ವಿಜಯಪುರ ವಿಮಾನ ನಿಲ್ದಾಣಕ್ಕೆ ಶ್ರೀ ಜಗಜ್ಯೋತಿ ಬಸವೇಶ್ವರ
ಬೆಳಗಾವಿ: ರಾಜ್ಯದ ನಾಲ್ಕು ವಿಮಾನ ನಿಲ್ದಾಣಗಳಿಗೆ ಐತಿಹಾಸಿಕ ಪುರುಷರ ಹೆಸರುಗಳನ್ನು ನಾಮಕರಣ ಮಾಡಲು ಕರ್ನಾಟಕ ವಿಧಾನಮಂಡಲದ ಉಭಯ ಸದನಗಳಿಂದ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಕಳುಹಿಸುವ ಮಹತ್ವದ ವಿಷಯವು ವಿಧಾನಸಭೆಯಲ್ಲಿ ಚರ್ಚೆಗೆ ಬಂದಿತು.
ಡಿಸೆಂಬರ್ 14ರಂದು ವಿಧಾನಸಭೆಯಲ್ಲಿ ನಡೆದ ಕಲಾಪದ ವೇಳೆ ಈ ಐತಿಹಾಸಿಕ ಶಿಫಾರಸ್ಸು ನಿರ್ಣಯವನ್ನು ಕೈಗೊಳ್ಳಲಾಯಿತು.
ಭ್ರೂಣಹತ್ಯೆ ತಡೆಗಟ್ಟಲು ಕಾನೂನು ಬದಲಾವಣೆ
ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಬೆಳಗಾವಿ ವಿಮಾನ ನಿಲ್ದಾಣಕ್ಕೆ ವೀರರಾಣಿ ಕಿತ್ತೂರು ಚನ್ನಮ್ಮ, ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಡಾ. ಕೆ.ವಿ. ಪುಟ್ಟಪ್ಪ (ಕುವೆಂಪು) ಮತ್ತು ವಿಜಯಪುರ ವಿಮಾನ ನಿಲ್ದಾಣಕ್ಕೆ ಶ್ರೀ ಜಗಜ್ಯೋತಿ ಬಸವೇಶ್ವರ ಹೆಸರನ್ನು ನಾಮಕರಣಗೊಳಿಸಲು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಮತ್ತು ಮೂಲ ಸೌಕರ್ಯ ಸಚಿವರಾದ ಎಂ.ಬಿ. ಪಾಟೀಲ ಅವರು ಉಭಯ ಸದನಗಳಲ್ಲಿ ಅನುಮೋದನೆಗೊಂಡ ನಿರ್ಣಯವನ್ನು ಡಿಸೆಂಬರ್ 14ರಂದು ವಿಧಾನಸಭೆಯಲ್ಲಿ ಮಂಡಿಸಿದರು.
ನಿರ್ಣಯವನ್ನು ಬೆಂಬಲಿಸಿದ ವಿರೋಧ ಪಕ್ಷದ ನಾಯಕ ಆರ್. ಅಶೋಕ, ಶಾಸಕರಾದ ಅರವಿಂದ ಬೆಲ್ಲದ, ಎನ್.ಹೆಚ್. ಕೋನರೆಡ್ಡಿ, ಆರಗ ಜ್ಞಾನೇಂದ್ರ ಸೇರಿದಂತೆ ಹಲವು ಶಾಸಕರು ಅಭಿನಂದಿಸಿ ಮಾತನಾಡಿದರು.
ಸಭಾಧ್ಯಕ್ಷ ಯು.ಟಿ. ಖಾದರ್ ಅವರು, ಸಭೆಯಲ್ಲಿ ಈ ವಿಷಯ ಪ್ರಸ್ತಾಪಿಸಿ ಸದನವು ಸರ್ವಾನುಮತದಿಂದ ಅಂಗೀಕರಿಸಿದೆ ಎಂದು ತಿಳಿಸಿದರು. ಸಚಿವ ಎಂ.ಬಿ. ಪಾಟೀಲ ಅವರು ಉಭಯ ಸದನಗಳಲ್ಲಿ ಅಂಗೀಕೃತಗೊಂಡಿರುವ ಈ ನಿರ್ಣಯವನ್ನು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುವುದೆಂದು ಸದನದಲ್ಲಿ ತಿಳಿಸಿದರು.
ರಿಯಲ್ ಎಸ್ಟೇಟ್ ವ್ಯವಹಾರಕ್ಕೆ ಅವಕಾಶವಿಲ್ಲ