Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಬಿಜೆಪಿಯವರು ಕೇಂದ್ರದಿಂದ ಪರಿಹಾರ ತರಲಿ

by KM Shivaraju December 7, 2023
written by KM Shivaraju December 7, 2023 0 comments 2 minutes read
2FacebookTwitterPinterestEmail
158
 ನರೇಗಾ ಯೋಜನೆಯಡಿ ಮಾನವ ದಿನಗಳನ್ನು ಹೆಚ್ಚಿಸಲಿ

ಬೆಳಗಾವಿ:“ಬಿಜೆಪಿ ನಾಯಕರು ಬರಗಾಲದ ಬಗ್ಗೆ ಸುಮ್ಮನೆ ಮಾತನಾಡುವ ಬದಲು ಕೇಂದ್ರ ಸರ್ಕಾರದಿಂದ ಪರಿಹಾರ ತರಲಿ ಹಾಗೂ ನರೇಗಾ ಯೋಜನೆಯಡಿ ಮಾನವ ದಿನಗಳನ್ನು 150ಕ್ಕೆ ಹೆಚ್ಚಳ ಮಾಡಿಸಲಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿರುಗೇಟು ನೀಡಿದರು.

ಬೆಳಗಾವಿ ವಿಮಾನ ನಿಲ್ದಾಣದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಗುರುವಾರ ಉತ್ತರಿಸಿದರು.

ಬರಗಾಲದ ಪರಿಸ್ಥಿತಿಯಲ್ಲಿ ಕಾಂಗ್ರೆಸ್ ನಾಯಕರು ರಾಜ್ಯ ಬಿಟ್ಟು ತೆಲಂಗಾಣಕ್ಕೆ ಹೋಗಿದ್ದಾರೆ ಎಂಬ ಬಿಜೆಪಿ ಟೀಕೆ ಬಗ್ಗೆ ಕೇಳಿದಾಗ ಅವರು ಹೇಳಿದ್ದಿಷ್ಟು:

 “ಬರಗಾಲ ಬಂದಿದೆ. ವಿರೋಧ ಪಕ್ಷದ ನಾಯಕರು ಕೂಡ ಬರ ಅಧ್ಯಯನಕ್ಕಾಗಿ ಓಡಾಡಿದ್ದಾರೆ. ಅವರು ಕೇಂದ್ರ ಸರ್ಕಾರದಿಂದ ಪರಿಹಾರ ಹಣ ಕೊಡಿಸಲಿ. ಬರಗಾಲ ಹಿನ್ನೆಲೆಯಲ್ಲಿ ನರೇಗಾ ಯೋಜನೆಯಲ್ಲಿ ಕಾನೂನಿನ ಪ್ರಕಾರ ಪ್ರತಿ ವ್ಯಕ್ತಿಗೆ ಇರುವ 100 ಕೆಲಸದ ದಿನಗಳನ್ನು 150 ದಿನಗಳಿಗೆ ವಿಸ್ತರಣೆ ಮಾಡಬಹುದು. ಇದನ್ನು ಕೇಂದ್ರ ಸರ್ಕಾರದಿಂದ ಘೋಷಣೆ ಮಾಡಿಸುತ್ತಿಲ್ಲ ಯಾಕೆ? ಕೇಂದ್ರ ಸರ್ಕಾರದಿಂದ ಪರಿಹಾರ ಹಣ ಕೊಡಿಸುತ್ತಿಲ್ಲ ಎಂದು ಪ್ರಶ್ನಿಸಿದರು.

ನಮ್ಮ ಸರ್ಕಾರದಲ್ಲಿ ಕಂದಾಯ ಹಾಗೂ ಕೃಷಿ ಸಚಿವರುಗಳು ಎಲ್ಲರಿಗಿಂತ ಮುಂಚಿತವಾಗಿ ರಾಜ್ಯದ ಬರ ಪರಿಸ್ಥಿತಿ ಅಧ್ಯಯನ ಮಾಡಿ ಕೇಂದ್ರಕ್ಕೆ ವರದಿ ಸಲ್ಲಿಸಿದ್ದಾರೆ. ರಾಜ್ಯದಲ್ಲಿ 200ಕ್ಕೂ ಹೆಚ್ಚು ತಾಲ್ಲೂಕುಗಳು ಬರಕ್ಕೆ ತುತ್ತಾಗಿದ್ದು, ಪರಿಹಾಣ ಬೇಕು ಎಂದು ಕೇಳಿದ್ದಾರೆ.

