Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜ್ಯರಾಷ್ಟ್ರಶಿಕ್ಷಣ

ಎಸ್ಸಿ ಎಸ್ಟಿ ವಿದ್ಯಾರ್ಥಿಗಳಿಗೂ ವಿದ್ಯಾಸಿರಿ ಜಾರಿಗೆ ಶಿಫಾರಸ್ಸು

by KM Shivaraju December 6, 2023
written by KM Shivaraju December 6, 2023 0 comments 2 minutes read
3FacebookTwitterPinterestEmail
171
ವಿದ್ಯಾರ್ಥಿನಿಯರ ವಸತಿ ನಿಲಯಗಳಿಗೆ ನರ್ಸ್/ಮಹಿಳಾ ಹೋಮ್ ಗಾರ್ಡ ನೇಮಕ

ಬೆಳಗಾವಿ: ಸುವರ್ಣವಿಧಾನಸೌಧದಲ್ಲಿ ನಡೆದ ಹದಿನಾರನೇ ವಿಧಾನಸಭೆಯಲ್ಲಿ ಕರ್ನಾಟಕ ವಿಧಾನಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ 2023-24ನೇ ಸಾಲಿನ ಮೊದಲನೇ ಹಾಗೂ ಮಧ್ಯೆಂತರ ವರದಿಯನ್ನು ಒಪ್ಪಿಸಲಾಗಿದೆ ಎಂದು ಕರ್ನಾಟಕ ವಿಧಾನಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ ಅಧ್ಯಕ್ಷರು ಆಗಿರುವ ಶಾಸಕರಾದ ಪಿ.ಎಂ.ನರೇಂದ್ರಸ್ವಾಮಿ ಅವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿನಿಯರ ವಸತಿ ನಿಲಯಗಳಿಗೆ ನರ್ಸ್/ಮಹಿಳಾ ಹೋಮ್ ಗಾರ್ಡ ನೇಮಕ ಮಾಡಿಕೊಳ್ಳಲು, ಕೇಂದ್ರ ಸರ್ಕಾರದ ವಿದ್ಯಾರ್ಥಿ ವೇತನದ ಪಾಲನ್ನು ನೇರವಾಗಿ ಶಿಕ್ಷಣ ಸಂಸ್ಥೆಗಳಿಗೆ ನೀಡಲು, ವಿದ್ಯಾಸಿರಿ ಯೋಜನೆಯನ್ನು ಪರಿಶಿಷ್ಟ ಜಾತಿ ಹಾಗೂ ಪಂಗಡದ ಸಮುದಾಯಕ್ಕೆ ಸಹ ಜಾರಿ ತರಲು ಶಿಫಾರಸ್ಸು ಮಾಡಲಾಗಿದೆ ಎಂದರು.

ಹೊರಗುತ್ತಿಗೆಯಲ್ಲಿ ಮೀಸಲು ನೀಡಲು ಹೊಸ ಕಾಯಿದೆ

ಅತಿಥಿ ಶಿಕ್ಷಕರನ್ನು ಪಡೆಯುವಾಗ ಮೀಸಲಾತಿ ಕಲ್ಪಿಸುವುದು, ಬ್ಯಾಕ್‌ಲಾಗ್ ಹುದ್ದೆಗಳನ್ನು ಭರ್ತಿ ಮಾಡದಿದ್ದಲ್ಲಿ ಕ್ರಮ ಕೈಗೊಳ್ಳಲು ಪ್ರತ್ಯೇಕ ಕಾಯಿದೆ ರೂಪಿಸಲು, ಹೊರಗುತ್ತಿಗೆಯಲ್ಲಿ ಮೀಸಲು ನೀಡಲು ಹೊಸ ಕಾಯಿದೆ ರೂಪಿಸುವುದು, ಶಿಕ್ಷಣ ಮತ್ತು ಹಾಸ್ಟೇಲ್ ಗಳಿಗೆ ಮೂಲಭೂತ ಸೌಕರ್ಯ ಕೊರತೆಯನ್ನು ಸರಿಪಡಿಸುವುದು, ಸ್ಥಳೀಯ ಸಂಸ್ಥೆಗಳ 24.1 ಅನುದಾನದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಮತ್ತು ವಿಶ್ವ ವಿದ್ಯಾನಿಲಯಗಳ ಹಾಸ್ಟೇಲ್‌ಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ಶಿಫಾರಸ್ಸಿನಲ್ಲಿ ಸೇರಿದೆ.

