ಸಚಿವರ ಸಾಂತ್ವನ, ಪರಿಹಾರ ನೀಡಿಕೆ
ಬೆಂಗಳೂರು: ಬೆಳಗಾವಿಯ ವಂಟಮೂರಿ ಗ್ರಾಮದಲ್ಲಿ ದಲಿತ ಮಹಿಳೆಯ ವಿವಸ್ತ್ರ ಘಟನೆಗೆ ಸಂಬಂಧಿಸಿದಂತೆ ಸಂತ್ರಸ್ತ್ರೆಯ ಮನೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಭೇಟಿ ನೀಡಿ ಸ್ವಾಂತನ ಹೇಳಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಂತ್ರಸ್ತೆಯ ಮನೆಗೆ ಭೇಟಿ ಕೊಟ್ಟು ಸಾಂತ್ವನ ನೀಡಿದ್ದು ಮಾತ್ರವಲ್ಲ ಪರಿಹಾರವನ್ನೂ ನೀಡಿದ್ದಾರೆ ಎಂದಿದ್ದಾರೆ.
ದೌರ್ಜನ್ಯ ನಡೆಸಿದ ದುಷ್ಕರ್ಮಿಗಳನ್ನು ಪೊಲೀಸರು 24 ಗಂಟೆಗೊಳಗೆ ಬಂಧಿಸಿ, ಕಾನೂನು ಕ್ರಮ ಕೈಗೊಂಡಿದ್ದಾರೆ.
ತನಿಖೆಯ ಮೇಲೆ ನಾನೇ ಖುದ್ದಾಗಿ ನಿಗಾ
ಪ್ರಕರಣದ ತನಿಖೆಯ ಮೇಲೆ ನಾನೇ ಖುದ್ದಾಗಿ ನಿಗಾ ಇಟ್ಟಿದ್ದು, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಸಿಗುವಂತೆ ಮಾಡುವ ಮೂಲಕ ಇಂತಹ ಅಮಾನುಷ ಕೃತ್ಯಗಳು ಮರುಕಳಿಸದಂತೆ ನೋಡಿಕೊಳ್ಳಲು ಸರ್ಕಾರ ಬದ್ಧವಾಗಿದೆ.
ರಾಜ್ಯ ಸರ್ಕಾರ ಕೈಗೊಂಡ ಕ್ರಮದಿಂದ ರಾಜ್ಯ ಬಿಜೆಪಿ ನಾಯಕರಿಗೂ ಸಮಾಧಾನವಾಗಿದೆ, ಆದರೂ, ಘಟನೆ ನಡೆದು ನಾಲ್ಕು ದಿನಗಳ ನಂತರ ಆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡ ಅವರು, ಸತ್ಯ ಶೋಧನಾ ಸಮಿತಿ ಕಳುಹಿಸುವ ಮೂಲಕ ಪ್ರಕರಣವನ್ನು ಕೆದಕಲು ಹೊರಟಿರುವುದು ರಾಜಕೀಯ ದುರುದ್ದೇಶದಿಂದ ಕೂಡಿದ್ದು, ಮಹಿಳೆಯರ ಮೇಲಿನ ಕಾಳಜಿಯಿಂದ ಖಂಡಿತ ಅಲ್ಲ ಎಂದು ಮುಖ್ಯಮಂತ್ರಿ ಟ್ವೀಟ್‌ನಲ್ಲಿ ಟೀಕಿಸಿದ್ದಾರೆ.
1 comment
[…] ರಾಜ್ಯ […]