ಕೇಂದ್ರ ಸರ್ಕಾರ ಬಿಡಿಗಾಸು ಪರಿಹಾರ ನೀಡಿಲ್ಲ

ಈವರೆಗೂ ಕೇಂದ್ರ ಸರ್ಕಾರ ಬಿಡಿಗಾಸು ಪರಿಹಾರ ನೀಡಿಲ್ಲ. ಈಗ ಅವರು ಬಿಜೆಪಿ ನಾಯಕರು  ತಮ್ಮ ವರದಿ ಕೊಟ್ಟು ಪರಿಹಾರ ಕೊಡಿಸಲಿ. ಬರಗಾಲ ಎಂದು ಕೇವಲ ಮಾತನಾಡುವುದಲ್ಲ. ಬರೀ ಆರೋಪ ಮಾಡುವುದಕ್ಕಿಂತ ತಾನು ಏನು ಮಾಡಿದ್ದೇವೆ ಎಂದು ಹೇಳಬೇಕು” ಎಂದು ತಿಳಿಸಿದರು.

ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ

ರಾಜ್ಯ ಸರ್ಕಾರದ ವತಿಯಿಂದ ಯಾವ ಪ್ಯಾಕೇಜ್ ಘೋಷಣೆ ಮಾಡುತ್ತೀರಾ ಎಂದು ಕೇಳಿದಾಗ, “ಈ ವಿಚಾರವಾಗಿ ಮುಖ್ಯಮಂತ್ರಿಗಳು ಯಾರಿಗೆ ಯಾವ ರೀತಿ ಪರಿಹಾರ ನೀಡಬೇಕು ಎಂದು ಮಾತನಾಡಿದ್ದಾರೆ. ಬರಪೀಡಿತ ಪ್ರದೇಶಗಳಲ್ಲಿ ಕುಡಿಯುವ ನೀರು, ಗೋಶಾಲೆಗಳಿಗೆ ಮೇವು ಸೇರಿದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ” ಎಂದು ತಿಳಿಸಿದರು.

ಇನ್ನು ತೆಲಂಗಾಣ ಸರ್ಕಾರ ರಚನೆ ಬಗ್ಗೆ ಮಾತನಾಡಿ, “ಸೋನಿಯಾ ಗಾಂಧಿ ಅವರು ತೆಲಂಗಾಣ ರಾಜ್ಯ ರಚನೆಗೆ ನೆರವಾಗಿದ್ದರು. ಕೆಸಿಆರ್ ಅವರು ಪಕ್ಷವನ್ನು ವಿಲೀನ ಮಾಡಿ ನಮ್ಮ ಜೊತೆ ಇರುವುದಾಗಿ ಹೇಳಿದ್ದರು. ಆದರೆ ಅವರು ಪ್ರತ್ಯೇಕವಾಗಿ 10 ವರ್ಷಗಳ ಕಾಲ ಸರ್ಕಾರ ನಡೆಸಿದರು.

ಈ ವಿಚಾರವಾಗಿ ನಾವು ಜನರಿಗೆ ಮನದಟ್ಟು ಮಾಡಿಕೊಟ್ಟು ನಿಮ್ಮಲ್ಲಿ ಬದಲಾವಣೆ ತರುತ್ತೇವೆ ಎಂದು ಭರವಸೆ ನೀಡಿದೆವು. ಹೀಗಾಗಿ ತೆಲಂಗಾಣ ರಾಜ್ಯದ ಜನ ಕಾಂಗ್ರೆಸ್ ಪಕ್ಷದ ಮೇಲೆ ನಂಬಿಕೆ ಇಟ್ಟಿದ್ದಾರೆ. ಇಂದು ತೆಲಂಗಾಣದಲ್ಲಿ ಸರ್ಕಾರ ರಚನೆಯಾಗಿದೆ. ನಾನು, ಮುಖ್ಯಮಂತ್ರಿಗಳು ಸೇರಿದಂತೆ ಕೆಲವು ನಾಯಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೇವೆ” ಎಂದು ತಿಳಿಸಿದರು.

