Saturday, September 5, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, September 5, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಶಿಕ್ಷಣ

ಭ್ರೂಣಹತ್ಯೆ ತಡೆಗಟ್ಟಲು ಕಾನೂನು ಬದಲಾವಣೆ

by KM Shivaraju December 14, 2023
written by KM Shivaraju December 14, 2023 0 comments 2 minutes read
4FacebookTwitterPinterestEmail
99
ಕಠಿಣ ಕ್ರಮ, ವಿಶೇಷ ನೀತಿ ರಚನೆ, ಐಪಿಸಿ ತಿದ್ದುಪಡಿಗೆ ಕ್ರಮ: ಸಚಿವ ದಿನೇಶ ಗುಂಡೂರಾವ್

ಬೆಳಗಾವಿ:  ಸಮಾಜದಲ್ಲಿ ಹೆಣ್ಣು ಮಕ್ಕಳಿಗೆ ಕಾನೂನಾತ್ಮಕ ರಕ್ಷಣೆ, ಸಮಾನ ಹಕ್ಕು, ಸಾಮಾಜಿಕ ನ್ಯಾಯ ದೊರಕುವಂತೆ ಸರ್ಕಾರಗಳು ಕ್ರಮ ವಹಿಸಿವೆ. ಭ್ರೂಣಹತ್ಯೆ ಒಂದು ಸಾಮಾಜಿಕ ಪಿಡುಗು ಆಗಿ ಮಹಿಳೆಯರನ್ನು ಶೋಷಣೆ ಮಾಡುತ್ತಿದೆ. ಈ ಕುರಿತು ಕಠಿಣ ಕ್ರಮಗಳನ್ನು ಕೈಗೊಳ್ಳಲು ಮತ್ತು ಇದರಲ್ಲಿನ ಅಪರಾಧಿಗಳನ್ನು ಕಠಿಣವಾಗಿ ಶಿಕ್ಷಿಸಲು ಅನುವಾಗುವಂತೆ ಈಗಿರುವ ಕಾನೂನುಗಳಿಗೆ ಮತ್ತು ಐ.ಪಿ.ಸಿ ತಿದ್ದುಪಡಿ ಮಾಡಿ, ಈ ಭ್ರೂಣಹತ್ಯೆಯನ್ನು ತಡೆಗಟ್ಟಲು ವಿಶೇಷವಾದ ಮತ್ತು ಸಮಗ್ರವಾದ ಹೊಸ ನೀತಿಯನ್ನು ರೂಪಿಸಲಾಗುವುದೆಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ ಗುಂಡೂರಾವ್ ಅವರು ಹೇಳಿದರು.

ವಿಧಾನಸಭೆಯಲ್ಲಿ ಶೂನ್ಯ ವೇಳೆಯಲ್ಲಿ ವಿರೋಧ ಪಕ್ಷದ ನಾಯಕ ಆರ್. ಅಶೋಕ ಅವರು ಪ್ರಸ್ತಾಪಿಸಿದ ರಾಜ್ಯದಲ್ಲಿ ಭ್ರೂಣಹತ್ಯೆ ತಡೆಗಟ್ಟುವ ಕುರಿತ ವಿಷಯಕ್ಕೆ ಅವರು ಉತ್ತರಿಸಿದರು.

ಲಿಂಗ ಪತ್ತೆಯನ್ನು ನಿಷೇಧಿಸಿದೆ

ಆರೋಗ್ಯ ಇಲಾಖೆಯು 1994ರಲ್ಲಿ ರಚನೆಗೊಂಡಿರುವ ಪಿ.ಸಿ.ಪಿ.ಎನ್.ಡಿ.ಟಿ. ಕಾಯ್ದೆಯನ್ವಯ ಲಿಂಗ ಪತ್ತೆಯನ್ನು ನಿಷೇಧಿಸಿದೆ. ಆದರೂ ಭ್ರೂಣಹತ್ಯೆ ಪ್ರಕರಣಗಳು ವರದಿಯಾಗುತ್ತಿವೆ. 2002 ರಿಂದ 2023ರ ಆರೋಗ್ಯ ಇಲಾಖೆಯ ಈ ಕುರಿತ ವರದಿಯನ್ನು ನೋಡಿದಾಗ ಕೇವಲ 100 ಪ್ರಕರಣಗಳು ದಾಖಲಾಗಿವೆ.

ರಿಯಲ್ ಎಸ್ಟೇಟ್ ವ್ಯವಹಾರಕ್ಕೆ ಅವಕಾಶವಿಲ್ಲ

  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ
  • ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ
  • ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !
  • ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

ಇದನ್ನು ಗಂಭೀರವಾಗಿ ಪರಿಗಣಿಸದಿರುವುದು ಇದರಿಂದ ತಿಳಿದು ಬರುತ್ತದೆ. ಕಳೆದ ವರ್ಷ 1000ಕ್ಕೆ 947 ಇದ್ದ ಲಿಂಗಾನುಪಾತ ಪ್ರಸಕ್ತ ವರ್ಷ 929ಕ್ಕೆ ಇಳಿದಿದೆ. ಈ ಕುರಿತು ಎಲ್ಲರೂ ಗಂಭೀರವಾಗಿ ಚಿಂತಿಸುವ ಮತ್ತು ಇಂತಹ ಅಪರಾಧ ಪ್ರಕರಣಗಳಲ್ಲಿ ಭಾಗವಹಿಸುವವರನ್ನು ಕಠಿಣವಾಗಿ ಶಿಕ್ಷಿಸುವ ಕ್ರಮವಾಗಬೇಕು ಎಂದು ಹೇಳಿದರು.

