Wednesday, June 10, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Wednesday, June 10, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಷ್ಟ್ರ

ಜಗತ್ತಿನ 5ನೇ ಅತಿದೊಡ್ಡ ಆರ್ಥಿಕ ಶಕ್ತಿ ಭಾರತ

by KM Shivaraju December 17, 2023
written by KM Shivaraju December 17, 2023 1 comment 2 minutes read
0FacebookTwitterPinterestEmail
135
ಕೇಂದ್ರ ಸಚಿವ ಪ್ರಲ್ಹಾದ್ ಜೋಷಿ ಹೇಳಿಕೆ

ಬೆಂಗಳೂರು: ಇವತ್ತು ಜಗತ್ತಿನ 5ನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಿ ಭಾರತ ಹೊರಹೊಮ್ಮಿದೆ. 10 ವರ್ಷಗಳ ಹಿಂದೆ ಭಾರತವನ್ನು ಜಗತ್ತಿನ ದುರ್ಬಲ ಆರ್ಥಿಕ ರಾಷ್ಟ್ರ ಎಂದೇ ಕರೆಯಲಾಗುತ್ತಿತ್ತು ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಷಿ ಅವರು ತಿಳಿಸಿದರು.

ವಿಕಸಿತ ಭಾರತ ಸಂಕಲ್ಪ ಯಾತ್ರೆ ಅಡಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಜನಪರ ಯೋಜನೆಗಳ ಮಾಹಿತಿಯ ಆರ್‍ಸಿ ಡಿಜಿಟಲ್ ವಾಹನವು  ಇಂದು ಶಿವಾಜಿನಗರ ವಿಧಾನಸಭಾ ಕ್ಷೇತ್ರದ ವಸಂತನಗರ ವಾರ್ಡಿನಲ್ಲಿ ಬಂದ ಸಂದರ್ಭದಲ್ಲಿ ಅದನ್ನು ವೀಕ್ಷಿಸಿ ಅವರು ಮಾತನಾಡಿದರು.

ಗ್ಯಾಸ್ಟ್ರಬಲ್ ಗೆ ಜೀರಿಗೆ ಕಾಳು ಪರಿಹಾರ

ಇಷ್ಟೊಂದು ಸಂಪದ್ಭರಿತ ರಾಷ್ಟ್ರ ಮತ್ತು ವಿಪುಲ ಮಾನವ ಸಂಪನ್ಮೂಲ ಇರುವ ದೇಶವಾದ ಭಾರತವನ್ನು ಸ್ವಾತಂತ್ರ್ಯಾನಂತರದ 75 ವರ್ಷಗಳ ಬಳಿಕವೂ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರ ಎಂದು ಕರೆಯಲಾಗುತ್ತಿದೆ. ದೇಶದ ಇತಿಹಾಸ 5 ಸಾವಿರ ವರ್ಷಗಳದ್ದಾಗಿದೆ. ಅದು ವಿಜಯದ ಇತಿಹಾಸ. ಇತಿಹಾಸವನ್ನೂ ಸುಳ್ಳಾಗಿ ಬರೆಯಲಾಗಿದೆ ಎಂದು ಆರೋಪಿಸಿದರು.

ಜಗತ್ತಿನಲ್ಲಿ ಅಭಿವೃದ್ಧಿ ಹೊಂದಿದ, ಅಭಿವೃದ್ಧಿ ಹೊಂದುತ್ತಿರುವ ಮತ್ತು ಅಭಿವೃದ್ಧಿ ಹೊಂದದೆ ಇರುವ ಹಿಂದುಳಿದ ರಾಷ್ಟ್ರಗಳು ಎಂಬ 3 ವಿಭಾಗಗಳಿವೆ. ಇದು ಪರಿಭಾಷೆಯಾಗಿದೆ. 10 ವರ್ಷಗಳಿಂದ ಮೋದಿಯವರ ನೇತೃತ್ವದಲ್ಲಿ ಅಭಿವೃದ್ಧಿ ಹೊಂದುವತ್ತ ದೊಡ್ಡ ಹೆಜ್ಜೆಯನ್ನು ಇಡಲಾಗಿದೆ. ಮುಂದಿನ 10 ವರ್ಷವೂ ನಾವು ಕೆಲಸ ಮಾಡುತ್ತಲೇ ಇರುತ್ತೇವೆ ಎಂದು ವಿಶ್ವಾಸದಿಂದ ನುಡಿದರು.