ಕಲ್ಯಾಣ ಕರ್ನಾಟಕ ಭಾಗದಲ್ಲಿ ವಾರಕ್ಕೆ 5 ಮೊಟ್ಟೆ ಕೊಡುವುದು, ಹಲವಾರು ಇಲಾಖೆಗಳಲ್ಲಿ ಸಿ ಅಂಡ್ ಆರ್ ನಿಯಮಗಳು, ರೋಸ್ಟರ್ ಮತ್ತು ಜೇಷ್ಠತಾ ಪಟ್ಟಿಗಳನ್ನು ಮಾಡಿಕೊಳ್ಳದಿರುವುದು, ಕಲ್ಯಾಣ ಕರ್ನಾಟಕ ಭಾಗದಲ್ಲಿ ಡಾ.ನಂಜುಂಡಪ್ಪ ವರದಿಯನ್ನು ಪ್ರಸ್ತುತ ಕಾಲಘಟ್ಟದ ಆಧಾರದ ಮೇಲೆ ಅಭಿವೃದ್ಧಿಪಡಿಸುವುದು ಸೇರಿದಂತೆ ನಾನಾ ವಿಷಯಗಳ ಬಗ್ಗೆ ಸಮಿತಿಯು ವರದಿಯಲ್ಲಿ ಶಿಫಾರಸ್ಸು ಮಾಡಿದೆ ಎಂದು ಅವರು ತಿಳಿಸಿದರು.

ಬಿಎಂಟಿಸಿಗೆ ಮಾರ್ಚ್ ಅಂತ್ಯಕ್ಕೆ 921 ಎಲೆಕ್ಟ್ರಿಕಲ್ ಬಸ್

ಪರಿಶಿಷ್ಟ ಜಾತಿ ಮತ್ತು ಪಂಗಡಗಳ ವಿಶೇಷ ಯೋಜನೆಗಳಡಿ ವಿವಿಧ ಇಲಾಖೆಗಳಿಗೆ ಬಿಡುಗಡೆಯಾದ ಅನುದಾನದ ಸದ್ಬಳಕೆ ಹಾಗೂ ಯೋಜನೆಗಳು ಸಮರ್ಪಕವಾಗಿ ಅನುಷ್ಠಾನಗೊಳ್ಳುತ್ತಿರುವ ಕುರಿತು ಸಮಿತಿಯು ಅಧ್ಯಯನ ನಡೆಸಿ ಸರ್ಕಾರಕ್ಕೆ ವರದಿಯನ್ನು ಮಂಡಿಸಲಾಗುತ್ತಿದೆ ಎಂದು ತಿಳಿಸಿದರು.

ಪರಿಶಿಷ್ಟ ಜಾತಿ ಮತ್ತು ಪಂಗಡಗಳ ವಿಶೇಷ ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸಮಿತಿಯಿಂದ ವಿವಿಧ ಇಲಾಖೆಗಳಲ್ಲಿ ಅಧ್ಯಯನ ನಡೆಸಲಾಗಿದೆ. ಈ ಯೋಜನೆಯಡಿ ಬಿಡುಗಡೆ ಮಾಡಲಾದ ಅನುದಾನ ಸಮರ್ಪಕವಾಗಿ ಬಳಕೆ ಆಗದೇ ಇರುವುದರ ಬಗ್ಗೆ ಕ್ರಮ ಕೈಗೊಳ್ಳದಿರುವುದು ಸಹ ಕಂಡು ಬಂದಿದೆ ಎಂದರು.