ಸುವರ್ಣ ವಿಧಾನಸೌಧ

ಸರ್ಕಾರವು ಭ್ರೂಣಹತ್ಯೆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿದ್ದು, ಈಗಾಗಲೇ ಈ ಕುರಿತು ಸಿ.ಐ.ಡಿ. ತನಿಖೆಗೆ ಆದೇಶಿಸಲಾಗಿದೆ. ಆದಷ್ಟು ಶೀಘ್ರದಲ್ಲಿ ತನಿಖಾ ವರದಿಯನ್ನು ಪಡೆಯಲು ಸರ್ಕಾರ ಕ್ರಮವಹಿಸಲಿದೆ.

ಪಿ.ಸಿ.ಪಿ.ಎನ್.ಡಿ.ಟಿ. ಕಾಯ್ದೆ ಕಟ್ಟುನಿಟ್ಟಾಗಿ ಜಾರಿಗೆ ತರಲು ನಿರ್ದೇಶಿಸಲಾಗಿದೆ. ರಾಜ್ಯದಾದ್ಯಂತ ಜನಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಮತ್ತು ಗ್ರಾಮಮಟ್ಟದಿಂದ ಸಾರ್ವಜನಿಕರಿಗೆ ತಿಳುವಳಿಕೆ ನೀಡುವ ಕುರಿತು ದೀರ್ಘಕಾಲಿನ ಕಾರ್ಯಕ್ರಮಗಳನ್ನು ಆಯೋಜಿಸಲು ತೀರ್ಮಾನಿಸಲಾಗಿದೆ ಎಂದು ಸಚಿವರು ತಿಳಿಸಿದರು.

ಕಮಲಕ್ಕೆ ಕೈಕೊಟ್ಟ ಶಾಸಕರು

ಲಿಂಗ ಪತ್ತೆ ಮತ್ತು ಭ್ರೂಣಹತ್ಯೆಯಂತಹ ಅಪರಾಧ ಮಾಡುವವರ ಮೇಲೆ ಮತ್ತು ಮಾಡಿಸುವವರ ಇಬ್ಬರೂ ಮೇಲೂ ಸೂಕ್ತ ಕ್ರಮವಾಗಬೇಕು. ಈ ಕುರಿತು ವಿಶೇಷ ನೀತಿ ರೂಪಿಸುವ ಕಾನೂನನ್ನು ರಚಿಸಲಾಗುವುದು. ಮತ್ತು ಈ ನಿಟ್ಟಿನಲ್ಲಿ ಶಾಲಾ ಶಿಕ್ಷಣ ಇಲಾಖೆ, ಕಾನೂನು ಇಲಾಖೆ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಮನ್ವಯದಲ್ಲಿ ಆರೋಗ್ಯ ಇಲಾಖೆ ಸಾಮಾಜಿಕ ಕಾರ್ಯಕ್ರಮಗಳನ್ನು ರೂಪಿಸಲಿದೆ.

ಟಾಸ್ಕ್‍ಫೋರ್ಸ್ ರಚಿಸಿ ನಿರಂತರ ನಿಗಾ

ಟಾಸ್ಕ್‍ಫೋರ್ಸ್ ರಚಿಸಿ ನಿರಂತರ ನಿಗಾ ವಹಿಸಲಿದೆ. ರಾಜ್ಯ ಮಟ್ಟದಲ್ಲಿ ಮೇಲ್ವಿಚಾರಣಾ ಸಮಿತಿಯನ್ನು ರಚಿಸಲಿದೆ. ಮತ್ತು ಉಪ ವಿಭಾಗ ಮಟ್ಟದಲ್ಲಿ ತಪಾಸಣಾ ಸಮಿತಿಗಳನ್ನು ರಚಿಸಿ ಪ್ರತಿ ಮೂರು ತಿಂಗಳಿಗೊಮ್ಮೆ ಎಲ್ಲಾ ಸ್ಕ್ಯಾನಿಂಗ್ ಸೆಂಟರ್‍ಗಳ ಪರಿಶೀಲನೆ ಹಾಗೂ ಪಿ.ಸಿ.ಪಿ.ಎನ್.ಡಿ.ಟಿ. ಕಾಯ್ದೆಯ ಪರಿಣಾಮಕಾರಿ ಜಾರಿಗೆ ನಿರಂತರ ನಿಗಾ ವಹಿಸಲಿದೆ ಎಂದು ಆರೋಗ್ಯ ಸಚಿವರು ತಿಳಿಸಿದರು.