ಬೆಳಗಾವಿ ಅಧಿವೇಶನ ಬಿಟ್ಟು ಕಾಂಗ್ರೆಸ್ ಸಚಿವರು ತೆಲಂಗಾಣದಲ್ಲಿದ್ದಾರೆ ಎಂದು ವಿರೋಧ ಪಕ್ಷಗಳ ಟೀಕೆ ಬಗ್ಗೆ ಕೇಳಿದಾಗ, “ನಮ್ಮ ರಾಜ್ಯದ ಚುನಾವಣೆ ಸಂದರ್ಭದಲ್ಲಿ ಕೇರಳ, ಮಹಾರಾಷ್ಟ್ರ, ಆಂಧ್ರ ಪ್ರದೇಶ ಸೇರಿದಂತೆ ನೆರೆ ರಾಜ್ಯದ ಕಾಂಗ್ರೆಸ್ ನಾಯಕರು ಬಂದು ಕೆಲಸ ಮಾಡಿದ್ದರು. ಹೀಗಾಗಿ ನಮ್ಮ 45 ನಾಯಕರು ಎರಡು ಮೂರು ತಿಂಗಳ ಕಾಲ ಇಲ್ಲಿ ಕೆಲಸ ಮಾಡಿದ್ದಾರೆ. ರಾಜಕಾರಣದಲ್ಲಿ ಒಬ್ಬರಿಗೊಬ್ಬರು ಸಹಾಯ ಮಾಡಿದ್ದೇವೆ” ಎಂದರು.

ಮುಂದೆ ಜಾಮೀನು ಪಡೆಯಲು ನಾರಾಯಣ ಹೃದಯಾಲಯದಲ್ಲಿ ಬೆಡ್ ಬುಕ್ ಮಾಡಿಕೊಳ್ಳಲಿ ಎಂಬ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಟೀಕೆ ಬಗ್ಗೆ ಕೇಳಿದಾಗ, “ಅವರು ಹೇಳಿದಂತೆ ಮಾಡೋಣ” ಎಂದರು.

ಕಾಂಗ್ರೆಸ್ ಸರ್ಕಾರ ಮುಸಲ್ಮಾನರ ತುಷ್ಟೀಕರಣ ಮಾಡುತ್ತಿದೆ ಎಂಬ ಯಡಿಯೂರಪ್ಪ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಈ ದೇಶದ ಸಂವಿಧಾನದಲ್ಲಿ ಎಲ್ಲಾ ಜನಾಂಗಕ್ಕೆ ರಕ್ಷಣೆ ನೀಡಬೇಕು ಎಂದು ಹೇಳಿದೆ. ಜನಸಂಖ್ಯೆ ಆಧಾರದ ಮೇಲೆ ಆಯಾ ವರ್ಗಕ್ಕೆ ಸಹಾಯ ಮಾಡುತ್ತೇವೆ. ಪರಿಶಿಷ್ಟ ಜಾತಿ ಹಾಗೂ ಪಂಗಡದ ಜನರಿಗೂ ನಾವು ಸಹಾಯ ಮಾಡುತ್ತಿದ್ದೇವೆ. ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಎಂಬ ತತ್ವದ ಮೇಲೆ ನಾವು ಕೆಲಸ ಮಾಡುತ್ತಿದ್ದೇವೆ” ಎಂದು ತಿಳಿಸಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bjpbring solutionCentreIncreaseman daysNarega schemeunder
2 FacebookTwitterPinterestEmail
KM Shivaraju

previous post
ರೈತರ ಸಾಲದ ಮರುಪಾವತಿ 2025ರ ಜನವರಿ ವರೆಗೆ ವಿಸ್ತರಿಸಿ
next post
ಯತ್ನಾಳ್ ರಿಂದ ದ್ವೇಷದ, ಅಲ್ಪಸಂಖ್ಯಾತರ ವಿರುದ್ಧದ ರಾಜಕಾರಣ

You may also like

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

ಮನರೇಗಾ ಮರುಸ್ಥಾಪನೆ ಹೋರಾಟ ಬೆಂಬಲಿಸಿ

February 23, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ...

March 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