವಾಗಿ ನೋಡಬೇಕು.

ಅಧಿವೇಶನದಲ್ಲಿ ಬಿಜೆಪಿ ಜತೆ ಜಂಟಿಯಾಗಿ ಹೋರಾಟ ಮಾಡುತ್ತೇನೆ.  ಜನಪರ ವಿಚಾರಗಳ ಬಗ್ಗೆ ಸದನದಲ್ಲಿ ಚರ್ಚೆ ಮಾಡಲಾಗುವುದು. ರಾಜ್ಯಪಾಲರಿಗೆ ದೂರು ಕೊಟ್ಟ ವಿಚಾರದ ಬಗ್ಗೆ ಮುಂದೆ ಹೇಳುತ್ತೇನೆ. ಮುಂದೆ ಎಲ್ಲವೂ ನಿಮಗೇ ಗೊತ್ತಾಗುತ್ತದೆ ಎಂದು ಕುಮಾರಸ್ವಾಮಿ ಅವರು ಮಾರ್ಮಿಕವಾಗಿ ಹೇಳಿದರು.

ದೆಹಲಿ ಪ್ರವಾಸ ಮತ್ತು ಪಂಚರಾಜ್ಯ ಚುನಾವಣೆ ಬಗ್ಗೆ ಕುಮಾರಸ್ವಾಮಿ ಮಾತನಾಡಿದ್ದು, ಮೂರು ರಾಜ್ಯಗಳ ಬಿಜೆಪಿ ಮುಖ್ಯಮಂತ್ರಿಗಳ ಆಯ್ಕೆಯಲ್ಲಿ ವರಿಷ್ಠರು ತೊಡಗಿದ್ದಾರೆ. ಅದಾದ ಬಳಿಕ ದೆಹಲಿಗೆ ತೆರಳುವ ಬಗ್ಗೆ ಯೋಚನೆ ಮಾಡುತ್ತೇನೆ. ಮುಂದಿನ ಲೋಕಸಭಾ ಚುನಾವಣೆಗೆ ಈ ಫಲಿತಾಂಶ ದಿಕ್ಸೂಚಿಯಾಗಿದೆ‌.

ಅನೇಕರು ಈ ಬಗ್ಗೆ ಹೇಳಿದ್ದಾರೆ. ಬಲಿಷ್ಠ ನಾಯಕತ್ವ ಬೇಕು ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ ಎಂದು ಅವರು  ತಿಳಿಸಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
complaindebatedroughthd kumaraswamyMy PriorityNorth Karnatakanot easyPersonally
2 FacebookTwitterPinterestEmail
KM Shivaraju

previous post
ಸದನದಲ್ಲಿ ಬಾರ್‌ಲೈಸನ್ಸ್ ಕುರಿತು ಕಾವೇರಿದ ಚರ್ಚೆ
next post
554 ಎಕರೆ ಜಮೀನು ನೈಸ್ ಸಂಸ್ಥೆಯಿಂದ ವಾಪಸ್

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