ಕರಾರಸಾ ನಿಗಮದಲ್ಲಿ ತಾಂತ್ರಿಕ ಸಹಾಯಕರ ನೇಮಕಾತಿ

ವಿಕಸಿತ ಭಾರತ ಸಂಕಲ್ಪ ಯಾತ್ರೆಯಲ್ಲಿ ನಾವು ಎರಡು ಕಲ್ಪನೆಗಳನ್ನು ಇಟ್ಟುಕೊಂಡಿದ್ದೇವೆ. ಈಗಾಗಲೇ ನಮ್ಮ ದೇಶ ಜಗತ್ತಿನ 5ನೇ ಆರ್ಥಿಕ ಶಕ್ತಿಯಾಗಿ ಭಾರತ ಹೊರಹೊಮ್ಮಿದೆ. 10-11 ವರ್ಷಗಳ ಹಿಂದೆ 2009-14ರ ನಡುವಿನ ಅವಧಿಯಲ್ಲಿ ನಾವು ವಿರೋಧ ಪಕ್ಷದಲ್ಲಿದ್ದೆವು. ಆಗ ಸಂಸತ್ತಿನಲ್ಲಿ ಭಾರತದ ಆರ್ಥಿಕ ಸ್ಥಿತಿ ಗಂಭೀರವಾಗಿರುವುದು, ಭಾರತದ ಬ್ಯಾಂಕ್‍ಗಳ ಎನ್‍ಪಿಎ ಪರಿಣಾಮದ ಚರ್ಚೆ ನಡೆದಿತ್ತು. ಭಾರತವು ಜಗತ್ತಿನ ದುರ್ಬಲ ಆರ್ಥಿಕ ರಾಷ್ಟ್ರ ಎಂದೇ ಬಿಂಬಿತವಾಗಿತ್ತು ಎಂದು ತಿಳಿಸಿದರು.

ಜಗತ್ತಿನ 3ನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಿ ಭಾರತ

ಇಂಗ್ಲೆಂಡನ್ನು ನಾವು ಹಿಂದಕ್ಕೆ ಹಾಕಿ ಐದನೇ ಸ್ಥಾನ ಪಡೆದಿದ್ದೇವೆ. ಮುಂದಿನ 3 ವರ್ಷಗಳಲ್ಲಿ ಜಗತ್ತಿನ 3ನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಿ ಭಾರತ ಹೊರಹೊಮ್ಮಬೇಕೆಂದು ಪ್ರಧಾನಿ ಮೋದಿಯವರು ಸಂಕಲ್ಪ ಮಾಡಿದ್ದಾರೆ. ಅಮೆರಿಕ, ಚೀನಾದ ಬಳಿಕ ನಮ್ಮ ಸ್ಥಾನ ಇರಲಿದೆ. ಮುಂದಿನ ವರ್ಷ ಇದೇ ಹೊತ್ತಿಗೆ ನಾವು ಜಗತ್ತಿನ ನಾಲ್ಕನೇ ಅತಿದೊಡ್ಡ ಆರ್ಥಿಕ ಶಕ್ತಿ ಆಗಲಿದ್ದೇವೆ ಎಂದು ವಿಶ್ವಾಸದಿಂದ ಹೇಳಿದರು.

ಹಿಂದೆ ಯುಪಿಎ ಅವಧಿಯಲ್ಲಿ ಹಣದ ಕೊರತೆ ಕುರಿತು ಸ್ವತಃ ಸಚಿವರೊಬ್ಬರು ನನ್ನಲ್ಲಿ ಮಾಹಿತಿ ಹಂಚಿಕೊಂಡಿದ್ದರು. ಇವತ್ತು ಪ್ರತಿ ಸಂಪುಟ ಸಭೆಯಲ್ಲಿ ಪ್ರಧಾನಿಯವರು ವಿವಿಧ ಯೋಜನೆಗಳು, ಮಂಜೂರಾದ ಮೊತ್ತ, ಯೋಜನೆಯ ಪ್ರಗತಿ- ಸ್ಥಿತಿಗತಿ, ಖರ್ಚಾದ ಮೊತ್ತದ ಮಾಹಿತಿ ಪಡೆಯುತ್ತಾರೆ. ಹೆಚ್ಚು ಹಣ ಬೇಕಿದ್ದರೆ ಕೇಳಿ ಎನ್ನುತ್ತಾರೆ ಎಂದು ತಿಳಿಸಿದರು.

ಸಿದ್ದು ಸಂಪುಟ ದೆಹಲಿಯತ್ತ

4 ಕೋಟಿ ಮನೆಗಳ ನಿರ್ಮಾಣ

140 ಕೋಟಿ ಜನಸಂಖ್ಯೆ ನಮ್ಮದು. ಎಲ್ಲರ ತಲೆ ಮೇಲೊಂದು ಸೂರು (ಮನೆ) ನಮ್ಮ ಆಶಯ. 1960-2014ರವರೆಗೆ ಸುಮಾರು 54-55 ವರ್ಷಗಳಲ್ಲಿ 3.58 ಕೋಟಿ ಮನೆ ನಿರ್ಮಿಸಿದ್ದರು. ಮೋದಿಯವರ 10 ವರ್ಷ ಆಡಳಿತ ಮುಗಿಯುವ ಮೊದಲೇ 4 ಕೋಟಿ ಮನೆಗಳನ್ನು ಕಟ್ಟಿದ್ದೇವೆ. 2025-26ರಲ್ಲಿ ಮನೆ ಇಲ್ಲದ ಎಲ್ಲರಿಗೂ ಮನೆ ಕೊಡುವ ಗುರಿ ಇದೆ ಎಂದು ಹೇಳಿದರು.