ಪರಿಶಿಷ್ಟ ಜಾತಿ ಮತ್ತು ಪಂಗಡಗಳ ವಿಶೇಷ ಯೋಜನೆಯಡಿ ಹಣ ದುರ್ಬಳಕೆ ಮಾಡಿಕೊಳ್ಳುತ್ತಿರುವ ವಿವಿಧ ನಿಗಮ ಮಂಡಳಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಹಾಗೂ ಬ್ಯಾಕ್‌ಲಾಗ್ ಹುದ್ದೆಗಳ ವಿರುದ್ಧ ಹೊರಗುತ್ತಿಗೆಯಿಂದ ಭರ್ತಿ ಮಾಡುತ್ತಿದ್ದು ಮೀಸಲಾತಿ ಪಾಲಿಸದಿರುವ ಕುರಿತು ಸಹ ಶಿಫಾರಸ್ಸು ಮಾಡಲಾಗಿದೆ.

ಪಂಚಾಯತ್ ಸದಸ್ಯರುಗಳಿಗೆ ಜಿಲ್ಲಾವಾರು ತರಬೇತಿ ನೀಡುವುದು, ಜೆಜೆಎಂ ಯೋಜನೆಯಡಿ ಎಸ್ಸಿಪಿ ಟಿಎಸ್ಪಿ ಅನುದಾನ ಬಳಸುತ್ತಿರುವುದು, ಎಲ್ಲಾ ಒಡೆತನ ಯೋಜನೆಯಡಿ ಎಸ್ಸಿ ಎಸ್ಟಿ ಸಮುದಾಯಕ್ಕೆ ಭೂಮಿಯನ್ನು ನೀಡಲು ಅನುದಾನ ಕೊರತೆ ಇರುವುದು, ಎಲ್ಲಾ ನಿಗಮ ಮಂಡಳಿಗಳಲ್ಲಿರುವ ಯೋಜನೆಗಳನ್ನು ಇಂದಿನ ಕಾಲಘಟ್ಟಕ್ಕೆ ಹೊಸ ಯೋಜನೆಗಳ ರೂಪುರೇಷಗಳು, ಎನ್‌ಎಸ್‌ಐಸಿ ಮಾದರಿ ರಾಜ್ಯದ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಗುತ್ತಿಗೆದಾರರಿಗೆ ಇಎಂಡಿ ವಿನಾಯಿತಿ ನೀಡುವ ಕುರಿತಿ ಕಾಯ್ದೆ ತಿದ್ದುಪಡಿರುವುದು.

ಕ್ರೀಡಾ ಶಾಲೆಗಳ ದೈಹಿಕ ಶಿಕ್ಷಕರ ನೇಮಕ

ವಿದ್ಯಾರ್ಥಿಗಳ ಆತ್ಮಹತ್ಯೆ ಕುರಿತು ಸಂಪೂರ್ಣ ತನಿಖೆ

ಎಲ್ಲಾ ನಿಗಮ ಮಂಡಳಿಗಳಲ್ಲಿರುವ ಹಳೆಯ ಯೋಜನೆಗಳನ್ನು ಇಂದಿನ ಕಾಲಘಟಕ್ಕೆ ತಕ್ಕಂತೆ ಹೊಸ ರೂಪು ರೇಷೆಗಳನ್ನು ಸಿದ್ಧಪಡಿಸಲು ತಿಳಿಸಲಾಗಿದೆ. ಕಳೆದ 5 ವರ್ಷಗಳಲ್ಲಿ 92 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಕುರಿತು ಸಂಪೂರ್ಣ ತನಿಖೆ ಕೈಗೊಳ್ಳಲು ಸಹ ವರದಿಯಲ್ಲಿ ಶಿಫಾರಸ್ಸು ಮಾಡಲಾಗಿದೆ ಎಂದು ಅವರು ತಿಳಿಸಿದರು.

