ಬೆಳಗಾವಿಯಲ್ಲಿ ಬಿಜೆಪಿ ಪ್ರತಿಭಟನೆ
ಬೆಂಗಳೂರು: ರಾಜ್ಯ ಸರಕಾರದ ವೈಫಲ್ಯಗಳ ವಿರುದ್ಧ ಬೆಳಗಾವಿಯಲ್ಲಿ ಇಂದು ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು.
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಮಾತನಾಡಿ, ರಾಜ್ಯ ಸರ್ಕಾರ ಬಂದು 6 ತಿಂಗಳು ಕಳೆದಿದೆ. ಭೀಕರ ಬರಗಾಲ ಇದ್ದರೂ ಕಾಂಗ್ರೆಸ್ ಸರ್ಕಾರವು ಜನರ ನಿರೀಕ್ಷೆ ಈಡೇರಿಸದೆ ಹುಸಿಯಾಗಿಸಿದೆ. 14 ಬಜೆಟ್ ಮಂಡಿಸಿದ ಸಿದ್ದರಾಮಯ್ಯನವರು ರೈತರ ಸಮಸ್ಯೆಗಳಿಗೆ ಸ್ಪಂದಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಅಲ್ಪಸಂಖ್ಯಾತರಿಗೆ 10 ಸಾವಿರ ಕೋಟಿ ರೂ. ಪ್ರಕಟಿಸಿದ ಮುಖ್ಯಮಂತ್ರಿ, ರೈತರ ಬಗ್ಗೆ ಮಾತನಾಡಿಲ್ಲ. ಕಬ್ಬು ಬೆಳೆಗಾರರು ಸೇರಿದಂತೆ ಎಲ್ಲ ರೈತರಿಗೆ ಪರಿಹಾರ ಕೊಡಬೇಕು. ಆದರೆ, ಸರ್ಕಾರ ಕಣ್ಣಿದ್ದೂ ಕುರುಡರಂತೆ ವರ್ತಿಸುತ್ತಿದೆ ಎಂದು ಆಕ್ಷೇಪಿಸಿದರು.
ಯಡಿಯೂರಪ್ಪ ಅವರು ಸುವರ್ಣ ಸೌಧ ನಿರ್ಮಿಸಿದ್ದರು. ಇಲ್ಲಿನ ಸಮಸ್ಯೆಗಳ ಪರಿಹಾರದ ನಿರೀಕ್ಷೆ ಅವರದಾಗಿತ್ತು. ಆದರೆ, ಸಿದ್ದರಾಮಯ್ಯನವರು ರೈತರನ್ನು ಕಡೆಗಣಿಸಿದ್ದಾರೆ ಎಂದು ಆರೋಪಿಸಿದರು.
ರಾಜ್ಯದ ಕಾಂಗ್ರೆಸ್ಸಿಗರು ಕೇಂದ್ರ ಸರ್ಕಾರವನ್ನು ದೂಷಿಸುತ್ತಿದ್ದಾರೆ. ರೈತರ ಸಾಲಮನ್ನಾ ಮಾಡಬೇಕು. ಹೊಸ ಸಾಲವನ್ನು ಕೊಡಬೇಕು. ಸಾಲ ವಸೂಲಿಯನ್ನು ನಿಲ್ಲಿಸಿ ಎಂದು ಆಗ್ರಹಿಸಿದರು. ಈ ಸರ್ಕಾರಕ್ಕೆ ಚಾಟಿ ಬೀಸುವ ಕೆಲಸ ಮುಂದುವರೆಯಲಿದೆ ಎಂದರು. ಮುಂದಿನ ಲೋಕಸಭಾ ಚುನಾವಣೆಯಲ್ಲಿ 28 ಕ್ಷೇತ್ರಗಳನ್ನೂ ಬಿಜೆಪಿ- ಜೆಡಿಎಸ್ ಸೇರಿ ಗೆಲ್ಲಬೇಕಿದೆ ಎಂದು ತಿಳಿಸಿದರು.
