ಮುಸ್ಲಿಂ ಸಮುದಾಯದ ಅಭಿವೃದ್ಧಿಗೆ 10 ಸಾವಿರ ಕೋಟಿ ಘೋಷಣೆ
ಬೆಳಗಾವಿ: ಮುಸ್ಲಿಂ ಸಮುದಾಯದ ಅಭಿವೃದ್ಧಿಗೆ 10,000 ಕೋಟಿ ರೂ. ನೀಡುವುದಾಗಿ ಮಾಡಿದ ಘೋಷಣೆ ವಿಧಾನಸಭೆಯಲ್ಲಿಂದು ಪ್ರತಿಧ್ವನಿಸಿ ಭಾರೀ ಕೋಲಾಹಲಕ್ಕೆ ಕಾರಣವಾಯಿತು.
ಪ್ರಶ್ನೋತ್ತರ ವೇಳೆ ಮುಗಿಯುತ್ತಿದ್ದಂತೆ ವಿಷಯ ಪ್ರಸ್ತಾಪಿಸಿದ ಬಿಜೆಪಿ ಸದಸ್ಯರು, ಮುಖ್ಯಮಂತ್ರಿ ಅವರು ನೀಡಿರುವ ಹೇಳಿಕೆಯನ್ನು ಹಿಂದಕ್ಕೆ ಪಡೆಯುವಂತೆ ಆಗ್ರಹಿಸಿದರು.
ಬಿಜೆಪಿ ಸದಸ್ಯರು ಸಭಾತ್ಯಾಗ
ಈ ಸಂದರ್ಭದಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ವಾಕ್ ಸಮರಕ್ಕೆ ಎಡೆ ಮಾಡಿಕೊಟ್ಟಿತು. ಪ್ರತಿಪಕ್ಷಗಳ ಒತ್ತಡಕ್ಕೆ ಸರ್ಕಾರ ಮಣಿಯದಿದ್ದಾಗ ಬಿಜೆಪಿ ಸದಸ್ಯರು ಸಭಾತ್ಯಾಗ ಮಾಡಿದರು.
ಇದಕ್ಕೂ ಮುನ್ನ ದೇಶದ ಆಸ್ತಿಯಲ್ಲಿ ಮುಸ್ಲಿಮರಿಗೂ ಹಂಚಿಕೆ ಮಾಡುತ್ತೇನೆ ಎಂದು ಹುಬ್ಬಳ್ಳಿಯಲ್ಲಿ ನಡೆದ ಅಲ್ಪಸಂಖ್ಯಾತರ ಸಭೆಯಲ್ಲಿ ಮುಖ್ಯಮಂತ್ರಿ ಅವರು ನೀಡಿರುವ ಹೇಳಿಕೆಯನ್ನು ಹಿಂದಕ್ಕೆ ಪಡೆಯಬೇಕು.
ಬಿಜೆಪಿ-ಕಾಂಗ್ರೆಸ್ ಸದಸ್ಯರ ನಡುವೆ ವಾಗ್ವಾದ
ಇದು ನಿಮ್ಮ ಮನೆಯ ಸ್ವಂತ ಆಸ್ತಿಯಲ್ಲ, ನೂರಾರು ಕೋಟಿ ಜನರ ಬೆವರಿನಿಂದ ಕಟ್ಟಿದ ರಾಷ್ಟ್ರ, ನೀವು ಸದನ ನಡೆಯುವಾಗ ಒಂದೇ ಸಮುದಾಯಕ್ಕೆ 10,000ಕೋಟಿ ರೂ. ಘೋಷಣೆ ಮಾಡಿರುವುದು ಸರಿಯಲ್ಲ, ಈ ಬಗ್ಗೆ ವಿವರಣೆ ಕೊಡಿ ಎಂದು ಬಿಜೆಪಿ ಸದಸ್ಯರು ಒತ್ತಾಯಿಸಿದರು.
ಒತ್ತುವರಿ ಸರ್ಕಾರಿ ಭೂಮಿ ತೆರವಿಗೆ ಪ್ರತ್ಯೇಕ ಕೋಶ
ಇದಕ್ಕೆ ಆಡಳಿತ ಪಕ್ಷದ ಕಡೆಯಿಂದ ಆಕ್ಷೇಪ ವ್ಯಕ್ತವಾಗಿ ಒಮ್ಮಲೇ ಎಲ್ಲರೂ ಎದ್ದು ನಿಂತು ಬಿಜೆಪಿ ಸದಸ್ಯರ ವಿರುದ್ಧ ಮುಗಿಬಿದ್ದರು.