ಅಕ್ರಮ-ಸಕ್ರಮ

ಮಂಡ್ಯ, ಮೈಸೂರು, ಬೆಂಗಳೂರು ಭ್ರೂಣಪತ್ತೆ ಮತ್ತು ಹತ್ಯೆ ಪ್ರಕರಣಗಳಲ್ಲಿ ಭಾಗಿಯಾದವರನ್ನು ಬಂಧಿಸಿ ಕ್ರಮವಹಿಸಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ವರದಿಯಾಗಿರುವ ಭ್ರೂಣಹತ್ಯೆ ಪ್ರಕರಣದ ಆರೋಪಿಗಳನ್ನು ಬಂಧಿಸಿ ಆಸ್ಪತ್ರೆಯನ್ನು ಸೀಜ್ ಮಾಡಲಾಗಿದೆ. ಆರೋಗ್ಯ ಇಲಾಖೆ ತಕ್ಷಣ ಕ್ರಮವಹಿಸಿದೆ ಎಂದು ಸಚಿವರು ತಿಳಿಸಿದರು.

ಮುಂದಿನ ಅಧಿವೇಶನದಲ್ಲಿ ಕಾನೂನು ರಚನೆ

ಭ್ರೂಣಹತ್ಯೆ ವಿಷಯ ಚರ್ಚೆಯಲ್ಲಿ ಭಾಗವಹಿಸಿದ್ದ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸಕ ರಚನೆ ಹಾಗೂ ಪ್ರವಾಸೋದ್ಯಮ ಸಚಿವ ಹೆಚ್.ಕೆ. ಪಾಟೀಲ ಅವರು ಮಾತನಾಡಿ,  ಭ್ರೂಣಹತ್ಯೆ ಮಹಾಪಾಪ. ಈ ಕೃತ್ಯವನ್ನು ತಡೆಗಟ್ಟಲು ಸರ್ಕಾರವು ಮುಂದಿನ ಅಧಿವೇಶನದಲ್ಲಿ ವಿಶೇಷ ಕಾನೂನು ರೂಪಿಸಿ ಜಾರಿಗೊಳಿಸಲಿದೆ ಎಂದು ಹೇಳಿದರು.

ಅನುದಾನಿತ ಶಾಲಾ-ಕಾಲೇಜುಗಳ ನೌಕರರಿಗೆ ಜ್ಯೋತಿ ಸಂಜೀವಿನಿ ವಿಸ್ತರಣೆ

ಚರ್ಚೆಯಲ್ಲಿ ಸಚಿವ ಚಲುವರಾಯಸ್ವಾಮಿ, ಶಾಸಕರಾದ ಶರತ್ ಬಚ್ಚೇಗೌಡ, ಶಶಿಕಲಾ ಜೊಲ್ಲೆ,  ನರೇಂದ್ರಸ್ವಾಮಿ, ಡಾ. ಮಂಥರ್ ಗೌಡ, ಡಾ. ಶ್ರೀನಿವಾಸ ಸೇರಿದಂತೆ ಹಲವರು ಭಾಗವಹಿಸಿ ತಮ್ಮ ಸಲಹೆ, ಅಭಿಪ್ರಾಯ ತಿಳಿಸಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
amend IPChealthLaw changeMinister Dinesh Gunduraoprevent feticidespecial policy formationstrict action
4 FacebookTwitterPinterestEmail
KM Shivaraju

previous post
ರಿಯಲ್ ಎಸ್ಟೇಟ್ ವ್ಯವಹಾರಕ್ಕೆ ಅವಕಾಶವಿಲ್ಲ
next post
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕುವೆಂಪು ಹೆಸರು

You may also like

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

August 19, 2026

ಗುಟ್ಕಾ, ತಂಬಾಕು ಮಿಶ್ರಿತ ಮಸಾಲಾ ಮಾರಾಟ ಬಂದ್

August 12, 2026

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಪಡೆದ ಯುವಶಕ್ತಿ

July 25, 2026

ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

July 24, 2026

ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

July 20, 2026

ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

July 11, 2026

ಸಿದ್ದರಾಮಯ್ಯ ಮೊಮ್ಮಗನಿಗೆ ರಾಜಕೀಯ ತಾಲೀಮು

July 6, 2026

ನ್ಯಾಯಾಂಗದಲ್ಲಿ ಇನ್ನಷ್ಟು ಸುಧಾರಣೆ ಅಗತ್ಯವಿದೆ

July 4, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (558)
  • ಅಂಕಣ (109)
  • ಉದ್ಯೋಗ (345)
  • ದಿನ ಭವಿಷ್ಯ (110)
  • ರಾಜಕೀಯ (2,051)
  • ರಾಜ್ಯ (2,366)
  • ರಾಷ್ಟ್ರ (2,331)
  • ವಿಶ್ಲೇಷಣೆ (202)
  • ಶಿಕ್ಷಣ (407)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

    September 3, 2026

KMS Special

  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

    September 3, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ...

August 28, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