ಯೋಜನೆಯ ಪ್ರಯೋಜನ ಪಡೆದವರ ಯಶೋಗಾಥೆಯನ್ನು ತಿಳಿಸಲಾಗುತ್ತಿದೆ. ಆ ಮೂಲಕ ವಿಶ್ವಾಸ ಬೆಳೆಸುವುದು, ಯೋಜನೆಯ ಪ್ರಯೋಜನ ಸಿಗದವರಿಗೆ ಅದನ್ನು ತಲುಪಿಸುವ ಉದ್ದೇಶ ಈ ವಾಹನದ್ದು ಎಂದು ಮಾಹಿತಿ ನೀಡಿದರು.

ಇದು ಮೋದಿ ಗ್ಯಾರಂಟಿ ವಾಹನ

25 ಲಕ್ಷಕ್ಕಿಂತ ಕಡಿಮೆ ಮೊತ್ತದಲ್ಲಿ ಮನೆ ನಿರ್ಮಿಸುವ ಮಧ್ಯಮ ವರ್ಗದವರಿಗೆ ಶೇ 4 ಬಡ್ಡಿದರದ ಸಾಲ ಸಿಗುತ್ತಿದೆ. ಎಲ್ಲರಿಗೂ ವಿವಿಧ ಯೋಜನೆಗಳ ಲಾಭ ಸಿಗಲು ಈ ವಾಹನಗಳು ದೇಶದಲ್ಲಿ ಓಡಾಡುತ್ತಿವೆ ಎಂದರು. ಇದನ್ನು ಜನರು ‘ಮೋದಿ ಗ್ಯಾರಂಟಿ ವಾಹನ’ ಎಂದೇ ಕರೆಯುತ್ತಿದ್ದಾರೆ ಎಂದು ಪ್ರಲ್ಹಾದ್ ಜೋಷಿ ಅವರು ತಿಳಿಸಿದರು.

ಸಂಸದ ಪಿ.ಸಿ.ಮೋಹನ್ ಬೆಂಗಳೂರು ಕೇಂದ್ರ ಅಧ್ಯಕ್ಷ ಮಂಜುನಾಥ್, ಪ್ರಮುಖರಾದ ಎಂ.ಚಂದ್ರು, ಸಂಪತ್ ಕುಮಾರ್, ಎಂ.ಗೋಪಿ, ಗುಣಶೇಖರ್, ಮಂಡಲ ಅಧ್ಯಕ್ಷ ಬಾಲಾಜಿ ಮಣಿ ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
5th largesteconomic powerindiaPralhad Joshiunion ministerworld
0 FacebookTwitterPinterestEmail
KM Shivaraju

previous post
ಕರಾರಸಾ ನಿಗಮದಲ್ಲಿ ತಾಂತ್ರಿಕ ಸಹಾಯಕರ ನೇಮಕಾತಿ
next post
ಕೋವಿಡ್ ಹೊಸ ತಳಿ

You may also like

ಕಾಂಗ್ರೆಸ್‌ ಕುಚೋದ್ಯ ಹೇಳಿಕೆ: ದೇವೇಗೌಡರ ತಿರುಗೇಟು

June 10, 2026

ಎಚ್.ಕೆ.ಪಾಟೀಲ್, ಮಹದೇವಪ್ಪ, ದಿನೇಶ್‌ಗೆ ಕೊಕ್

June 10, 2026

ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

June 8, 2026

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (486)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,980)
  • ರಾಜ್ಯ (2,294)
  • ರಾಷ್ಟ್ರ (2,262)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಕಾಂಗ್ರೆಸ್‌ ಕುಚೋದ್ಯ ಹೇಳಿಕೆ: ದೇವೇಗೌಡರ ತಿರುಗೇಟು

    June 10, 2026
  • ಎಚ್.ಕೆ.ಪಾಟೀಲ್, ಮಹದೇವಪ್ಪ, ದಿನೇಶ್‌ಗೆ ಕೊಕ್

    June 10, 2026
  • ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

    June 8, 2026

KMS Special

  • ಕಾಂಗ್ರೆಸ್‌ ಕುಚೋದ್ಯ ಹೇಳಿಕೆ: ದೇವೇಗೌಡರ ತಿರುಗೇಟು

    June 10, 2026
  • ಎಚ್.ಕೆ.ಪಾಟೀಲ್, ಮಹದೇವಪ್ಪ, ದಿನೇಶ್‌ಗೆ ಕೊಕ್

    June 10, 2026
  • ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

    June 8, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಕಾಂಗ್ರೆಸ್‌ ಕುಚೋದ್ಯ ಹೇಳಿಕೆ: ದೇವೇಗೌಡರ ತಿರುಗೇಟು

June 10, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