ಈ ಸಂದರ್ಭದಲ್ಲಿ ಯಾರು ಏನು ಮಾತನಾಡುತ್ತಿದ್ದಾರೆ ಎಂಬುದು ತಿಳಿಯಲಾಗಲಿಲ್ಲ. ಸಭಾಧ್ಯಕ್ಷ ಯು.ಟಿ. ಖಾದರ್ ಮಾಡಿದ ಮನವಿಗೂ ಸದಸ್ಯರು ಸ್ಪಂದಿಸಲಿಲ್ಲ, ಇದರಿಂದ ಸದನದಲ್ಲಿ ಕೋಲಾಹಲದ ವಾತಾವರಣ ಉಂಟಾಯಿತು.
ಕೊನೆಗೆ ಸಭಾಧ್ಯಕ್ಷರು ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರಿಗೆ ಮಾತನಾಡಲು ಅವಕಾಶ ನೀಡುತ್ತಿದ್ದಂತೆ ಗೊಂದಲ ತಿಳಿಗೊಂಡಿತು.
ರೈತರ ಬೆಳೆ ಹಾನಿಗೆ ಹಣ ನೀಡಿಲ್ಲ
ನಂತರ ಮಾತನಾಡಿದ ಅಶೋಕ್, ಬರ ಪರಿಹಾರ ಕಾಮಗಾರಿ ಕೈಗೊಂಡಿಲ್ಲ, ರೈತರ ಬೆಳೆ ಹಾನಿಗೆ ಹಣ ನೀಡಿಲ್ಲ, ಸದನ ನಡೆಯುವ ಸಂದರ್ಭದಲ್ಲಿ ಒಂದು ಸಮುದಾಯದ ಅಭಿವೃದ್ಧಿಗೆ 10,000ಸಾವಿರ ಕೋಟಿ ರೂ. ನೀಡುವ ಘೋಷಣೆಯನ್ನು ಹಿಂದಕ್ಕೆ ಪಡೆಯಬೇಕೆಂದರು.
ಮುಖ್ಯಮಂತ್ರಿಗಳು ತಮ್ಮ ನಿರ್ಧಾರದಿಂದ ಹಿಂದೆ ಸರಿಯದಿದ್ದರೆ, ಸದನದಲ್ಲಿ ಮಾತನಾಡಲು ಅವಕಾಶ ನೀಡುವುದಿಲ್ಲ ಎಂದು ಅಶೋಕ್ ಹೇಳುತ್ತಿದ್ದಂತೆ ಮತ್ತೆ ಆಡಳಿತ ಪಕ್ಷದ ಸದಸ್ಯರಿಂದ ತೀವ್ರ ವಿರೋಧ ವ್ಯಕ್ತವಾಯಿತು.
ಈ ಸಂದರ್ಭದಲ್ಲಿ ಮಧ್ಯೆ ಪ್ರವೇಶ ಮಾಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ಹಣವನ್ನು ಒಂದೇ ಬಾರಿಗೆ ಬಿಡುಗಡೆ ಮಾಡುತ್ತೇವೆ ಎಂದು ಹೇಳಿಲ್ಲ, ಹಂತ ಹಂತವಾಗಿ ಬಿಡುಗಡೆ ಮಾಡುತ್ತೇವೆ ಎಂದಿದ್ದಾರೆ.
ಎಲ್ಲಾ ತಾಂಡಾ-ಗೊಲ್ಲರಹಟ್ಟಿ ಕಂದಾಯ ಗ್ರಾಮ
ಮುಖ್ಯಮಂತ್ರಿ ಅವರು ಮಾಡಿರುವ ಘೋಷಣೆ ಆಕ್ಷೇಪಾರ್ಹವಲ್ಲ ಎಂದು ಹೇಳುತ್ತಿದ್ದಂತೆ ಬಿಜೆಪಿ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿ, ಹೇಳಿಕೆಯನ್ನು ಬಹಿಷ್ಕರಿಸಿ ಸಭ್ಯಾತ್ಯಾಗ ಮಾಡಿದರು.