ನರೇಂದ್ರ ಮೋದಿಯವರಂಥ ನಾಯಕ ಕಾಂಗ್ರೆಸ್‍ನಲ್ಲಿಲ್ಲ
ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಹಾಗೂ ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಾತನಾಡಿ, ಹಣ, ಹೆಂಡ, ತೋಳಬಲದಿಂದ ಅಧಿಕಾರಕ್ಕೆ ಬರುವ ಭ್ರಮೆಯಿಂದ ಇದ್ದ ಕಾಂಗ್ರೆಸ್‍ಗೆ ಪಂಚರಾಜ್ಯ ಚುನಾವಣೆಯ ಫಲಿತಾಂಶ ಸಮರ್ಪಕ ಉತ್ತರ ನೀಡಿದೆ. ಪ್ರಧಾನಿ ನರೇಂದ್ರ ಮೋದಿಯವರಂಥ ನಾಯಕ ಕಾಂಗ್ರೆಸ್‍ನಲ್ಲಿಲ್ಲ ಎಂದರು.
ರಾಜ್ಯ ಸರ್ಕಾರವು ಕೂಡಲೇ ಬರ ಪರಿಹಾರವನ್ನು ಪ್ರಕಟಿಸದಿದ್ದರೆ ರಾಜ್ಯದ ಉದ್ದಗಲಕ್ಕೆ ತೆರಳಿ ಹೋರಾಟ ಮಾಡುವೆ. ರೈತರ ಪರವಾಗಿ ನಿಲ್ಲುವೆ ಎಂದು ತಿಳಿಸಿದರು. ಕಿಸಾನ್ ಸಮ್ಮಾನ್ ಯೋಜನೆಯಡಿ ಕೇಂದ್ರ 6 ಸಾವಿರ ರೂ. ಕೊಟ್ಟರೆ ನಾನು 4 ಸಾವಿರ ರೂ. ಕೊಡುತ್ತಿದ್ದೆ.
ಅದನ್ನು ನಿಲ್ಲಿಸಿ ದ್ರೋಹ ಬಗೆದಿದ್ದೀರಲ್ಲವೇ? ನಿಮಗೆ ಅಧಿಕಾರದಲ್ಲಿ ಮುಂದುವರೆಯಲು ನೈತಿಕ ಹಕ್ಕಿಲ್ಲ. ರೈತರ ಜೀವನದ ಜೊತೆ ಚೆಲ್ಲಾಟ ಸಲ್ಲದು ಎಂದು ಎಚ್ಚರಿಸಿದರು.
ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಲೂಟಿ, ಹಗಲುದರೋಡೆ ಮುಂದುವರೆದಿದೆ. ತಮ್ಮ ಕಾಲದಲ್ಲಿ ಭಾಗ್ಯಲಕ್ಷ್ಮೀ ಯೋಜನೆ ಜಾರಿ ಮಾಡಿದ್ದನ್ನು ನೆನಪಿಸಿದರು. ಎಲ್ಲ ಅಭಿವೃದ್ಧಿ ಕಾಮಗಾರಿ ಸ್ಥಗಿತವಾಗಿದೆ ಎಂದ ಅವರು, ರೈತರ ಸಾಲ ಮನ್ನಾ ತೀರ್ಮಾನ ಮಾಡಿ ಎಂದು ಆಗ್ರಹಿಸಿದರು.
ಲೋಕಸಭೆಯಲ್ಲಿ ಮೈಸೂರು ಯುವಕನ ದಾಂಧಲೆ
ಅಲ್ಪಸಂಖ್ಯಾತ ಮುಸ್ಲಿಮರಿಗೆ ಹಣಕೊಡುತ್ತಾರೆ. ರೈತರ ಪರಿಸ್ಥಿತಿ ಏನು? ರೈತವಿರೋಧಿ, ಜನ ವಿರೋಧಿ ಸರ್ಕಾರದ ವಿರುದ್ಧ ಹೋರಾಟ ಮುಂದುವರೆಯಲಿದೆ ಎಂದು ಅವರು ಪ್ರಕಟಿಸಿದರು.
ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಮಾತನಾಡಿ, ಬೆಳಗಾವಿಯಲ್ಲಿ ಅಧಿವೇಶನ ನಡೆಯುತ್ತಿದ್ದರೂ ಉತ್ತರ ಕರ್ನಾಟಕಕ್ಕಾಗಿ ಸಿದ್ದರಾಮಯ್ಯನವರು ಎಷ್ಟು ಹಣ ಬಿಡುಗಡೆ ಮಾಡಿದ್ದಾರೆ ಎಂದು ಪ್ರಶ್ನಿಸಿದರು.
ಅಗತ್ಯ ವಸ್ತುಗಳ ದರ ಏರಿಕೆ
ಮುಲ್ಲಾಗಳಿಗೆ 10 ಸಾವಿರ ಕೋಟಿ ರೂ.ಕೊಡುವುದಾಗಿ ಹೇಳಿದ್ದಾರೆ. ರೈತರಿಗೆ ಕೊಡಲು ಸರ್ಕಾರದ ಬಳಿ ಹಣ ಇಲ್ಲ. ಮಕ್ಕಳ ದತ್ತು ತೆಗೆದುಕೊಂಡರೆ ಸರ್ಕಾರಕ್ಕೆ ತೆರಿಗೆ ಕೊಡಬೇಕಿದೆ. 60 ತೆರಿಗೆಗಳನ್ನು ಏರಿಸಿದ್ದಾರೆ. ತೆರಿಗೆ, ತೆರಿಗೆಗಳ ಬಿಲ್ ಮಂಜೂರು ಮಾಡುತ್ತಿದ್ದಾರೆ.ವಿದ್ಯುತ್, ಹಾಲು, ಮದ್ಯ ಸೇರಿ ಎಲ್ಲ ವಸ್ತುಗಳ ದರ ಏರಿಕೆಯಾಗಿದೆ. ಉಚಿತ ನೆಪದಲ್ಲಿ ಮೋಸದ ಸರ್ಕಾರ ಇದು ಎಂದು ಆರೋಪಿಸಿದರು.
ಸರ್ಕಾರದ ಖಜಾನೆ ಖಾಲಿಯಾಗಿದೆ. ಯಡಿಯೂರಪ್ಪ ಅವರು ರೈತರಿಗೆ 25 ಸಾವಿರ ಕೊಟ್ಟರೆ ಈ ಸರ್ಕಾರ 2 ಸಾವಿರ ಕೊಡುತ್ತಿದೆ. ಈ ಸರ್ಕಾರಕ್ಕೆ ನಾಚಿಕೆ ಇಲ್ಲ. ಸದನದಲ್ಲಿ ಸಿದ್ದರಾಮಯ್ಯ ಗರ ಬಡಿದಂತೆ ಕುಳಿತಿರುತ್ತಾರೆ. ಈ ಕೆಟ್ಟ ಸರ್ಕಾರ ತೊಲಗಲಿ ಎಂದು ಆಗ್ರಹಿಸಿದರು.
ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಕೆಗೆ ಶೀಘ್ರ ಕ್ರಮ
ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ, ಮಾಜಿ ಸಚಿವರಾದ ಶಶಿಕಲಾ ಜೊಲ್ಲೆ, ಬಿ.ಶ್ರೀರಾಮುಲು, ಆರಗ ಜ್ಞಾನೇಂದ್ರ, ಸುನೀಲ್‍ಕುಮಾರ್, ಕೋಟ ಶ್ರೀನಿವಾಸ ಪೂಜಾರಿ, ಪಕ್ಷದ ಸಂಸದರು, ಮಾಜಿ ಸಚಿವರು, ಶಾಸಕರು, ಮಾಜಿ ಶಾಸಕರು, ಜಿಲ್ಲಾಧ್ಯಕ್ಷರು, ಪಕ್ಷದ ರಾಜ್ಯ, ಜಿಲ್ಲಾ ಪದಾಧಿಕಾರಿಗಳು, ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.