ಶಿಕ್ಷಣ ಮತ್ತು ಹಾಸ್ಟೇಲ್ ಗಳಿಗೆ ಮೂಲಭೂತ ಸೌಕರ್ಯಗಳ ಕೊರತೆ ಬಗ್ಗೆ, ವಿವಿಧ ಇಲಾಖೆಗಳಲ್ಲಿ ಎಸ್‌ಸಿಎಸ್‌ಪಿ ಟಿಎಸ್ಪಿ ಅನುದಾನ ಬಳಕೆ ಮಾಡದಿರುವುದು, ಇಂಧನ ಇಲಾಖೆಗೆ ಎಸ್‌ಸಿಎಸ್‌ಪಿ ಟಿಎಸ್ಪಿ ಹೆಚ್ಚುವರಿ ಅನುದಾನ 1.566 ಕೋಟಿಯನ್ನು ಸಮಾಜ ಕಲ್ಯಾಣ/ ಶಿಕ್ಷಣ ಇಲಾಖೆಗೆ ನೀಡಲು, ಹಾಸ್ಟೇಲ್ ವಸತಿ ಶಾಲೆಗಳ ಕಟ್ಟಡಗಳ ನಿರ್ಮಾಣಕ್ಕೆ ಅನುದಾನದ ಕೊರತೆ ಬಗ್ಗೆ ಪ್ರಸ್ತಾಪಿಸಲಾಗಿದೆ.

ರೈತರಿಗೆ ಮೊದಲ ಬರ ಪರಿಹಾರ

 ಅಧಿನಿಯಮದ ಪ್ರಕರಣ 7 (ಡಿ) ಇಂದಾಗಿ ಎಸ್‌ಸಿಎಸ್‌ಪಿ ಟಿಎಸ್ಪಿ ಅನುದಾನ ಈ ಸಮುದಾಯಕ್ಕೆ ತಲುಪದಿರುವುದು, 7(ಬಿ) 7 (ಸಿ) ಗಳಿಗೆ ಸೂಕ್ತ ನಿಯಮ ರೂಪಿಸುವುದು, ಸೆಕ್ಷನ್ 24 ಪ್ರಕಾರ ಎಸ್‌ಸಿಎಸ್‌ಪಿ ಟಿಎಸ್ಪಿ ಅನುದಾನ ಬಳಕೆ ಮಾಡದಿರುವವರ ವಿರುದ್ಧ ಕ್ರಮ ವಹಿಸುವುದು, ಪರಿಶಿಷ್ಟ ಜಾತಿ ಮತ್ತು ಪಂಗಡಗಳ ವಿಶೇಷ ಯೋಜನೆಯಡಿ ಆಧುನಿಕ ಶಿಕ್ಷಣದ ಜೊತೆಗೆ ಶಿಕ್ಷಣ ಮತ್ತು ವಸತಿ ನಿಲಯಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಈ ಯೋಜನೆಯಡಿ ಬಳಕೆ ಆಗದೇ ಇರುವ ಅನುದಾವನ್ನು ಬಳಸಿಕೊಳ್ಳಲು ಸಮಿತಿಯು ಶಿಫಾರಸ್ಸು ಮಾಡಿದೆ ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಸಮಿತಿಯ ಸದಸ್ಯರಾದ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಕೆ.ಎಂ., ವಿಧಾನ ಪರಿಷತ್ ಸದಸ್ಯರಾದ ಅರವಿಂದಕುಮಾರ ಅರಳಿ ಹಾಗೂ ಶಾಂತಾರಾಮ ಬುಡ್ನಸಿದ್ದಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
FemaleHome Guardimplement VidyasiriNurseRecommendationrecruitmentSC ST studentsStudent Hostels
3 FacebookTwitterPinterestEmail
KM Shivaraju

previous post
ಬಿಎಂಟಿಸಿಗೆ ಮಾರ್ಚ್ ಅಂತ್ಯಕ್ಕೆ 921 ಎಲೆಕ್ಟ್ರಿಕಲ್ ಬಸ್
next post
 ಕುಣಿಗಲ್ ಸ್ಟಡ್‌ಫಾರ್ಮ್ ಜಾಗದಲ್ಲಿ ಟೌನ್‌ಶಿಪ್

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